Hamsalekha: ಪೇಜಾವರ ಶ್ರೀಗಳ ಬಗ್ಗೆ ಅವಹೇಳನಕಾರಿ ಹೇಳಿಕೆ; ಕ್ಷಮೆ ಕೋರಿದ ಹಂಸಲೇಖ

Hamsalekha: ಪೇಜಾವರ ಶ್ರೀಗಳ ಬಗ್ಗೆ ಹಂಸಲೇಖ ಮಾತನಾಡಿರುವುದು ಸಾಮಾಜಿಕ ಜಾಲತಾಣದಲ್ಲಿ ವಿವಾದ ಹುಟ್ಟುಹಾಕಿತ್ತು. ಫೇಸ್ಬುಕ್​ನಲ್ಲಿ ಜನರು ವಿವಿಧ ರೀತಿಯ ಕಮೆಂಟ್​ಗಳನ್ನು ಮಾಡಿ ವಿಡಿಯೋ ಹಂಚಿಕೊಂಡಿದ್ದರು.

Hamsalekha: ಪೇಜಾವರ ಶ್ರೀಗಳ ಬಗ್ಗೆ ಅವಹೇಳನಕಾರಿ ಹೇಳಿಕೆ; ಕ್ಷಮೆ ಕೋರಿದ ಹಂಸಲೇಖ
ಹಂಸಲೇಖ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Nov 14, 2021 | 10:57 PM

ಬೆಂಗಳೂರು: ಖ್ಯಾತ ಚಲನಚಿತ್ರ ಸಂಗೀತ ನಿರ್ದೇಶಕ, ಸಿನಿಮಾ ಸಾಹಿತಿ ಹಂಸಲೇಖ ಪೇಜಾವರ ಶ್ರೀಗಳ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ವಿವಾದಕ್ಕೀಡಾದ ಘಟನೆ ನಡೆದಿದೆ. ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿರುವ ವಿಚಾರ ಸಾಮಾಜಿಕ ಜಾಲತಾಣದಲ್ಲಿ ವಿವಾದಕ್ಕೆ ಆಸ್ಪದ ಮಾಡಿಕೊಟ್ಟಿದೆ. ನೆಟ್ಟಿಗರು ಹಂಸಲೇಖ ಮಾತುಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಅವರು ವಿಡಿಯೋ ಮುಖಾಂತರ ಕ್ಷಮೆ ಕೇಳಿದ್ದಾರೆ.

ಸಾರ್ವಜನಿಕ ಕಾರ್ಯಕ್ರಮ ಒಂದರಲ್ಲಿ ನಾದಬ್ರಹ್ಮ ಹಂಸಲೇಖ ಪೇಜಾವರ ಶ್ರೀಗಳ ವಿರುದ್ಧ ಹೇಳಿಕೆ ನೀಡಿದ್ದರು. ಮೇಲುಜಾತಿ ಹಾಗೂ ಕೀಳುಜಾತಿ, ಜಾತಿತಾರತಮ್ಯ, ಜಾತಿ ಪಿಡುಗು ವಿಚಾರವಾಗಿ ಮಾತನಾಡುತ್ತಾ ಅವಹೇಳನಕಾರಿ ವಾಕ್ಯ ಪ್ರಯೋಗಿಸಿದ್ದರು. ಬಳಿಕ ಅಂಬೇಡ್ಕರ್ ವಿಚಾರವನ್ನು ಕೂಡ ಉಲ್ಲೇಖಿಸಿದ್ದರು. ಇಲ್ಲಿ ಪೇಜಾವರ ಶ್ರೀಗಳ ಬಗ್ಗೆ ಹಂಸಲೇಖ ಮಾತನಾಡಿರುವುದು ಸಾಮಾಜಿಕ ಜಾಲತಾಣದಲ್ಲಿ ವಿವಾದ ಹುಟ್ಟುಹಾಕಿತ್ತು. ಫೇಸ್ಬುಕ್​ನಲ್ಲಿ ಜನರು ವಿವಿಧ ರೀತಿಯ ಕಮೆಂಟ್​ಗಳನ್ನು ಮಾಡಿ ವಿಡಿಯೋ ಹಂಚಿಕೊಂಡಿದ್ದರು.

ಈ ವಿವಾದವನ್ನು ಉದ್ದೇಶಿಸಿ ಕ್ಷಮೆ ಕೇಳುವ ಮೂಲಕ ಹಂಸಲೇಖ ಪ್ರತಿಕ್ರಿಯೆ ನೀಡಿದ್ದಾರೆ. ನನಗೆ ಗೊತ್ತಿದೆ. ಎಲ್ಲಾ ಮಾತುಗಳಿಗೂ ಅದು ವೇದಿಕೆಯಲ್ಲ, ತಪ್ಪು. ಆ ವೇದಿಕೆಯಲ್ಲಿ ನುಡಿದರೆ ಮುತ್ತಿನಹಾರದಂತಿರಬೇಕು ಎಂದು ಇರಬೇಕಿತ್ತು. ಆದರೆ, ತಪ್ಪಾಗಿದೆ. ಅಸ್ಪ್ರಶ್ಯತೆ ಎಂಬುದು ನಮ್ಮ ದೇಶಕ್ಕೆ ಅಂಟಿದ ಶಾಪ. ಈ ಅನಿಷ್ಠವನ್ನು ತೊಡೆದು ಹಾಕುವುದಕ್ಕೆ ಪೇಜಾವರರಂಥ ಗುರುಹಿರಿಯರು ಅಪಾರ ಪ್ರಯತ್ನ ನಡೆಸುತ್ತಿದ್ದಾರೆ. ಅದರ ಬಗ್ಗೆ ನನಗೆ ಆ ಬಗ್ಗೆ ಅಪಾರ ಗೌರವವಿದೆ ಎಂದು ಹೇಳಿದ್ದಾರೆ.

ನಾನು ಒಬ್ಬ ಸಂಗೀತಗಾರ. ನಮಗ್ಯಾಕೆ ಟ್ರೋಲು, ಕಂಟ್ರೋಲ್ ಆಗಿರುವುದು ನಮ್ಮ ಕೆಲಸ. ನನಗೆ ಯಾರಿಗೂ ನೋವು ಕೊಡಲು ಇಷ್ಟವಿಲ್ಲ. ನನ್ನ ಸಂಗೀತದಂತೆ ನನ್ನ ಮಾತು, ಬದುಕು ಕೂಡ ಎಲ್ಲರಿಗೂ ಸುಖ ಕೊಡಬೇಕು. ಆದರೆ, ಎಲ್ಲಾ ಅನಿಷ್ಠಗಳನ್ನು ತೊಡೆದು ಹಾಕುವ ದಿಸೆಯಲ್ಲಿ ನನ್ನ ಪಾತ್ರವೂ ಯಾವುದೇ ಮೂಲಕ ಇದ್ದರೆ ಅದನ್ನು ನಾನು ಮಾಡಿಯೇ ಮಾಡ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ದಸರಾ ಕಳೆ ಹೆಚ್ಚಿಸಿದ ಹಂಸಲೇಖ ಸಂಗೀತ: ಗಾನದ ಮೋಡಿಯಲ್ಲಿ ತೇಲಿದ ಜನರು

ಇದನ್ನೂ ಓದಿ: ಹಂಸಲೇಖ-ರವಿಚಂದ್ರನ್ ದೂರ ಆಗಿದ್ದು ಏಕೆ; ಕ್ರೇಜಿ ಸ್ಟಾರ್​ ಕೊಟ್ರು ಉತ್ತರ

Published On - 10:57 pm, Sun, 14 November 21

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