ಫಿಟ್ನೆಸ್ ಸೆಂಟರ್ನಲ್ಲಿ ಯುವತಿ ಸ್ನಾನ ಮಾಡುವ ವಿಡಿಯೋ ಚಿತ್ರೀಕರಣ; ಜಿಮ್ ಕೋಚ್ ಬಂಧನ
ಜಿಮ್ ಮಾಡಿದ ನಂತರ ಫಿಟ್ನೆಸ್ ಸೆಂಟರ್ನಲ್ಲಿ ಸ್ನಾನ ಮಾಡುತ್ತಿದ್ದ ಯುವತಿಯ ವಿಡಿಯೋ ಚಿತ್ರೀಕರಣ ಮಾಡಿದ ಜಿಮ್ ತರಬೇತುದಾರನನ್ನು ರಾಮಮೂರ್ತಿನಗರ ಪೊಲೀಸರು ಬಂಧಿಸಿದ್ದಾರೆ. ಯುವತಿ ನೀಡಿದ ದೂರಿನ ಮೇರೆಗೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬೆಂಗಳೂರು, ನ.9: ಜಿಮ್ ಮಾಡಿದ ನಂತರ ಫಿಟ್ನೆಸ್ ಸೆಂಟರ್ನಲ್ಲಿ ಸ್ನಾನ ಮಾಡುತ್ತಿದ್ದ ಯುವತಿಯ ವಿಡಿಯೋ ಚಿತ್ರೀಕರಣ ಮಾಡಿದ ಜಿಮ್ ತರಬೇತುದಾರನನ್ನು ಬೆಂಗಳೂರು (Bengaluru) ನಗರದ ರಾಮಮೂರ್ತಿನಗರ ಪೊಲೀಸರು ಬಂಧಿಸಿದ್ದಾರೆ. ಯುವತಿ ನೀಡಿದ ದೂರಿನ ಮೇರೆಗೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ರಾಮಮೂರ್ತಿನಗರದಲ್ಲಿರುವ ಫಿಟ್ನೆಸ್ ಸೆಂಟರ್ನಲ್ಲಿ ಜಿಮ್ ವರ್ಕೌಟ್ ಮುಗಿಸಿದ ನಂತರ ಯುವತಿ ಸ್ನಾನ ಮಾಡುತ್ತಿದ್ದಾಗ ಜಿಮ್ ಕೋಚ್ ಸಿಬಿಯಾಚನ್, ಕಿಟಕಿಯ ಮೂಲಕ ಮೊಬೈಲ್ನಲ್ಲಿ ಸೆರೆ ಹಿಡಿಯುತ್ತಿದ್ದನು. ಅನುಮಾನಗೊಂಡು ಹೊರಗೆ ಬಂದಾಗ ಅಲ್ಲಿ ಯಾರೂ ಇರಲಿಲ್ಲ.
ತಕ್ಷಣವೇ ಸಿಸಿ ಕ್ಯಾಮರಾ ಪರಿಶೀಲನೆ ಮಾಡಿದಾಗ ಕೋಚ್ ಸಿಬಿಯಾಚನ್ ಮೊಬೈಲ್ ಮೂಲಕ ವಿಡಿಯೋ ಚಿತ್ರೀಕರಣ ಮಾಡಿದ ವಿಚಾರ ಬೆಳಕಿಗೆ ಬಂದಿದೆ. ಬಳಿಕ ರಾಮಮೂರ್ತಿನಗರ ಪೊಲೀಸರಿಗೆ ಯುವತಿ ದೂರು ನೀಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಆರೋಪಿಯನ್ನು ಸಿಬಿಯಾಚನ್ನನ್ನು ಬಂಧಿಸಿದ್ದಾರೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