AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

“ಎಷ್ಟೇ ಖರ್ಚಾದ್ರೂ ನನ್ನದೇ ಜವಾಬ್ದಾರಿ, ಮಗು ಆಟವಾಡುವಂತಾಗಬೇಕು”: ವೈದ್ಯರ ಲೋಪದಿಂದ ನರಳುತ್ತಿದ್ದ ಮಗುವಿಗೆ ಹೆಚ್.ಡಿ. ಕುಮಾರಸ್ವಾಮಿ ಅಭಯ

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಬೆಂಗಳೂರಿನ ಆಸ್ಪತ್ರೆಯೊಂದಕ್ಕೆ ಭೇಟಿ ನೀಡಿ, ವೈದ್ಯಕೀಯ ನಿರ್ಲಕ್ಷ್ಯದಿಂದ ತೀವ್ರ ಅಸ್ವಸ್ಥಗೊಂಡ ಮಗುವಿನ ಪೋಷಕರಿಗೆ ಧೈರ್ಯ ತುಂಬಿದರು. ಚಿಕಿತ್ಸೆಗೆ ಎಷ್ಟೇ ಖರ್ಚಾದರೂ ಅದನ್ನು ತಾವೇ ವಹಿಸಿಕೊಳ್ಳುವುದಾಗಿ ಭರವಸೆ ನೀಡಿದರು. ವೈದ್ಯರೊಂದಿಗೆ ಸಮಾಲೋಚಿಸಿ, ಮಗುವಿನ ಆರೋಗ್ಯ ಸುಧಾರಣೆಗೆ ಆದ್ಯತೆ ನೀಡುವಂತೆ ಸೂಚಿಸಿದರು. ಆರಂಭದಲ್ಲಿ ವೈದ್ಯರು ಸರಿಯಾಗಿ ಮಾಹಿತಿ ನೀಡದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು.

ಎಷ್ಟೇ ಖರ್ಚಾದ್ರೂ ನನ್ನದೇ ಜವಾಬ್ದಾರಿ, ಮಗು ಆಟವಾಡುವಂತಾಗಬೇಕು: ವೈದ್ಯರ ಲೋಪದಿಂದ ನರಳುತ್ತಿದ್ದ ಮಗುವಿಗೆ ಹೆಚ್.ಡಿ. ಕುಮಾರಸ್ವಾಮಿ ಅಭಯ
ಹೆಚ್​​ಡಿ ಕುಮಾರ್​​ಸ್ವಾಮಿ Image Credit source: Tv9 kannada
ಸುನಿಲ್​ ಎಮ್​ ಹೆಚ್​
| Edited By: |

Updated on: Nov 09, 2026 | 7:37 PM

Share

ಬೆಂಗಳೂರು, ನ.9: “ಕಳೆದ ಮೂರು ತಿಂಗಳಿನಿಂದ ಕಂದಮ್ಮ ಆಸ್ಪತ್ರೆಯಲ್ಲಿ ನರಳುತ್ತಿರುವುದು ಅತ್ಯಂತ ನೋವಿನ ಸಂಗತಿ. ವೈದ್ಯರ ನಿರ್ಲಕ್ಷ್ಯವೋ ಅಥವಾ ಔಷಧಿಯ ವ್ಯತ್ಯಾಸವೋ ಗೊತ್ತಿಲ್ಲ, ಆದರೆ ಮಗು ಸಂಪೂರ್ಣವಾಗಿ ಗುಣಮುಖವಾಗಿ ಮುಂಚಿನಂತೆ ಆಟವಾಡುವಂತಾಗಬೇಕು. ಚಿಕಿತ್ಸೆಗೆ ಎಷ್ಟೇ ಖರ್ಚಾಗಲಿ, ಅದರ ಸಂಪೂರ್ಣ ಜವಾಬ್ದಾರಿ ನನ್ನದೇ” ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಭರವಸೆ ನೀಡಿದ್ದಾರೆ. ಆಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆಯ ಲೋಪದಿಂದಾಗಿ ಮಗುವಿನ ಆರೋಗ್ಯ ಪರಿಸ್ಥಿತಿ ಗಂಭೀರಗೊಂಡಿದೆ ಎಂಬ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ, ಹೆಚ್‌ಡಿಕೆ ಆಸ್ಪತ್ರೆಗೆ ಭೇಟಿ ನೀಡಿ ಮಗುವಿನ ಪೋಷಕರಿಗೆ ಧೈರ್ಯ ತುಂಬಿ ಆಸ್ಪತ್ರೆ ವೈದ್ಯರೊಂದಿಗೆ ಸಮಾಲೋಚನೆ ನಡೆಸಿದರು. ಈ ಪ್ರಕರಣದ ಬಗ್ಗೆ ಮೂರು -ನಾಲ್ಕು ದಿನದಿಂದ ಸಾಮಾಜಿಕ ಕಜಾಲತಾಣದಲ್ಲೂ ಭಾರೀ ಚರ್ಚೆಗಳು ನಡೆಯುತ್ತಿತ್ತು. ಹೆಚ್​​​ಡಿ ಕುಮಾರಸ್ವಾಮಿ ಕೂಡ ಮಾಧ್ಯಮಗಳ ಮೂಲಕ ಆಸ್ಪತ್ರೆಗೆ ಎಚ್ಚರಿಕೆಯನ್ನು ನೀಡಿದರು. ಇದೀಗ ಸ್ವತಃ ತಾವೇ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

