Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನರ್ಹ ವ್ಯಕ್ತಿಗಳಿಗೆ ಸರ್ಕಾರಿ ಜಮೀನು ಹಂಚಿಕೆ: ಪ್ರಕರಣ ರದ್ದು ಕೋರಿದ್ದ ಶಾಸಕ ಕೆವೈ ನಂಜೇಗೌಡ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಕೋಟ್ಯಾಂತರ ರೂ. ಬೆಲೆಬಾಳುವ ಸುಮಾರು 80 ಎಕರೆ ಸರ್ಕಾರಿ ಭೂಮಿಯನ್ನು ಮೃತರು ಸೇರಿದಂತೆ ಅನರ್ಹರಿಗೆ ಮಂಜೂರು ಮಾಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದು ಕೋರಿ ಮಾಲೂರು ಶಾಸಕ ಕೆ,ವೈ ನಂಜೇಗಾಡ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್​ ಭಾನುವಾರ ವಜಾಗೊಳಿಸಿದೆ.

ಅನರ್ಹ ವ್ಯಕ್ತಿಗಳಿಗೆ ಸರ್ಕಾರಿ ಜಮೀನು ಹಂಚಿಕೆ: ಪ್ರಕರಣ ರದ್ದು ಕೋರಿದ್ದ ಶಾಸಕ ಕೆವೈ ನಂಜೇಗೌಡ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಶಾಸಕ ಕೆ.ವೈ.ನಂಜೇಗೌಡ, ಹೈಕೋರ್ಟ್
Follow us
Ramesha M
| Updated By: ಗಂಗಾಧರ​ ಬ. ಸಾಬೋಜಿ

Updated on: Oct 01, 2023 | 10:27 PM

ಬೆಂಗಳೂರು, ಅಕ್ಟೋಬರ್​ 01: ಕೋಟ್ಯಾಂತರ ರೂ. ಬೆಲೆಬಾಳುವ ಸುಮಾರು 80 ಎಕರೆ ಸರ್ಕಾರಿ ಭೂಮಿಯನ್ನು ಮೃತರು ಸೇರಿದಂತೆ ಅನರ್ಹರಿಗೆ ಮಂಜೂರು ಮಾಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದು ಕೋರಿ ಮಾಲೂರು ಶಾಸಕ ಕೆ,ವೈ ನಂಜೇಗಾಡ (KY Nanjegowda) ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್​ ಭಾನುವಾರ ವಜಾಗೊಳಿಸಿದೆ. ಜನಪ್ರತಿನಿಧಿಗಳ ಅಧಿಕಾರ ದುರುಪಯೋಗಕ್ಕೆ ಇದು ಉತ್ತಮ ಉದಾಹರಣೆ ಆಗಿದ್ದು, ನ್ಯಾಯಮೂರ್ತಿ ಎಂ.ನಾಗಪ್ರಸನ್ನರವರಿದ್ದ ಹೈಕೋರ್ಟ್ ಪೀಠ ವಜಾಗೊಳಿಸಿ ಆದೇಶ ಹೊರಡಿಸಿದೆ.

2019ರಲ್ಲಿ ಮಾಲೂರು ತಾಲೂಕು ಭೂ ಮಂಜೂರಾತಿ ಸಮಿತಿ ಅಧ್ಯಕ್ಷರಾಗಿದ್ದಾಗ ಅಕ್ರಮ ನಡೆದಿತ್ತು. ಕೋಟ್ಯಂತರ ರೂ. ಬೆಲೆ ಬಾಳುವ ಸುಮಾರು 80 ಎಕರೆ ಭೂಮಿಯನ್ನು ಮೃತರು ಸೇರಿದಂತೆ ಅನರ್ಹರಿಗೆ ಮಂಜೂರು ಮಾಡಿದ್ದ ಆರೋಪವಿತ್ತು.

ಇದನ್ನೂ ಓದಿ: ಸಿಐಡಿ ಅಂಗಳದಲ್ಲಿ ಕೊಮ್ಮೆನಹಳ್ಳಿ ಬ್ಲಾಸ್ಟ್ ಕೇಸ್, ಮಾಲೂರು ಶಾಸಕ ನಂಜೇಗೌಡರಿಗೆ ಎದುರಾಗುತ್ತಾ ಸಂಕಷ್ಟ?

