ಉಕ್ರೇನ್​​ನಲ್ಲಿ ಮೆಡಿಕಲ್ ವಿದ್ಯಾರ್ಥಿ ನವೀನ್ ಸಾವಿನ ಹಿನ್ನೆಲೆ ನೀಟ್ ವಿರುದ್ಧ ಸಮರ ಸಾರಿದ ಜೆಡಿಎಸ್: ಹೆಚ್​ಡಿ ಕುಮಾರಸ್ವಾಮಿ ಟ್ವೀಟ್

HD Kumaraswamy NEET: 2023ರಲ್ಲಿ ಜೆಡಿಎಸ್ ಸರಕಾರ (JDS) ಬಂದರೆ ನೀಟ್ ವಿರುದ್ಧ ಅಸೆಂಬ್ಲಿಯಲ್ಲಿ ನಿರ್ಣಯ ಕೈಗೊಳ್ಳುತ್ತೇವೆ. ಅದಕ್ಕೆ ಚರಮಗೀತೆ ಹಾಡುತ್ತೇವೆ ಎಂದು ಘೋಷಿಸಿದೆ. ಈ ಬಗ್ಗೆ ಪಕ್ಷದ ನಾಯಕ,ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡಿದ್ದಾರೆ.

ಉಕ್ರೇನ್​​ನಲ್ಲಿ ಮೆಡಿಕಲ್ ವಿದ್ಯಾರ್ಥಿ ನವೀನ್ ಸಾವಿನ ಹಿನ್ನೆಲೆ ನೀಟ್ ವಿರುದ್ಧ ಸಮರ ಸಾರಿದ ಜೆಡಿಎಸ್: ಹೆಚ್​ಡಿ ಕುಮಾರಸ್ವಾಮಿ ಟ್ವೀಟ್
ಮೆಡಿಕಲ್ ವಿದ್ಯಾರ್ಥಿ ನವೀನ್ ಸಾವಿನ ಹಿನ್ನೆಲೆ ನೀಟ್ ವಿರುದ್ಧ ಸಮರ ಸಾರಿದ ಜೆಡಿಎಸ್
Follow us
TV9 Web
| Updated By: ಸಾಧು ಶ್ರೀನಾಥ್​

Updated on:Mar 03, 2022 | 2:35 PM

ಬೆಂಗಳೂರು: ಹಾವೇರಿಯ ಪ್ರತಿಭಾವಂತ ವಿದ್ಯಾರ್ಥಿ ನವೀನ್​ ರಷ್ಯಾ-ಉಕ್ರೇನ್​ ಯುದ್ಧ (Russia Ukraine War) ಸಂದರ್ಭದಲ್ಲಿ ದುರ್ಮರಣ ಹೊಂದಿದ ಹಿನ್ನೆಲೆಯಲ್ಲಿ ಭಾರತದಲ್ಲಿ ಅದರಲ್ಲೂ ಕರ್ನಾಟಕದಲ್ಲಿ ರಾಷ್ಟ್ರೀಯ ಮಟ್ಟದ ನೀಟ್​ ಪ್ರವೇಶ ಪರೀಕ್ಷೆ ಬಗ್ಗೆ ಅಸಮಾಧಾನ ಭುಗಿಲೆದ್ದಿದೆ. ನವೀನ್ ಶೇ. 97 ಅಂಕ ಗಳಿಸಿದ್ದರೂ (Merit Student) ನೀಟ್​ ಪರೀಕ್ಷೆಯಲ್ಲಿ (NEET) ಉತ್ತಮ ಅಂಕ ಗಳಿಸಲು ವಿಫಲರಾಗಿದ್ದರು. ಅದರಿಂದ ಅವರಿಗೆ ಭಾರತದಲ್ಲಿ ಮೆಡಿಕಲ್​ ಸೀಟ್​ ಸಿಗದೆ ವೈದ್ಯಕೀಯ ವಿದ್ಯಾಭ್ಯಾಸಕ್ಕೆಂದು ದೂರದ ಉಕ್ರೇನ್​​ಗೆ ತೆರಳಿದ್ದರು. ಅಲ್ಲಿ ಅಚಾನಕ್ಕಾಗಿ ಯುದ್ಧ ವಾತಾವರಣ ನಿರ್ಮಾಣವಾಗಿ ನವೀನ್ ದುರಂತ ಅಂತ್ಯ (Naveen janagoudar) ಕಾಣಬೇಕಾಯಿತು ಎಂದು ಕರ್ನಾಟಕದಲ್ಲಿ ಸಾರ್ವತ್ರಿಕವಾಗಿ ಆಕ್ರೋಶದ ಅಲೆ ಎದ್ದಿದೆ.

