ಬೆಂಗಳೂರು, (ಡಿಸೆಂಬರ್ 10): 31 ವರ್ಷದ ಮಹಿಳೆಯೋರ್ವರು (Woman) ಅಪಾರ್ಟ್ಮೆಂಟ್ನ 5ನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ ಘಟನೆ ಬೆಂಗಳೂರಿನ(Bengaluru) ಕಾಡುಗೋಡಿ ಸಮೀಪದ ದೊಡ್ಡಬನಹಳ್ಳಿಯಲ್ಲಿ ನಡೆದಿದೆ, ಖುಷ್ಬೂ ಅಶೀಷ್ ತ್ರಿವೇದಿ ಎನ್ನುವ ಮಹಿಳೆ ದೊಡ್ಡಬನಹಳ್ಳಿಯ ಬಿಡಿಎ ವಿಂಧ್ಯಗಿರಿ ಅಪಾರ್ಟಮೆಂಟ್ ಬಿದ್ದು ಸಾವನ್ನಪ್ಪಿದ್ದಾಳೆ. ಮನೆ ಸ್ವಚ್ಛಗೊಳಿಸುತ್ತಿರುವ ಸಂದರ್ಭದಲ್ಲಿ ಕಾಲು ಜಾರಿ ಕೆಳಗೆ ಬಿದ್ದಿದ್ದಾರೆ ಎಂದು ತಿಳಿದುಬಂದಿದ್ದು, ಈ ಬಗ್ಗೆ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗುಜರಾತ್ ಮೂಲದ ಖುಷ್ಬೂ ಹಾಗೂ ಆಶೀಶ್ ಇತ್ತೀಚೆಗಷ್ಟೆ ಮದುವೆಯಾಗಿದ್ದು, ದೊಡ್ಡಬನಹಳ್ಳಿಯ ವಿಂಧ್ಯಗಿರಿ ಅಪಾರ್ಟಮೆಂಟ್ನ 5ನೇ ಮಹಡಿಯಲ್ಲಿ ವಾಸವಾಗಿದ್ದರು. ಆದ್ರೆ, ಇಂದು ಪ್ಲಾಟ್ ಮುಂಭಾಗ ಶೂ ಬಾಕ್ಸ್ ಕ್ಲೀನ್ ಮಾಡುತ್ತಿದ್ದ ವೇಳೆ ಖುಷ್ಬೂ ಆಯಾತಪ್ಪಿ ಕೆಳಗೆ ಬಿದ್ದಿದ್ದಾಳೆ. ಇದರಿಂದ ಗಂಭೀರ ಗಾಯವಾಗಿ ಗಾಯಗೊಂಡಿದ್ದ ಖುಷ್ಬೂ ಅವರನ್ನು ಕೂಡಲೇ ಅಸ್ಪತ್ರೆಗೆ ದಾಖಲಿಸಲಾಗಿದೆ. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಬೆಂಗಳೂರು ಪೂರ್ವ ತಾಲ್ಲೂಕಿನ ದೊಡ್ಡಬನಹಳ್ಳಿಯಲ್ಲಿರುವ ವಿಂಧ್ಯಗಿರಿ ಅಪಾರ್ಟ್‌ಮೆಂಟ್ 18 ಮಹಡಿ ಹೊಂದಿದ್ದು, ಇದರಲ್ಲಿ ಆಶೀಶ್ ತ್ರಿವೇದಿ ದಂಪತಿ 5ನೇ ಮಹಡಿಯಲ್ಲಿ ವಾಸವಾಗಿದ್ದರು. ಇನ್ನು ಘಟನೆ ಸಂಬಂಧ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