ಹಲಸೂರು: ಮತದಾರರಿಗೆ ಹಂಚಲು ತಂದಿದ್ದ 1.47 ಕೋಟಿ ರೂ. ಮೌಲ್ಯದ ಚಿನ್ನದ ಲೇಪನದ ಆಭರಣಗಳು ಜಪ್ತಿ

1.47 ಕೋಟಿ ರೂ. ಮೌಲ್ಯದ ಚಿನ್ನದ ಲೇಪನದ ಆಭರಣಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಹಾಗೂ ಮೂವರನ್ನು ವಶಕ್ಕೆ ಪಡೆದಿದ್ದಾರೆ.

Follow us
ಆಯೇಷಾ ಬಾನು
|

Updated on:Apr 04, 2023 | 10:13 AM

ಬೆಂಗಳೂರು: ಹಲಸೂರು ಠಾಣೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಮತದಾರರಿಗೆ ಹಂಚಲು ತಂದಿದ್ದ 1.47 ಕೋಟಿ ರೂ. ಮೌಲ್ಯದ ಚಿನ್ನದ ಲೇಪನದ ಆಭರಣಗಳನ್ನು ಜಪ್ತಿ ಮಾಡಿದ್ದಾರೆ. ಹಾಗೇ ಪಂಕಜ್ ಗೌಡ, ಭಗವಾನ್ ಸಿಂಗ್, ವಡಿವೇಲು ಎಂಬ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಚುನಾವಣಾಧಿಕಾರಿ ಮುನಿಯ ನಾಯಕ ದೂರಿನ ಮೇರೆಗೆ ದಾಳಿ ನಡೆಸಿ ಚಿನ್ನದ ಲೇಪನದ ಆಭರಣಗಳನ್ನು ಪೊಲೀಸರು ವಶ ಪಡಿಸಿಕೊಂಡಿದ್ದಾರೆ.

ಸಿ.ವಿ.ರಾಮನ್​​ನಗರ ಕ್ಷೇತ್ರದಲ್ಲಿ ಮತದಾರರಿಗೆ ಹಂಚಲು ತಂದಿದ್ದ ಗೋಲ್ಡ್ ಕೋಟೆಡ್ ಸರ, ಉಂಗುರ, ಕಿವಿಯೋಲೆ, ಬ್ರೇಸ್ ಲೇಟ್, ಬಳೆಗಳು ಸೇರಿದಂತೆ 8 ಕೆಜಿಗೂ ಅಧಿಕ ತೂಕದ ಚಿನ್ನದ ಲೇಪನದ ಆಭರಣಗಳನ್ನು ಜಪ್ತಿ ಮಾಡಲಾಗಿದೆ. ಎಸಿಪಿ ರಾಮಚಂದ್ರ, ಇನ್ಸ್‌ಪೆಕ್ಟರ್ ಹರೀಶ್ ಬಾಬು, ಸಬ್ ಇನ್ಸ್‌ಪೆಕ್ಟರ್ ಮಧು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಹೆಚ್ಚಿನ ವಿಚಾರಣೆ ನಡೆಯುತ್ತಿದೆ.

ಇದನ್ನೂ ಓದಿ: ಮೈಸೂರು: ಅಬ್ಬಬ್ಬಾ., ಕಾಡೆಮ್ಮೆಯನ್ನು ಅಟ್ಟಿಸಿಕೊಂಡು ಬಂದ ಹುಲಿರಾಯ, ಎದೆ ಝಲ್ ಎನ್ನುವ ವಿಡಿಯೋ ವೈರಲ್

