AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ಸ್​ಪೆಕ್ಟರ್ ಕೆ.ವೈ.ಪ್ರವೀಣ್ ವಿರುದ್ಧ ಇಲಾಖಾ ವಿಚಾರಣೆಗೆ ಹೈಕೋಟ್​​ ಆದೇಶ

2022ರ ಮೇ 4ರಂದೇ ಆದೇಶ ತಲುಪಿದರೂ FIR ದಾಖಲು ವಿಳಂಬ ಹಿನ್ನೆಲೆ ಕಾಟನ್​ಪೇಟೆ ಪಿಐ ಕೆ.ವೈ.ಪ್ರವೀಣ್​ ವಿರುದ್ಧ ಇಲಾಖಾ ವಿಚಾರಣೆಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಇನ್ಸ್​ಪೆಕ್ಟರ್ ಕೆ.ವೈ.ಪ್ರವೀಣ್ ವಿರುದ್ಧ ಇಲಾಖಾ ವಿಚಾರಣೆಗೆ ಹೈಕೋಟ್​​ ಆದೇಶ
ಹೈಕೋರ್ಟ್ Image Credit source: etvbharat.com
TV9 Web
| Edited By: |

Updated on:Feb 01, 2023 | 7:36 PM

Share

ಬೆಂಗಳೂರು: ಕಳ್ಳತನ ಪ್ರಕರಣ ಕುರಿತಾಗಿ ಎಫ್​ಐಆರ್​ ದಾಖಲಿಸಿ ತನಿಖೆ ನಡೆಸುವಂತೆ ನಗರದ ಮ್ಯಾಜೆಸ್ಟ್ರೇಟ್​​ ನ್ಯಾಯಾಲಯದ ಸೂಚನೆಯ ಹೊರತಾಗಿಯೂ ಕ್ರಮಕ್ಕೆ ಮುಂದಾಗದೆ ನಿರ್ಲಕ್ಷ್ಯ ತೋರಿದ್ದ ಕಾಟನ್​ಪೇಟೆ ಠಾಣೆಯ ಪೊಲೀಸ್​ ಇನ್​ಸ್ಪೆಕ್ಟರ್​​ ಆಗಿದ್ದ ಕೆ.ವೈ. ಪ್ರವೀಣ್ (Inspector K Y Praveen)​ ವಿರುದ್ಧ ಎಫ್​ಐಆರ್ ದಾಖಲಿಸಲಾಗಿದೆ. ಕೋರ್ಟ್ ಸೂಚನೆಯಂತೆ ಎಫ್ಐಆರ್ ದಾಖಲಿಸಿದ್ದು, ಕೆ.ವೈ.ಪ್ರವೀಣ್ ವಿರುದ್ಧ ಇಲಾಖಾ ವಿಚಾರಣೆಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ. ಬೆಂಗಳೂರಿನ ಕಾಟನ್​ಪೇಟೆ ಠಾಣೆ ಇನ್ಸ್​ಪೆಕ್ಟರ್ ಆಗಿದ್ದ ಪ್ರವೀಣ್, ಕಳ್ಳತನ ಆರೋಪದ ಬಗ್ಗೆ ತನಿಖೆಗೆ ಎಸಿಎಂಎಂ ಕೋರ್ಟ್ ಆದೇಶಿಸಿತ್ತು. 2022ರ ಮೇ 4ರಂದೇ ಆದೇಶ ತಲುಪಿದರೂ FIR ದಾಖಲಿಸಲು ಪಿಐ ಕೆ.ವೈ.ಪ್ರವೀಣ್​ ಐದೂವರೆ ತಿಂಗಳು ವಿಳಂಬ ಮಾಡಿದ್ದರು.

ಠಾಣಾಧಿಕಾರಿ ನಿರ್ಲಕ್ಷ್ಯಕ್ಕೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ್ದು, ಕೋರ್ಟ್ ಆದೇಶದಂತೆ FIR ದಾಖಲಿಸುವುದು ಠಾಣಾಧಿಕಾರಿ ಕರ್ತವ್ಯ. ಆದರೆ ಹಾಗೆ ಮಾಡದೆ ಕರ್ತವ್ಯ ಲೋಪವನ್ನು ಒಪ್ಪಲು ಸಾಧ್ಯವಿಲ್ಲ ಎಂದು ನ್ಯಾ. ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯ ಪಟ್ಟಿದೆ.

