ರಾಷ್ಟ್ರಪತಿ ಚುನಾವಣೆಗೆ ಹೆಚ್.ಡಿ. ದೇವೇಗೌಡರ ಹೆಸರು ಪ್ರಸ್ತಾಪವೇ ಆಗಿಲ್ಲ: ಹೆಚ್​​.ಡಿ ಕುಮಾರಸ್ವಾಮಿ ಸ್ಪಷ್ಟನೆ

ರಾಷ್ಟ್ರಪತಿ ಚುನಾವಣೆಗೆ ಪ್ರತಿಪಕ್ಷಗಳ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್​​.ಡಿ ಕುಮಾರಸ್ವಾಮಿ ಮಾತನಾಡಿ ರಾಷ್ಟ್ರಪತಿ ಚುನಾವಣೆಗೆ ದೇವೇಗೌಡರ ಹೆಸರು ಪ್ರಸ್ತಾಪವೇ ಆಗಿಲ್ಲ. ರಾಷ್ಟ್ರಪತಿ ಹುದ್ದೆಗೆ ಹೆಚ್.ಡಿ.ದೇವೇಗೌಡರು ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳಿದರು.

ರಾಷ್ಟ್ರಪತಿ ಚುನಾವಣೆಗೆ ಹೆಚ್.ಡಿ. ದೇವೇಗೌಡರ ಹೆಸರು ಪ್ರಸ್ತಾಪವೇ ಆಗಿಲ್ಲ: ಹೆಚ್​​.ಡಿ ಕುಮಾರಸ್ವಾಮಿ ಸ್ಪಷ್ಟನೆ
ಹೆ್ಚ್ ಡಿ ಕುಮಾರಸ್ವಾಮಿ
Follow us
TV9 Web
| Updated By: ವಿವೇಕ ಬಿರಾದಾರ

Updated on:Jun 17, 2022 | 9:09 PM

ಬೆಂಗಳೂರು: ರಾಷ್ಟ್ರಪತಿ ಚುನಾವಣೆಗೆ (President Election) ಪ್ರತಿಪಕ್ಷಗಳ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಬೆಂಗಳೂರಿನ (Bengalore) ಜೆಡಿಎಸ್ (JDS) ಕಚೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್​​.ಡಿ ಕುಮಾರಸ್ವಾಮಿ (HD Kumarswamy) ಮಾತನಾಡಿ ದೆಹಲಿಯಲ್ಲಿ ನಡೆದ ಪ್ರತಿಪಕ್ಷ ನಾಯಕರ ಸಭೆಗೆ ನಮ್ಮ ಕುಟುಂಬದ ಮೇಲೆ ಗೌರವವಿಟ್ಟು ಪಶ್ಚಿಮ ಬಂಗಾಳ ಮಮತಾ ಬ್ಯಾನರ್ಜಿ (Mamata Banerjee) ಕರೆದಿದ್ದರು. ಸಭೆಯಲ್ಲಿ 17 ಪಕ್ಷಗಳ ನಾಯಕರು ಭಾಗವಹಿಸಿದ್ದರು. ಅಂದು ನಡೆದ ಸಭೆಯಲ್ಲಿ ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿ ಅಂತಿಮವಾಗಿಲ್ಲ. ಜೂನ್ 20ರಂದು ವಿಪಕ್ಷ ನಾಯಕರ ಮತ್ತೊಂದು ಸುತ್ತಿನ ಸಭೆಯಿದೆ. ಜೂನ್​​ 20ರಂದು ನಡೆಯುವ ಸಭೆಯಲ್ಲಿ ರಾಷ್ಟ್ರಪತಿ ಅಭ್ಯರ್ಥಿ ಹೆಸರು ಅಂತಿಮವಾಗುತ್ತದೆ.

ಇದನ್ನು ಓದಿ: AAI Recruitment 2022: ಏರ್‌ಪೋರ್ಟ್ ಅಥಾರಿಟಿಯಲ್ಲಿ ಉದ್ಯೋಗಾವಕಾಶ: ಆರಂಭಿಕ ವೇತನ 40 ಸಾವಿರ ರೂ.

