ಬೆಂಗಳೂರು: ಶೂ ಬಾಕ್ಸ್​ ಕ್ಲೀನ್ ಮಾಡುವಾಗ 5ನೇ ಮಹಡಿಯಿಂದ ಬಿದ್ದ ಮಹಿಳೆ, ಚಿಕಿತ್ಸೆ ಫಲಕಾರಿಯಾಗದೇ ಸಾವು

ಮಹಿಳೆಯೋರ್ವರು ಆಯಾತಪ್ಪಿ 5ನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಶೂ ಬಾಕ್ಸ್​ ಕ್ಲೀನ್ ಮಾಡುವಾಗ ಈ ದುರ್ಘಟನೆ ನಡೆದಿದೆ.

ಬೆಂಗಳೂರು: ಶೂ ಬಾಕ್ಸ್​ ಕ್ಲೀನ್ ಮಾಡುವಾಗ 5ನೇ ಮಹಡಿಯಿಂದ ಬಿದ್ದ ಮಹಿಳೆ, ಚಿಕಿತ್ಸೆ ಫಲಕಾರಿಯಾಗದೇ ಸಾವು
Follow us
| Updated By: ರಮೇಶ್ ಬಿ. ಜವಳಗೇರಾ

Updated on: Dec 10, 2023 | 5:08 PM

ಬೆಂಗಳೂರು, (ಡಿಸೆಂಬರ್ 10): 31 ವರ್ಷದ ಮಹಿಳೆಯೋರ್ವರು (Woman) ಅಪಾರ್ಟ್ಮೆಂಟ್​ನ 5ನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ ಘಟನೆ ಬೆಂಗಳೂರಿನ(Bengaluru) ಕಾಡುಗೋಡಿ ಸಮೀಪದ ದೊಡ್ಡಬನಹಳ್ಳಿಯಲ್ಲಿ ನಡೆದಿದೆ, ಖುಷ್ಬೂ ಅಶೀಷ್ ತ್ರಿವೇದಿ ಎನ್ನುವ ಮಹಿಳೆ ದೊಡ್ಡಬನಹಳ್ಳಿಯ ಬಿಡಿಎ ವಿಂಧ್ಯಗಿರಿ ಅಪಾರ್ಟಮೆಂಟ್ ಬಿದ್ದು ಸಾವನ್ನಪ್ಪಿದ್ದಾಳೆ. ಮನೆ ಸ್ವಚ್ಛಗೊಳಿಸುತ್ತಿರುವ ಸಂದರ್ಭದಲ್ಲಿ ಕಾಲು ಜಾರಿ ಕೆಳಗೆ ಬಿದ್ದಿದ್ದಾರೆ ಎಂದು ತಿಳಿದುಬಂದಿದ್ದು, ಈ ಬಗ್ಗೆ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗುಜರಾತ್ ಮೂಲದ ಖುಷ್ಬೂ ಹಾಗೂ ಆಶೀಶ್ ಇತ್ತೀಚೆಗಷ್ಟೆ ಮದುವೆಯಾಗಿದ್ದು, ದೊಡ್ಡಬನಹಳ್ಳಿಯ ವಿಂಧ್ಯಗಿರಿ ಅಪಾರ್ಟಮೆಂಟ್​ನ 5ನೇ ಮಹಡಿಯಲ್ಲಿ ವಾಸವಾಗಿದ್ದರು. ಆದ್ರೆ, ಇಂದು ಪ್ಲಾಟ್ ಮುಂಭಾಗ ಶೂ ಬಾಕ್ಸ್ ಕ್ಲೀನ್ ಮಾಡುತ್ತಿದ್ದ ವೇಳೆ ಖುಷ್ಬೂ ಆಯಾತಪ್ಪಿ ಕೆಳಗೆ ಬಿದ್ದಿದ್ದಾಳೆ. ಇದರಿಂದ ಗಂಭೀರ ಗಾಯವಾಗಿ ಗಾಯಗೊಂಡಿದ್ದ ಖುಷ್ಬೂ ಅವರನ್ನು ಕೂಡಲೇ ಅಸ್ಪತ್ರೆಗೆ ದಾಖಲಿಸಲಾಗಿದೆ. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಬೆಂಗಳೂರು ಪೂರ್ವ ತಾಲ್ಲೂಕಿನ ದೊಡ್ಡಬನಹಳ್ಳಿಯಲ್ಲಿರುವ ವಿಂಧ್ಯಗಿರಿ ಅಪಾರ್ಟ್‌ಮೆಂಟ್ 18 ಮಹಡಿ ಹೊಂದಿದ್ದು, ಇದರಲ್ಲಿ ಆಶೀಶ್ ತ್ರಿವೇದಿ ದಂಪತಿ 5ನೇ ಮಹಡಿಯಲ್ಲಿ ವಾಸವಾಗಿದ್ದರು. ಇನ್ನು ಘಟನೆ ಸಂಬಂಧ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