ಇದಕ್ಕೆ ತಕ್ಷಣ ಸ್ಪಂದಿಸಿರುವ ಪ್ರಾದೇಶಿಕ ಪಕ್ಷ ಜೆಡಿಎಸ್ ನೀಟ್ ಪರೀಕ್ಷೆ ವ್ಯವಸ್ಥೆಯ ವಿರುದ್ಧ ಸಮರ ಸಾರಿದ್ದು, 2023ರಲ್ಲಿ ಜೆಡಿಎಸ್ ಸರಕಾರ (JDS) ಬಂದರೆ ನೀಟ್ ವಿರುದ್ಧ ಅಸೆಂಬ್ಲಿಯಲ್ಲಿ ನಿರ್ಣಯ ಕೈಗೊಳ್ಳುತ್ತೇವೆ. ನಾವು ನೀಟ್ ವಿರೋಧಿಸುತ್ತೇವೆ. ಮಕ್ಕಳ ಜೀವಕ್ಕೆ ಕುಣಿಕೆ ಬಿಗಿದು ಕಂಡವರ ಜೇಬು ಭರ್ತಿ ಮಾಡುವ ಈ ದಂಧೆ ಬೇಕಿಲ್ಲ. ಅದಕ್ಕೆ ಚರಮಗೀತೆ ಹಾಡುತ್ತೇವೆ ಎಂದು ಘೋಷಿಸಿದೆ. ಈ ಬಗ್ಗೆ ಪಕ್ಷದ ನಾಯಕ,ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಅವರು ಸರಣಿ ಟ್ವೀಟ್ ಮಾಡಿದ್ದಾರೆ.

#ನೀಟ್_ನಿಲ್ಲಲಿ #stopneet #SaveKAStudents ಎಂಬ ಹ್ಯಾಷ್​ ಟ್ಯಾಗ್​​ಗಳನ್ನು ಬಳಸಿ, ಜೆಡಿಎಸ್ ನೀಟ್​ ಪರೀಕ್ಷೆ ವಿರುದ್ಧ ಮಹತ್ವದ ಅಭಿಯಾನ ಕೈಗೊಂಡಿದೆ.​

ಹೆಚ್​ಡಿ ಕುಮಾರಸ್ವಾಮಿ ಸರಣಿ ಟ್ವೀಟ್ ಸಾರಾಂಶ ಹೀಗಿದೆ: ಪ್ರಶ್ನೆ ಮಾಡಿದರೆ ದ್ರೋಹವೇ? ಧನದಾಹವೇ? ಕರ್ನಾಟಕದ ಉನ್ನತ ಶಿಕ್ಷಣ ಸಚಿವರು ಕಟ್ಟಿರುವ ಈ ಹಣಿಪಟ್ಟಿ ಬಗ್ಗೆ ಏನೂ ಹೇಳಬೇಕೋ ಕಾಣೆ. ನೀಟ್ ವಿರೋಧಿಸುವವರು ಧನಧಾಹಿಗಳು, ದ್ರೋಹಿಗಳು ಎಂದು ಅವರು ಯಾರನ್ನು ಉದ್ದೇಶಿಸಿ ಹೇಳಿದ್ದು ಎನ್ನುವುದನ್ನು ಅವರೇ ತಿಳಿಸಬೇಕು.

ನಾನು ಮೆಡಿಕಲ್ ಕಾಲೇಜು ನಡೆಸುತ್ತಿಲ್ಲ. ಎಂಜಿನಿಯರಿಂಗ್ ಕಾಲೇಜನ್ನೂ ನಡೆಸುತ್ತಿಲ್ಲ. ಕೊನೆಪಕ್ಷ ಒಂದು ಸಣ್ಣ ಕೈಗಾರಿಕೆಯೂ ಇಲ್ಲ. ಬಿಡದಿಯ ತೋಟ ಬಿಟ್ಟರೆ ನನ್ನದೂ ಎನ್ನುವಂಥದ್ದು ಏನೂ ಇಲ್ಲ ಆದರೂ, ಉನ್ನತ ಶಿಕ್ಷಣ ಸಚಿವ ಮಾನ್ಯ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ದ್ರೋಹಿಗಳು, ಧನಧಾಹಿಗಳು ಎಂದು ನಾಲಿಗೆ ಜಾರಿ, ತಮ್ಮ ಉನ್ನತ ಗುಣವನ್ನು ಜಗಜ್ಜಾಹೀರು ಮಾಡಿಕೊಂಡಿದ್ದಾರೆ.

ಕೇಂದ್ರದ ಒಬ್ಬ ಸಚಿವರು, ನೀಟ್ ಪರೀಕ್ಷೆ ಪಾಸ್ ಮಾಡಲಾಗದ ವಿಧ್ಯಾರ್ಥಿಗಳು ವಿದೇಶಕ್ಕೆ ಹೋಗುತ್ತಾರೆ ಎಂದು ಆ ಮಕ್ಕಳ ಸ್ವಾಭಿಮಾನವನ್ನು ಅಪಮಾನಿಸಿದ್ದರೆ, ಉನ್ನತ ಶಿಕ್ಷಣ ಸಚಿವರು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ದ್ರೋಹದ ಹಣೆಪಟ್ಟಿ ಕಟ್ಟಿ ದೊಡ್ಡತನ ಮೆರೆದಿದ್ದಾರೆ.

