ಆಸ್ಪತ್ರೆಯಿಂದ ಡಿಸ್ಚಾರ್ಜ್‌, ಚೆನ್ನೈನಿಂದ ಬೆಂಗಳೂರಿಗೆ ಬಂದಿಳಿದ ಕುಮಾರಸ್ವಾಮಿ ಹೇಳಿದ್ದೇನು?

ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಹೃದಯ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿರುವ ಮಾಜಿ ಮುಖ್ಯಮಂತ್ರಿ ಎಚ್​ಡಿ ಕುಮಾರಸ್ವಾಮಿಯಿಂದ ಇಂದು ಡಿಸ್ಚಾರ್ಜ್ ಆಗಿದ್ದಾರೆ. ವಿಶೇಷ ವಿಮಾನದಲ್ಲಿ ಚೆನ್ನೈನಿಂದ ಬೆಂಗಳೂರಿಗೆ ಬಂದಿಳಿದಿದ್ದಾರೆ. ಇನ್ನು ಈ ವೇಳೆ ಮಾಧ್ಯಮಗಳ ಜೊತೆ ಅನೇಕ ವಿಚಾರಗಳ ಬಗ್ಗೆ ಮಾತನಾಡಿದ್ದು, ಅದು ಈ ಕೆಳಗಿನಂತಿದೆ.

ಆಸ್ಪತ್ರೆಯಿಂದ ಡಿಸ್ಚಾರ್ಜ್‌, ಚೆನ್ನೈನಿಂದ ಬೆಂಗಳೂರಿಗೆ ಬಂದಿಳಿದ ಕುಮಾರಸ್ವಾಮಿ ಹೇಳಿದ್ದೇನು?
ಹೆಚ್​.ಡಿ.ಕುಮಾರಸ್ವಾಮಿ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Mar 24, 2024 | 10:52 AM

ಬೆಂಗಳೂರು, (ಮಾರ್ಚ್ 24): ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಅವರು ಚೆನ್ನೈ ಆಸ್ಪತ್ರೆಯಿಂದ (Hospital) ಡಿಸ್ಚಾರ್ಜ್‌ ಆಗಿದ್ದಾರೆ. ಹೃದಯದ ಶಸ್ತ್ರಚಿಕಿತ್ಸೆಗಾಗಿ ಅಪೋಲೋ ಆಸ್ಪತ್ರೆಗೆ (Apollo Hospital) ದಾಖಲಾಗಿದ್ದ ಕುಮಾರಸ್ವಾಮಿ ಇಂದು(ಮಾರ್ಚ್ 24) ವಿಶೇಷ ವಿಮಾನದ ಮೂಲಕ ಚೆನ್ನೈನಿಂದ ಬೆಂಗಳೂರಿನ ಹೆಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಎಚ್​ಡಿಕೆ, ಇದೊಂದು ಪುನರ್ಜನ್ಮ ಎಂದೇ ಹೇಳಬಹುದು. ನಾಡಿನಾದ್ಯಂತ ಅಭಿಮಾನಿಗಳು ಪ್ರಾರ್ಥನೆಯನ್ನ ಸಲ್ಲಿಸಿದ್ರು. ಅಭಿಮಾನಿಗಳು, ಹಿತೈಷಿಗಳ ಪ್ರಾರ್ಥನೆ ಫಲ ಕೊಟ್ಟಿದೆ. ಸಾಯಿ ಬಾಬಾ ಬಂದು ಆಪರೇಷನ್​ ಮಾಡಿದ್ದಾರೆ ಅಂದ್ರು. ಸ್ವತಃ ವೈದ್ಯರೇ ಆ ಮಾತನ್ನು ಹೇಳಿದ್ದಾರೆ. ಇನ್ನು ಮೂರ್ನಾಲ್ಕು ದಿನಗಳ ಕಾಲ ವಿಶ್ರಾಂತಿ ಮಾಡುತ್ತೇನೆ ಎಂದು ಹೇಳಿದರು.

