ಹೆಚ್​ಡಿ ಕುಮಾರಸ್ವಾಮಿ, ನಿಖಿಲ್ ಉಚ್ಚಾಟನೆಗೆ ಆಗ್ರಹ: ಸಿ.ಎಂ ಇಬ್ರಾಹಿಂ ಚಿಂತನ ಮಂಥನ ಸಭೆಯಲ್ಲಿ ಅಚ್ಚರಿ ಬೆಳವಣಿಗೆ

ಸಿ.ಎಂ. ಇಬ್ರಾಹಿಂ ತಮ್ಮ ಬೆಂಬಲಿಗರು ಹಾಗೂ ಹಿತೈಷಿಗಳ ಜೊತೆ ಜೆಡಿಎಸ್ ಚಿಂತನ ಮಂಥನ ಹೆಸರಿನಲ್ಲಿ ಸಭೆ ನಡೆಸುತ್ತಿದ್ದಾರೆ. ಸಭೆಯಲ್ಲಿ ಹೆಚ್​ಡಿ ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ ಅವರನ್ನ ಉಚ್ಚಾಟನೆ ಮಾಡಿ ಎಂಬ ಕೂಗು ಕೇಳಿ ಬಂದಿದೆ.

ಹೆಚ್​ಡಿ ಕುಮಾರಸ್ವಾಮಿ, ನಿಖಿಲ್ ಉಚ್ಚಾಟನೆಗೆ ಆಗ್ರಹ: ಸಿ.ಎಂ ಇಬ್ರಾಹಿಂ ಚಿಂತನ ಮಂಥನ ಸಭೆಯಲ್ಲಿ ಅಚ್ಚರಿ ಬೆಳವಣಿಗೆ
ಹೆಚ್​ಡಿ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ
Follow us
Sunil MH
| Updated By: ಆಯೇಷಾ ಬಾನು

Updated on:Oct 16, 2023 | 2:51 PM

ಬೆಂಗಳೂರು, ಅ.16: ಜೆಡಿಎಸ್-ಬಿಜೆಪಿ ಮೈತ್ರಿಗೆ ( BJP JDS Alliance) ಜೆಡಿಎಸ್​ನ ಕೆಲ ಮುಖಂಡರು ಅಸಮಾಧಾನಗೊಂಡಿದ್ದು ಬೆಂಗಳೂರಿನಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ (CM Ibrahim) ಚಿಂತನ ಮಂಥನ ಸಭೆ ನಡೆಸುತ್ತಿದ್ದಾರೆ. ಸಭೆ ಬಳಿಕ ಸಿ.ಎಂ.ಇಬ್ರಾಹಿಂ ತಮ್ಮ ಮುಂದಿನ ರಾಜಕೀಯ ಹೆಜ್ಜೆಯ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ. ಮತ್ತೊಂದೆಡೆ ಸಭೆಯಲ್ಲಿ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಹಾಗೂ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರನ್ನ ಉಚ್ಚಾಟನೆ ಮಾಡಿ ಎಂಬ ಕೂಗು ಕೇಳಿ ಬಂದಿದೆ.

ಜೆಡಿಎಸ್ ವರಿಷ್ಠರ ವಿರುದ್ಧ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡ ಜೆಡಿಎಸ್ ವರಿಷ್ಠರ ನಡೆಯಿಂದ ಬೇಸರಗೊಂಡಿರುವ ಸಿ.ಎಂ. ಇಬ್ರಾಹಿಂ ತಮ್ಮ ಬೆಂಬಲಿಗರು ಹಾಗೂ ಹಿತೈಷಿಗಳ ಜೊತೆ ಜೆಡಿಎಸ್ ಚಿಂತನ ಮಂಥನ ಹೆಸರಿನಲ್ಲಿ ಸಭೆ ನಡೆಸುತ್ತಿದ್ದಾರೆ. ಸಭೆಯಲ್ಲಿ ಹೆಚ್​ಡಿ ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ ಅವರನ್ನ ಉಚ್ಚಾಟನೆ ಮಾಡಿ ಎಂಬ ಕೂಗು ಕೇಳಿ ಬಂದಿದೆ.

ಮೈಸೂರಿನ ನರಸಿಂಹರಾಜ ಕ್ಷೇತ್ರದ ಪರಾಜಿತ ಅಭ್ಯರ್ಥಿ ಶಾಹಿದ್, ಹೆಚ್​ಡಿ ಕುಮಾರಸ್ವಾಮಿಯವರನ್ನೇ ಉಚ್ಚಾಟನೆ ಮಾಡಿ ಎಂದು ಧ್ವನಿ ಎತ್ತಿದ್ದಾರೆ.

ಇದನ್ನೂ ಓದಿ: ನಿಗಮ ಮಂಡಳಿ ನೇಮಕಾತಿಗೆ ಕಾಂಗ್ರೆಸ್ ಹೈಕಮಾಂಡ್ ಗ್ರೀನ್​ ಸಿಗ್ನಲ್: ಪಟ್ಟಿ ತಯಾರಿಸಲು ಖರ್ಗೆ ಸೂಚನೆ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ ಅವರನ್ನ ಉಚ್ಚಾಟನೆ ಮಾಡಿ. ಇಲ್ಲ ಅಂದ್ರೆ ನೀವು ಪಕ್ಷ ಬಿಟ್ಟು ಹೊರಗಡೆ ಬನ್ನಿ. ಹೆಚ್​ಡಿ ಕುಮಾರಸ್ವಾಮಿ, ಹೆಚ್​ಡಿ ದೇವೇಗೌಡರ ಮೇಲೆ ಬೇಜಾರಿಲ್ಲ. ಆದರೆ ಅವರ ಸಿದ್ದಾಂತದ ಮೇಲೆ ಬೇಜಾರಿದೆ. ಕುಮಾರಸ್ವಾಮಿಯವರು ಒಂದು ಸಮುದಾಯ ಬೇಡ ಅಂತಾರೆ. ಹಾಗಾದ್ರೆ ಯಾಕೆ ಇಬ್ರಾಹಿಂ ಅವರನ್ನ ರಾಜ್ಯಾಧ್ಯಕ್ಷರನ್ನಾಗಿ ಮಾಡಿದರು ಎಂದು ಶಾಹಿದ್ ಸಭೆಯಲ್ಲಿ ಸಿಎಂ ಇಬ್ರಾಹಿಂಗೆ ಪ್ರಶ್ನಿಸಿದರು.

ಸಭೆಯ ಫ್ಲೆಕ್ಸ್​​ಗಳಲ್ಲಿ ಹೆಚ್​.ಡಿ.ಕುಮಾರಸ್ವಾಮಿ ಫೋಟೋ ಮಾಯ

ಚಿಂತನ ಮಂಥನ ಕಾರ್ಯಕ್ರಮದ ಫ್ಲಕ್ಸ್​ಗಳಲ್ಲಿ ಹೆಚ್​ಡಿ ಕುಮಾರಸ್ವಾಮಿ ಅವರ ಫೋಟೋ ಮಾಯವಾಗಿದೆ. ವೇದಿಕೆ ಮೇಲೆ ಹಾಕಿರುವ ಬ್ಯಾನರ್​ಗಳಲ್ಲಿ ಹೆಚ್​ಡಿ ಕುಮಾರಸ್ವಾಮಿ ಫೋಟೋ ಕಂಡು ಬಂದಿಲ್ಲ.

ಬೆಂಗಳೂರಿನ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:51 pm, Mon, 16 October 23

ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