ಗೃಹಲಕ್ಷ್ಮಿ ಯೋಜನೆ ಉದ್ಘಾಟನೆ ಸ್ಥಳ, ದಿನಾಂಕ ಮುಂದೂಡಿಕೆ; ಸಾಂಸ್ಕೃತಿಕ ನಗರಿಯಲ್ಲಿ ರಾಹುಲ್ ಗಾಂಧಿಯಿಂದ ಚಾಲನೆಗೆ ಸಿದ್ಧತೆ

| Updated By: ಆಯೇಷಾ ಬಾನು

Updated on: Aug 19, 2023 | 2:47 PM

ಆ.27ರ ಬದಲು ಆ.30ರಂದು ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮ ನಡೆಯಲಿದೆ ಎಂದು ಬೆಂಗಳೂರಿನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು. ಈ ಹಿಂದೆ ಬೆಳಗಾವಿಯಲ್ಲಿ ಆ.27ರಂದು ಆಯೋಜಿಸಲಾಗಿದ್ದ ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮವನ್ನು ಆ.30ರಂದು ಮೈಸೂರಿನಲ್ಲಿ ಹಮ್ಮಿಕೊಳ್ಳಲಾಗಿದೆ.

ಗೃಹಲಕ್ಷ್ಮಿ ಯೋಜನೆ ಉದ್ಘಾಟನೆ ಸ್ಥಳ, ದಿನಾಂಕ ಮುಂದೂಡಿಕೆ; ಸಾಂಸ್ಕೃತಿಕ ನಗರಿಯಲ್ಲಿ ರಾಹುಲ್ ಗಾಂಧಿಯಿಂದ ಚಾಲನೆಗೆ ಸಿದ್ಧತೆ
ಲಕ್ಷ್ಮಿ ಹೆಬ್ಬಾಳ್ಕರ್
Follow us on

ಬೆಂಗಳೂರು, ಆ.19: ಕಾಂಗ್ರೆಸ್​ನ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮೀ ಯೋಜನೆ(Gruha Lakshmi Scheme) ಕಾರ್ಯಕ್ರಮದ ಸ್ಥಳ ಮತ್ತು ದಿನಾಂಕವನ್ನು ಬದಲಾಯಿಸಲಾಗಿದೆ. ಆ.27ರ ಬದಲು ಆ.30ರಂದು ಮೈಸೂರಿನಲ್ಲಿ(Mysuru) ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮ ನಡೆಯಲಿದೆ ಎಂದು ಬೆಂಗಳೂರಿನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್(Lakshmi Hebbalkar)​ ತಿಳಿಸಿದರು. ಈ ಹಿಂದೆ ಬೆಳಗಾವಿಯಲ್ಲಿ ಆ.27ರಂದು ಆಯೋಜಿಸಲಾಗಿದ್ದ ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮವನ್ನು ಆ.30ರಂದು ಮೈಸೂರಿನಲ್ಲಿ ಹಮ್ಮಿಕೊಳ್ಳಲಾಗಿದೆ.

ಬೆಂಗಳೂರಿನ ಪ್ಯಾಲೆಸ್ ಗ್ರೌಂಡ್​ನಲ್ಲಿ ಹಮ್ಮಿಕೊಳ್ಳಲಾಗಿದ್ದ ನಮ್ಮೂರು ನಾಗಪಂಚಮಿ ಕಾರ್ಯಕ್ರಮದಲ್ಲಿ ಭಾಗಿಯಾದ ಮಹಿಳಾ & ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸುದ್ದಿಗಾರರ ಜೊತೆ ಮಾತನಾಡುವಾಗ ಈ ಬಗ್ಗೆ ಮಾಹಿತಿ ನೀಡಿದರು. ನಾಗರ ಪಂಚಮಿ ಹಬ್ಬಕ್ಕೆ ಬಂದು ತುಂಬ ಖುಷಿಯಾಗುತ್ತಿದೆ. ನಮ್ಮ‌ ಭಾಗದ ಪ್ರಮುಖ ಹಬ್ಬ ಇದು. ಆ.27 ಕ್ಕೆ ಬೆಳಗಾವಿಯಲ್ಲಿ ನಡೆಯಬೇಕಿದ್ದ ಕಾರ್ಯಕ್ರಮ ಬದಲಾಗಿದೆ. ಬೆಳಗಾವಿಯಲ್ಲಿ ನಡೆಯಬೇಕಿದ್ದ ಕಾರ್ಯಕ್ರಮ ಮೈಸೂರಿನಲ್ಲಿ‌ ಆಯೋಜನೆ ಮಾಡಲಾಗುತ್ತಿದೆ. ಆ.30ಕ್ಕೆ ರಾಹುಲ್ ಗಾಂಧಿ ಬೆಂಗಳೂರಿಗೆ ಬರುತ್ತಿದ್ದಾರೆ. ಬೆಂಗಳೂರಿಗೆ ಹತ್ತಿರ ಅಂದ್ರೆ ಮೈಸೂರು. ಹೀಗಾಗಿ ಮೈಸೂರಿಗೆ ಬಂದು ರಾಹುಲ್ ಗಾಂಧಿ ಕಾರ್ಯಕ್ರಮ ಉದ್ಘಾಟನೆ ಮಾಡ್ತಾರೆ. ಅಲ್ಲದೇ ಬೇರೆ ಕಾರ್ಯಕ್ರಮಗಳ ನಿಮಿತ್ತ ಕಾರ್ಯಕ್ರಮ ಶಿಫ್ಟ್ ಆಗಿದೆ. ಅನ್ನಭಾಗ್ಯ ಯೋಜನೆ ಬೆಳಗಾವಿಯಲ್ಲಿ ನಡೆಯಬಹುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ತಿಳಿಸಿದರು.

ಇದನ್ನೂ ಓದಿ: ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ವಾಟ್ಸ್​​ಆ್ಯಪ್ ಚಾಟ್​ಬಾಟ್; ಬಳಸುವುದು ಹೇಗೆ? ಇಲ್ಲಿದೆ ಮಾಹಿತಿ

ಮನೆಯ ಒಡತಿ ಖಾತೆಗೆ ಪ್ರತಿ ತಿಂಗಳು 2000 ರೂ. ಜಮಾ ಮಾಡುವ ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 30ರಂದು ಮೈಸೂರಿನಲ್ಲಿ ರಾಹುಲ್ ಗಾಂಧಿ ಚಾಲನೆ ನೀಡಲಿದ್ದಾರೆ. ಅನೇಕ ಕಾರಣಗಳಿಂದ ಗೃಹಲಕ್ಷ್ಮಿ ಯೋಜನೆ ಉದ್ಘಾಟನೆ ಕಾರ್ಯಕ್ರಮದ ದಿನಾಂಕ ಹಾಗೂ ಸ್ಥಳವನ್ನು ಮುಂದೂಡಲಾಗಿದೆ. ಸದ್ಯ ಈಗ ಮೈಸೂರಿನಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಈ ಮೊದಲು ಗೃಹಲಕ್ಷ್ಮಿ ಯೋಜನೆ ಕಾರ್ಯಕ್ರಮವನ್ನು ಬೆಳಗಾವಿಯಲ್ಲಿ ಚಾಲನೆ ನೀಡಲು ತೀರ್ಮಾನಿಸಲಾಗಿತ್ತು. ದಿನಾಂಕವನ್ನು ಕೂಡ ಹಲವು ಬಾರಿ ಮುಂದೂಡಲಾಗಿತ್ತು. ಈಗ ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 30ರಂದು ಚಾಲನೆ ನೀಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ತಿಳಿಸಿದ್ದಾರೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