ಜೆಡಿಎಸ್​​ ಪಕ್ಷಕ್ಕೆ ರಾಜೀನಾಮೆ ನೀಡಿದ ಮಾಜಿ ಶಾಸಕ ಹೆಚ್​.ನಿಂಗಪ್ಪ, ಕಾಂಗ್ರೆಸ್ ಸೇರುವ ಸಾಧ್ಯತೆ

| Updated By: ಆಯೇಷಾ ಬಾನು

Updated on: Nov 15, 2022 | 12:21 PM

ಮಾಜಿ ಶಾಸಕ ಹೆಚ್​.ನಿಂಗಪ್ಪ ಜೆಡಿಎಸ್​​ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿ ಕಾಂಗ್ರೆಸ್ ಕಡೆ ಮುಖ ಮಾಡಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ಜೆಡಿಎಸ್​​ ಪಕ್ಷಕ್ಕೆ ರಾಜೀನಾಮೆ ನೀಡಿದ ಮಾಜಿ ಶಾಸಕ ಹೆಚ್​.ನಿಂಗಪ್ಪ, ಕಾಂಗ್ರೆಸ್ ಸೇರುವ ಸಾಧ್ಯತೆ
ಹೆಚ್​.ನಿಂಗಪ್ಪ, ಹೆಚ್​ಡಿ ಕುಮಾರಸ್ವಾಮಿ
Follow us on

ತುಮಕೂರು: ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ವಲಯದಲ್ಲಿ ಅನೇಕ ಬದಲಾವಣೆಗಳಾಗುತ್ತಿವೆ. ಸದ್ಯ ಈಗ ಮಾಜಿ ಶಾಸಕ ಹೆಚ್​.ನಿಂಗಪ್ಪ ಜೆಡಿಎಸ್​​ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿ ಕಾಂಗ್ರೆಸ್ ಕಡೆ ಮುಖ ಮಾಡಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ನಿಂಗಪ್ಪ ಅವರು ಮುಂದೆ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

2006ರಲ್ಲಿ ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕರಾಗಿದ್ದ ನಿಂಗಪ್ಪ ಅವರು 2013ರಲ್ಲಿ JDS ಟಿಕೆಟ್​ ಸಿಗದಿದ್ದಕ್ಕೆ ಕೆಜೆಪಿಯಿಂದ ಸ್ಪರ್ಧಿಸಿದ್ದರು. ಬಳಿಕ ಕಾಂಗ್ರೆಸ್ ಸೇರಿದ್ದ ನಿಂಗಪ್ಪನವರು ಮತ್ತೆ 2018ರಲ್ಲಿ ಜೆಡಿಎಸ್​ಗೆ ಮರಳಿದ್ದರು. ಪಕ್ಷದ ಎಲ್ಲಾ ಚಟುವಟಿಕೆಗಳಿಂದ ದೂರ ಇಟ್ಟಿದ್ದಕ್ಕೆ ಅಸಮಾಧಾನವಾಗಿದೆ ಎಂದು ರಾಜೀನಾಮೆ ಪತ್ರದಲ್ಲಿ ಮಾಜಿ ಶಾಸಕ ನಿಂಗಪ್ಪ ಉಲ್ಲೇಖಿಸಿದ್ದಾರೆ.

2018 ರಲ್ಲಿ ಹೆಚ್​ಡಿ ಕುಮಾರಸ್ವಾಮಿ ಅವರು ಹೆಚ್​.ನಿಂಗಪ್ಪ ನವರನ್ನು ರಾಜ್ಯ ಪ್ರದಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಎಂದು ನೇಮಿಸಿ ಆದೇಶ ಪತ್ರ ನೀಡಿದ್ದರು‌. ಆದ್ರೆ ಅದು ಪತ್ರವಾಗಿಯೇ ಉಳಿಯಿತು. ಪಕ್ಷದ ಎಲ್ಲಾ ಚಟುವಟಿಕೆಗಳಿಂದ ನನ್ನ ದೂರ ಇಟ್ಟಿದ್ದರು ಎಂದು ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Published On - 12:21 pm, Tue, 15 November 22