AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯದಲ್ಲಿ ಚೇತರಿಕೆ: ಆಸ್ಪತ್ರೆಯಿಂದ ಹೆಚ್​ಡಿ ದೇವೇಗೌಡ ಬಿಡುಗಡೆ

ಮಾಜಿ ಪ್ರಧಾನಿ, ಜೆಡಿಎಸ್​ ವರಿಷ್ಠ ಎಚ್​ಡಿ ದೇವೇಗೌಡ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದ ಕಾರಣ ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಆರೋಗ್ಯದಲ್ಲಿ ಚೇತರಿಕೆಯಾದ ಹಿನ್ನೆಲೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಅನಾರೋಗ್ಯದಿಂದ 4 ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು.

ಆರೋಗ್ಯದಲ್ಲಿ ಚೇತರಿಕೆ: ಆಸ್ಪತ್ರೆಯಿಂದ ಹೆಚ್​ಡಿ ದೇವೇಗೌಡ ಬಿಡುಗಡೆ
ಆಸ್ಪತ್ರೆಯಿಂದ ಹೆಚ್​ಡಿ ದೇವೇಗೌಡ ಡಿಸ್ಚಾರ್ಜ್
ಪ್ರಸನ್ನ ಗಾಂವ್ಕರ್​
| Updated By: Rakesh Nayak Manchi

Updated on: Feb 18, 2024 | 4:19 PM

Share

ಬೆಂಗಳೂರು, ಫೆ.18: ಮಾಜಿ ಪ್ರಧಾನಿ, ಜೆಡಿಎಸ್​ ವರಿಷ್ಠ ಹೆಚ್​ಡಿ ದೇವೇಗೌಡ (HD Deve Gowda) ಅವರ ಆರೋಗ್ಯದಲ್ಲಿ ಏರುಪೇರಾಗಿದ್ದ ಕಾರಣ ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಆರೋಗ್ಯದಲ್ಲಿ ಚೇತರಿಕೆಯಾದ ಹಿನ್ನೆಲೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದ್ದು, ಪದ್ಮನಾಭನಗರದಲ್ಲಿರುವ ಅವರ ನಿವಾಸಕ್ಕೆ ಕರೆದೊಯ್ಯಲಾಗಿದೆ. ಅನಾರೋಗ್ಯದಿಂದ 4 ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು.

ದೇವೇಗೌಡರಿಗೆ ಗುರುವಾರ ಬೆಳಿಗ್ಗೆ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶ್ವಾಸಕೋಶ ತಜ್ಞ ಡಾ.ಸತ್ಯನಾರಾಯಣ ಅವರು ಪರೀಕ್ಷೆ ನಡೆಸಿ, ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡಿದ್ದು, ಸದ್ಯ ಅವರು ಚೇತರಿಸಿಕೊಂಡಿದ್ದರಿಂದ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

ಇದನ್ನೂ ಓದಿ: ದೇವೇಗೌಡ್ರ ಸಭೆ ಅಂತ್ಯ: ಮಂಡ್ಯ ಜಿಡಿಎಸ್​ ಪಾಲು, ಅಭ್ಯರ್ಥಿ ಸಹ ಬಹುತೇಕ ಫೈನಲ್​!

ಎಚ್‌ಡಿ ದೇವೇಗೌಡ ಅವರಿಗೆ 90 ವರ್ಷಗಳು ಪೂರ್ಣಗೊಂಡಿವೆ. ವಯೋಸಹಜ ಸಮಸ್ಯೆ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಅವರಿಗೆ ಆಗಾಗ ಆರೋಗ್ಯ ಕೈಕೊಡುತ್ತಲೇ ಇದೆ. ಆದರೂ ಸಹ ಅವರು ಸಕ್ರಿಯ ರಾಜಕಾರಣದಲ್ಲಿದ್ದು, ಸದ್ಯ ಅವರು ಲೋಕಸಭೆ ಚುನಾವಣೆಯ ಪ್ರಚಾರ, ಸಭೆಗಳನ್ನು ನಡೆಸುತ್ತಿದ್ದಾರೆ. ಈ ಇಳಿವಯಸ್ಸಿನಲ್ಲೂ ಸಹ ಅವರು ಅಧಿವೇಶನದಲ್ಲಿ ಭಾಗವಹಿಸಲು ಬೆಂಗಳೂರು ಟು ದೆಹಲಿ ಹಾಗೂ ಲೋಕಸಭಾ ಚುನಾವಣೆ ಸಂಬಂಧ ಬೆಂಗಳೂರಿನಿಂದ ಹಾಸನಕ್ಕೆ ಹೋಗಿದ್ದರು. ಅಲ್ಲದೇ ಅವರು ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕಾಗಿ ಅಯೋಧ್ಯೆಗೆ ಹೋಗಿಬಂದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