AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ ಡಿಸಿ ಕಚೇರಿ ಲಂಚದ ವಾಟ್ಸಪ್ ಚಾಟ್ ಪ್ರಕರಣ: ಕೇಂದ್ರ ಸಚಿವ ಹೆಚ್​​​.ಡಿ. ಕುಮಾರಸ್ವಾಮಿಗೆ ಸೈಬರ್ ಕಮಾಂಡ್ ಸೆಂಟರ್‌ನಿಂದ ನೋಟಿಸ್ ಜಾರಿ

ಹಾಸನ ಡಿಸಿ ಲಂಚದ ವಾಟ್ಸಾಪ್ ಚಾಟ್ ಪ್ರಕರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಸೈಬರ್ ಪೊಲೀಸರು ನೋಟಿಸ್ ಜಾರಿಗೊಳಿಸಿದ್ದಾರೆ. ಹಾಸನ ಜಿಲ್ಲಾಡಳಿತದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿ ಎಚ್‌ಡಿಕೆ ಡಿಸಿ ಪಿಎ ಚಾಟ್ ಬಹಿರಂಗಪಡಿಸಿದ್ದರು. ಇದು ನಕಲಿ ಚಾಟ್ ಎಂದು ಪಿಎ ದೂರು ನೀಡಿದ ನಂತರ, ಈಗ ಎಚ್‌ಡಿಕೆಗೆ ಚಾಟ್ ಮೂಲದ ಬಗ್ಗೆ ಮಾಹಿತಿ ಕೇಳಿ ನೋಟಿಸ್ ನೀಡಲಾಗಿದೆ. ಇದು ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿದೆ.

ಹಾಸನ ಡಿಸಿ ಕಚೇರಿ ಲಂಚದ ವಾಟ್ಸಪ್ ಚಾಟ್ ಪ್ರಕರಣ: ಕೇಂದ್ರ ಸಚಿವ ಹೆಚ್​​​.ಡಿ. ಕುಮಾರಸ್ವಾಮಿಗೆ ಸೈಬರ್ ಕಮಾಂಡ್ ಸೆಂಟರ್‌ನಿಂದ ನೋಟಿಸ್ ಜಾರಿ
ಹೆಚ್​​ ಡಿ ಕುಮಾರ್​​ ಸ್ವಾಮಿ
ಕಿರಣ ಹೆಚ್​. ವಿ.
| Edited By: |

Updated on:Nov 24, 2026 | 3:45 PM

Share

ಬೆಂಗಳೂರು, ನ. 24: ರಾಜ್ಯ ರಾಜಕಾರಣ ಹಾಗೂ ಆಡಳಿತ ವಲಯದಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಹಾಸನ ಜಿಲ್ಲಾಧಿಕಾರಿ ಕಚೇರಿಯ ‘ಲಂಚದ ವಾಟ್ಸ್‌ಆ್ಯಪ್ ಚಾಟ್’ ಪ್ರಕರಣ ಬಗ್ಗೆ ಹೊಸ ತಿರುವು ಸಿಕ್ಕಿದೆ. ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಅವರ ಆಪ್ತ ಸಹಾಯಕ ಶಶಿಕಿರಣ್ ನೀಡಿದ್ದ ದೂರಿನ ಆಧಾರದ ಮೇಲೆ, ಸೈಬರ್ ಕಮಾಂಡ್ ಸೆಂಟರ್ ಪೊಲೀಸರು ಕೇಂದ್ರ ಸಚಿವ ಹೆಚ್​​​.ಡಿ. ಕುಮಾರಸ್ವಾಮಿ ಅವರಿಗೆ ನೋಟಿಸ್ ಜಾರಿಗೊಳಿಸಿದ್ದಾರೆ.

