Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್‌ನಲ್ಲಿ ಅವ್ಯವಹಾರ: ಸಿಬಿಐ ತನಿಖೆಗೆ ಆದೇಶಿಸಿದ ರಾಜ್ಯ ಸರ್ಕಾರ

Guru Raghavendra Bank scam: ಗುರು ರಾಘವೇಂದ್ರ ಸಹಕಾರ ಬ್ಯಾಂಕ್‍ ಹಗರಣದ ತನಿಖೆಯನ್ನು ಸಿಬಿಐಗೆ (CBI) ವಹಿಸಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ.

ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್‌ನಲ್ಲಿ ಅವ್ಯವಹಾರ: ಸಿಬಿಐ ತನಿಖೆಗೆ ಆದೇಶಿಸಿದ ರಾಜ್ಯ ಸರ್ಕಾರ
ಗುರು ರಾಘವೇಂದ್ರ ಸಹಕಾರ ಬ್ಯಾಂಕ್‍ನ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Dec 02, 2023 | 8:32 PM

ಬೆಂಗಳೂರು, (ಡಿಸೆಂಬರ್ 02): ಗುರು ರಾಘವೇಂದ್ರ ಸಹಕಾರ ಬ್ಯಾಂಕ್‍ನ (Sri Guru Raghavendra Sahakara Bank) ಅಕ್ರಮದ ತನಿಖೆಯನ್ನು ಸಿಬಿಐಗೆ (CBI) ವಹಿಸಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಠೇವಣಿ ಹಣ ಸೇರಿದಂತೆ ಬ್ಯಾಂಕ್ ಸಂಬಂಧಿಸಿ ಹಣವನ್ನ ದುರುಪಯೋಗ ಪಡಿಸಿಕೊಂಡ ಆರೋಪ ಕೇಳಿಬಂದಿದ್ದು, ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕಾಂಗ್ರೆಸ್​ ವಿಧಾನಪರಿಷತ್ ಸದಸ್ಯ ಯುಬಿ ವೆಂಕಟೇಶ್ ಒತ್ತಾಯಿಸಿದ್ದರು. ಅದರಂತೆ ಇದೀಗ ರಾಜ್ಯ ಸರ್ಕಾರ ಇಂದು (ಡಿಸೆಂಬರ್ 02) ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿ ಅಧಿಕೃತ ಆದೇಶಿಸಿದೆ.

ಪ್ರಕರಣದ ಹಿನ್ನೆಲೆ

ಚಾಲ್ತಿಯಲ್ಲಿರುವ ಮಾರುಕಟ್ಟೆ ದರಕ್ಕಿಂತ ಹೆಚ್ಚಿನ ಬಡ್ಡಿಯ ಆಮಿಷವೊಡ್ಡಿ ಜನರಿಂದ ಠೇವಣಿ ಪಡೆದು ವಂಚಿಸಿದ ಆರೋಪ ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ ನಿಯಮಿತದ ಮೇಲಿದೆ. ಹೆಚ್ಚಿನ ಬಡ್ಡಿ ಆಸೆಗೆ ಸಾವಿರಾರು ಗ್ರಾಹಕರು ಈ ಸಂಸ್ಥೆಯಲ್ಲಿನೂರಾರು ಕೋಟಿ ರೂ. ಠೇವಣಿ ಇಟ್ಟಿದ್ದರು. ಸಾಲಗಾರರು, ಸಂಸ್ಥೆಯ ಆಡಳಿತ ಮಂಡಳಿ ಮತ್ತು ಉದ್ಯೋಗಿಗಳೊಂದಿಗೆ ಶಾಮೀಲಾಗಿ ನಕಲಿ ಠೇವಣಿ ಹಾಗೂ ನಿಶ್ಚಿತ ಠೇವಣಿಗಳ ಆಧಾರದಲ್ಲಿ ಭಾರಿ ಮೊತ್ತದ ಸಾಲ ಪಡೆದು ಮರು ಪಾವತಿಸದೆ ವಂಚಿಸಿದ್ದರು.

