ಬೆಂಗಳೂರು: ರಾಜರಾಜೇಶ್ವರಿ ನಗರದ ಮರಪ್ಪ ಲೇಔಟ್ನಲ್ಲಿ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾರೆ. ನೇಣು ಬಿಗಿದುಕೊಂಡು ಕಾರ್ತಿಕ್(29) ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಪ್ರಕರಣ ಆರ್.ಆರ್.ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ನೇಣಿಗೆ ಶರಣಾದ ಯುವಕ ಜಿಮ್ ಟ್ರೈನಿಯಾಗಿದ್ದರು. ಪ್ರೇಮ ವೈಫಲ್ಯದ ಬಗ್ಗೆ ವಿಡಿಯೋ ಮಾಡಿಟ್ಟು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತ ಕಾರ್ತಿಕ್ ಕಳೆದ ಮೂರು ವರ್ಷಗಳಿಂದ ಯುವತಿಯನ್ನು ಪ್ರೀತಿಸುತ್ತಿದ್ದರು. ಇತ್ತೀಚಿಗೆ ಕಾರ್ತಿಕ್ನಿಂದ ಯುವತಿ ದೂರವಾಗಿದ್ದಳು. ಯುವತಿ ನೆನಪಿನಲ್ಲಿ ಕಾರ್ತಿಕ್ ಕಾಲ ಕಳೆಯುತ್ತಿದ್ದರಂತೆ. ಪ್ರೇಮ ವೈಫಲ್ಯ ಬಗ್ಗೆ ಆಪ್ತರ ಬಳಿ ಹೇಳಿಕೊಂಡಿದ್ದರು. ಈ ವಿಚಾರ ತಿಳಿದ ಪೋಷಕರು ಮದುವೆ ಮಾಡಲು ಮುಂದಾಗಿದ್ದರು. ಇಂದು ಕಾರ್ತಿಕ್ಗೆ ಹೆಣ್ಣು ನೋಡುವ ಶಾಸ್ತ್ರಕ್ಕೆ ಪೋಷಕರು ಹೋಗಬೇಕಿತ್ತು. ಅದರೆ ರಾತ್ರಿ ಮನೆಯಲ್ಲಿ ನೇಣು ಬಿಗಿದುಕೊಂಡು ಕಾರ್ತಿಕ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮನೆಯ ಶೀಟ್ ಹ್ಯಾಂಗಲ್ಗೆ ನೇಣು ಬಿಗಿದುಕೊಂಡು ಯುವಕ ಸಾವನ್ನಪ್ಪಿದ್ದಾರೆ. ಆತ್ಮಹತ್ಯೆಗೂ ಮುನ್ನ ಪ್ರೇಮ ವೈಫಲ್ಯ ಬಗ್ಗೆ ಕಾರ್ತಿಕ್ ವಿಡಿಯೋ ಮಾಡಿದ್ದಾರೆ. ತನ್ನ ಮೊಬೈಲ್ನಲ್ಲಿ ವಿಡಿಯೋ ಮಾಡಿ ನಂತರ ಸಾವಿಗೆ ಶರಣಾಗಿದ್ದಾರೆ. ಸದ್ಯ ಮೊಬೈಲ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಡಿಯೋ ಆಧಾರದ ಮೇಲೆ ಪೊಲೀಸರು ತನಿಖೆ ನಡೆಸುತ್ತಾರೆ.
ಇದನ್ನೂ ಓದಿ: ಹಳೇ ದ್ವೇಷ ಹಿನ್ನೆಲೆ ಗ್ಯಾಂಗ್ ವಾರ್; ಓರ್ವನ ಕೊಲೆ, ಇಬ್ಬರ ಸ್ಥಿತಿ ಗಂಭೀರ
ಇದನ್ನೂ ಓದಿ: Viral Video: ಕ್ಯಾಮೆರಾ ಕಂಡು ಮನುಷ್ಯರಂತೆಯೇ ಪೋಸ್ ಕೊಟ್ಟ ಶ್ವಾನಗಳು; ವಿಡಿಯೋ ನೋಡಿ
Published On - 12:02 pm, Sun, 24 October 21