2019 ಜುಲೈ ತಿಂಗಳಲ್ಲಿ ಸರ್ಕಾರಿ ಗೋಮಾಳ ಜಮೀನನ್ನ ಒಂದೆ ತಿಂಗಳಲ್ಲಿ ನಾಲ್ಕು ಸಭೆ ಮಾಡಿ ಮಂಜೂರು ಮಾಡಲಾಗಿತ್ತು. ಬಳಿಕ ನಕಲಿ ದಾಖಲೆಗಳನ್ನ ನೀಡಿ ಭೂ ಮಂಜೂರು ಮಾಡಿರುವ ಆರೋಪ ದರಖಾಸ್ತು ಕಮಿಟಿ ಅಧ್ಯಕ್ಷರೂ ಆಗಿರುವ ಶಾಸಕರ ವಿರುದ್ಧ ಕೇಳಿಬಂದಿತ್ತು. ಬರೋಬ್ಬರಿ 150 ಕೋಟಿ ಮೌಲ್ಯದ ಸರ್ಕಾರಿ ಜಮೀನು ಅಕ್ರಮವಾಗಿ ಮಂಜೂರು ಮಾಡಿರುವುದಾಗಿ ಸಾಮಾಜಿಕ ಕಾರ್ಯಕರ್ತ ರಾಜಣ್ಣ ದೂರು ನೀಡಿದ್ದರು.

ಇದನ್ನೂ ಓದಿ: ಸಿಎಂ ಇಬ್ರಾಹಿಂರನ್ನು ಪರಿಗಣಿಸದಿರುವುದು ಅವರ ಪಕ್ಷಕ್ಕೆ ಸಂಬಂಧಿಸಿದ್ದು: ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ

ಕಮಿಟಿ ಅಧ್ಯಕ್ಷ ಶಾಸಕ, ಕಾರ್ಯದರ್ಶೀ ತಹಶೀಲ್ದಾರ್ ಸೇರಿ ಒಟ್ಟು ಒಂಬತ್ತು ಮಂದಿ ವಿರುದ್ಧ ದೂರು ನೀಡಲಾಗಿತ್ತು. ಸಮಿತಿ ಅಧಿಕರೇತರ ಸದಸ್ಯರಾದ ದೊಮ್ಮಲೂರು ನಾಗರಾಜ್, ನಲ್ಲಾಂಡಹಳ್ಳಿ ನಾಗಪ್ಪ, ಅಬ್ಬೇನಹಳ್ಳಿ ನಾಗಮ್ಮ ವಿರುದ್ದವೂ ದೂರು ನೀಡಲಾಗಿದ್ದು, ಇದರಲ್ಲಿ ಭಾಗಿಯಾಗಿರುವ ಶಿರಸ್ತೆದಾರ್, ಆರ್​ಐ, ಗ್ರಾಮ ಲೆಕ್ಕಿಗರ ವಿರುದ್ದ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಮನವಿ ಮಾಡಲಾಗಿತ್ತು. ಬೆಂಗಳೂರಿನ 47ನೇ ಹೆಚ್ಚುವರಿ ಸಿಎಂಎಂ ನ್ಯಾಯಾಲಯದ ಆದೇಶದಂತೆ ಮಾಲೂರು ಠಾಣೆಯಲ್ಲಿ ಎಫ್​ಐಆರ್ ಕೂಡ ದಾಖಲಾಗಿತ್ತು.

ಶಾಸಕ ಕೆ.ವೈ.ನಂಜೇಗೌಡ ಚೆಕ್ ಬೌನ್ಸ್ 

ಶಾಸಕ ಕೆ.ವೈ.ನಂಜೇಗೌಡ ಚೆಕ್ ಬೌನ್ಸ್ ಪ್ರಕರಣದಲ್ಲಿ ಕೂಡ ಸಿಲುಕಿಕೊಂಡಿದ್ದರು. ಬಳಿಕ ತಪ್ಪಿತಸ್ಥ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ಹೊರಡಿಸಿತ್ತು. ಕೋಲಾರ ಜಿಲ್ಲೆಯ ಮಾಲೂರು ಕ್ಷೇತ್ರದ ಶಾಸಕ ಕೆ.ವೈ.ನಂಜೇಗೌಡ, ರಾಮಚಂದ್ರ.ಜಿ ಎಂಬುವರಿಗೆ 40 ಲಕ್ಷ ರೂ. ಸಾಲ ಮರುಪಾವತಿಗೆ ಚೆಕ್ ನೀಡಿದ್ದರು. ಆದರೆ ಚೆಕ್ ಬೌನ್ಸ್ ಆಗಿತ್ತು.

ಈ ಸಂಬಂಧ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಚೆಕ್ ಬೌನ್ಸ್ ಕೇಸ್​​ನಲ್ಲಿ ಕೆ.ವೈ.ನಂಜೇಗೌಡ ಅವರಿಗೆ 49.65 ಲಕ್ಷ ರೂ. ದಂಡ ವಿಧಿಸಿತ್ತು. ದಂಡ ಪಾವತಿಸದಿದ್ದರೆ 6 ತಿಂಗಳು ಜೈಲು ಶಿಕ್ಷೆ ಅನುಭವಿಸಬೇಕು ಎಂದು 42ನೇ ಎಸಿಎಂಎಂ ಕೋರ್ಟ್ ಜಡ್ಜ್ ಜೆ.ಪ್ರೀತ್ ಆದೇಶ ಹೊರಡಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