AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗ್ಯಾರಂಟಿಗಳಿಂದ ಆರ್ಥಿಕ ಹೊರೆ ಎಂಬುದು ಸತ್ಯ’: ಡಿಸಿಎಂ ಪರಮೇಶ್ವರ್​​, ಸಚಿವ ಯತೀಂದ್ರರಿಂದಲೂ ಸಹಮತ

ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಹೊರೆಯಾಗುತ್ತಿರುವುದು ಸತ್ಯ ಎಂದು ಡಿಸಿಎಂ ಪರಮೇಶ್ವರ್ ಮತ್ತು ಸಚಿವ ಯತೀಂದ್ರ ಸಿದ್ದರಾಮಯ್ಯ ಕೂಡ ಹೇಳಿದ್ದಾರೆ. ಆದರೆ ಜನರಿಗೆ ಕೊಟ್ಟ ಮಾತಿಗಾಗಿ ಅವನ್ನು ನಿರ್ವಹಿಸುತ್ತೇವೆ ಎಂದವರು ತಿಳಿಸಿದ್ದಾರೆ. ‘ಉಚಿತ ಗ್ಯಾರಂಟಿ ಯೋಜನೆಗಳಿಂದ ಸರ್ಕಾರ ಸಮಸ್ಯೆಯಲ್ಲಿ ಸಿಲುಕಿ ಒದ್ದಾಡುವಂತಾಗಿದೆ’ ಎಂದು ಸಚಿವ ಬಾಲಕೃಷ್ಣ ಈ ಹಿಂದೆ ನೀಡಿದ್ದ ಹೇಳಿಕೆ ಕೂಡ ಭಾರಿ ಚರ್ಚೆಗೆ ಗ್ರಾಸವಾಗಿತ್ತು ಎಂಬುದಿಲ್ಲಿ ಗಮನಾರ್ಹ.

'ಗ್ಯಾರಂಟಿಗಳಿಂದ ಆರ್ಥಿಕ ಹೊರೆ ಎಂಬುದು ಸತ್ಯ': ಡಿಸಿಎಂ ಪರಮೇಶ್ವರ್​​, ಸಚಿವ ಯತೀಂದ್ರರಿಂದಲೂ ಸಹಮತ
ಡಿಸಿಎಂ ಪರಮೇಶ್ವರ್​​, ಸಚಿವ ಯತೀಂದ್ರImage Credit source: Tv9 Kannada
ಈರಣ್ಣಾ ಬಸವಾ
| Edited By: |

Updated on: Sep 28, 2026 | 12:36 PM

Share

ಬೆಂಗಳೂರು, ಸೆಪ್ಟೆಂಬರ್​​ 28: ‘ಉಚಿತ ಗ್ಯಾರಂಟಿ ಯೋಜನೆಗಳಿಂದ ಸರ್ಕಾರ ಸಮಸ್ಯೆಯಲ್ಲಿ ಸಿಲುಕಿ ಒದ್ದಾಡುವಂತಾಗಿದೆ’ ಎಂಬ ಸಚಿವ ಬಾಲಕೃಷ್ಣ ಅವರ ಹೇಳಿಕೆ ಬೆನ್ನಲ್ಲೇ ಮತ್ತಷ್ಟು ಮಂತ್ರಿಗಳು ಈ ಬಗ್ಗೆ ಧ್ವನಿ ಎತ್ತಿದ್ದಾರೆ. ಗ್ಯಾರಂಟಿ ಯೋಜನೆಗಳನ್ನ ಆರಂಭಿಸಿದಾಗಲೇ ಎಲ್ಲರಿಗೂ ಗೊತ್ತಿದೆ. ಸಹಜವಾಗಿ ಹಣಕಾಸು ಪರಿಸ್ಥಿತಿ ಮೇಲೆ ಒತ್ತಡ ಬರುತ್ತೆ. ಇದು ಕಾಮನ್ ಸೆನ್ಸ್ ವಿಚಾರ ಎಂದು ಡಿಸಿಎಂ ಡಾ.ಜಿ.ಪರಮೇಶ್ವರ್​​ ಹೇಳಿದ್ದಾರೆ. ಹಣಕಾಸು ಹೊರೆಯಾದ್ರೂ ಗ್ಯಾರಂಟಿ ನಿರ್ವಹಣೆ ಮಾಡಿದ್ದೇವೆ. ಇಷ್ಟು ವರ್ಷ ಗ್ಯಾರಂಟಿ ಕೊಟ್ಟುಕೊಂಡು ಬಂದಿದ್ದೇವೆ. ಈಗಲೂ ಗ್ಯಾರಂಟಿಗಳು ಮುಂದುವರಿಯುತ್ತೆ ಎಂದವರು ತಿಳಿಸಿದ್ದಾರೆ.

