ಇಂದಿನಿಂದ ಹಜ್ ಯಾತ್ರೆ  ಪ್ರಾರಂಭ: ಬೆಂಗಳೂರಿನಿಂದ ತೆರಳುವ ಮೊದಲ ವಿಮಾನಕ್ಕೆ ಸಿಎಂ ಚಾಲನೆ

ನಾಳೆಯಿಂದ (ಜೂನ್​ 9) ರಿಂದ ಹಜ್ ಯಾತ್ರೆ ಪ್ರಾರಂಭವಾಗಲಿದ್ದು, ನಾಳೆ ಬೆಂಗಳೂರಿನಿಂದ ತೆರಳುವ ಮೊದಲ ವಿಮಾನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ.

ಇಂದಿನಿಂದ ಹಜ್ ಯಾತ್ರೆ  ಪ್ರಾರಂಭ: ಬೆಂಗಳೂರಿನಿಂದ ತೆರಳುವ ಮೊದಲ ವಿಮಾನಕ್ಕೆ ಸಿಎಂ ಚಾಲನೆ
ಹಜ್​​
Follow us
TV9 Web
| Updated By: ಆಯೇಷಾ ಬಾನು

Updated on:Jun 09, 2022 | 8:09 AM

ಬೆಂಗಳೂರು: ಜೂನ್​ 9 ರಿಂದ ಹಜ್ (Hajj) ಯಾತ್ರೆ ಪ್ರಾರಂಭವಾಗಲಿದ್ದು, ಬೆಂಗಳೂರಿನಿಂದ (Bengaluru) ತೆರಳುವ ಮೊದಲ ವಿಮಾನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ (CM Basavaraj Bommai) ಚಾಲನೆ ನೀಡಿದ್ದಾರೆ. ಬೆಂಗಳೂರಿನ ಹೆಗಡೆನಗರದಲ್ಲಿರುವ ಹಜ್​ ಭವನದಲ್ಲಿ ಸಮಾರಂಭ ನಡೆದಿದೆ. ಇಂದು ಮೊದಲ ವಿಮಾನದ ಮೂಲಕ 450 ಜನರ ಹಜ್ ಯಾತ್ರೆಗೆ ತೆರಳಿದ್ದಾರೆ. ಕಾರ್ಯಕ್ರಮದಲ್ಲಿ ವಕ್ಫ್ ಮಂಡಳಿ ಅಧ್ಯಕ್ಷ ಮೌಲಾನಾ ಶಾಫಿ ಸಅದಿ, ಹಜ್ ಸಮಿತಿ ಅಧ್ಯಕ್ಷ ರವೂಫುದ್ದೀನ್ ಕಚೇರಿವಾಲೆ, ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್​, ವಿಧಾನಸಭೆಯ ವಿಪಕ್ಷ ಉಪ ನಾಯಕ ಯು.ಟಿ.ಖಾದರ್ (UT Khadar)​, ರಾಜ್ಯಸಭೆ ಸದಸ್ಯ ನಾಸೀರ್ ಹುಸೇನ್  ಮತ್ತು ರೋಷನ್ ಬೇಗ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ.  ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇನ್ನು ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಹಜ್‌ಗೆ ಹೋಗಿ ಬಂದ ನಂತರ ಹಾಜಿಯಾಗಿ ಕಟ್ಟುನಿಟ್ಟಿನ ಬದುಕು ನಡೆಸಬೇಕು. ಅತ್ಯಂತ ಶುದ್ಧ ಬದುಕನ್ನು ನಡೆಸಬೇಕು. ಆಗ ಅಲ್ಲಿಗೆ ಹೋಗಿ ಬಂದದ್ದು ಸಾರ್ಥಕವಾಗುತ್ತದೆ. ನಿಮ್ಮ ದುವಾ ಪೂರ್ಣವಾಗಬೇಕಾದರೆ ಒಳ್ಳೆತನದಿಂದ ನಡೆದುಕೊಳ್ಳುವುದು ಅಗತ್ಯ. ಕೆಲವರು ಮಾತ್ರ ಮನುಷ್ಯತ್ವದಿಂದ ನಡೆದುಕೊಂಡು ದೇವಮಾನವರಾಗುತ್ತಾರೆ. ಬದುಕಿನಲ್ಲಿ ಏನಾದರೂ ಪ್ರಾಪ್ತಿಯಾಗಬೇಕಾದರೆ ಒಳ್ಳೆಯ ಗುಣಗಳು ಮತ್ತು ಆಚಾರ ವಿಚಾರಗಳಿಂದ ಮಾತ್ರ ಸಾಧ್ಯ. ಎಲ್ಲಿ ಒಳ್ಳೆತನವಿದೆ ಅಲ್ಲಿ ಭಗವಂತನಿರುತ್ತಾನೆ.

ಪ್ರತಿ ಮನುಷ್ಯನಲ್ಲಿ ಒಳ್ಳೆಯದು ಮತ್ತು ಕೆಟ್ಟದ್ದು ಇರುತ್ತದೆ. ನಮ್ಮಲ್ಲಿರುವ ಯಾವ ಗುಣ ಅಂತಿಮವಾಗಿ ಜಯಶಾಲಿಯಾಗುತ್ತದೆ ಎನ್ನುವುದು ನಮ್ಮ ಇಚ್ಛಾಶಕ್ತಿಯನ್ನು ಅವಲಂಬಿಸಿದೆ. ಮಾನವೀಯತೆಯ ಆಧಾರದ ಮೇಲೆ ನಡೆದುಕೊಂಡಾಗ ಭಗವಂತನಿಗೆ ಅತ್ಯಂತ ಪ್ರಿಯವಾಗುತ್ತದೆ. ಭಗವಂತನಿಗೆ ಪ್ರೀತಿಯಾಗಿರುವ ಬದುಕನ್ನು ನಾವು ಬದುಕಬೇಕು. ಇದೇ ಎಲ್ಲಾ ಧರ್ಮಗಳ ಸಾರವಾಗಿದೆ. ಒಬ್ಬ ಮನುಷ್ಯ ಇನ್ನೊಬ್ಬ ಮನುಷ್ಯನನ್ನು ಪ್ರೀತಿಸಿದಾಗ ಇದು ಸಾಧ್ಯವಾಗುತ್ತದೆ. ಯಾವ ಮಣ್ಣಿನಲ್ಲಿ ಹುಟ್ಟಿರುತ್ತೇವೋ ಆ ದೇಶದ ಮೇಲೆ ಪ್ರೀತಿ ಭಕ್ತಿ ಇರಬೇಕು ಎಂದು ಕಿವಿ ಮಾತು ಹೇಳಿದ್ದಾರೆ.

Read more at: https://kannada.oneindia.com/news/bengaluru/all-religions-preach-humanity-bommai-wishes-haj-yatra-2022-257929.html

Read more at: https://kannada.oneindia.com/news/bengaluru/all-religions-preach-humanity-bommai-wishes-haj-yatra-2022-257929.html

Published On - 9:57 pm, Wed, 8 June 22

ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