ಆಜಾನ್ಗೆ ಪ್ರತಿಯಾಗಿ ಹನುಮಾನ್ ಚಾಲೀಸಾ ಪಠಣೆ ವಿಚಾರ: ಪೊಲೀಸ್ ಸಭೆಯಲ್ಲಿ ಅಧಿಕಾರಿಗಳಿಗೆ ಕೆಲ ನಿರ್ದಿಷ್ಟ ಸೂಚನೆ ನೀಡಿದ ಸಿಎಂ ಬೊಮ್ಮಾಯಿ
ಅಜಾನ್ v/s ಹನುಮಾನ್ ಚಾಲೀಸ್ ವಿಚಾರವನ್ನ ಗಂಭೀರವಾಗಿ ತೆಗೆದುಕೊಂಡಿರುವ ಸಿಎಂ ಬೊಮ್ಮಾಯಿ ಪೊಲೀಸ್ ಅಧಿಕಾರಿಗಳ ಜೊತೆ ಸುಮಾರು 45 ನಿಮಿಷ ಸಭೆ ನಡೆಸಿದ್ರು. ಸಭೆಯಲ್ಲಿ ಶಾಂತಿ ಕದಡುವ ವಾತಾವರಣ ನಿರ್ಮಾಣವಾಗಬಾರದು. ಸುಪ್ರೀಂಕೋರ್ಟ್ ಆದೇಶ ಪಾಲಿಸಬೇಕು ಎಂದು ಸೂಚನೆ ನೀಡಿದ್ದಾರೆ.
ಬೆಂಗಳೂರು: ಆಜಾನ್ಗೆ(Azaan) ಪ್ರತಿಯಾಗಿ ಹನುಮಾನ್ ಚಾಲೀಸಾ(Hanuman Chalisa) ಪಠಣೆ ವಿಚಾರಕ್ಕೆ ಸಂಬಂಧಿಸಿ ಬೆಂಗಳೂರಿನ ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಲಾಗಿದೆ. ಗೃಹಸಚಿವ ಆರಗ ಜ್ಞಾನೇಂದ್ರ, ಡಿಜಿ&ಐಜಿಪಿ ಪ್ರವೀಣ್ ಸೂದ್, ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಜೊತೆ ಸಿಎಂ ಬಸವರಾಜ ಬೊಮ್ಮಾಯಿ ತುರ್ತು ಸಭೆ ನಡೆಸಿದ್ದಾರೆ. ಸಭೆಯಲ್ಲಿ ಅಧಿಕಾರಿಗಳಿಗೆ ಕೆಲ ನಿರ್ದಿಷ್ಟ ಸೂಚನೆ ನೀಡಿದ್ದಾರೆ.
ಅಜಾನ್ v/s ಹನುಮಾನ್ ಚಾಲೀಸ್ ವಿಚಾರವನ್ನ ಗಂಭೀರವಾಗಿ ತೆಗೆದುಕೊಂಡಿರುವ ಸಿಎಂ ಬೊಮ್ಮಾಯಿ ಪೊಲೀಸ್ ಅಧಿಕಾರಿಗಳ ಜೊತೆ ಸುಮಾರು 45 ನಿಮಿಷ ಸಭೆ ನಡೆಸಿದ್ರು. ಸಭೆಯಲ್ಲಿ ಶಾಂತಿ ಕದಡುವ ವಾತಾವರಣ ನಿರ್ಮಾಣವಾಗಬಾರದು. ಸುಪ್ರೀಂಕೋರ್ಟ್ ಆದೇಶ ಪಾಲಿಸಬೇಕು ಎಂದು ಸೂಚನೆ ನೀಡಿದ್ದಾರೆ. ಎಲ್ಲ ಧರ್ಮಗಳಿಗೂ ಅದು ಅನ್ವಯವಾಗುತ್ತೆ ಎಂದಿದ್ದಾರೆ. ಪರಿಸ್ಥಿತಿ ಸೂಕ್ಷ್ಮವಾಗಿ ನಿಭಾಯಿಸಿ ಎಂದು ಸಭೆಯಲ್ಲಿ ಅಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಸಲಹೆ ನೀಡಿದ್ದಾರೆ.