‘ಆರ್ಥಿಕ ಹೊರೆಯಾದರೂ ನಾವು ಮ್ಯಾನೇಜ್ ಮಾಡ್ತೇವೆ’

ಸರ್ಕಾರಕ್ಕೆ ಗ್ಯಾರಂಟಿಗಳು ಆರ್ಥಿಕ ಹೊರೆ ಎಂಬುದು ಸತ್ಯ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಕೂಡ ಅಭಿಪ್ರಾಯಪಟ್ಟಿದ್ದು, ಹೊರೆ ಎಂಬ ಕಾರಣಕ್ಕೆ ನಾವು ನುಣುಚಿಕೊಳ್ಳಲು ಆಗಲ್ಲ. ನಾವು ಜನರಿಗೆ ಮಾತು ಕೊಟ್ಟಿದ್ದೇವೆ, ನಿರ್ವಹಿಸುತ್ತೇವೆ. ಆರ್ಥಿಕ ಹೊರೆಯಾದರೂ ನಾವು ಮ್ಯಾನೇಜ್ ಮಾಡ್ತೇವೆ. ಗ್ಯಾರಂಟಿಗಳು ಹೊರೆಯಾದ್ರೂ ನಿರ್ವಹಿಸುವುದು ನಮ್ಮ ಕರ್ತವ್ಯ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಬೇಕೋ ಬೇಡ್ವೋ ಗ್ಯಾರಂಟಿ ಕೊಟ್ಟಿದ್ದೇವೆ, ನಿಲ್ಲಿಸಿದ್ರೆ ಗಲಾಟೆ ಮಾಡ್ತಾರೆ – ಸಮಸ್ಯೆಯಲ್ಲಿ ಒದ್ದಾಡುತ್ತಿದ್ದೇವೆ: ಬಾಲಕೃಷ್ಣ

ವಿಪಕ್ಷ ನಾಯಕ ಆರ್​. ಅಶೋಕ್​​ ಕಿಡಿ

ಇನ್ನು ಗ್ಯಾರಂಟಿ ಯೋಜನೆಗಳ ಬಗ್ಗೆ ಸಚಿವರೇ ಹೇಳಿಕೆ ನೀಡಿರುವ ಕಾರಣ ಸರ್ಕರದ ವಿರುದ್ಧ ವಿಪಕ್ಷ ನಾಯಕ ಆರ್​​. ಅಶೋಕ್​​ ತೀವ್ರ ವಾಗ್ದಾಳಿ ನಡೆಸಿದ್ದಾರೆ. “ಬೇಕೋ ಬೇಡ್ವೋ ಗ್ಯಾರಂಟಿ ಕೊಟ್ವಿ, ಈಗ ಒದ್ದಾಡ್ತಿದ್ದೀವಿ!” ಇದು ನಾನು ಹೇಳುತ್ತಿರುವುದಲ್ಲ, ಸ್ವತಃ ಸಚಿವ ಬಾಲಕೃಷ್ಣ ಅವರೇ ಸಾರ್ವಜನಿಕವಾಗಿ ಒಪ್ಪಿಕೊಂಡಿರುವ ಕಾಂಗ್ರೆಸ್ ಸರ್ಕಾರದ ‘ದಿವಾಳಿ’ ಸತ್ಯ ಇದು ಎಂದಿರುವ ಅವರು, ವೋಟಿಗಾಗಿ ಉಚಿತ ಭರವಸೆಗಳನ್ನು ಕೊಟ್ಟು, ಇಂದು ಕರುನಾಡನ್ನು ದಿವಾಳಿಯ ಅಂಚಿಗೆ ತಂದು ನಿಲ್ಲಿಸಿರುವ ಕಾಂಗ್ರೆಸ್​​ ಸರ್ಕಾರಕ್ಕೆ ನಾಡಿನ ರೈತರ ಶಾಪ ತಟ್ಟಲಿದೆ. ಬರ ಪರಿಹಾರ ನೀಡಲು ಬಿಡಿಗಾಸೂ ಇಲ್ಲದೆ ಸರ್ಕಾರ ಕೈಚೆಲ್ಲಿ ಕುಳಿತಿದ್ದು, ರಾಜ್ಯಾದ್ಯಂತ ಅಭಿವೃದ್ಧಿ ಕಾಮಗಾರಿಗಳು ಸಂಪೂರ್ಣ ಬಂದ್ ಆಗಿವೆ. ಅಸಮರ್ಥ ಆಡಳಿತದಿಂದ ರಾಜ್ಯದ ಆರ್ಥಿಕತೆ ಐಸಿಯುವಿಗೆ ತಳ್ಳಲ್ಪಟ್ಟಿದೆ ಎಂದವರು ದೂರಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಈರಣ್ಣಾ ಬಸವಾ
ಈರಣ್ಣಾ ಬಸವಾ

