ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಹಿಜಾಬ್-ಕೇಸರಿ ವಿವಾದ(Hijab-Kesari Row) ಮತ್ತು ಕಾಂಗ್ರೆಸ್ ನಾಯಕರ ಧರಣಿ(Congress Leaders) ಕುರಿತು ಹೆಚ್ಡಿ ಕುಮಾರಸ್ವಾಮಿ(HD Kumaraswamy) ಸರಣಿ ಟ್ವೀಟ್ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ. ಪ್ರಜೆಗಳಿಂದ ಪ್ರಜೆಗಳಿಗಾಗಿ ಪ್ರಜೆಗಳಿಗೋಸ್ಕರ ಇರುವುದೇ ಪ್ರಜಾಪ್ರಭುತ್ವ. ಆದರೆ ಈಗ ಪ್ರಜಾಪ್ರಭುತ್ವವೆಂದರೆ ರಾಜಕೀಯದಿಂದ, ರಾಜಕೀಯಕ್ಕಾಗಿ ರಾಜಕೀಯಕ್ಕೋಸ್ಕರವೇ ಎಂಬಂತಾಗಿದೆ. ರಾಜಕೀಯ ಪ್ರತಿಷ್ಠೆಗೆ 2 ದಿನದ ಕಲಾಪ ಆಹುತಿಯಾಗಿದೆ. ‘ಪ್ರಜಾಪ್ರಭುತ್ವಕ್ಕೆ ಗ್ರಹಣ’ ಹಿಡಿಸುವ ಕೆಲಸ ನಡೆದಿದೆ. ಒಂದು ದಿನ ಕಲಾಪಕ್ಕೆ ₹1.5ರಿಂದ 2 ಕೋಟಿ ಖರ್ಚಾಗುತ್ತೆ. ಜನರ ತೆರಿಗೆ ಹಣಕ್ಕೆ ಉತ್ತರದಾಯಿತ್ವ ಯಾರದ್ದೆಂದು ಹೆಚ್ಡಿಕೆ ಪ್ರಶ್ನೆ ಮಾಡಿದ್ದಾರೆ. ಕಲಾಪದಲ್ಲಿ ‘ಚುನಾವಣೆ ಅಜೆಂಡಾ’ ಇಟ್ಟುಕೊಳ್ಳಬಾರದು. ಅಧಿವೇಶನ ‘ಮತ ಗಳಿಕೆಗೆ ಗುರಾಣಿ’ ಆಗಿರುವುದು ದುರದೃಷ್ಟಕರ. ರಾಷ್ಟ್ರೀಯ ಪಕ್ಷಗಳ ರಕ್ಕಸ ರಾಜಕಾರಣಕ್ಕೆ ಇದು ನಿದರ್ಶನ ಎಂದು ಟ್ವೀಟ್ ಮೂಲಕ ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಾಜಿ ಸಿಎಂ ಕುಮಾರಸ್ವಾಮಿರ ಟ್ವೀಟ್ ಈ ರೀತಿ ಇದೆ
“ಪ್ರಜೆಗಳಿಂದ, ಪ್ರಜೆಗಳಿಗಾಗಿ, ಪ್ರಜೆಗಳಿಗೋಸ್ಕರ ಇರುವುದೇ ಪ್ರಜಾಪ್ರಭುತ್ವ.”
ಅಮೆರಿಕದ ಮಾಜಿ ಅಧ್ಯಕ್ಷ ಅಬ್ರಾಹಂ ಲಿಂಕನ್ ಹೇಳಿದ ಈ ಮಾತು ಪ್ರಜಾಸತ್ತೆಯನ್ನು ಗೌರವಿಸುವ ಪ್ರತಿ ವ್ಯಕ್ತಿಗೂ ದಾರಿದೀಪ. ಆದರೆ, ಇವತ್ತು ಪ್ರಜಾಪ್ರಭುತ್ವವೆಂದರೆ; “ರಾಜಕೀಯದಿಂದ, ರಾಜಕೀಯಕ್ಕಾಗಿ, ರಾಜಕೀಯಕ್ಕೊಸ್ಕರವೇ” ಎನ್ನುವಂತಾಗಿದೆ.