ಆಜಾನ್ಗೆ ಪ್ರತಿಯಾಗಿ ಹನುಮಾನ್ ಚಾಲೀಸಾ ಪಠಣೆ ವಿಚಾರವಾಗಿ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಹೈಕೋರ್ಟ್, ಸುಪ್ರೀಂಕೋರ್ಟ್ ಆದೇಶವನ್ನ ಪಾಲಿಸಬೇಕು. ಇಲ್ಲೀಗಲ್ ಆಗಿರುವ ಡಿಸಿಬಲ್ಗಳು ಅರ್ಜಿ ಹಾಕಿ ಅನುಮತಿ ಪಡೆಯಬೇಕು. 15 ದಿನ ಅಥವಾ 1 ತಿಂಗಳಲ್ಲಿ ಅರ್ಜಿ ಆಹ್ವಾನಿಸಿ. ಯಾವ ಡಿಸಿಬಲ್ ಯಾವ ಟೈಮ್ನಲ್ಲಿ ಬಳಸಬೇಕು ಅನ್ನೋದನ್ನ ಸುಪ್ರೀಂಕೋರ್ಟ್ ಆದೇಶದಂತೆ ಪಾಲಿಸಬೇಕು. ಬೆಳಗ್ಗೆ 6 ರಿಂದ 10 ಗಂಟೆಯವರೆಗೆ ಒಂದು ಡಿಸಿಬಲ್, ರಾತ್ರಿ 10 ಗಂಟೆಯಿಂದ 6 ಗಂಟೆವರೆಗೆ ಒಂದು ಪ್ರಮಾಣದಂತೆ ಅನುಸರಿಸಬೇಕು. ಇದು ಕೇವಲ ಹಿಂದೂ ಧಾರ್ಮಿಕ ಅಥವಾ ಮುಸ್ಲಿಂ ಧಾರ್ಮಿಕ ಧ್ವನಿವರ್ಧಕಗಳಿಗೆ ಮಾತ್ರ ಅನ್ವಯವಾಗೋದಿಲ್ಲ. ಸಾರ್ವಜನಿಕ ಕಾರ್ಯಕ್ರಮಗಳಿಗೂ ಇದು ಅನ್ವಯಿಸುತ್ತೆ. ಧ್ವನಿವರ್ಧಕ ಮಿತಿ ಪ್ರಮಾಣದಲ್ಲೇ ಬಳಸಬೇಕು. ಒಂದು ಸೆಕ್ಯೂಲರ್ ಶೀಘ್ರವೇ ಹೊರಡಿಸುವಂತೆ ಸಿಎಂ ಸೂಚನೆ ನೀಡಿದ್ದಾರೆ. ಹೀಗಾಗಿ ಇವತ್ತು ಸಂಜೆ ಅಥವಾ ನಾಳೆ ಸುತ್ತೋಲೆ ಹೊರಡಿಸುವ ಸಾಧ್ಯತೆ ಇದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಅನಧಿಕೃತ ಮೈಕ್ ತೆರೆವುಗೊಳಿಸಲು 15 ದಿನಗಳ ಗಡುವು ಇನ್ನು ಆಜಾನ್ VS ಸುಪ್ರಭಾತ ವಿಚಾರಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆಗೆ ಸಭೆ ನಡೆಸಿ ಸೂಚನೆ ನೀಡಿದ್ದಾರೆ. ಅನಧಿಕೃತವಾಗಿ ಆಳವಡಿಸಿರುವ ಮೈಕ್ ಗಳನ್ನು ತೆರೆವುಗೊಳಿಸಲು 15 ದಿನಗಳ ಕಾಲ ಗಡುವು ನೀಡಲಾಗಿದೆ. ಸುಪ್ರೀಂ ಕೋರ್ಟ್ ಆದೇಶದಂತೆ ನೋಟೀಸ್ ನೀಡಲಾಗಿದೆ. ಅದರಂತೆ ನಡೆದುಕೊಳ್ಳಬೇಕು ಇಲ್ಲದಿದ್ದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಶ್ರೀರಾಮ ಸೇನೆಯವರು ಏನು ಮಾಡ್ತಾರೆ ಅನ್ನೊದು ಮುಖ್ಯ ಅಲ್ಲ. ಸರ್ಕಾರದ ಕಡೆಯಿಂದ ಎಲ್ಲಾ ಕ್ರಮ ತೆಗೆದುಕೊಂಡಿದ್ದೇವೆ ಎಂದರು.
Published On - 3:55 pm, Mon, 9 May 22