AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಯನಗರ ವಿಧಾನಸಭಾ ಕ್ಷೇತ್ರದ ಶಾಸಕರ ಆಯ್ಕೆ ಅಸಿಂಧು ಕೋರಿ ಸೌಮ್ಯ ರೆಡ್ಡಿ ಅರ್ಜಿ: ಶಾಸಕ ಸಿಕೆ ರಾಮಮೂರ್ತಿಗೆ ಹೈಕೋರ್ಟ್ ಸಮನ್ಸ್

ವಿಧಾನಸಭಾ ಚುನಾವಣೆಯಲ್ಲಿ ವಿಜೇತ ಅಭ್ಯರ್ಥಿ ಸಿ.ಕೆ. ರಾಮಮೂರ್ತಿ ಆಯ್ಕೆ ಅಸಿಂಧುಗೊಳಿಸಬೇಕೆಂದು ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಅರ್ಜಿ ವಿಚಾರಣೆ ನಡೆಸಿದ ನ್ಯಾ. ಎಸ್. ರಾಚಯ್ಯ ರವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ ಸಿ.ಕೆ. ರಾಮಮೂರ್ತಿಗೆ ಸಮನ್ಸ್ ಜಾರಿಗೆ ಆದೇಶಿಸಿದೆ.

ಜಯನಗರ ವಿಧಾನಸಭಾ ಕ್ಷೇತ್ರದ ಶಾಸಕರ ಆಯ್ಕೆ ಅಸಿಂಧು ಕೋರಿ ಸೌಮ್ಯ ರೆಡ್ಡಿ ಅರ್ಜಿ: ಶಾಸಕ ಸಿಕೆ ರಾಮಮೂರ್ತಿಗೆ ಹೈಕೋರ್ಟ್ ಸಮನ್ಸ್
ಕರ್ನಾಟಕ ಹೈಕೋರ್ಟ್
Ramesha M
| Updated By: ಗಂಗಾಧರ​ ಬ. ಸಾಬೋಜಿ|

Updated on: Aug 24, 2023 | 7:27 PM

Share

ಬೆಂಗಳೂರು, ಆಗಸ್ಟ್​ 24: ಜಯನಗರ ವಿಧಾನಸಭಾ ಚುನಾವಣೆಯಲ್ಲಿ ಕೇವಲ 16 ಮತಗಳಿಂದ ಪರಾಜಿತಗೊಂಡಿದ್ದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ (Sowmya Reddy) ಇದೀಗ ಚುನಾವಣೆಯಲ್ಲಿ ಜಯಿಸಿದ ಬಿಜೆಪಿ ಅಭ್ಯರ್ಥಿ ಸಿ.ಕೆ. ರಾಮಮೂರ್ತಿ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಮತಯಂತ್ರದ ಮತಗಳ‌ ಎಣಿಕೆಯಲ್ಲಿ ತಾನು ಮುನ್ನಡೆ ಸಾಧಿಸಿದ್ದೆ, ಆದರೆ ಅಂಚೆ ಮತಪತ್ರಗಳ ಎಣಿಕೆಯಲ್ಲಿ ವ್ಯತ್ಯಾಸವಾಗಿದೆ. 827 ಮತಗಳನ್ನು ಪ್ರತಿಬಾರಿ ಮರುಎಣಿಕೆ ಮಾಡಿದಾಗಲೂ ಪ್ರತ್ಯೇಕ ಅಂಕಿಅಂಶ ಬಂದಿದೆ. ಮತ ಎಣಿಕೆ ಆರಂಭವಾದ ನಂತರವೂ ಪೋಸ್ಟ್ ಮೂಲಕ ಬಂದಿದ್ದ ಮತಪತ್ರಗಳನ್ನು ಎಣಿಕೆಗೆ ಪರಿಗಣಿಸಲಾಗಿದೆ.

ಸುಮಾರು 89 ಮತಪತ್ರಗಳಲ್ಲಿ ಅಧಿಕಾರಿಗಳ ಸಹಿ ಇಲ್ಲದಿದ್ದರೂ ಮತ ಎಣಿಕೆಗೆ ಪರಿಗಣಿಸಲಾಗಿದೆ. ಮರು ಪರಿಶೀಲನೆ ವೇಳೆಯೂ 26 ಮತಪತ್ರಗಳನ್ನು ಎಣಿಕೆಗೆ ಪರಿಗಣಿಸಲಾಗಿದೆ. ಹೀಗಾಗಿ ಒಟ್ಟು 827 ಮತಪತ್ರಗಳನ್ನು ಮರುಎಣಿಕೆ ಮಾಡಬೇಕು. ಅಂದು ಮತ ಎಣಿಕೆಯ ಸಂಪೂರ್ಣ ವಿಡಿಯೋ ಚಿತ್ರೀಕರಣ ಮಾಡಲಾಗಿದೆ. ಆ ವಿಡಿಯೋ ಚಿತ್ರೀಕರಣವನ್ನು ಪರಿಶೀಲಿಸಬೇಕು.

ಇದನ್ನೂ ಓದಿ: ಮರು ಎಣಿಕೆಯಲ್ಲಿ ಸೌಮ್ಯ ರೆಡ್ಡಿಗೆ ಸೋಲು: ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಲು ನಿರ್ಧಾರ

ವಿಜೇತ ಅಭ್ಯರ್ಥಿ ಸಿ.ಕೆ. ರಾಮಮೂರ್ತಿ ಆಯ್ಕೆ ಅಸಿಂಧುಗೊಳಿಸಬೇಕೆಂದು ಸೌಮ್ಯ ರೆಡ್ಡಿ ಚುನಾವಣಾ ತಕರಾರು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ. ಅರ್ಜಿ ವಿಚಾರಣೆ ನಡೆಸಿದ ನ್ಯಾ. ಎಸ್. ರಾಚಯ್ಯ ರವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ ಸಿ.ಕೆ.ರಾಮಮೂರ್ತಿ ಸೇರಿದಂತೆ ಪ್ರತಿವಾದಿಗಳಿಗೆ ಸಮನ್ಸ್ ಜಾರಿಗೆ ಆದೇಶಿಸಿದ್ದು ಸೆ.7 ಕ್ಕೆ ಮುಂದಿನ ವಿಚಾರಣೆ ನಿಗದಿಪಡಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಯ ಸುರಂಗ ನಿರ್ಮಾಣ ಪೂರ್ಣ
ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಯ ಸುರಂಗ ನಿರ್ಮಾಣ ಪೂರ್ಣ
ಯಾರದ್ದೋ ಜಿದ್ದಿನ ಮೇಲೆ ಸಿನಿಮಾ ನಿರ್ಮಿಸುತ್ತಿದ್ದಾರಾ ಯಶ್ ತಾಯಿ?
ಯಾರದ್ದೋ ಜಿದ್ದಿನ ಮೇಲೆ ಸಿನಿಮಾ ನಿರ್ಮಿಸುತ್ತಿದ್ದಾರಾ ಯಶ್ ತಾಯಿ?
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