ಆಸ್ಪತ್ರೆ ಭೇಟಿ ನೀಡಿದ ನಂತರ ಹೆಚ್​​​ಡಿ ಕುಮಾರ್​​ ಸ್ವಾಮಿ ಮಾಧ್ಯಗಳೊಂದಿಗೆ ಮಾತನಾಡಿದ್ದಾರೆ. “ಪೋಷಕರ ದುಃಖ ಮತ್ತು ಆಕ್ರೋಶವನ್ನು ಕಂಡು ಕಣ್ಣೀರು ಬರುತ್ತದೆ. ಈ ಹಂತದಲ್ಲಿ ಯಾರನ್ನೂ ದೂಷಿಸುವ ಸಮಯ ಇದಲ್ಲ. ಮಗುವಿನ ಜೀವಕ್ಕೆ ಯಾವುದೇ ಅಪಾಯವಿಲ್ಲ ಎಂದು ಹೊರಗಿನ ವೈದ್ಯರೊಂದಿಗೂ ಮಾತುಕತೆ ನಡೆಸಿ ಖಾತರಿಪಡಿಸಿಕೊಂಡಿದ್ದೇನೆ. ಮಗುವಿನ ಚಿಕಿತ್ಸೆಗೆ ಎಷ್ಟೇ ವೆಚ್ಚವಾದರೂ ಅದನ್ನು ನಾನು ವಹಿಸಿಕೊಳ್ಳುತ್ತೇನೆ. ಮಗುವಿಗೆ ಅಗತ್ಯಬಿದ್ದರೆ ಹೊರಗಿನಿಂದ ಉನ್ನತ ವೈದ್ಯರನ್ನು ಕರೆಯಿಸಿ ಚಿಕಿತ್ಸೆ ಕೊಡಿಸಲು ಹೇಳಿದ್ದೇನೆ. ಮಗುವಿಗೆ ಪ್ರತ್ಯೇಕ ವಿಶೇಷ ಕೊಠಡಿಯ ವ್ಯವಸ್ಥೆ ಮಾಡಲು ಆಸ್ಪತ್ರೆ ಆಡಳಿತ ಮಂಡಳಿಗೆ ಮನವಿ ಮಾಡಿದ್ದು, ಅವರು ಒಪ್ಪಿಕೊಂಡಿದ್ದಾರೆ.” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸರ್ಕಾರದ ಯೋಜನೆ ಉಚಿತವಾದ್ರೆ ಬೆಲೆ ಏರಿಕೆ ಖಚಿತ: ಹೈಕೋರ್ಟ್ ಅಸಮಾಧಾನ; ಆಡಳಿತ ವೈಫಲ್ಯಕ್ಕೆ ಹಿಡಿದ ಕನ್ನಡಿ ಎಂದ ಜೆಡಿಎಸ್​

