ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ನಾಡೋಜ ಡಾ.ಹಂಪ ನಾಗರಾಜಯ್ಯ ರಾಜೀನಾಮೆ
ಪಠ್ಯಪುಸ್ತಕ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಹಂಪನಾ ಆಗ್ರಹಿಸಿದ್ದರು. ಆದರೆ ಸರ್ಕಾರ ಕ್ರಮ ಕೈಗೊಳ್ಳದಿದ್ದಕ್ಕೆ ಬೇಸರದಿಂದ ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.
ಬೆಂಗಳೂರು: ರಾಜ್ಯದಲ್ಲಿ ಪಠ್ಯ ಪರಿಷ್ಕರಣೆ ಚರ್ಚೆ ತಾರಕ್ಕೇರಿದೆ. ಈ ಬಾರಿ ಶಾಲಾ ಪಠ್ಯದಲ್ಲಿ (Text Book) ಕೆಲವರ ಪಾಠವನ್ನು ತೆಗೆದು ಹೊಸ ಪಾಠಗಳನ್ನ ಸೇರಿಸಲಾಗಿದೆ. ಈ ಬಗ್ಗೆ ಪರ- ವಿರೋಧಗಳ ಚರ್ಚೆ ನಡುವೆ ಪ್ರತಿಭಟನೆ ನಡೆಯುತ್ತಿದೆ. ಈ ಎಲ್ಲದರ ನಡುವೆ ಇಂದು ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ನಾಡೋಜ ಡಾ.ಹಂಪ ನಾಗರಾಜಯ್ಯ (Hampa Nagarajaiah) ರಾಜೀನಾಮೆ ಸಲ್ಲಿಸಿದ್ದಾರೆ. ಪಠ್ಯಪುಸ್ತಕ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಹಂಪನಾ ಆಗ್ರಹಿಸಿದ್ದರು. ಆದರೆ ಸರ್ಕಾರ ಕ್ರಮ ಕೈಗೊಳ್ಳದಿದ್ದಕ್ಕೆ ಬೇಸರದಿಂದ ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.
ರೋಹಿತ್ ಚಕ್ರತೀರ್ಥ ನಾಡಗೀತೆಯನ್ನು ತಿರುಚಿ ಅವಮಾನ ಮಾಡಿದ್ದಾರೆ ಎಂದು ರೋಹಿತ್ ಚಕ್ರತೀರ್ಥ ನಾಡಗೀತೆಯನ್ನು ತಿರುಚಿ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ನಾಡೋಜ ಡಾ.ಹಂಪ ನಾಗರಾಜಯ್ಯ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದಿದ್ದರು. ಪತ್ರದಲ್ಲಿ ಚಕ್ರತೀರ್ಥ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದರು.
ನಾಳೆ ಪ್ರತಿಭಟನೆ: ಪಠ್ಯ ಪರಿಷ್ಕರಣೆಯನ್ನು ವಿರೋಧಿಸಿ ನಾಳೆ ವಿವಿಧ ಪ್ರತಿಭಟನೆಗಳಿಂದ ಪ್ರತಿಭಟನೆ ನಡೆಯಲಿದೆ. ಸಾಹಿತಿಗಳು, ಚಿಂತಕರು ಹಾಗೂ ಶಿಕ್ಷಣ ತಜ್ಞರು ಹೋರಾಟಕ್ಕೆ ಸಾಥ್ ನೀಡಲಿದ್ದಾರೆ. ಕರವೇ ನಾರಯಣಗೌಡ ಬಣದಿಂದಲೂ ಪ್ರತಿಭಟನೆ ನಾಳೆ ನಡೆಯಲಿದೆ. ವಿವಿಧ ವಿಧ್ಯಾರ್ಥಿ ಸಂಘಟನೆಗಳು ಧರಣಿಗೆ ಕರೆ ನೀಡಿವೆ. ನಾಳೆ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಹೋರಾಟ ಮಾಡಲು ಕರವೇ ನಿರ್ಧರಿಸಿದೆ.
ವಿವಾದಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ: ಪಠ್ಯಪುಸ್ತಕ ಪರಿಷ್ಕರಣೆ ವಿವಾದ ಮುಗಿದ ಅಧ್ಯಾಯ ಎಂದು ಮೈಸೂರಿನಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆ ನೀಡಿದ್ದಾರೆ. ರೋಹಿತ್ ಚಕ್ರತಿರ್ಥ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಇಷ್ಟು ವರ್ಷ ಎಡಪಂಥೀಯ ಇತಿಹಾಸ ಬೋಧಿಸಲಾಗುತ್ತಿತ್ತು. ಈಗ ಪಠ್ಯದ ಮೂಲಕ ನೈಜ ಇತಿಹಾಸವನ್ನು ಹೇಳಲಾಗುತ್ತಿದೆ. ನಮ್ಮ ಮಕ್ಕಳು ಇನ್ಮುಂದೆ ನೈಜ ಇತಿಹಾಸ ಕಲಿಯಲಿದ್ದಾರೆ ಎಂದು ತಿಳಿಸಿದರು.
ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 3:56 pm, Mon, 30 May 22