ಬೆಂಗಳೂರು, ಅ.16: ಜೆಡಿಎಸ್-ಬಿಜೆಪಿ ಮೈತ್ರಿಗೆ ( BJP JDS Alliance) ಜೆಡಿಎಸ್ನ ಕೆಲ ಮುಖಂಡರು ಅಸಮಾಧಾನಗೊಂಡಿದ್ದು ಬೆಂಗಳೂರಿನಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ (CM Ibrahim) ಚಿಂತನ ಮಂಥನ ಸಭೆ ನಡೆಸುತ್ತಿದ್ದಾರೆ. ಸಭೆ ಬಳಿಕ ಸಿ.ಎಂ.ಇಬ್ರಾಹಿಂ ತಮ್ಮ ಮುಂದಿನ ರಾಜಕೀಯ ಹೆಜ್ಜೆಯ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ. ಮತ್ತೊಂದೆಡೆ ಸಭೆಯಲ್ಲಿ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ (HD Kumaraswamy) ಹಾಗೂ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರನ್ನ ಉಚ್ಚಾಟನೆ ಮಾಡಿ ಎಂಬ ಕೂಗು ಕೇಳಿ ಬಂದಿದೆ.
ಜೆಡಿಎಸ್ ವರಿಷ್ಠರ ವಿರುದ್ಧ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡ ಜೆಡಿಎಸ್ ವರಿಷ್ಠರ ನಡೆಯಿಂದ ಬೇಸರಗೊಂಡಿರುವ ಸಿ.ಎಂ. ಇಬ್ರಾಹಿಂ ತಮ್ಮ ಬೆಂಬಲಿಗರು ಹಾಗೂ ಹಿತೈಷಿಗಳ ಜೊತೆ ಜೆಡಿಎಸ್ ಚಿಂತನ ಮಂಥನ ಹೆಸರಿನಲ್ಲಿ ಸಭೆ ನಡೆಸುತ್ತಿದ್ದಾರೆ. ಸಭೆಯಲ್ಲಿ ಹೆಚ್ಡಿ ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ ಅವರನ್ನ ಉಚ್ಚಾಟನೆ ಮಾಡಿ ಎಂಬ ಕೂಗು ಕೇಳಿ ಬಂದಿದೆ.
ಮೈಸೂರಿನ ನರಸಿಂಹರಾಜ ಕ್ಷೇತ್ರದ ಪರಾಜಿತ ಅಭ್ಯರ್ಥಿ ಶಾಹಿದ್, ಹೆಚ್ಡಿ ಕುಮಾರಸ್ವಾಮಿಯವರನ್ನೇ ಉಚ್ಚಾಟನೆ ಮಾಡಿ ಎಂದು ಧ್ವನಿ ಎತ್ತಿದ್ದಾರೆ.
ಇದನ್ನೂ ಓದಿ: ನಿಗಮ ಮಂಡಳಿ ನೇಮಕಾತಿಗೆ ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನಲ್: ಪಟ್ಟಿ ತಯಾರಿಸಲು ಖರ್ಗೆ ಸೂಚನೆ
ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ ಅವರನ್ನ ಉಚ್ಚಾಟನೆ ಮಾಡಿ. ಇಲ್ಲ ಅಂದ್ರೆ ನೀವು ಪಕ್ಷ ಬಿಟ್ಟು ಹೊರಗಡೆ ಬನ್ನಿ. ಹೆಚ್ಡಿ ಕುಮಾರಸ್ವಾಮಿ, ಹೆಚ್ಡಿ ದೇವೇಗೌಡರ ಮೇಲೆ ಬೇಜಾರಿಲ್ಲ. ಆದರೆ ಅವರ ಸಿದ್ದಾಂತದ ಮೇಲೆ ಬೇಜಾರಿದೆ. ಕುಮಾರಸ್ವಾಮಿಯವರು ಒಂದು ಸಮುದಾಯ ಬೇಡ ಅಂತಾರೆ. ಹಾಗಾದ್ರೆ ಯಾಕೆ ಇಬ್ರಾಹಿಂ ಅವರನ್ನ ರಾಜ್ಯಾಧ್ಯಕ್ಷರನ್ನಾಗಿ ಮಾಡಿದರು ಎಂದು ಶಾಹಿದ್ ಸಭೆಯಲ್ಲಿ ಸಿಎಂ ಇಬ್ರಾಹಿಂಗೆ ಪ್ರಶ್ನಿಸಿದರು.
ಚಿಂತನ ಮಂಥನ ಕಾರ್ಯಕ್ರಮದ ಫ್ಲಕ್ಸ್ಗಳಲ್ಲಿ ಹೆಚ್ಡಿ ಕುಮಾರಸ್ವಾಮಿ ಅವರ ಫೋಟೋ ಮಾಯವಾಗಿದೆ. ವೇದಿಕೆ ಮೇಲೆ ಹಾಕಿರುವ ಬ್ಯಾನರ್ಗಳಲ್ಲಿ ಹೆಚ್ಡಿ ಕುಮಾರಸ್ವಾಮಿ ಫೋಟೋ ಕಂಡು ಬಂದಿಲ್ಲ.
ಬೆಂಗಳೂರಿನ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 2:51 pm, Mon, 16 October 23