ಇದನ್ನೂ ಓದಿ: ಗುರು ರಾಘವೇಂದ್ರ ಬ್ಯಾಂಕ್‌ನಲ್ಲಿ ಅವ್ಯವಹಾರ ಪ್ರಕರಣ: ಠೇವಣಿದಾರರಿಗೆ 5 ಲಕ್ಷದವರೆಗೆ ಹಣ ಸಂದಾಯ

ಸಂಸ್ಥೆಯಿಂದ ವಂಚನೆಗೆ ಒಳಗಾದವರಲ್ಲಿ ಹಿರಿಯ ನಾಗರಿಕರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಹಿರಿಯ ನಾಗರಿಕರು ತಮ್ಮ ಉಳಿತಾಯ ಹಾಗೂ ನಿವೃತ್ತಿ ವೇತನದ ಹಣವನ್ನು ವೃದ್ಧಾಪ್ಯದಲ್ಲಿ ಆರ್ಥಿಕ ಭದ್ರತೆಗಾಗಿ ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ ನಿಯಮಿತದಲ್ಲಿ ಠೇವಣಿ ಇಟ್ಟಿದ್ದರು. ಆದರೆ, ಸಂಸ್ಥೆಯ ಆಡಳಿತ ಮಂಡಳಿಯು ಸಾಲಗಾರರಿಂದ ಸೂಕ್ತ ಶ್ಯೂರಿಟಿ ಪಡೆಯದೆ ಸಾಲ ನೀಡಿತ್ತು. ಜತೆಗೆ ನಕಲಿ ಖಾತೆಗಳನ್ನು ಸೃಷ್ಟಿಸಿ ಸಾಲ ಮಂಜೂರು ಮಾಡಿತ್ತು.

ಈ ಪ್ರಕರಣದಲ್ಲಿ ಸಂಸ್ಥೆಯ ಅಧ್ಯಕ್ಷ ಸೇರಿದಂತೆ 4 ಮಂದಿಯನ್ನು ಬಂಧಿಸಿದ್ದರು. ಅದಕ್ಕೂ ಮೊದಲು ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಬಡ್ಡಿ ಠೇವಣಿದಾರರ ರಕ್ಷಣೆ ಕಾಯಿದೆ-2004 ಮತ್ತು ಐಪಿಸಿಯ ವಿವಿಧ ಸೆಕ್ಷನ್‌ಗಳಡಿ ಸಂಸ್ಥೆ ಹಾಗೂ ಇತರರ ವಿರುದ್ಧ ಬೆಂಗಳೂರು ಪೊಲೀಸರು ಪ್ರಕರಣ ದಾಖಲಿಸಿದ್ದರು. ಬಳಿಕ ಇ.ಡಿ. ಅಧಿಕಾರಿಗಳು 2020ರಲ್ಲಿ ಪಿಎಂಎಲ್‌ಎ ಅಡಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದರು.