ಕಳೆದ ನವೆಂಬರ್ 8ರಂದು ಹಾಸನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು, ಹಾಸನ ಜಿಲ್ಲಾಡಳಿತದಲ್ಲಿ ಭಾರಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಅವರಿಂದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ಅವರು 75 ಲಕ್ಷ ರೂ. ಲಂಚ ಪಡೆದಿದ್ದಾರೆ ಎಂದು ಆರೋಪಿಸಿದ್ದ ಹೆಚ್​​​ಡಿಕೆ, ಡಿಸಿ ಆಪ್ತ ಸಹಾಯಕ ಶಶಿಕಿರಣ್ ಹಾಗೂ ಮಧ್ಯವರ್ತಿಯೊಬ್ಬರ ನಡುವೆ ನಡೆದಿದೆ ಎನ್ನಲಾದ ವಾಟ್ಸ್‌ಆ್ಯಪ್ ಚಾಟ್ ಸ್ಕ್ರೀನ್‌ಶಾಟ್‌ಗಳನ್ನು ಮಾಧ್ಯಮಗಳ ಮುಂದೆ ಓದಿ ಬಹಿರಂಗಪಡಿಸಿದ್ದರು. ತಮಗೆ ಬಂದಿರುವ ಈ ಚಾಟ್ ಬಗ್ಗೆ ಸರ್ಕಾರ ತನಿಖೆ ನಡೆಸಿ ಕ್ರಮ ಕೈಗೊಳ್ಳಲಿ ಎಂದು ಅವರು ಆಗ್ರಹಿಸಿದ್ದರು.

ಈ ಆರೋಪಗಳನ್ನು ಸಾರಾಸಗಟಾಗಿ ತಳ್ಳಿಹಾಕಿದ್ದ ಹಾಸನ ಡಿಸಿ ಪಿಎ ಶಶಿಕಿರಣ್, ತಮ್ಮ ಹೆಸರು ಮತ್ತು ಫೋನ್ ನಂಬರ್ ಬಳಸಿ ಎಐ ತಂತ್ರಜ್ಞಾನದ ಮೂಲಕ ನಕಲಿ ವಾಟ್ಸ್‌ಆ್ಯಪ್ ಚಾಟ್ ಸೃಷ್ಟಿಸಿ ವೈರಲ್ ಮಾಡಲಾಗಿದೆ ಎಂದು ಆರೋಪಿಸಿ ಹಾಸನ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರಿನನ್ವಯ ಭಾರತೀಯ ನ್ಯಾಯ ಸಂಹಿತೆ ಕಲಂ 335 ಮತ್ತು 336(4) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿಕೊಂಡಿದ್ದ ಪೊಲೀಸರು, ತನಿಖೆಯ ಭಾಗವಾಗಿ ನಕಲಿ ಚಾಟ್ ಮೂಲದ ಕುರಿತು ಮಾಹಿತಿ ಪಡೆಯಲು ಇದೀಗ ಸೈಬರ್ ಕಮಾಂಡ್ ಸೆಂಟರ್ ಮೂಲಕ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ನೋಟಿಸ್ ನೀಡಿದ್ದಾರೆ.

ಇದನ್ನೂ ಓದಿ: ಮಂಡ್ಯ – ರಾಮನಗರ ಕೆಡಿಪಿ ಸಭೆ: “ಅದೇನು ಲವ್ ಲೆಟರಾ 7 ನೋಟೀಸ್ ಕೊಟ್ಟಿದ್ದೀರಾ?”; ಅಧಿಕಾರಿಗಳಿಗೆ ಕ್ಲಾಸ್​​ ತೆಗೆದುಕೊಂಡ ಸಚಿವ

ಆರೋಪಕ್ಕೆ ಹಾಸನ ಡಿಸಿ ಕೆ.ಎಸ್. ಲತಾಕುಮಾರಿ ನೀಡಿದ್ದ ಪ್ರತಿಕ್ರಿಯೆ ಏನು?