“ಪ್ರಜೆಗಳಿಂದ, ಪ್ರಜೆಗಳಿಗಾಗಿ, ಪ್ರಜೆಗಳಿಗೋಸ್ಕರ ಇರುವುದೇ ಪ್ರಜಾಪ್ರಭುತ್ವ.”
ಅಮೆರಿಕದ ಮಾಜಿ ಅಧ್ಯಕ್ಷ ಅಬ್ರಾಹಂ ಲಿಂಕನ್ ಹೇಳಿದ ಈ ಮಾತು ಪ್ರಜಾಸತ್ತೆಯನ್ನು ಗೌರವಿಸುವ ಪ್ರತಿ ವ್ಯಕ್ತಿಗೂ ದಾರಿದೀಪ. ಆದರೆ, ಇವತ್ತು ಪ್ರಜಾಪ್ರಭುತ್ವವೆಂದರೆ; “ರಾಜಕೀಯದಿಂದ, ರಾಜಕೀಯಕ್ಕಾಗಿ, ರಾಜಕೀಯಕ್ಕೊಸ್ಕರವೇ” ಎನ್ನುವಂತಾಗಿದೆ. 1/6
— H D Kumaraswamy (@hd_kumaraswamy) February 18, 2022
ಕಳೆದೆರಡು ದಿನಗಳ ವಿಧಾನಮಂಡಲ ಕಲಾಪ ʼರಾಜಕೀಯ ಪ್ರತಿಷ್ಠೆʼಗೆ ಆಹುತಿಯಾಗಿದೆ. ಬೆಳಗಾವಿ ಕಲಾಪವನ್ನು ಬಲಿ ಪಡೆದ ಮೇಲೂ ರಾಜ್ಯಪಾಲರ ಭಾಷಣದ ಮೇಲೆ ಅಮೂಲ್ಯ ಚರ್ಚೆ ನಡೆಸಬೇಕಿದ್ದ ಈ ಸದನಕ್ಕೂ ಅದೇ ಚಾಳಿ ವಕ್ಕರಿಸಿದೆ.
ʼಪ್ರಜಾಪ್ರಭುತ್ವಕ್ಕೆ ಗ್ರಹಣʼ ಹಿಡಿಸುವ ಕೆಲಸ ನಡೆದಿದೆ.
ಕಳೆದೆರಡು ದಿನಗಳ ವಿಧಾನಮಂಡಲ ಕಲಾಪ ʼರಾಜಕೀಯ ಪ್ರತಿಷ್ಠೆʼಗೆ ಆಹುತಿಯಾಗಿದೆ. ಬೆಳಗಾವಿ ಕಲಾಪವನ್ನು ಬಲಿ ಪಡೆದ ಮೇಲೂ ರಾಜ್ಯಪಾಲರ ಭಾಷಣದ ಮೇಲೆ ಅಮೂಲ್ಯ ಚರ್ಚೆ ನಡೆಸಬೇಕಿದ್ದ ಈ ಸದನಕ್ಕೂ ಅದೇ ಚಾಳಿ ವಕ್ಕರಿಸಿದೆ.
ʼಪ್ರಜಾಪ್ರಭುತ್ವಕ್ಕೆ ಗ್ರಹಣʼ ಹಿಡಿಸುವ ಕೆಲಸ ನಡೆದಿದೆ. 2/6— H D Kumaraswamy (@hd_kumaraswamy) February 18, 2022
ಹತ್ತು ನಿಮಿಷ ಧರಣಿ, ಆಮೇಲೆ ಕಲಾಪ ಮುಂದೂಡುವುದು; ಸದನ ನಡೆಯುವ ರೀತಿ ಇದೇನಾ? ಯಾವ ಪುರುಷಾರ್ಥಕ್ಕೆ ಈ ಅಧಿವೇಶನ? ದಿನಕ್ಕೆ1.5-2 ಕೋಟಿ ರೂ.ನಷ್ಟು ಪೋಲಾಗುವ ಜನರ ತೆರಿಗೆ ಹಣಕ್ಕೆ ಉತ್ತರದಾಯಿತ್ವ ಯಾರದ್ದು? ಅವರ ನಿರೀಕ್ಷೆಗಳನ್ನು ʼಕಾಲ ಕಸʼ ಮಾಡಿಕೊಂಡ ರಾಜಕೀಯ ಪ್ರತಿಷ್ಠೆಗೆ ಕೊನೆ ಇಲ್ಲವೆ?