ನೀಟ್ ಬಂದ ಮೇಲೆ ಬಡ, ಮಧ್ಯಮ ವರ್ಗದ ಮಕ್ಕಳಿಗೆ ಅನ್ಯಾಯ ಆಗಿಲ್ಲವೇ? ಲಕ್ಷ ಲಕ್ಷ ಕಿತ್ತು ಪೋಷಕರ ರಕ್ತ ಹೀರುವ ಟ್ಯೂಷನ್ ಅಂಗಡಿಗಳು ಸರಕಾರದ ಕಣ್ಣಿಗೆ ಕಾಣುತ್ತಿಲ್ಲವೇ? ನೀಟ್ ಸುಳಿಗೆ ಸಿಕ್ಕಿ ಜೀವ ಕಳೆದುಕೊಂಡ ಮಕ್ಕಳ ಅತ್ಮರೋಧನೆ ಕೇಳುತ್ತಿಲ್ಲವೇ ಇದೆಲ್ಲವೂ ಸರಕಾರಗಳ ಕಣ್ಣಿಗೆ ಕಾಣುತ್ತಿಲ್ಲ, ವಿದ್ಯಾರ್ಥಿಗಳ ಆರ್ತನಾದ ಕೇಳುತ್ತಿಲ್ಲ ಎಂದರೆ ಸಚಿವರು ಮತ್ತು ಸರಕಾರಕ್ಕೆ ಕಣ್ಣು, ಕಿವಿ ಇಲ್ಲ ಎಂದು ಭಾವಿಸಬೇಕಾಗುತ್ತದೆ.

ನೀಟ್ ಪರೀಕ್ಷೆ ವ್ಯವಸ್ಥೆಯ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಸರಣಿ ಟ್ವೀಟ್:

ನವೀನ್ ಸಾವು ವಿಶ್ವಗುರು ಆಗಬೇಕೆಂದು ಹಾತೊರೆಯುತ್ತಿರುವ ಭಾರತದ ಆತ್ಮಸಾಕ್ಷಿಗೆ ಪ್ರಶ್ನೆ: ಹೆಚ್​ಡಿ ಕುಮಾರಸ್ವಾಮಿ ವೈದ್ಯಶಿಕ್ಷಣದ ಕನಸು ಕಾಣುವ ಬಡ, ಮಧ್ಯಮ ವರ್ಗದ ಬದುಕನ್ನು ಛಿದ್ರಗೊಳಿಸುತ್ತಿರುವ ನೀಟ್ (ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ- NEET), ವಿದ್ಯಾರ್ಥಿಗಳು ಪೋಷಕರ ಪಾಲಿಗೆ ಮರಣಶಾಸನವಾಗಿದೆ. ಉನ್ನತ ಶಿಕ್ಷಣವನ್ನು ಉಳ್ಳವರಿಗೆ ಮೀಸಲಿಟ್ಟು ಉಳಿದವರಿಗೆ ವ್ಯವಸ್ಥಿತವಾಗಿ ನಿರಾಕರಿಸಲಾಗುತ್ತಿದೆ.

ಉಕ್ರೇನ್​ಗೆ ಮೆಡಿಕಲ್ ಓದಲು ಹೋಗಿ ರಷ್ಯಾ ದಾಳಿಗೆ ತುತ್ತಾದ ವಿದ್ಯಾರ್ಥಿ ನವೀನ್ ದುರಂತ ಸಾವು ನೀಟ್ ವ್ಯವಸ್ಥೆಯ ನಿರ್ಲಜ್ಜ ಮುಖವನ್ನು ಇಡೀ ದೇಶಕ್ಕೆ ದರ್ಶನ ಮಾಡಿಸಿದೆ. ʼಅರ್ಹತೆʼ ನೆಪದಲ್ಲಿ ಪ್ರತಿಭಾವಂತ ಆರ್ಥಿಕ ದುರ್ಬಲ ಗ್ರಾಮೀಣ ವಿದ್ಯಾರ್ಥಿಗಳಿಗೆ ಮಾಡಲಾಗುತ್ತಿರುವ ಅನ್ಯಾಯಕ್ಕೆ ಅಂತ್ಯ ಹಾಡಬೇಕಿದೆ ಎಂದು ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡಿದ್ದಾರೆ.

ಇದನ್ನು ಓದಿ: ನವೀನ್ ಶೇ 97 ಅಂಕ ಗಳಿಸಿದ್ದ, ಆದರೂ ಸರ್ಕಾರಿ ಮೆಡಿಕಲ್ ಸೀಟ್ ಸಿಗಲಿಲ್ಲ! ಅವನ ಸಾವಿಗೆ ಯಾರು ಹೊಣೆ? -ಸೋದರ ಮಾವ ಕಿಡಿ

Published On - 1:41 pm, Thu, 3 March 22

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್