ಇದನ್ನೂ ಓದಿ: ಸರ್ಕಾರದ ಬಗ್ಗೆ ಹೈಕೋರ್ಟ್ ಅಸಮಾಧಾನ, ಫೆ.7 ರೊಳಗೆ ಗ್ರಾಮಗಳಿಗೆ ಸ್ಮಶಾನ ಜಮೀನು ಒದಗಿಸುವಂತೆ ಖಡಕ್ ಸೂಚನೆ

ಘಟನೆ ಹಿನ್ನೆಲೆ

ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿರುವ ವಿನಾಯಕ ಮತ್ತು ಅರ್ಜಿದಾರರ ನಡುವೆ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಸಿವಿಲ್ ದಾವೆ ಹೂಡಲಾಗಿತ್ತು. ಈ ಮಧ್ಯೆ ಅರ್ಜಿದಾರರ ಮನೆ ಬಾಗಿಲು ಮುರಿದು ಹಲವು ಬೆಲ ಬಾಳುವ ವಸ್ತುಗಳನ್ನು ಕಳವು ಮಾಡಲಾಗಿದೆ. ಘಟನೆ ಕುರಿತಂತೆ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ಮ್ಯಾಜಿಸ್ಟ್ರೇಟ್​ ನ್ಯಾಯಾಲಯಕ್ಕೆ ಅರ್ಜಿದಾರ ಪ್ರಕಾಶ್​ ಖಾಸಗಿ ದೂರು ಸಲ್ಲಿಸಿದ್ದರು.

ಇದನ್ನೂ ಓದಿ: ಸರ್ಕಾರಿ ಶಾಲೆ ಮಕ್ಕಳಿಗೆ ಎರಡು ಜೊತೆ ಸಮವಸ್ತ್ರ ನೀಡದ ಕರ್ನಾಟಕ ಸರ್ಕಾರಕ್ಕೆ ಛೀಮಾರಿ ಹಾಕಿದ ಹೈಕೋರ್ಟ್

ಸುಮಾರು 5 ತಿಂಗಳ ಬಳಿಕ ಪ್ರಕರಣ ದಾಖಲು

ದೂರಿನ ವಿಚಾರಣೆ ನಡೆಸಿದ್ಧ ಮ್ಯಾಜಿಸ್ಟ್ರೇಟ್​ ನ್ಯಾಯಾಲವು ಪ್ರಕರಣ ದಾಖಲಿಸಿ ವಿಚಾರಣೆ ನಡೆಸುವಂತೆ ಕಾಟನ್​ಪೇಟೆ ಪೊಲೀಸ್​ ಠಾಣೆಗೆ ನಿರ್ದೇಶನ ನೀಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದ ವಿವರಗಳನ್ನು ಸ್ವೀಕರಿಸಿದ್ದ ಕಾಟನ್​​ ಪೇಟೆ ಪೊಲೀಸರು ಎಫ್​ಐಆರ್​ ದಾಖಲಿಸಿರಲಿಲ್ಲ. ಅರ್ಜಿ ವಿಚಾರಣೆಗೆ ಬಂದ ಸಂದರ್ಭದಲ್ಲಿ ಪ್ರಕರಣ ದಾಖಲಿಸುವಂತೆ ಪೊಲೀಸ್​ ಠಾಣೆಗೆ ಮತ್ತೊಮ್ಮೆ ಹೇಳಲಾಗಿತ್ತು. ಆವತ್ತು ಕೂಡ ಪ್ರಕರಣ ದಾಖಲಿಸಿರಲಿಲ್ಲ. ಇದಾದ ಸುಮಾರು 5 ತಿಂಗಳ ಬಳಿಕ ಪ್ರಕರಣ ದಾಖಲಿಸಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:33 pm, Wed, 1 February 23

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?