ಹಿರಿಯ ಅಧಿಕಾರಿಗಳ ಕಿರುಕುಳವೇ ಸಾವಿಗೆ ಕಾರಣ: ಸಚಿವ ಎಂಟಿಬಿ ನಾಗರಾಜ್ ವಿರುದ್ಧ ಮೃತ ಇನ್ಸ್​ಪೆಕ್ಟರ್​ ನಂದೀಶ್ ಕುಟುಂಬಸ್ಥರ ಆಕ್ರೋಶ!

ವರ್ಗಾವಣೆ ದಂಧೆ, ಹಿರಿಯ ಅಧಿಕಾರಿಗಳ ಕಿರುಕುಳದಿಂದ ಸಾವಾಗಿದೆ ಎಂದು ಮೃತ ಇನ್ಸ್‌ಪೆಕ್ಟರ್‌ ನಂದೀಶ್ ಕುಟುಂಬಸ್ಥರು ಸಚಿವ ಎಂಟಿಬಿ ನಾಗರಾಜ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಹಿರಿಯ ಅಧಿಕಾರಿಗಳ ಕಿರುಕುಳವೇ ಸಾವಿಗೆ ಕಾರಣ: ಸಚಿವ ಎಂಟಿಬಿ ನಾಗರಾಜ್ ವಿರುದ್ಧ ಮೃತ ಇನ್ಸ್​ಪೆಕ್ಟರ್​ ನಂದೀಶ್ ಕುಟುಂಬಸ್ಥರ ಆಕ್ರೋಶ!
ಸಚಿವ ಎಂ ಟಿ ಎಬಿ ನಾಗರಾಜ್
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Oct 27, 2022 | 9:02 PM

ಬೆಂಗಳೂರು: ವರ್ಗಾವಣೆ ದಂಧೆ, ಹಿರಿಯ ಅಧಿಕಾರಿಗಳ ಕಿರುಕುಳದಿಂದ ಸಾವಾಗಿದೆ ಎಂದು ಮೃತ ಇನ್ಸ್‌ಪೆಕ್ಟರ್‌ ನಂದೀಶ್ ಕುಟುಂಬಸ್ಥರು ಸಚಿವ ಎಂಟಿಬಿ ನಾಗರಾಜ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕೆ.ಆರ್​.ಪುರ ಆಸ್ಪತ್ರೆಯಲ್ಲಿ ಅಂತಿಮ ದರ್ಶನ ಪಡೆಯಲು ಹೋದಾಗ ಆಕ್ರೋಶ ವ್ಯಕ್ತಪಡಿಸಲಾಗಿದೆ ಎನ್ನಲಾಗುತ್ತಿದೆ. ಇನ್ನು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ವಿರುದ್ದ ಸಚಿವ ಎಂಟಿಎಬಿ ನಾಗರಾಜ್ ಕಿಡಿ ಕಾರಿದ್ದು, ಏನು ಅಂತಹ ಮಾಡಬಾರದ ತಪ್ಪು ಮಾಡಿರಲಿಲ್ಲಾ. ಒಂದು ನೋಟಿಸ್ ಕೊಟ್ಟು ವಿಚಾರ ಮಾಡಬಹುದು. ಅದಕ್ಕೆ ಒಂದು ದೊಡ್ಡ ತೀರ್ಮಾನ ಮಾಡುವ ಅವಶ್ಯಕತೆ ಇರ್ಲಿಲ್ಲಾ. ಕಮಿಷನರ್ ಸಣ್ಣ ವಿಚಾರವನ್ನು ದೊಡ್ಡದು ಮಾಡಿದ್ದಾರೆ. ಇದನ್ನು ನಾನು ಸುಮ್ಮನೆ ಬಿಡಲ್ಲಾ. ಮಕ್ಕಳಿಲ್ಲದ ಮನೆಗೆ ಈಗ ಯಾರಾಗ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಘಟನೆ ಹಿನ್ನೆಲೆ:

ಸಸ್ಪೆಂಡ್​ ಆಗಿದ್ದ ಇನ್ಸ್​ಪೆಕ್ಟರ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಬೆಂಗಳೂರಿನ K.R​.ಪುರ ಠಾಣೆ ಇನ್ಸ್​ಪೆಕ್ಟರ್​ ನಂದೀಶ್​ ಮೃತ ಇನ್ಸ್​ಪೆಕ್ಟರ್. ಹೃದಯಾಘಾತದಿಂದ ಕೆ.ಆರ್​.ಪುರ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ನಂದೀಶ್‌ ಮೈಸೂರಿನ ಹುಣಸೂರು ಮೂಲದವರು. ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ 2019 ರಿಂದ 2020ರವರೆಗೆ ಕಾರ್ಯ ನಿರ್ವಹಿಸಿದ್ದರು. ಕಳೆದ ವಾರವಷ್ಟೇ ಇನ್ಸ್​ಪೆಕ್ಟರ್​ ನಂದೀಶ್ ಸಸ್ಪೆಂಡ್​ ಆಗಿದ್ದರು. ಏರಿಯಾದಲ್ಲಿ ಅವಧಿ ಮೀರಿ ಪಬ್​ ನಡೆಸಲು ಅವಕಾಶ ನೀಡಿದ್ದಕ್ಕೆ ಅಮಾನತು ಮಾಡಿ ಕಮಿಷನರ್ ಪ್ರತಾಪ್ ರೆಡ್ಡಿ ಆದೇಶಿಸಿದ್ದರು.

Published On - 9:00 pm, Thu, 27 October 22

ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