ಬೆಂಗಳೂರಿನಲ್ಲಿ ಸರ್ಕಾರಿ ಭೂಮಿ ಒತ್ತುವರಿ ಮಾಡಲು ಖಾಸಗಿ ಕಂಪನಿಗಳಿಗೆ ಸಹಾಯ ಮಾಡಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಹೈಕೋರ್ಟ್ ಆದೇಶ
ಕೊಡಿಗೇಹಳ್ಳಿ ಮತ್ತು ಕೋಟಿಹೊಸಹಳ್ಳಿಯಲ್ಲಿರುವ ಸರ್ಕಾರಿ ಆಸ್ತಿಗಳನ್ನು ಖಾಸಗಿ ಕಂಪನಿಗಳು ಒತ್ತುವರಿ ಮಾಡಿ ವಸತಿ ನಿರ್ಮಿಸಲು ಅನುಮತಿ ನೀಡಿರುವ ಇಲಾಖೆಯ ಏಳು ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಹೈ ಕೋರ್ಟ್ಆದೇಶಿಸಿದೆ.
ಬೆಂಗಳೂರು: ಬೆಂಗಳೂರಿನಲ್ಲಿ ಸರ್ಕಾರಿ ಭೂಮಿ ಒತ್ತುವರಿ(Encroachment) ಮಾಡಿಕೊಳ್ಳಲು ಸಹಾಯ ಮಾಡಿದ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲು ಹೈಕೋರ್ಟ್(High Court) ನಿರ್ದೇಶನ ನೀಡಿದೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಇಲಾಖೆ ನಿಯಮಗಳ ಅಡಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಬಿಡಿಎ(BDA) ಆಯುಕ್ತರಿಗೆ ನ್ಯಾಯಾಲಯ ಸೂಚಿಸಿದೆ.
ನಗರದ ಕೊಡಿಗೇಹಳ್ಳಿ ಮತ್ತು ಕೋಟಿಹೊಸಹಳ್ಳಿಯಲ್ಲಿರುವ ಸರ್ಕಾರಿ ಆಸ್ತಿಗಳನ್ನು ಖಾಸಗಿ ಕಂಪನಿಗಳು ಒತ್ತುವರಿ ಮಾಡಿ ವಸತಿ ನಿರ್ಮಿಸಲು ಅನುಮತಿ ನೀಡಿರುವ ಇಲಾಖೆಯ ಏಳು ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ (ಬಿಡಿಎ) ಕರ್ನಾಟಕ ಹೈಕೋರ್ಟ್ ಮಂಗಳವಾರ ಸೂಚಿಸಿದೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಇಲಾಖೆ ನಿಯಮಗಳ ಅಡಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಬಿಡಿಎ ಆಯುಕ್ತರಿಗೆ ನ್ಯಾಯಾಲಯ ಸೂಚಿಸಿದೆ.
ಇದನ್ನೂ ಓದಿ: Srirangapatna: ಮತ್ತೆ ಭುಗಿಲೆದ್ದ ಜಾಮಿಯಾ ಮಸೀದಿ ವಿವಾದ, 108 ಹನುಮ ಭಕ್ತರಿಂದ ಹೈ ಕೋರ್ಟ್ ನಲ್ಲಿ ಅಪೀಲ್
ಯಲಹಂಕ ತಹಶೀಲ್ದಾರ್ ವಿರುದ್ಧ 15 ದಿನಗಳ ಒಳಗಾಗಿ ಒತ್ತುವರಿ ತೆರವಿಗೆ ಕ್ರಮಕೈಗೊಳ್ಳುವಂತೆ ಆದೇಶಿಸಿದೆ. ಕೊಡಿಗೇಹಳ್ಳಿ ನಿವಾಸಿ ಅಶ್ವಥ್ ನಾರಾಯಣ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಅವರಿದ್ದ ವಿಭಾಗೀಯ ಪೀಠವು ಪ್ರಕರಣದ ವಿಚಾರಣೆಯನ್ನು ಫೆಬ್ರವರಿ 2ಕ್ಕೆ ಮುಂದೂಡಿದೆ. ಈ ಹಿಂದೆ ಹೈಕೋರ್ಟ್ ನಿರ್ದೇಶನದ ಮೇರೆಗೆ ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದರು. ಯಲಹಂಕದ ತಹಶೀಲ್ದಾರ್ ಕೂಡ ಒತ್ತುವರಿ ಕುರಿತು ಅಫಿಡವಿಟ್ ಸಲ್ಲಿಸಿದ್ದರು. ವರದಿ ಹಾಗೂ ಅಫಿಡವಿಟ್ ಆಧರಿಸಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ಮಂಗಳವಾರ(ಜ.10) ಸೂಚನೆ ನೀಡಿದೆ.
ಒತ್ತುವರಿ ಮಾಡಿಕೊಂಡಿರುವ ಜಮೀನಿನಲ್ಲಿ ಆಸ್ತಿ ಮಾಲೀಕರ ಪರ ವಾದ ಮಂಡಿಸಿದ ವಕೀಲರು ಕಾಲಾವಕಾಶ ಕೋರಿದರು. ಆದರೆ ನ್ಯಾಯಾಲಯವು ತಹಶೀಲ್ದಾರ್‌ಗೆ ದೂರು ನೀಡುವಂತೆ ಸೂಚಿಸಿತು.
ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