AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೈಸ್ ರಸ್ತೆಯಲ್ಲಿ ಟೋಲ್ ಸಂಗ್ರಹ ಸ್ಥಗಿತಕ್ಕೆ ಆಗ್ರಹಿಸಿ ಸಿಎಂ ಡಿ.ಕೆ. ಶಿವಕುಮಾರ್​​ಗೆ ಹೆಚ್​​.ಡಿ. ಕುಮಾರಸ್ವಾಮಿ ಪತ್ರ

ನೈಸ್ (NICE) ರಸ್ತೆಯಲ್ಲಿ ಅಕ್ರಮವಾಗಿ ಟೋಲ್ ಸಂಗ್ರಹಿಸಲಾಗುತ್ತಿದೆ ಎಂದು ಆರೋಪಿಸಿ ಮತ್ತು ಅದನ್ನು ತಕ್ಷಣವೇ ಸ್ಥಗಿತಗೊಳಿಸಿ ಯೋಜನೆಯನ್ನು ರಾಜ್ಯ ಸರ್ಕಾರ ಸ್ವಾಧೀನಪಡಿಸಿಕೊಳ್ಳಬೇಕು ಎಂದು ಆಗ್ರಹಿಸಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕರ್ನಾಟಕ ಸಿಎಂ ಡಿಕೆ ಶಿವಕುಮಾರ್​​ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ. ಭೂಸ್ವಾಧೀನ ಮಾಡಿಕೊಂಡು 23 ವರ್ಷಗಳೇ ಕಳೆದರೂ ಭೂಮಿ ಕಳೆದುಕೊಂಡ ರೈತರಿಗೆ ಇನ್ನೂ ಪರಿಹಾರ ನೀಡದಿರುವುದರಿಂದ ಅವರೆಲ್ಲರೂ ಬೀದಿ ಪಾಲಾಗಿದ್ದಾರೆ ಎಂದವರು ದೂರಿದ್ದಾರೆ.

ನೈಸ್ ರಸ್ತೆಯಲ್ಲಿ ಟೋಲ್ ಸಂಗ್ರಹ ಸ್ಥಗಿತಕ್ಕೆ ಆಗ್ರಹಿಸಿ ಸಿಎಂ ಡಿ.ಕೆ. ಶಿವಕುಮಾರ್​​ಗೆ ಹೆಚ್​​.ಡಿ. ಕುಮಾರಸ್ವಾಮಿ ಪತ್ರ
ಸಿಎಂ ಡಿ.ಕೆ. ಶಿವಕುಮಾರ್​​ಗೆ ಹೆಚ್​​.ಡಿ. ಕುಮಾರಸ್ವಾಮಿ ಪತ್ರ Image Credit source: PTI
ಸುನಿಲ್​ ಎಮ್​ ಹೆಚ್​
| Edited By: |

Updated on:Aug 16, 2026 | 12:32 PM

Share

ಮುಖ್ಯಾಂಶಗಳು

  • ನೈಸ್ ರಸ್ತೆಯಲ್ಲಿ ಟೋಲ್ ಸಂಗ್ರಹ ಸ್ಥಗಿತಕ್ಕೆ ಆಗ್ರಹ
  • ಸಿಎಂ ಡಿ.ಕೆ. ಶಿವಕುಮಾರ್​​ಗೆ ಕುಮಾರಸ್ವಾಮಿ ಪತ್ರ
  • ನೈಸ್ ಯೋಜನೆ ಸರ್ಕಾರದ ವಶಕ್ಕೆ ಪಡೆಯಲು ಮನವಿ

ಬೆಂಗಳೂರು, ಆಗಸ್ಟ್​​ 16: ನೈಸ್ ರಸ್ತೆಯಲ್ಲಿ ಟೋಲ್ ಸಂಗ್ರಹ ಸ್ಥಗಿತಗೊಳಿಸುವಂತೆ ಆಗ್ರಹಿಸಿ ಸಿಎಂ ಡಿಕೆ ಶಿವಕುಮಾರ್ (DK Shivakumar)​​ ಅವರಿಗೆ ಕೇಂದ್ರ ಸಚಿವ ಹೆಚ್​.ಡಿ. ಕುಮಾರಸ್ವಾಮಿ(HD Kumaraswamy) ಪತ್ರ ಬರೆದು ಆಗ್ರಹಿಸಿದ್ದಾರೆ. ಅನಧಿಕೃತವಾಗಿ ಟೋಲ್ ಸಂಗ್ರಹ ಮಾಡಲಾಗ್ತಿದೆ. ಕೋರ್ಟ್​ ಆದೇಶ ಇದ್ದರೂ ಸರ್ಕಾರ ಗಮನ ಹರಿಸುತ್ತಿಲ್ಲ ಎಂದು ದೂರಿರುವ ಅವರು, ನೈಸ್ ಯೋಜನೆಯನ್ನ ಸರ್ಕಾರದ ವಶಕ್ಕೆ ಪಡೆದು ಟೋಲ್ ಸಂಗ್ರಹ ಕೂಡಲೇ ನಿಲ್ಲಿಸುವಂತೆ ಆಗ್ರಹಿಸಿದ್ದಾರೆ.