ಹತ್ತು ನಿಮಿಷ ಧರಣಿ, ಆಮೇಲೆ ಕಲಾಪ ಮುಂದೂಡುವುದು; ಸದನ ನಡೆಯುವ ರೀತಿ ಇದೇನಾ? ಯಾವ ಪುರುಷಾರ್ಥಕ್ಕೆ ಈ ಅಧಿವೇಶನ? ದಿನಕ್ಕೆ1.5-2 ಕೋಟಿ ರೂ.ನಷ್ಟು ಪೋಲಾಗುವ ಜನರ ತೆರಿಗೆ ಹಣಕ್ಕೆ ಉತ್ತರದಾಯಿತ್ವ ಯಾರದ್ದು? ಅವರ ನಿರೀಕ್ಷೆಗಳನ್ನು ʼಕಾಲ ಕಸʼ ಮಾಡಿಕೊಂಡ ರಾಜಕೀಯ ಪ್ರತಿಷ್ಠೆಗೆ ಕೊನೆ ಇಲ್ಲವೆ? 3/6
— H D Kumaraswamy (@hd_kumaraswamy) February 18, 2022
ಕೋವಿಡ್ʼನಿಂದ ಎರಡು ವರ್ಷ ಮಕ್ಕಳ ಶಿಕ್ಷಣ ಹಾಳಾಯಿತು. ಈಗ ಹಿಜಾಬ್, ಕೇಸರಿ ಶಾಲು ಗಲಾಟೆಯಿಂದ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ನಡುವೆಯೇ ಸಂಘರ್ಷದ ವಾತಾವರಣ ಸೃಷ್ಟಿಯಾಗಿದೆ. ಇದಕ್ಕೆ ಹೊಣೆ ಯಾರು? ಸಮಾಜಘಾತುಕ ಶಕ್ತಿಗಳನ್ನು ಹತ್ತಿಕ್ಕುವ ಜವಾಬ್ದಾರಿ ರಾಜಕೀಯ ಪಕ್ಷಗಳಿಗೆ ಇಲ್ಲವೇ?
ಕೋವಿಡ್ʼನಿಂದ ಎರಡು ವರ್ಷ ಮಕ್ಕಳ ಶಿಕ್ಷಣ ಹಾಳಾಯಿತು. ಈಗ ಹಿಜಾಬ್, ಕೇಸರಿ ಶಾಲು ಗಲಾಟೆಯಿಂದ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ನಡುವೆಯೇ ಸಂಘರ್ಷದ ವಾತಾವರಣ ಸೃಷ್ಟಿಯಾಗಿದೆ. ಇದಕ್ಕೆ ಹೊಣೆ ಯಾರು? ಸಮಾಜಘಾತುಕ ಶಕ್ತಿಗಳನ್ನು ಹತ್ತಿಕ್ಕುವ ಜವಾಬ್ದಾರಿ ರಾಜಕೀಯ ಪಕ್ಷಗಳಿಗೆ ಇಲ್ಲವೇ? 4/6
— H D Kumaraswamy (@hd_kumaraswamy) February 18, 2022
ಕಲಾಪಕ್ಕೆ ʼಜನಪರ ಅಜೆಂಡಾʼ ಇರಬೇಕೆ ವಿನಾ ʼಚುನಾವಣೆ ಅಜೆಂಡಾʼ ಅಲ್ಲ. ರಾಷ್ಟ್ರೀಯ ಪಕ್ಷಗಳಿಗೆ ಅಧಿವೇಶನವು ʼಮತ ಗಳಿಕೆಗೆ ಗುರಾಣಿʼ ಆಗಿರುವುದು ದುರದೃಷ್ಟಕರ. ತಮ್ಮ ಪ್ರತಿಷ್ಠೆಗೆ ಕಲಾಪವನ್ನು ಹಳಿತಪ್ಪಿಸಿ ಜನರ ನಿರೀಕ್ಷೆಗಳನ್ನು ಹೊಸಕಿ ಹಾಕುವುದು ʼರಾಷ್ಟ್ರೀಯ ಪಕ್ಷಗಳ ರಕ್ಕಸ ರಾಜಕಾರಣʼಕ್ಕೆ ನಿದರ್ಶನ ಎನ್ನುವುದು ನನ್ನ ಅಭಿಪ್ರಾಯ.
