‘ಕೈ’ಕೊಟ್ಟ ಗೃಹಲಕ್ಷ್ಮಿ…ಕಾದು ಕುಳಿತ ಫಲಾನುಭವಿಗಳು ಕಂಗಾಲು
ಕಾಂಗ್ರೆಸ್ ಆಡಳಿತಕ್ಕೆ ಬರುವ ಮುಂಚೆಯೇ ಪಂಚ ಗ್ಯಾರಂಟಿಗಳನ್ನು ಘೋಷಿಸಿತ್ತು, ಅದರಂತೆ ಅಧಿಕಾರಕ್ಕೆ ಬಂದ ಕೂಡಲೇ ಹೇಳಿದಂತೆ ಐದು ಗ್ಯಾರಂಟಿಗಳನ್ನು ಜಾರಿಗೊಳಿಸಿತ್ತು. ಇದೀಗ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಅದ್ಯಾಕೋ ಗೃಹಿಣಿಯರ ಕೆಂಗಣ್ಣಿಗೆ ಗುರಿಯಾಗುತ್ತಿದೆ. ಅದು ಯಾಕೆ ಅಂತೀರಾ? ಈ ಸ್ಟೋರಿ ಓದಿ.
ಬೆಂಗಳೂರು, ಸೆ.27: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ(Gruha Lakshmi) ಯೋಜನೆಗೆ ಅದ್ಯಾಕೋ ಗ್ರಹಣ ಹಿಡದಂತಾಗಿದೆ. ಯೋಜನೆ ಜಾರಿ ಮಾಡಿದಾಗಿನಿಂದಲೂ ಒಂದಿಲ್ಲೊಂದು ಅಡೆತಡೆಗಳು ಉಂಟಾಗುತ್ತಿದ್ದು, ಇದೀಗ ಮತ್ತೆ ಗೃಹಲಕ್ಷ್ಮಿ ಹಣಬರದೇ ಗೃಹಲಕ್ಷ್ಮಿಯರು ಬ್ಯಾಂಕಿಗೂ ಮನೆಗೂ ಪರದಾಡುತ್ತಿದ್ದಾರೆ. ಹೌದು, ಜುಲೈ, ಆಗಸ್ಟ್ ಮುಗಿದು ಸೆಪ್ಟೆಂಬರ್ ತಿಂಗಳ ಅಂತ್ಯಗೊಂಡರೂ ಗೃಹಲಕ್ಷ್ಮಿ ಹಣ ಮಾತ್ರ ಲಕ್ಷ್ಮಿಯರ ಖಾತೆಯನ್ನ ಸೇರಿಲ್ಲ. ಇದು ಗೃಹಿಣಿಯರ ಕೆಂಗಣ್ಣಿಗೆ ಗುರಿಯಾಗಿದೆ.
‘ಇದಕ್ಕೆ ಕಾರಣ ನೋಡುವುದಾದರೆ, ‘ಹಣಕಾಸು ಇಲಾಖೆಯಿಂದ ಅನುದಾನ ಬಿಡುಗಡೆ ಆಗಿಲ್ಲ. ಸಧ್ಯ ಇಲಾಖೆಯಿಂದ ಮೂರು ತಿಂಗಳ ಕಂತಿನ ಹಣ ಕೇಳಿದ್ದು, ಒಂದೊಂದೆ ತಿಂಗಳ ಹಣವನ್ನ ಹಣಕಾಸು ಇಲಾಖೆ ಬಿಡುಗಡೆ ಮಾಡಿದೆ. ಪ್ರತಿ ತಿಂಗಳು ಗೃಹಲಕ್ಷ್ಮಿಗೆ 2500 ಕೋಟಿ ಹಣ ಬೇಕಾಲಿದೆ. ಇನ್ನು ಮಹಿಳಾ ಮತ್ತು ಮಕ್ಕಳ ಇಲಾಖೆಯಿಂದ ಮೂರು ತಿಂಗಳ ಅನುದಾನ ಅಂದರೆ ಒಟ್ಟು 7500 ಕೋಟಿ ಹಣ ಬಿಡುಗಡೆಗೆ ಪತ್ರ ಬರೆದಿದ್ದು, ಸಧ್ಯ ಈ ಹಣವೂ ಬಾಕಿ ಉಳಿದೆದೆ.
ಇದನ್ನೂ ಓದಿ:ಗೃಹಲಕ್ಷ್ಮಿ ಯೋಜನೆಗೆ ನೀಡಲು ಸರ್ಕಾರದ ಬಳಿ ಹಣ ಇಲ್ವಾ? ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಿಷ್ಟು
ಈ ತಿಂಗಳು ಗೃಹಲಕ್ಷ್ಮಿ ಹಣ ಬರೋದು ಡೌಟು
ಇನ್ನು ಪ್ರತಿ ತಿಂಗಳು 1.21 ಕೋಟಿ ರೂ. ಗೃಹಲಕ್ಷ್ಮಿ ಹಣ ಬಿಡುಗಡೆ ಆಗಬೇಕು. ಆದ್ರೆ, ಇಲಾಖೆ ಹಣ ಬಿಡುಗಡೆ ಮಾಡದ ಕಾರಣ ಈ ತಿಂಗಳು ಗೃಹಲಕ್ಷ್ಮಿ ಹಣ ಬರುವುದು ಡೌಟ್ ಎನ್ನಲಾಗುತ್ತಿದೆ. ಒಟ್ಟಿನಲ್ಲಿ, ಜೂನ್ ತಿಂಗಳ ಗೃಹಲಕ್ಷ್ಮಿ ಹಣ ಕಳೆದ ತಿಂಗಳು ಬಂದಿತ್ತು. ಈ ತಿಂಗಳು ಜುಲೈ ತಿಂಗಳ ಹಣ ಬರುತ್ತೆ ಎಂದುಕೊಂಡವರಿಗೆ ಶಾಕ್ ಆಗಿದ್ದು, ಮುಂದಿನ ತಿಂಗಳಾದರೂ ಹಣ ಹಾಕುತ್ತಾರಾ ಕಾದುನೋಡಬೇಕಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:45 pm, Fri, 27 September 24