ಭರವಸೆ ನೀಡಿದ್ದ ಸಹಕಾರಿ ಸಚಿವ

ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್‌ ಸದಸ್ಯ ಯು.ಬಿ. ವೆಂಕಟೇಶ್‌ ಅವರು ಕೇಳಿದ್ದ ಗಮನಸೆಳೆಯುವ ಸೂಚನೆಗೆ ಉತ್ತರಿಸಿದ್ದ ಸಹಕಾರಿ ಸಚಿವ ಕೆಎನ್​ ರಾಜಣ್ಣ, ”ಈ ಪ್ರಕರಣವನ್ನು ಸಿಬಿಐಗೆ ನೀಡಲು ನಿರ್ಧಾರ ಮಾಡಲಾಗಿದೆ. ಆದರೆ, ಕನ್ನಡದಲ್ಲಿರುವ ವಿಷಯಗಳು ಆಂಗ್ಲ ಭಾಷೆಗೆ ಅನುವಾದ ಮಾಡಬೇಕಿರುವುದರಿಂದ ವಿಳಂಬವಾಗಿದೆ. 500 ಪುಟಗಳ ವರದಿಯನ್ನು ಆಂಗ್ಲ ಭಾಷೆಗೆ ಅನುವಾದ ಮಾಡಲಾಗುತ್ತಿದೆ. ಈ ತಿಂಗಳ ಅಂತ್ಯದಲ್ಲಿ ಅನುವಾದ ಕಾರ್ಯ ಮುಗಿಸಿ ಸಿಬಿಐಗೆ ವಹಿಸಲಾಗುವುದು. ಈ ಬ್ಯಾಂಕನ್ನು ಏಕೆ ಮುಚ್ಚಬಾರದು ಎಂದು ಆರ್‌ಬಿಐ ಕೇಳಿದೆ. ಇದನ್ನು ಮುಚ್ಚಲು ನಮಗೂ ಇಷ್ಟವಿಲ್ಲ. ಆರ್‌ಬಿಐ ಜತೆಗೆ ಪತ್ರ ವ್ಯವಹಾರ ಮಾಡಲಾಗುವುದು ಎಂದು ಹೇಳಿದ್ದರು.

ಬ್ಯಾಂಕ್‌ಗೆ ಸೇರಿದ 114.19 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ ನಿಯಮಿತದ ಅವ್ಯವಹಾರ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯದ (ಇ.ಡಿ.) ಅಧಿಕಾರಿಗಳು ಸಂಸ್ಥೆಯ 114.19 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿಕೊಂಡಿತ್ತು.

ಅವ್ಯವಹಾರ ಹಾಗೂ ಠೇವಣಿದಾರರ ಹಣ ದುರ್ಬಳಕೆ ಸಂಬಂಧ ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ ನಿಯಮಿತದ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯಿದೆಯಡಿ (ಪಿಎಂಎಲ್‌ಎ) ಪ್ರಕರಣ ದಾಖಲಿಸಿ, ಸಂಸ್ಥೆಯ ಖಾಲಿ ಜಮೀನುಗಳು, ವಸತಿ ಗೃಹಗಳು, ವಾಣಿಜ್ಯ ಮತ್ತು ಕೈಗಾರಿಕಾ ಕಟ್ಟಡಗಳೂ ಸೇರಿದಂತೆ 21 ಸ್ಥಿರಾಸ್ತಿಗಳನ್ನು ಜಪ್ತಿ ಮಾಡಲಾಗಿದೆ. ಜತೆಗೆ ಸಂಸ್ಥೆಯ ಖಾತೆಯಲ್ಲಿದ್ದ 3.15 ಕೋಟಿ ರೂ. ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಇ.ಡಿ. ಅಧಿಕಾರಿಗಳು ತಿಳಿಸಿದ್ದರು.