ಕುಮಾರಸ್ವಾಮಿ ಅವರ ಪತ್ರದಲ್ಲೇನಿದೆ?

ಬೆಂಗಳೂರು–ಮೈಸೂರು ಇನ್‌ಪ್ರಾಸ್ಟ್ರಕ್ಚರ್‌ ಕಾರಿಡಾರ್‌ ಯೋಜನೆ (BMICP) ಅಕ್ರಮಗಳ ಬಗ್ಗೆ ಕುಮಾರಸ್ವಾಮಿಯವರು ಪತ್ರದಲ್ಲಿ ಉಲ್ಲೇಖಿಸಿದ್ದು, ನೈಸ್ ಸಂಸ್ಥೆ ಈ ನೆಲದ ಕಾನೂನು ಹಾಗೂ ಫ್ರೇಮ್​​ ವರ್ಕ್​​ ಅಗ್ರಿಮೆಂಟ್​​ ಉಲ್ಲಂಘಿಸಿದೆ. ಭೂಸ್ವಾಧೀನ ಮಾಡಿಕೊಂಡು 23 ವರ್ಷಗಳೇ ಕಳೆದರೂ ಭೂಮಿ ಕಳೆದುಕೊಂಡ ರೈತರಿಗೆ ಇನ್ನೂ ಪರಿಹಾರ ನೀಡದಿರುವುದರಿಂದ ಅವರೆಲ್ಲರೂ ಬೀದಿ ಪಾಲಾಗಿದ್ದಾರೆ ಎಂದವರು ದೂರಿದ್ದಾರೆ.

ಇದನ್ನೂ ಓದಿ: ವಾಹನಗಳ ಮಾಲಿನ್ಯ ಪರೀಕ್ಷೆ ಶುಲ್ಕ ಹೆಚ್ಚಳ: ಯಾವುದಕ್ಕೆ ಎಷ್ಟು ಏರಿಕೆ?

ಕರ್ನಾಟಕ ಹೈಕೋರ್ಟ್‌, ಸುಪ್ರೀಂ ಕೋರ್ಟ್‌ ತೀರ್ಪುಗಳಲ್ಲಿ ನೀಡಿರುವ ನಿರ್ದೇಶನಗಳಂತೆ ಹಾಗೂ ವಿಧಾನಸಭೆ ಸದನ ಸಮಿತಿ ಮತ್ತು ಸಚಿವ ಸಂಪುಟದ ಉಪ ಸಮಿತಿಗಳ ಶಿಫಾರಸುಗಳಲ್ಲಿ ದಾಖಲಿಸಿರುವಂತೆ ನೈಸ್‌ ಸಂಸ್ಥೆ BMICP ಯೋಜನೆ ಅನುಷ್ಠಾನದಲ್ಲಿ ಫ್ರೇಮ್​​ ವರ್ಕ್​​ ಅಗ್ರಿಮೆಂಟ್(FWA) ಮತ್ತು ಪ್ರಾಜೆಕ್ಟ್​​ ಟೆಕ್ನಿಕಲ್​​ ಅಗ್ರಿಮೆಂಟ್​​ (PTA) ಗಳಲ್ಲಿರುವ ನಿಬಂಧನೆ ಮತ್ತು ಷರತ್ತುಗಳನ್ನು ಸ್ಪಷ್ಟವಾಗಿ ಉಲ್ಲಂಘಸಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ನೈಸ್‌ ಸಂಸ್ಥೆ ಅನಧಿಕೃತವಾಗಿ ಸಂಗ್ರಹಿಸುತ್ತಿರುವ ಟೋಲ್‌ ಅನ್ನು ತತ್‌ಕ್ಷಣ ಜಾರಿಗೆ ಬರುವಂತೆ ನಿಷೇಧಿಸಬೇಕು. ಅಲ್ಲದೆ, ಒಂದು ಶಾಸನವನ್ನು ರಚಿಸುವ ಮೂಲಕ ನೈಸ್ ರಸ್ತೆ ಯೋಜನೆಯನ್ನು ರಾಜ್ಯ ಸರಕಾರ ಸ್ವಾಧೀನ ಮಾಡಿಕೊಳ್ಳಬೇಕು ಎಂದು ಕುಮಾರಸ್ವಾಮಿ ಅವರು ಪತ್ರ ಮುಖೇನ ಮುಖ್ಯಮಂತ್ರಿಗಳನ್ನು ಆಗ್ರಹಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 12:14 pm, Sun, 16 August 26

Follow Us