
ಬೆಂಗಳೂರು, ಆಗಸ್ಟ್ 16: ನೈಸ್ ರಸ್ತೆಯಲ್ಲಿ ಟೋಲ್ ಸಂಗ್ರಹ ಸ್ಥಗಿತಗೊಳಿಸುವಂತೆ ಆಗ್ರಹಿಸಿ ಸಿಎಂ ಡಿಕೆ ಶಿವಕುಮಾರ್ (DK Shivakumar) ಅವರಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ(HD Kumaraswamy) ಪತ್ರ ಬರೆದು ಆಗ್ರಹಿಸಿದ್ದಾರೆ. ಅನಧಿಕೃತವಾಗಿ ಟೋಲ್ ಸಂಗ್ರಹ ಮಾಡಲಾಗ್ತಿದೆ. ಕೋರ್ಟ್ ಆದೇಶ ಇದ್ದರೂ ಸರ್ಕಾರ ಗಮನ ಹರಿಸುತ್ತಿಲ್ಲ ಎಂದು ದೂರಿರುವ ಅವರು, ನೈಸ್ ಯೋಜನೆಯನ್ನ ಸರ್ಕಾರದ ವಶಕ್ಕೆ ಪಡೆದು ಟೋಲ್ ಸಂಗ್ರಹ ಕೂಡಲೇ ನಿಲ್ಲಿಸುವಂತೆ ಆಗ್ರಹಿಸಿದ್ದಾರೆ.
ಬೆಂಗಳೂರು–ಮೈಸೂರು ಇನ್‌ಪ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (BMICP) ಅಕ್ರಮಗಳ ಬಗ್ಗೆ ನಾನು ರಾಜ್ಯದ ಮುಖ್ಯಮಂತ್ರಿ ಶ್ರೀ @DKShivakumar ಅವರಿಗೆ ವಿವರವಾದ ಪತ್ರ ಬರೆದಿದ್ದೇನೆ. ಈ ನೆಲದ ಕಾನೂನು ಹಾಗೂ Frame Work Agreement ಅನ್ನು ಉಲ್ಲಂಘಿಸಿ ನೈಸ್ ಸಂಸ್ಥೆ ಯಾವ ರೀತಿ ಅಕ್ರಮಗಳನ್ನು ಎಸಗಿದೆ ಎಂಬ ಬಗ್ಗೆ ಪತ್ರದಲ್ಲಿ ಸುದೀರ್ಘವಾಗಿ… pic.twitter.com/yNu9dPoKO5
— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) August 16, 2026
ಬೆಂಗಳೂರು–ಮೈಸೂರು ಇನ್‌ಪ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (BMICP) ಅಕ್ರಮಗಳ ಬಗ್ಗೆ ಕುಮಾರಸ್ವಾಮಿಯವರು ಪತ್ರದಲ್ಲಿ ಉಲ್ಲೇಖಿಸಿದ್ದು, ನೈಸ್ ಸಂಸ್ಥೆ ಈ ನೆಲದ ಕಾನೂನು ಹಾಗೂ ಫ್ರೇಮ್ ವರ್ಕ್ ಅಗ್ರಿಮೆಂಟ್ ಉಲ್ಲಂಘಿಸಿದೆ. ಭೂಸ್ವಾಧೀನ ಮಾಡಿಕೊಂಡು 23 ವರ್ಷಗಳೇ ಕಳೆದರೂ ಭೂಮಿ ಕಳೆದುಕೊಂಡ ರೈತರಿಗೆ ಇನ್ನೂ ಪರಿಹಾರ ನೀಡದಿರುವುದರಿಂದ ಅವರೆಲ್ಲರೂ ಬೀದಿ ಪಾಲಾಗಿದ್ದಾರೆ ಎಂದವರು ದೂರಿದ್ದಾರೆ.
ಇದನ್ನೂ ಓದಿ: ವಾಹನಗಳ ಮಾಲಿನ್ಯ ಪರೀಕ್ಷೆ ಶುಲ್ಕ ಹೆಚ್ಚಳ: ಯಾವುದಕ್ಕೆ ಎಷ್ಟು ಏರಿಕೆ?
ಕರ್ನಾಟಕ ಹೈಕೋರ್ಟ್, ಸುಪ್ರೀಂ ಕೋರ್ಟ್ ತೀರ್ಪುಗಳಲ್ಲಿ ನೀಡಿರುವ ನಿರ್ದೇಶನಗಳಂತೆ ಹಾಗೂ ವಿಧಾನಸಭೆ ಸದನ ಸಮಿತಿ ಮತ್ತು ಸಚಿವ ಸಂಪುಟದ ಉಪ ಸಮಿತಿಗಳ ಶಿಫಾರಸುಗಳಲ್ಲಿ ದಾಖಲಿಸಿರುವಂತೆ ನೈಸ್ ಸಂಸ್ಥೆ BMICP ಯೋಜನೆ ಅನುಷ್ಠಾನದಲ್ಲಿ ಫ್ರೇಮ್ ವರ್ಕ್ ಅಗ್ರಿಮೆಂಟ್(FWA) ಮತ್ತು ಪ್ರಾಜೆಕ್ಟ್ ಟೆಕ್ನಿಕಲ್ ಅಗ್ರಿಮೆಂಟ್ (PTA) ಗಳಲ್ಲಿರುವ ನಿಬಂಧನೆ ಮತ್ತು ಷರತ್ತುಗಳನ್ನು ಸ್ಪಷ್ಟವಾಗಿ ಉಲ್ಲಂಘಸಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ನೈಸ್ ಸಂಸ್ಥೆ ಅನಧಿಕೃತವಾಗಿ ಸಂಗ್ರಹಿಸುತ್ತಿರುವ ಟೋಲ್ ಅನ್ನು ತತ್‌ಕ್ಷಣ ಜಾರಿಗೆ ಬರುವಂತೆ ನಿಷೇಧಿಸಬೇಕು. ಅಲ್ಲದೆ, ಒಂದು ಶಾಸನವನ್ನು ರಚಿಸುವ ಮೂಲಕ ನೈಸ್ ರಸ್ತೆ ಯೋಜನೆಯನ್ನು ರಾಜ್ಯ ಸರಕಾರ ಸ್ವಾಧೀನ ಮಾಡಿಕೊಳ್ಳಬೇಕು ಎಂದು ಕುಮಾರಸ್ವಾಮಿ ಅವರು ಪತ್ರ ಮುಖೇನ ಮುಖ್ಯಮಂತ್ರಿಗಳನ್ನು ಆಗ್ರಹಿಸಿದ್ದಾರೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 12:14 pm, Sun, 16 August 26