Published On - 5:17 pm, Sat, 2 December 23

ಕಲಬುರಗಿ: ಕಾರ್ಮಿಕನ ಮೃತದೇಹವನ್ನು ಪ್ರಾಣಿ ತರಹ ಎಳೆದೊಯ್ದ ಸಿಮೆಂಟ್​ ಕಂಪನಿ
ಕಲಬುರಗಿ: ಕಾರ್ಮಿಕನ ಮೃತದೇಹವನ್ನು ಪ್ರಾಣಿ ತರಹ ಎಳೆದೊಯ್ದ ಸಿಮೆಂಟ್​ ಕಂಪನಿ
Daily Devotional: ಸ್ವಾತಿ ನಕ್ಷತ್ರ ಮಹತ್ವ ಹಾಗೂ ಫಲ ತಿಳಿಯಿರಿ
Daily Devotional: ಸ್ವಾತಿ ನಕ್ಷತ್ರ ಮಹತ್ವ ಹಾಗೂ ಫಲ ತಿಳಿಯಿರಿ
Daily horoscope: ಬುಧವಾರ ಯಾವ ರಾಶಿಯವರಿಗೆ ಶುಭ, ಅಶುಭ ತಿಳಿಯಿರಿ
Daily horoscope: ಬುಧವಾರ ಯಾವ ರಾಶಿಯವರಿಗೆ ಶುಭ, ಅಶುಭ ತಿಳಿಯಿರಿ
ಟಿವಿ ಶೋಗಳಲ್ಲಿ ಚೈತ್ರಾ ಕುಂದಾಪುರ ಬ್ಯುಸಿ; ಅಭಿಮಾನಿಗಳಿಗೆ ಒಂದು ಪ್ರಶ್ನೆ
ಟಿವಿ ಶೋಗಳಲ್ಲಿ ಚೈತ್ರಾ ಕುಂದಾಪುರ ಬ್ಯುಸಿ; ಅಭಿಮಾನಿಗಳಿಗೆ ಒಂದು ಪ್ರಶ್ನೆ
ಪುಟ್ಟ ಅಭಿಮಾನಿಗೆ ಮುತ್ತಿಟ್ಟು, ಸೆಲ್ಫಿ ತೆಗೆದುಕೊಂಡ ಜಗನ್ ಮೋಹನ್ ರೆಡ್ಡಿ
ಪುಟ್ಟ ಅಭಿಮಾನಿಗೆ ಮುತ್ತಿಟ್ಟು, ಸೆಲ್ಫಿ ತೆಗೆದುಕೊಂಡ ಜಗನ್ ಮೋಹನ್ ರೆಡ್ಡಿ
ವಿಮಾನದಲ್ಲಿ ಕೂತ ಮಹಿಳೆಯರ ಮುಖದಲ್ಲಿ ಸಂತಸ, ಸಂಭ್ರಮ ಜೊತೆ ಗಾಬರಿ
ವಿಮಾನದಲ್ಲಿ ಕೂತ ಮಹಿಳೆಯರ ಮುಖದಲ್ಲಿ ಸಂತಸ, ಸಂಭ್ರಮ ಜೊತೆ ಗಾಬರಿ
ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಪವನ್ ಕಲ್ಯಾಣ್; ವಿಡಿಯೋ ನೋಡಿ
ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಪವನ್ ಕಲ್ಯಾಣ್; ವಿಡಿಯೋ ನೋಡಿ
ಮಹಾಕುಂಭಮೇಳ ವಾರದ ನಂತರ ಮಹಾಶಿವರಾತ್ರಿಯಂದು ಸಂಪನ್ನಗೊಳ್ಳಲಿದೆ
ಮಹಾಕುಂಭಮೇಳ ವಾರದ ನಂತರ ಮಹಾಶಿವರಾತ್ರಿಯಂದು ಸಂಪನ್ನಗೊಳ್ಳಲಿದೆ
ಯುವತಿ ಹೇಳುವ ಮಾತುಗಳು ಗೊಂದಲ ಹುಟ್ಟಿಸುತ್ತವೆ, ಸ್ಪಷ್ಟ ಚಿತ್ರಣ ಸಿಗಲ್ಲ
ಯುವತಿ ಹೇಳುವ ಮಾತುಗಳು ಗೊಂದಲ ಹುಟ್ಟಿಸುತ್ತವೆ, ಸ್ಪಷ್ಟ ಚಿತ್ರಣ ಸಿಗಲ್ಲ
ಮಹಾಕುಂಭದಲ್ಲಿ ಕುಟುಂಬದೊಂದಿಗೆ ಪವಿತ್ರ ಸ್ನಾನ ಮಾಡಿದ ಸಚಿವ ಪ್ರಲ್ಹಾದ್ ಜೋಶಿ
ಮಹಾಕುಂಭದಲ್ಲಿ ಕುಟುಂಬದೊಂದಿಗೆ ಪವಿತ್ರ ಸ್ನಾನ ಮಾಡಿದ ಸಚಿವ ಪ್ರಲ್ಹಾದ್ ಜೋಶಿ