ಪಠ್ಯ ಪರಿಷ್ಕರಣೆ: ಇತ್ತೀಚಿನ ಘಟನೆಗಳಿಂದ ಬೇಸತ್ತು ರಾಜಿನಾಮೆ ನೀಡಿದ ಜಿ.ಎಸ್. ಶಿವರುದ್ರಪ್ಪ ಪ್ರತಿಷ್ಠಾನದ ಅಧ್ಯಕ್ಷರು, ಸದಸ್ಯರು
ಇತ್ತೀಚಿನ ಘಟನೆಗಳಿಂದ ಬೇಸತ್ತು ಡಾ ಜಿ.ಎಸ್.ಶಿವರುದ್ರಪ್ಪ ಪ್ರತಿಷ್ಠಾನ ಅಧ್ಯಕ್ಷ S.G.ಸಿದ್ದರಾಮಯ್ಯ ರಾಜಿನಾಮೆ ನೀಡಿದ್ದಾರೆ. ಕೂಡಲೇ ಮುಖ್ಯಮಂತ್ರಿಗಳು ತಮ್ಮ ರಾಜೀನಾಮೆ ಅಂಗೀಕರಿಸಬೇಕು ಎಂದು ಸಿಎಂಗೆ ಪತ್ರ ರವಾನಿಸಿದ್ದಾರೆ.
ಬೆಂಗಳೂರು: ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ ಹಿನ್ನೆಲೆ ಜಿ.ಎಸ್.ಶಿವರುದ್ರಪ್ಪ ಪ್ರತಿಷ್ಠಾನದ ಅಧ್ಯಕ್ಷರು, ಸದಸ್ಯರು ರಾಜೀನಾಮೆ ನೀಡಿದ್ದಾರೆ. ಜಿ.ಎಸ್.ಶಿವರುದ್ರಪ್ಪ ಪ್ರತಿಷ್ಠಾನದ ಅಧ್ಯಕ್ಷ S.G.ಸಿದ್ದರಾಮಯ್ಯ ಹಾಗೂ ಪ್ರತಿಷ್ಠಾನದ ಸದಸ್ಯರಾದ ಡಾ.ಹೆಚ್.ಎಸ್.ರಾಘವೇಂದ್ರ ರಾವ್, ಡಾ.ಚಂದ್ರಶೇಖರ ನಂಗಲಿ, ನಟರಾಜ ಬೂದಾಳು ರಾಜೀನಾಮೆ ನೀಡುತ್ತಿರುವ ಕುರಿತು ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ. ಇತ್ತೀಚಿನ ಘಟನೆಗಳಿಂದ ಬೇಸತ್ತು ಡಾ ಜಿ.ಎಸ್.ಶಿವರುದ್ರಪ್ಪ ಪ್ರತಿಷ್ಠಾನ ಅಧ್ಯಕ್ಷ S.G.ಸಿದ್ದರಾಮಯ್ಯ ರಾಜಿನಾಮೆ ನೀಡಿದ್ದಾರೆ. ಕೂಡಲೇ ಮುಖ್ಯಮಂತ್ರಿಗಳು ತಮ್ಮ ರಾಜೀನಾಮೆ ಅಂಗೀಕರಿಸಬೇಕು ಎಂದು ಸಿಎಂಗೆ ಪತ್ರ ರವಾನಿಸಿದ್ದಾರೆ.
ಇನ್ನು ಮತ್ತೊಂದು ಕಡೆ ಪಠ್ಯ ಪರಿಷ್ಕರಣೆ ವಿವಾದ ವಿಚಾರವಾಗಿ ಬಿಜೆಪಿ ನಾಯಕರು ಸಭೆ ನಡೆಸುತ್ತಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸಭೆ ನಡೆಯುತ್ತಿದ್ದು ಸಭೆಯಲ್ಲಿ ಸಚಿವರಾದ ಬಿ.ಸಿನಾಗೇಶ್, ಅಶ್ವತ್ಥ್ ನಾರಾಯಣ, ಸಂಸದ ಡಿ.ವಿ.ಸದಾನಂದಗೌಡ, ಶಾಸಕ ರವಿ ಸುಬ್ರಹ್ಮಣ್ಯ, ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್, ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣ್ ಕುಮಾರ್ ಭಾಗಿಯಾಗಿದ್ದಾರೆ. ಸಭೆಯಲ್ಲಿ ಡಾ.ಮೂಡಂಬಡಿತ್ತಾಯ ಪರಿಷ್ಕರಣಾ ಸಮಿತಿ, ಬರಗೂರು ರಾಮಚಂದ್ರಪ್ಪ ಪರಿಷ್ಕರಣಾ ಸಮಿತಿ, ಚಕ್ರತೀರ್ಥ ಪರಿಷ್ಕರಣಾ ಸಮಿತಿ ಅಂಶಗಳ ಬಗ್ಗೆ ಚರ್ಚೆ ನಡೆಯುತ್ತಿದೆ. ಪರಿಷ್ಕೃತ ಪುಸ್ತಕ, ಹಿಂದಿನ ಸಮಿತಿಗಳಲ್ಲಿನ ಅಂಶಗಳನ್ನು ದಾಖಲೆ ಸಮೇತ ಸಾರ್ವಜನಿಕವಾಗಿರಿಸಲು ತೀರ್ಮಾನ ಮಾಡಲಾಗಿದೆ. ಇದನ್ನೂ ಓದಿ: Ashish Nehra: ಎಳನೀರು, ಪೆನ್ನು ಪೇಪರ್ನಲ್ಲೇ 9 ತಂಡಗಳನ್ನ ಮುಗಿಸಿಬಿಟ್ರು..!