ದಾಖಲೆ ಇಲ್ಲದೆ ಸಂಗ್ರಹಿಸಿಟ್ಟಿದ್ದ ಫುಡ್ ಕಿಟ್​ಗಳು ವಶ

ಕೋಲಾರ ತಹಶೀಲ್ದಾರ್ ಹರ್ಷವರ್ಧನ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು ದಾಖಲೆ ಇಲ್ಲದೆ ಸಂಗ್ರಹಿಸಿಟ್ಟಿದ್ದ 60 ಫುಡ್ ಕಿಟ್ ಗಳನ್ನು ವಶಕ್ಕೆ ಪಡೆಯಲಾಗಿದೆ. ತಲಾ ಫುಡ್ ಕಿಟ್ ನಲ್ಲಿ 800 ರುಪಾಯಿ ಬೆಲೆಬಾಳುವ ದಿನಸಿ ಸಾಮಗ್ರಿ ಪತ್ತೆಯಾಗಿದೆ. ಯಾರ ಹೆಸರು ಹಾಗೂ ಚಿಹ್ನೆ ಹಾಕದೆ ಫುಡ್ ಕಿಟ್ ಗಳನ್ನು ಸಿದ್ದಪಡಿಸಲಾಗಿದೆ. ಕೋಲಾರ ನಗರದ ಶಾಂತಿನಗರ ಬಳಿಯ ಶಂಕರ್ ಎಂಬುವವರಿಗೆ ಸೇರಿರುವ ಹೂವಿನ ಡೆಕೋರೇಷನ್ ಗೋಡೊನ್ ನಲ್ಲಿ ಪುಡ್ ಕಿಟ್​ಗಳನ್ನು ಸಂಗ್ರಹಿಸಿಡಲಾಗಿತ್ತು. ಖಚಿತ ಮಾಹಿತಿ ಮೇರೆಗೆ ತಹಶೀಲ್ದಾರ್ ತಂಡ ದಾಳಿ ಮಾಡಿದೆ. ದಾಳಿ ವೇಳೆ ಮಾಜಿ ನಗರಸಭೆ ಸದಸ್ಯನ ಕೈವಾಡವಿರುವ ಅನುಮಾನ ವ್ಯಕ್ತವಾಗಿದೆ. ಅಕ್ರಮ ಶೇಖರಣೆ ಆರೋಪದಡಿ ಅಧಿಕಾರಿಗಳು ಕೇಸ್ ದಾಖಲಿಸಿಕೊಂಡಿದ್ದಾರೆ.

ಶಿವಮೊಗ್ಗ ಜಿಲ್ಲೆಯಲ್ಲಿ 21.78 ಲಕ್ಷ ಮೌಲ್ಯದ ವಸ್ತುಗಳು ಜಪ್ತಿ

ಚುನಾವಣೆ ನೀತಿ ಸಂಹಿತೆ ಜಾರಿ ಹಿನ್ನಲೆ ಸಾಗರ ಗ್ರಾಮಾಂತರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಭರ್ಜರಿ ಬೇಟೆಯಾಡಿದ್ದಾರೆ.

  1. ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದ ಅಂದಾಜು ಮೌಲ್ಯ ರೂ 2,30,000 ಗಳ ಬಟ್ಟೆ ಮತ್ತು ಗೃಹ ಉಪಯೋಗಿ ವಸ್ತುಗಳು.
  2. ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದ ಅಂದಾಜು ಮೌಲ್ಯ ರೂ 60,000 ಗಳ 80 ಬ್ಯಾಗ್ ಗಳಲ್ಲಿ ತುಂಬಿದ್ದ 24 ಕ್ವಿಂಟಾಲ್ ಅಕ್ಕಿ.
  3. ಲಗೇಜ್ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ ಅಂದಾಜು ಮೌಲ್ಯ ರೂ 1,00,000ಗಳ ಕಾಫಿ ಮತ್ತು ಟೀ ಪುಡಿ.
  4. ಲಗೇಜ್ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ ಅಂದಾಜು ಮೌಲ್ಯ ರೂ 1,38,000ಗಳ ಹಾರ್ಡ್ ವೇರ್ ಪರಿಕರಗಳು.
  5. ಲಗೇಜ್ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ ಅಂದಾಜು ಮೌಲ್ಯ ರೂ 1,50,000 ಗಳ ಅಡುಗೆ ಎಣ್ಣೆ ಮತ್ತು ಜ್ಯೂಸ್.
  6. ಲಗೇಜ್ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ ಅಂದಾಜು ಮೌಲ್ಯ ರೂ 15,00,000ಗಳ ಬಟ್ಟೆ ಮತ್ತು ಹಾರ್ಡ್ ವೇರ್ ವಸ್ತು ಸೀಜ್ ಮಾಡಿದ್ದಾರೆ. ಎಲ್ಲಾ ವಸ್ತುಗಳು ಸೇರಿ ಒಟ್ಟು ರೂ 21,78,000 ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:17 am, Tue, 4 April 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