ಎರಡು ಬಾರಿ ಲೋಪದೋಷ ಆಗಿತ್ತು. ಭಗವಂತ ಕಾಪಾಡಿದ್ದಾನೆ. ಮೂರನೇ ಬಾರಿ ಹೃದಯ ಶಸ್ತ್ರ ಚಿಕಿತ್ಸೆ ಆಗಿದೆ. ಮನುಷ್ಯ ಹಲವಾರು ರೀತಿ ತಾಂತ್ರಿಕವಾಗಿ ಮುಂದುವರೆದಿದ್ದಾರೆ. ನಾಡಿನಾದ್ಯಂತ ಅಭಿಮಾನಿ ಹಿತೈಷಿಗಳು ದೇವರಿಗೆ ಪ್ರಾರ್ಥನೆ ಮಾಡಿದಾರೆ. ಅವರ ಪ್ರಾರ್ಥನೆ ಫಲ ಕೊಟ್ಟಿದೆ. ವೈದ್ಯರು ಸುಧೀರ್ಘವಾಗಿ ಚರ್ಚೆ ಮಾಡಿದ್ದಾರೆ. ವೈದ್ಯರು ಸಾಯಿಬಾಬಾ ಭಕ್ತರು. ಸಾಯಿಬಾಬನಿಗೆ ಪೂಜೆ ಸಲ್ಲಿಸಿ ಬಂದು ಶಸ್ತ್ರ ಚಿಕಿತ್ಸೆ ಮಾಡಿದ್ದಾರೆ. ಮತ್ತೊರ್ವ ವೈದ್ಯ ಹಂಗೇರಿಯಾದವರು ನನಗೆ ಮರುಜನ್ಮ ನೀಡಿದ್ದಾರೆ. ನನ್ನ ಕೈಲಾದ ರೀತಿ ಚುನಾವಣೆ ಪ್ರಚಾರದಲ್ಲಿ ತೊಡಗುತ್ತೇನೆ. ಮೂರ್ನಾಲ್ಕು ದಿನಗಳ ಕಾಲ ರೆಸ್ಟ್ ಮಾಡುತ್ತೇನೆ. ಮಂಡ್ಯ ಅಭ್ಯರ್ಥಿ ಮೂರ್ನಾಲ್ಕು ದಿನದಲ್ಲಿ ಫೈನಲ್ ಆಗತ್ತೆ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಮಂಡ್ಯ ಗೆಲ್ಲಲು ಸಂಧಾನ ಸೂತ್ರಕ್ಕೆ ಮೊರೆ ಹೋದ ದಳಪತಿಗಳು; ಸಮನ್ವಯತೆ ಸಾಧಿಸಲು ಸರ್ಕಸ್

ಕೇಂದ್ರದ ಸರ್ಕಾರದಿಂದ ಬರಬೇಕಾದ ತೆರಿಗೆ ಕೊಡಿಸುವಂತೆ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್​ಗೆ ಹೊಗುವ ಬಗ್ಗೆ ಕುಮಾರಸ್ವಾಮಿ ಮಾತನಾಡಿ, ಸಿಎಂ ಸಿದ್ದರಾಮಯ್ಯರದ್ದು ಎಲ್ಲಾ ಸ್ಟಂಟ್‌, ಸ್ಟಂಟ್‌ ಬಿಟ್ಟು ಕೆಲಸ ಮಾಡಲಿ. ಸುಪ್ರೀಂಗೆ ಹೋಗ್ತೀನಿ, ನಮ್ಮ ದುಡ್ಡು ನಮ್ಮ ತೆರಿಗೆ ಎನ್ನುವುದು ಡ್ರಾಮಾ ಎಂದು ಟಾಂಗ್ ಕೊಟ್ಟರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:41 am, Sun, 24 March 24

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್