AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಲಸೂರಿನ ಮುಜರಾಯಿ ದೇವಸ್ಥಾನದಲ್ಲಿ ಮದುವೆ ಯಾಕೆ ಮಾಡುವುದಿಲ್ಲ? ಕಾರಣ ಕೇಳಿದ್ರೆ ಅಚ್ಚರಿಯಾಗ್ತೀರಿ

ಬೆಂಗಳೂರಿನ ಹಲಸೂರು ಸೋಮೇಶ್ವರ ದೇವಸ್ಥಾನದಲ್ಲಿ ಕಳೆದ 6-7 ವರ್ಷಗಳಿಂದ ಮದುವೆ ಕಾರ್ಯಕ್ರಮಗಳನ್ನು ನಿಲ್ಲಿಸಲಾಗಿದೆ. ಈ ದೇವಸ್ಥಾನದಲ್ಲಿ ಮದುವೆ ಯಾಕೆ ಮಾಡುವುದಿಲ್ಲ ಎಂಬುದರ ಕುರಿತು ಆಡಳಿತ ಮಂಡಳಿ ಸರ್ಕಾರಕ್ಕೆ ಮಾಹಿತಿ ಪತ್ರವನ್ನು ಸಲ್ಲಿಸಿದ್ದು, ಪತ್ರದಲ್ಲಿ ದೇವಾಲಯದ ಪ್ರಸ್ತುತ ಕಾರ್ಯನಿರ್ವಹಣಾಧಿಕಾರಿ ನೈಜ ಕಾರಣ ಬಿಚ್ಚಿಟ್ಟಿದ್ದಾರೆ.

ಹಲಸೂರಿನ ಮುಜರಾಯಿ ದೇವಸ್ಥಾನದಲ್ಲಿ ಮದುವೆ ಯಾಕೆ ಮಾಡುವುದಿಲ್ಲ? ಕಾರಣ ಕೇಳಿದ್ರೆ ಅಚ್ಚರಿಯಾಗ್ತೀರಿ
ಹಲಸೂರಿನ ಮುಜರಾಯಿ ದೇವಸ್ಥಾನದಲ್ಲಿ ಮದುವೆ ಯಾಕೆ ಮಾಡುವುದಿಲ್ಲ?
ಭಾವನಾ ಹೆಗಡೆ
|

Updated on:Nov 26, 2025 | 11:30 AM

Share

ಬೆಂಗಳೂರು, ನವೆಂಬರ್ 26: ಹಲಸೂರಿನ ಸೋಮೇಶ್ವರಸ್ವಾಮಿ ದೇವಾಲಯದಲ್ಲಿ (Halasuru Someshwar Temple) ಕಳೆದ ಕೆಲ ವರ್ಷಗಳಿಂದ ಮದುವೆ ಕಾರ್ಯಕ್ರಮ ನಡೆಸುವುದನ್ನು ನಿಲ್ಲಿಸಲಾಗಿದ್ದು, ದೇವಸ್ಥಾನದ ಆಡಳಿತ ಮಂಡಳಿ ಈ ಕುರಿತು ಸ್ಪಷ್ಟನೆ ನೀಡಿದೆ. ದೇವಾಲಯದ ಅಪಪ್ರಚಾರವನ್ನು ತಪ್ಪಿಸಲು ಈ ಹಿಂದೆ ಇಂತಹ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸರ್ಕಾರಕ್ಕೆ ಸಲ್ಲಿಸಿದ ಮಾಹಿತಿಯಲ್ಲಿ ತಿಳಿಸಿದ್ದಾರೆ.

ದೇವಾಲಯದ ಅಪಪ್ರಚಾರ ತಡೆಯಲು ಈ ನಿರ್ಧಾರ

ಶ್ರೀ ಸೋಮೇಶ್ವರಸ್ವಾಮಿ ದೇವಾಲಯದಲ್ಲಿ ಕಳೆದ 6-7 ವರ್ಷಗಳಿಂದ ಮದುವೆ ಕಾರ್ಯಗಳನ್ನು ನಿಲ್ಲಿಸಲಾಗಿತ್ತು. ಈ ಹಿಂದೆ ದೇವಾಲಯದಲ್ಲಿ ಮದುವೆ ಮಾಡಿಕೊಳ್ಳುತ್ತಿದ್ದ ದಂಪತಿಗಳು ಅವರಿಗೆ ಹೊಂದಾಣಿಕೆಯಾಗದೇ ಇದ್ದಾಗ ನ್ಯಾಯಾಲಯಗಳಿಗೆ ಹೋಗಿ ವಿಚ್ಚೇದನಕ್ಕಾಗಿ ಅರ್ಜಿ ಸಲ್ಲಿಸುತ್ತಿದ್ದರು. ದಂಪತಿಯ ವಿಚಾರಣೆ ವೇಳೆ ಅರ್ಚಕರನ್ನು ಸಹ ನ್ಯಾಯಾಲಯಗಳಿಗೆ ಹಾಜರುಪಡಿಸುತ್ತಿದ್ದರು. ಈ ಎಲ್ಲಾ ಕಾರಣಗಳಿಂದ ಅರ್ಚಕರು ಸಹ ದೇವಾಲಯದಲ್ಲಿ ಮದುವೆ ಮಾಡಲು ನಿರಾಕರಿಸುತ್ತಿದ್ದರು ಎಂದು ಮಾಹಿತಿ ಪತ್ರದಲ್ಲಿ ತಿಳಿಸಿದ್ದಾರೆ.

ಆಡಳಿತ ಮಂಡಳಿ ಸರ್ಕಾರಕ್ಕೆ ನೀಡಿದ ಮಾಹಿತಿ ಪತ್ರ

588924134 10238802729557690 578245989365170767 N

ಇದನ್ನೂ ಓದಿ Bengaluru Temples: ಮನಸ್ಸಿಗೆ ನೆಮ್ಮದಿ ನೀಡುವ ಬೆಂಗಳೂರಿನ ಪುರಾತನ ದೇವಾಲಯಗಳು

ಆಕಸ್ಮಿಕವಾಗಿ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಮುಂದಾದ ಆಡಳಿತ ಮಂಡಳಿ, ದೇವಾಲಯಕ್ಕೆ ಕಳಂಕವಾಗುವುದನ್ನು ಮತ್ತು ದೇವಾಲಯದ ಅಪಪ್ರಚಾರವನ್ನು ತಪ್ಪಿಸುವ ಸಲುವಾಗಿ ಈ ನಿರ್ಧಾರ ಕೈಗೊಂಡಿದ್ದರು. ಈ ಹಿಂದೆ ಇದ್ದ ಕಾರ್ಯನಿರ್ವಾಹಕ ಅಧಿಕಾರಿಗಳು ಇಲಾಖೆಯ ಮೇಲಾಧಿಕಾರಿಗಳ ಗಮನಕ್ಕೆ ಮೌಖಿಕವಾಗಿ ತಂದು ದೇವಾಲಯದಲ್ಲಿ ಮದುವೆ ಕಾರ್ಯಗಳನ್ನು ನಿಲ್ಲಿಸಿದ್ದರು ಎಂದು ದೇವಾಲಯದ ಪ್ರಸ್ತುತ ಕಾರ್ಯನಿರ್ವಹಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:27 am, Wed, 26 November 25

ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು