ಹಾನಗಲ್ ಮತ್ತು ಸಿಂಧಗಿ ಕ್ಷೇತ್ರಗಳಿಗೆ ಬೈಎಲೆಕ್ಷನ್‌; ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ರೆಡಿಯಾಗಲಿದೆ ಫೈನಲ್ ಲಿಸ್ಟ್

ಹಾನಗಲ್ ಮತ್ತು ಸಿಂಧಗಿ ಕ್ಷೇತ್ರಗಳಿಗೆ ಬೈಎಲೆಕ್ಷನ್‌; ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ರೆಡಿಯಾಗಲಿದೆ ಫೈನಲ್ ಲಿಸ್ಟ್
ಪ್ರಾತಿನಿಧಿಕ ಚಿತ್ರ

ಅಕ್ಟೋಬರ್ 30ರಂದು ಹಾನಗಲ್ ಮತ್ತು ಸಿಂಧಗಿ ಎರಡೂ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಬಾಕಿ ಇರಿಸಿಕೊಂಡಿರುವ ಬಿಜೆಪಿ ಇಂದು ಸಂಭಾವ್ಯ ಅಭ್ಯರ್ಥಿಗಳ ಲಿಸ್ಟ್ ರೆಡಿ ಮಾಡಲಿದೆ.

TV9kannada Web Team

| Edited By: Ayesha Banu

Oct 03, 2021 | 7:47 AM

ಬೆಂಗಳೂರು: ಬೈಎಲೆಕ್ಷನ್‌ ಅಖಾಡ ದಿನೇ ದಿನೇ ರಂಗೇರುತ್ತಿದೆ. ಸದ್ಯ ಅಕ್ಟೋಬರ್ 30ರಂದು ಹಾನಗಲ್ ಮತ್ತು ಸಿಂಧಗಿ ಎರಡೂ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಬಾಕಿ ಇರಿಸಿಕೊಂಡಿರುವ ಬಿಜೆಪಿ ಇಂದು ಸಂಭಾವ್ಯ ಅಭ್ಯರ್ಥಿಗಳ ಲಿಸ್ಟ್ ರೆಡಿ ಮಾಡಲಿದೆ. ಹೀಗಾಗಿ ಬೆಂಗಳೂರಿನಲ್ಲಿ ಇಂದು ಮಧ್ಯಾಹ್ನ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದೆ.

ಹಾನಗಲ್ ಮತ್ತು ಸಿಂಧಗಿ ಉಪಚುನಾವಣಾ ಅಖಾಡ ರಂಗೇರುತ್ತಿದೆ. ನಾಮಪತ್ರ ಸಲ್ಲಿಸಲು ಇನ್ನು 6 ದಿನಗಳಷ್ಟೇ ಬಾಕಿ ಉಳಿದಿದೆ. ಈಗಾಗಲೇ ಜೆಡಿಎಸ್ ಅಭ್ಯರ್ಥಿಗಳ ಹೆಸರನ್ನ ಘೋಷಿಸಿದೆ. ಕಾಂಗ್ರೆಸ್ ಅಭ್ಯರ್ಥಿಗಳು ಹೆಸರು ಬಹುತೇಕ ಅಂತಿಮಗೊಂಡಿದೆ. ಆದರೆ ಆಡಳಿತ ಪಕ್ಷ ಬಿಜೆಪಿ ಇನ್ನೂ ತನ್ನ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿಲ್ಲ. ಹಾಗಾಗಿ ಇಂದು ರಾಜ್ಯ ಕೋರ್ ಕಮಿಟಿ ಸಭೆ ಕರೆಯಲಾಗಿದೆ. ಮಲ್ಲೇಶ್ವರಂನಲ್ಲಿರುವ ಜಗನ್ನಾಥ ಭವನದಲ್ಲಿಂದು ಮಧ್ಯಾಹ್ನ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಪಾಲ್ಗೊಳ್ಳಲಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಕೂಡ ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಕೋರ್ ಕಮಿಟಿ ಸಭೆಯಲ್ಲಿ ರೆಡಿಯಾಗಲಿದೆ ಸಂಭಾವ್ಯ ಅಭ್ಯರ್ಥಿಗಳ ಲಿಸ್ಟ್ ಇಂದು ಕರೆಯಲಾಗಿರುವ ಕೋರ್ ಕಮಿಟಿ ಸಭೆಯಲ್ಲಿ ಸಂಭಾವ್ಯ ಅಭ್ಯರ್ಥಿಗಳ ಹೆಸರುಗಳು ಚರ್ಚೆಯಾಗಲಿದ್ದು, ಅಂತಿಮಗೊಂಡ ಸಂಭಾವ್ಯ ಪಟ್ಟಿ ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿಗೆ ರವಾನೆಯಾಗಲಿದೆ. ಇದರ ಜೊತೆಗೆ ಎರಡೂ ಕ್ಷೇತ್ರಗಳಿಗೆ ಚುನಾವಣಾ ಉಸ್ತುವಾರಿಗಳ ನೇಮಕವೂ ಇಂದಿನ ಸಭೆಯಲ್ಲಿ ಆಗಲಿದೆ. ಪಕ್ಷದ ಪದಾಧಿಕಾರಿಗಳ ಜೊತೆಗೆ ಸಚಿವರಿಗೂ ಉಸ್ತುವಾರಿ ಜವಾಬ್ದಾರಿ ಬೀಳಲಿದೆ.