ರಾಷ್ಟ್ರಪತಿ ಚುನಾವಣೆಗೆ ದೇವೇಗೌಡರ (HD Devegowda) ಹೆಸರು ಪ್ರಸ್ತಾಪವೇ ಆಗಿಲ್ಲ. ರಾಷ್ಟ್ರಪತಿ ಹುದ್ದೆಗೆ ಹೆಚ್.ಡಿ.ದೇವೇಗೌಡರು ಸ್ಪರ್ಧೆ ಮಾಡುವುದಿಲ್ಲ. ದೇವೇಗೌಡರಿಗೆ ಒಮ್ಮೆ ಸ್ವತಂತ್ರ ಸರ್ಕಾರ ಬರಬೇಕೆಂಬ ಆಸೆಯಿದೆ ಎಂದು ಹೇಳಿದರು.

ಜುಲೈ 1ರಂದು ಜನತಾ ಮಿತ್ರ ಕಾರ್ಯಕ್ರಮಕ್ಕೆ ಚಾಲನೆ ನೀಡುತ್ತೇವೆ. ಜನತಾ ಮಿತ್ರ ಕಾರ್ಯಕ್ರಮದ ಬಗ್ಗೆ ಸಭೆಯಲ್ಲಿ ಚರ್ಚಿಸುತ್ತೇವೆ. ಬೆಂಗಳೂರಿನಲ್ಲಿ ಒಟ್ಟು 15 ವಾಹನಗಳು ಸಂಚಾರ ಮಾಡುತ್ತೇವೆ. ಬೆಂಗಳೂರಿಗೆ ದೇವೆಗೌಡರ, ಕುಮಾರಸ್ವಾಮಿ ಅವರ ಕೊಡುಗೆ ಬಗ್ಗೆ ಪ್ರಚಾರ ಮಾಡುತ್ತೇವೆ. ಕಾಂಗ್ರೆಸ್-ಬಿಜೆಪಿ ಸರ್ಕಾರದಲ್ಲಿ ಆಗಿರುವ ಅನ್ಯಾಯ, ಅಕ್ರಮ ಸಮಸ್ಯೆಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡುತ್ತೇವೆ. ನಿತ್ಯ ಮಳೆ ಬಂದರೆ ಏನ್ ಸಮಸ್ಯೆ ಆಗುತ್ತೆ ಅಂತ ನೋಡಿದ್ದೇನೆ.

ಇದನ್ನು ಓದಿ: ಮೊದಲ ಬಾರಿಗೆ ಅಮೆರಿಕದಿಂದ ಹೆಚ್ಚಿನ ಪ್ರಮಾಣದ ಯೂರಿಯಾ ಆಮದು ಮಾಡಲಿದೆ ಭಾರತ

ಈ ಎಲ್ಲಾ ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡುತ್ತೇವೆ. ಪ್ರತಿ ರಸ್ತೆಗಳು, ಮನೆಗಳಿಗೆ ಭೇಟಿ, ಮನೆ ಮನೆಗೆ ಕರಪತ್ರ ಹಂಚಿಕೆ ಮಾಡುತ್ತೇವೆ. ನಾಗರಿಕರು, ಮಹಿಳೆಯರು, ಯುವಕರ ನಿರೀಕ್ಷೆಗಳ ಬಗ್ಗೆ ಮಾಹಿತಿ ನೀಡುತ್ತವೆ. ಎಲ್ಲರ ನಿರೀಕ್ಷೆಗಳ ಮಾಹಿತಿಯನ್ನು ಸಂಗ್ರಹ ಮಾಡುತ್ತೇವೆ.  ಜನರು ಕೊಡುವ ಸಲಹೆಗಳನ್ನು ಸ್ವೀಕಾರ ಮಾಡುತ್ತೇವೆ. ನಮಗೆ ಒಂದು ಬಾರಿ ಅವಕಾಶ ಕೊಡಿ ಅಂತ ಅಭಿಯಾನ ಮಾಡುತ್ತೇವೆ. ಕೊನೆ ದಿನ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ 50 ಸಾವಿರ ಜನ ಸಮಾವೇಶ ಮಾಡುತ್ತೇವೆ ಎಂದು ಬೆಂಗಳೂರಿನ ಜೆ.ಪಿ.ಭವನದಲ್ಲಿ ಮಾಜಿ ಸಿಎಂ ಹೆಚ್​ಡಿಕೆ ಹೇಳಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:41 pm, Fri, 17 June 22