ಈರಣ್ಣಾ ಬಸವಾ.. ಮೂಲತಃ ವಾಣಿಜ್ಯ ನಗರಿ ಹುಬ್ಬಳ್ಳಿಯವರು. ಈರಣ್ಣಾ ಬಿ.ಕಾಮ್ ಪದವೀಧರರಾಗಿದ್ದಾರೆ. ಕಂಟೆಂಟ್ ರೈಟರ್ ಆಗಿ ವೃತ್ತಿಜೀವನ ಆರಂಭಿಸಿದ ನಂತರ ಕನ್ನಡದ ಬೇರೆ ಬೇರೆ ಸುದ್ದಿ ಮಾದ್ಯಮದಲ್ಲಿ ಸುಮಾರು ೬ ವರ್ಷ ಕಾಲ ಡೆಸ್ಕ್ ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸದ್ಯ ಸತತ ಪರಿಶ್ರಮದಿಂದ ಟಿವಿ9 ಕನ್ನಡದಲ್ಲಿ ರಾಜಕೀಯ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕಳೆದ ಎರಡು ವರ್ಷಗಳಲ್ಲಿ ಹಲವು ಎಕ್ಸ್ ಕ್ಲೂಸಿವ್ ಸುದ್ದಿಗಳನ್ನು ಹೆಕ್ಕಿ ತೆಗೆದಿದ್ದಾರೆ. ಸಿಎಂ, ಡಿಸಿಎಂ ಬೀಟ್ ಜವಾಬ್ದಾರಿ ಇವರ ಮೇಲಿದ್ದು ಜನರಿಗೆ ಸಿಗಬೇಕಾದ ಅಮೂಲ್ಯ ಸುದ್ದಿಗಳನ್ನು ತಲುಪಿಸುವ ಕಾಯಕವನ್ನು ಜವಾಬ್ದಾರಿಯಿಂದ ಮಾಡುತ್ತಿದ್ದಾರೆ. ಬರವಣಿಗೆ, ಕತೆ, ಕವನ ಇವರ ಆಸಕ್ತಿಯ ಕ್ಷೇತ್ರ.