ಹೆಚ್​​​.ಡಿ. ಕುಮಾರಸ್ವಾಮಿ ಅವರ ಭ್ರಷ್ಟಾಚಾರ ಆರೋಪದ ಬೆನ್ನಲ್ಲೇ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದ ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಅವರು ಎಲ್ಲಾ ಆರೋಪಗಳನ್ನು ನಿರಾಕರಿಸಿ ತಿರುಗೇಟು ನೀಡಿದ್ದರು. “ನಾನು ಹಾಸನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಮೊದಲ ದಿನದಿಂದಲೂ ನನ್ನನ್ನು ಗುರಿಯಾಗಿಸಲಾಗುತ್ತಿದೆ. ಇಂತಹ ಸುಳ್ಳು ಆರೋಪಗಳು ಅಥವಾ ಬೆದರಿಕೆಗಳಿಗೆ ನಾನು ಹೆದರುವುದಿಲ್ಲ. ನನ್ನ ವಿರುದ್ಧ ಮಾಡಲಾಗಿರುವ ಆರೋಪಗಳು ಸಂಪೂರ್ಣ ಸುಳ್ಳು ಮತ್ತು ಆಧಾರರಹಿತ. ಮಹಿಳಾ ಅಧಿಕಾರಿಯ ವರ್ಚಸ್ಸಿಗೆ ಕಳಂಕ ತರುವ ವ್ಯವಸ್ಥಿತ ಪ್ರಯತ್ನ ಇದಾಗಿದೆ. ನಾನು ಯಾವುದೇ ಕಾನೂನುಬಾಹಿರ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ, ಮುಂದೆಯೂ ಭಾಗಿಯಾಗುವುದಿಲ್ಲ. ನಿಷ್ಪಕ್ಷಪಾತ ತನಿಖೆಯ ಮೂಲಕ ಸತ್ಯಾಂಶ ಹೊರಬಂದು, ನಕಲಿ ಮಾಹಿತಿ ಹರಡಿದ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮವಾಗಬೇಕು” ಎಂದು ಲತಾಕುಮಾರಿ ಅವರು ಸ್ಪಷ್ಟಪಡಿಸಿದ್ದರು. ಇತ್ತ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ಕೂಡ ಎಐ ಮೂಲಕ ನಕಲಿ ಚಾಟ್ ಸೃಷ್ಟಿಸಿ ತೇಜೋವಧೆ ಮಾಡಲಾಗುತ್ತಿದೆ ಎಂದು ಕಿಡಿಕಾರಿದ್ದರು. ಇದೀಗ ಸೈಬರ್ ಕಮಾಂಡ್ ಸೆಂಟರ್ ಎಚ್‌ಡಿಕೆಗೆ ನೋಟಿಸ್ ನೀಡಿರುವುದು ರಾಜ್ಯ ರಾಜಕೀಯದಲ್ಲಿ ಮತ್ತಷ್ಟು ಕುತೂಹಲ ಕೆರಳಿಸಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:44 pm, Tue, 24 November 26

Follow Us
ಕಿರಣ ಹೆಚ್​. ವಿ.
ಕಿರಣ ಹೆಚ್​. ವಿ.

ಪತ್ರಿಕೋದ್ಯಮದಲ್ಲಿ ದಶಕಗಳ ಅನುಭವ. ಪ್ರಸ್ತುತ ‘ಟಿವಿ9’ನಲ್ಲಿ ಮುಖ್ಯ ಅಪರಾಧ ವರದಿಗಾರ.