ಕಲಾಪಕ್ಕೆ ʼಜನಪರ ಅಜೆಂಡಾʼ ಇರಬೇಕೆ ವಿನಾ ʼಚುನಾವಣೆ ಅಜೆಂಡಾʼ ಅಲ್ಲ. ರಾಷ್ಟ್ರೀಯ ಪಕ್ಷಗಳಿಗೆ ಅಧಿವೇಶನವು ʼಮತ ಗಳಿಕೆಗೆ ಗುರಾಣಿʼ ಆಗಿರುವುದು ದುರದೃಷ್ಟಕರ. ತಮ್ಮ ಪ್ರತಿಷ್ಠೆಗೆ ಕಲಾಪವನ್ನು ಹಳಿತಪ್ಪಿಸಿ ಜನರ ನಿರೀಕ್ಷೆಗಳನ್ನು ಹೊಸಕಿ ಹಾಕುವುದು ʼರಾಷ್ಟ್ರೀಯ ಪಕ್ಷಗಳ ರಕ್ಕಸ ರಾಜಕಾರಣʼಕ್ಕೆ ನಿದರ್ಶನ ಎನ್ನುವುದು ನನ್ನ ಅಭಿಪ್ರಾಯ. 5/6
— H D Kumaraswamy (@hd_kumaraswamy) February 18, 2022
ಜನರು ಕಷ್ಟದಲ್ಲಿದ್ದಾರೆ. ಕೋವಿಡ್ʼನಿಂದ ಅವರ ಬದಕಿನ ಬವಣೆ ಹೆಚ್ಚಿ ರೋಸಿ ಹೋಗಿದ್ದಾರೆ. ಅವರು ರೊಚ್ಚಿಗೇಳುವ ಮುನ್ನ ಆಡಳಿತಾರೂಢ ಬಿಜೆಪಿ & ಅಧಿಕೃತ ಪ್ರತಿಪಕ್ಷ ಕಾಂಗ್ರೆಸ್ ಎಚ್ಚೆತ್ತುಕೊಂಡು ತಮ್ಮ ಜನವಿರೋಧಿ ನೀತಿ ಬದಲಿಸಿಕೊಳ್ಳಬೇಕು.
ವಿಧಾನ ಕಲಾಪಕ್ಕೆ ಕುಣಿಕೆ ಬಿಗಿಯುವ ಹೀನ ರಾಜಕಾರಣ ನಿಲ್ಲಲಿ.
ಜನರು ಕಷ್ಟದಲ್ಲಿದ್ದಾರೆ. ಕೋವಿಡ್ʼನಿಂದ ಅವರ ಬದಕಿನ ಬವಣೆ ಹೆಚ್ಚಿ ರೋಸಿ ಹೋಗಿದ್ದಾರೆ. ಅವರು ರೊಚ್ಚಿಗೇಳುವ ಮುನ್ನ ಆಡಳಿತಾರೂಢ ಬಿಜೆಪಿ & ಅಧಿಕೃತ ಪ್ರತಿಪಕ್ಷ ಕಾಂಗ್ರೆಸ್ ಎಚ್ಚೆತ್ತುಕೊಂಡು ತಮ್ಮ ಜನವಿರೋಧಿ ನೀತಿ ಬದಲಿಸಿಕೊಳ್ಳಬೇಕು.
ವಿಧಾನ ಕಲಾಪಕ್ಕೆ ಕುಣಿಕೆ ಬಿಗಿಯುವ ಹೀನ ರಾಜಕಾರಣ ನಿಲ್ಲಲಿ. 6/6
— H D Kumaraswamy (@hd_kumaraswamy) February 18, 2022
Published On - 9:40 am, Fri, 18 February 22