Read More
‘ಬಿಗ್ ಬಾಸ್​ಗೆ ಮೂರು ಬಿಟ್ಟು ಬರ್ತಾರೆ ಅಂದುಕೊಂಡಿರಲಿಲ್ಲ’; ವೈಷ್ಣವಿ
‘ಬಿಗ್ ಬಾಸ್​ಗೆ ಮೂರು ಬಿಟ್ಟು ಬರ್ತಾರೆ ಅಂದುಕೊಂಡಿರಲಿಲ್ಲ’; ವೈಷ್ಣವಿ
ಬಿಜೆಪಿ ಶಾಸಕ ಮುನಿರತ್ನ ಮನೆ ಬಳಿ ಭಾರಿ ಹೈಡ್ರಾಮಾ
ಬಿಜೆಪಿ ಶಾಸಕ ಮುನಿರತ್ನ ಮನೆ ಬಳಿ ಭಾರಿ ಹೈಡ್ರಾಮಾ
ಛತ್ತೀಸ್​ಗಢ: 48 ಗಂಟೆಗಳ ಮಳೆಗೆ ಕುಸಿದ ಬೆಟ್ಟ
ಛತ್ತೀಸ್​ಗಢ: 48 ಗಂಟೆಗಳ ಮಳೆಗೆ ಕುಸಿದ ಬೆಟ್ಟ
ಲಾರಿ ಅಡ್ಡಗಟ್ಟಿದ ಗಜಪಡೆ: ಛಂಗನೆ ನೆಗೆದು ರಸ್ತೆ ದಾಟಿದ ಬೃಹತ್ ಚಿರತೆ!
ಲಾರಿ ಅಡ್ಡಗಟ್ಟಿದ ಗಜಪಡೆ: ಛಂಗನೆ ನೆಗೆದು ರಸ್ತೆ ದಾಟಿದ ಬೃಹತ್ ಚಿರತೆ!
'ಮನೆಯಲ್ಲಿ ಅಮ್ಮ ಇರಲಿಲ್ಲ, ಹೀಗಾಗಿ ಬರೋದು ತಡವಾಯ್ತು': ಸಚಿವ ಯತೀಂದ್ರ
'ಮನೆಯಲ್ಲಿ ಅಮ್ಮ ಇರಲಿಲ್ಲ, ಹೀಗಾಗಿ ಬರೋದು ತಡವಾಯ್ತು': ಸಚಿವ ಯತೀಂದ್ರ
ಸಮಯ ಪ್ರಜ್ಞೆ ಇಲ್ವೇನ್ರೀ: ಯತೀಂದ್ರ ಬಗ್ಗೆ ತನ್ವೀರ್ ಸೇಠ್ ಬಹಿರಂಗ ಅಸಮಾಧಾನ
ಸಮಯ ಪ್ರಜ್ಞೆ ಇಲ್ವೇನ್ರೀ: ಯತೀಂದ್ರ ಬಗ್ಗೆ ತನ್ವೀರ್ ಸೇಠ್ ಬಹಿರಂಗ ಅಸಮಾಧಾನ
ಬೆಂಗಳೂರಿನಲ್ಲಿ ಆನೆ ದಾಳಿಗೆ ವಾಕಿಂಗ್​ಗೆ ತೆರಳಿದ್ದ ವೃದ್ಧ ಬಲಿ!
ಬೆಂಗಳೂರಿನಲ್ಲಿ ಆನೆ ದಾಳಿಗೆ ವಾಕಿಂಗ್​ಗೆ ತೆರಳಿದ್ದ ವೃದ್ಧ ಬಲಿ!
ಸಖತ್ ಆಗವ್ರೆ ಅಂತ ಕಾಳು ಹಾಕೋಕೆ ಬಂದ ಯಶಸ್​ಗೆ ಮರೆಯಲಾರದ ಪಾಠ ಕಲಿಸಿದ ಗಾನವಿ
ಸಖತ್ ಆಗವ್ರೆ ಅಂತ ಕಾಳು ಹಾಕೋಕೆ ಬಂದ ಯಶಸ್​ಗೆ ಮರೆಯಲಾರದ ಪಾಠ ಕಲಿಸಿದ ಗಾನವಿ
ರಸ್ತೆ ಪರಿಶೀಲನೆ ವೇಳೆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ದೆಹಲಿ ಸಚಿವ ಪರ್ವೇಶ್
ರಸ್ತೆ ಪರಿಶೀಲನೆ ವೇಳೆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ದೆಹಲಿ ಸಚಿವ ಪರ್ವೇಶ್
ದಿನ ಭವಿಷ್ಯ: ರವಿ ಕನ್ಯಾ, ಚಂದ್ರ ಮೀನ ರಾಶಿಯ ರೇವತಿ ನಕ್ಷತ್ರದಲ್ಲಿ ಸಂಚಾರ
ದಿನ ಭವಿಷ್ಯ: ರವಿ ಕನ್ಯಾ, ಚಂದ್ರ ಮೀನ ರಾಶಿಯ ರೇವತಿ ನಕ್ಷತ್ರದಲ್ಲಿ ಸಂಚಾರ