Read More
ಅಂಬರೀಷ್ 8ನೇ ವರ್ಷದ ಪುಣ್ಯಸ್ಮರಣೆ; ಅಂಬಿ ಸಮಾಧಿಗೆ ವಿಶೇಷ ಪೂಜೆ
ಅಂಬರೀಷ್ 8ನೇ ವರ್ಷದ ಪುಣ್ಯಸ್ಮರಣೆ; ಅಂಬಿ ಸಮಾಧಿಗೆ ವಿಶೇಷ ಪೂಜೆ
ಬಿಜೆಪಿ ಗೆದ್ದರೆ 5 ಗ್ಯಾರಂಟಿಗಳು ವಾಪಸ್‌: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ
ಬಿಜೆಪಿ ಗೆದ್ದರೆ 5 ಗ್ಯಾರಂಟಿಗಳು ವಾಪಸ್‌: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ
ಸತ್ತ ಮರಿಯನ್ನೂ ಬಿಟ್ಟುಕೊಡದ ತಾಯಿ ಕೋತಿ: ಮುಂಡರಗಿಯಲ್ಲಿ ಮನಕಲಕುವ ದೃಶ್ಯ
ಸತ್ತ ಮರಿಯನ್ನೂ ಬಿಟ್ಟುಕೊಡದ ತಾಯಿ ಕೋತಿ: ಮುಂಡರಗಿಯಲ್ಲಿ ಮನಕಲಕುವ ದೃಶ್ಯ
ಸಹೋದರನ ಮದುವೆಗೆ ಹಾಜರಾಗಲು ಮಧ್ಯಂತರ ಜಾಮೀನು ಕೋರಿ ಪವಿತ್ರಾ ಗೌಡ ಅರ್ಜಿ
ಸಹೋದರನ ಮದುವೆಗೆ ಹಾಜರಾಗಲು ಮಧ್ಯಂತರ ಜಾಮೀನು ಕೋರಿ ಪವಿತ್ರಾ ಗೌಡ ಅರ್ಜಿ
ಸರ್ಕಾರಿ ಕಾರು, ಗನ್‌ಮ್ಯಾನ್ ದುರ್ಬಳಕೆ: ಗದಗ ಡಿಸಿ ವಿರುದ್ಧ ಮತ್ತೊಂದು ಆರೋಪ
ಸರ್ಕಾರಿ ಕಾರು, ಗನ್‌ಮ್ಯಾನ್ ದುರ್ಬಳಕೆ: ಗದಗ ಡಿಸಿ ವಿರುದ್ಧ ಮತ್ತೊಂದು ಆರೋಪ
ಅಭಿವೃದ್ಧಿ ಬಗ್ಗೆ ಯುವಕನ ಪ್ರಶ್ನೆಗೆ ಶಾಸಕ ಚಂದ್ರಪ್ಪ ಗರಂ: ವಿಡಿಯೋ ವೈರಲ್
ಅಭಿವೃದ್ಧಿ ಬಗ್ಗೆ ಯುವಕನ ಪ್ರಶ್ನೆಗೆ ಶಾಸಕ ಚಂದ್ರಪ್ಪ ಗರಂ: ವಿಡಿಯೋ ವೈರಲ್
ಕಾಶಿಯಿಂದ ಗುಪ್ತಗಾಮಿನಿಯಾಗಿ ಹರಿಯುತ್ತಾಳೆ ಗಂಗೆ! ಕೋಲಾರದ ಅಂತರಗಂಗೆಯ ಮಹಿಮೆ
ಕಾಶಿಯಿಂದ ಗುಪ್ತಗಾಮಿನಿಯಾಗಿ ಹರಿಯುತ್ತಾಳೆ ಗಂಗೆ! ಕೋಲಾರದ ಅಂತರಗಂಗೆಯ ಮಹಿಮೆ
ಬಿಗ್ ಬಾಸ್ ಮನೆಯಲ್ಲಿ ಗುಳ್ಳೆನರಿ ಆಟ ಶುರು; ಸ್ಪರ್ಧಿಗಳಿಗೆ ಶುರುವಾಗಿದೆ ಭಯ
ಬಿಗ್ ಬಾಸ್ ಮನೆಯಲ್ಲಿ ಗುಳ್ಳೆನರಿ ಆಟ ಶುರು; ಸ್ಪರ್ಧಿಗಳಿಗೆ ಶುರುವಾಗಿದೆ ಭಯ
ಸತ್ರೂ ಸರಿ, ಸರ್ಕಾರ ಸ್ಪಂದಿಸುವ ವರೆಗೂ ಪಟ್ಟುಬಿಡಲ್ಲ: ಆಶಾಗಳ ಖಡಕ್ ನುಡಿ
ಸತ್ರೂ ಸರಿ, ಸರ್ಕಾರ ಸ್ಪಂದಿಸುವ ವರೆಗೂ ಪಟ್ಟುಬಿಡಲ್ಲ: ಆಶಾಗಳ ಖಡಕ್ ನುಡಿ
ಇಂದು ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ತೊಡಗಿದರೆ ಉತ್ತಮ
ಇಂದು ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ತೊಡಗಿದರೆ ಉತ್ತಮ