ಸಂಸದ ಶಿವಕುಮಾರ್ ಉದಾಸಿ ಪತ್ನಿಗೆ ಸಿಗುತ್ತಾ ಟಿಕೆಟ್? ಹಾನಗಲ್ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್‌ಗಾಗಿ ಪೈಪೋಟಿ ಶುರುವಾಗಿದ್ದು, ಸಂಸದ ಶಿವಕುಮಾರ್ ಉದಾಸಿ ತಮ್ಮ ಪತ್ನಿ ರೇವತಿಗೆ ಟಿಕೆಟ್ ಕೊಡಿಸಲು ಸರ್ಕಸ್ ಮಾಡ್ತಿದ್ದಾರೆ. ಇದರ ಜೊತೆಗೆ ಮಾಜಿ ಎಂಎಲ್‌ಸಿ ಶಿವರಾಜ್ ಸಜ್ಜನ್, ಸಿ.ಆರ್. ಬಳ್ಳಾರಿ, ಕಲ್ಯಾಣ ಶೆಟ್ಟರ್ ಸೇರಿದಂತೆ ನಾಲ್ಕೈದು ಜನ ಆಕಾಂಕ್ಷಿಗಳಿದ್ದಾರೆ. ಇನ್ನು ಸಿಂಧಗಿ ಕ್ಷೇತ್ರದಲ್ಲಿ ಮಾಜಿ ಶಾಸಕ ರಮೇಶ್ ಭೂಸನೂರು ಟಿಕೆಟ್ ಪಡೆಯುವುದು ಬಹುತೇಕ ನಿಶ್ಚಿತವಾಗಿದೆ.

ಗ್ರೌಂಡ್ ರಿಪೋರ್ಟ್ ಆಧರಿಸಿ ಹಾನಗಲ್ ಅಭ್ಯರ್ಥಿ ಹೆಸರು ಫೈನಲ್ ಸಿಂಧಗಿ ಕ್ಷೇತ್ರಕ್ಕಿಂತಲೂ ಹಾನಗಲ್ ಕ್ಷೇತ್ರವನ್ನು ಬಿಜೆಪಿ ಹೆಚ್ಚು ಗಂಭೀರವಾಗಿ ಪರಿಗಣಿಸಿದೆ. ಆರಂಭದಲ್ಲಿ ಉದಾಸಿ ಕುಟುಂಬಕ್ಕೆ ಟಿಕೆಟ್ ಎಂಬ ಮಾತು ಕೇಳಿ ಬರ್ತಿತ್ತು. ಆದ್ರೆ ಶ್ರೀನಿವಾಸ ಮಾನೆ ಕಾಂಗ್ರೆಸ್ ಅಭ್ಯರ್ಥಿಯಾಗುವುದು ಬಹುತೇಕ ಪಕ್ಕಾ ಆಗುತ್ತಿದ್ದಂತೆಯೇ ಬಿಜೆಪಿ ಕಾರ್ಯತಂತ್ರ ಬದಲಿಸಿದೆ. ಜಾತಿ ಲೆಕ್ಕಾಚಾರ ಹಾಕಿರುವ ಬಿಜೆಪಿ ಗ್ರೌಂಡ್ ರಿಪೋರ್ಟ್ ಕೊಡುವಂತೆ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ತೆಂಗಿನಕಾಯಿಗೆ ಸೂಚಿಸಿತ್ತು.‌ ಇಂದು ಕೋರ್ ಕಮಿಟಿ ಸಭೆಗೂ ಮುನ್ನ ಮಹೇಶ್ ತೆಂಗಿನಕಾಯಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಗೆ ವರದಿ ನೀಡಲಿದ್ದಾರೆ. ಈ ವರದಿ ಆಧರಿಸಿ ಕೋರ್ ಕಮಿಟಿಯಲ್ಲಿ ಹಾನಗಲ್ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಅಂತಿಮವಾಗಲಿದೆ.

ಇದನ್ನೂ ಓದಿ: ಅಭಿಷೇಕ್​ ಅಂಬರೀಷ್​​ ಮತ್ತು ರಚಿತಾ ರಾಮ್ ಜನ್ಮದಿನ; ಕಾಮನ್​ ಡಿಪಿ ರಿಲೀಸ್​ ಮಾಡಿದ ಸುಮಲತಾ

Follow us on

Related Stories

Most Read Stories

Click on your DTH Provider to Add TV9 Kannada