“ಆರಂಭದಲ್ಲೇ ವೈದ್ಯರು ಪೋಷಕರಿಗೆ ಸರಿಯಾಗಿ ಮಾಹಿತಿ ನೀಡಿ ಧೈರ್ಯ ತುಂಬಿದ್ದರೆ ಈ ರೀತಿ ಗೊಂದಲ ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗುತ್ತಿರಲಿಲ್ಲ. ಈಗ ಸಂಘರ್ಷಕ್ಕೆ ಇಳಿಯುವುದಕ್ಕಿಂತ ಮಗುವನ್ನು ಗುಣಪಡಿಸುವುದು ನಮಗೆ ಮುಖ್ಯ” ಎಂದು ಕುಮಾರಸ್ವಾಮಿ ಹೇಳಿದರು. ವೈದ್ಯರು ಕೂಡ ಮಗುವಿನ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ ಎಂದು ಭರವಸೆ ನೀಡಿದ್ದು, ತಕ್ಷಣವೇ ಮಗು ಸರಿಹೋಗುವಂತೆ ಉತ್ತಮ ಚಿಕಿತ್ಸೆ ಮುಂದುವರಿಸುವುದಾಗಿ ತಿಳಿಸಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುನಿಲ್​ ಎಮ್​ ಹೆಚ್​
ಸುನಿಲ್​ ಎಮ್​ ಹೆಚ್​
ಇಡೀ ರಾಜ್ಯದ ಮಹಿಳೆಯರಿಗಿದೆ 'ಉಚಿತ ಬಸ್', ನಮಗೇಕಿಲ್ಲ?
ಇಡೀ ರಾಜ್ಯದ ಮಹಿಳೆಯರಿಗಿದೆ 'ಉಚಿತ ಬಸ್', ನಮಗೇಕಿಲ್ಲ?
ಸ್ಟಿಂಗ್ ಆಪರೇಷನ್: CCB ವಿಚಾರಣೆಗೆ ಬಂದ ಕೃಪಾ ಆಳ್ವಾ; ವಕೀಲೆ ಹೇಳಿದ್ದೇನು?
ಸ್ಟಿಂಗ್ ಆಪರೇಷನ್: CCB ವಿಚಾರಣೆಗೆ ಬಂದ ಕೃಪಾ ಆಳ್ವಾ; ವಕೀಲೆ ಹೇಳಿದ್ದೇನು?
ರಾಜ್ಯ ಸರ್ಕಾರ ಮತ್ತು ರಾಜಮನೆತನದ ನಡುವಿನ ಸಂಘರ್ಷಕ್ಕೆ ಯದುವೀರ್ ರಿಯಾಕ್ಷನ್
ರಾಜ್ಯ ಸರ್ಕಾರ ಮತ್ತು ರಾಜಮನೆತನದ ನಡುವಿನ ಸಂಘರ್ಷಕ್ಕೆ ಯದುವೀರ್ ರಿಯಾಕ್ಷನ್
ಸ್ಪರ್ಧಿಗಳಿಗೆ ಹೊರಗಿನ ವಿಷಯ ರಿವೀಲ್ ಮಾಡಿದ ಮಂಜು; ಇಡೀ ಮನೆ ಅಲ್ಲೋಲ ಕಲ್ಲೋಲ
ಸ್ಪರ್ಧಿಗಳಿಗೆ ಹೊರಗಿನ ವಿಷಯ ರಿವೀಲ್ ಮಾಡಿದ ಮಂಜು; ಇಡೀ ಮನೆ ಅಲ್ಲೋಲ ಕಲ್ಲೋಲ
ಮಂಡ್ಯದ ಚಿನಕುರಳಿ ಗ್ರಾಮದಲ್ಲಿ ಭೀಕರ ಅಗ್ನಿ ಅವಘಡ; ಭಸ್ಮವಾದ ಮೂರು ಅಂಗಡಿಗಳು
ಮಂಡ್ಯದ ಚಿನಕುರಳಿ ಗ್ರಾಮದಲ್ಲಿ ಭೀಕರ ಅಗ್ನಿ ಅವಘಡ; ಭಸ್ಮವಾದ ಮೂರು ಅಂಗಡಿಗಳು
ನವೆಂಬರ್ 13ರಂದು ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ
ನವೆಂಬರ್ 13ರಂದು ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ
ಶಾಸಕ ಜನಾರ್ದನ ರೆಡ್ಡಿಗೆ ಶಾಕ್​​ ಕೊಟ್ಟ ಬಳ್ಳಾರಿ ಜಿಲ್ಲಾಡಳಿತ
ಶಾಸಕ ಜನಾರ್ದನ ರೆಡ್ಡಿಗೆ ಶಾಕ್​​ ಕೊಟ್ಟ ಬಳ್ಳಾರಿ ಜಿಲ್ಲಾಡಳಿತ
ಹಾಸನಾಂಬೆಯ ದರ್ಶನ ಪಡೆದ ಪ್ರಿಯಾ; ಅತ್ತೆ ಸಂಪ್ರದಾಯ ಮುಂದುವರಿಸಿದ ಸೊಸೆ
ಹಾಸನಾಂಬೆಯ ದರ್ಶನ ಪಡೆದ ಪ್ರಿಯಾ; ಅತ್ತೆ ಸಂಪ್ರದಾಯ ಮುಂದುವರಿಸಿದ ಸೊಸೆ
ಮಗು ಶಯಾನ ಕೋಮಾ ಪ್ರಕರಣ: ನಿರ್ಲಕ್ಷ್ಯ ಆರೋಪ ತಳ್ಳಿಹಾಕಿದ ಆಸ್ಪತ್ರೆ
ಮಗು ಶಯಾನ ಕೋಮಾ ಪ್ರಕರಣ: ನಿರ್ಲಕ್ಷ್ಯ ಆರೋಪ ತಳ್ಳಿಹಾಕಿದ ಆಸ್ಪತ್ರೆ
ಸ್ಟಿಂಗ್ ಕೇಸ್: ವಿಚಾರಣೆಗೆ ಹಾಜರಾಗುವಂತೆ ಕೃಪಾ ಆಳ್ವಾಗೆ ಸಿಸಿಬಿ ನೋಟಿಸ್
ಸ್ಟಿಂಗ್ ಕೇಸ್: ವಿಚಾರಣೆಗೆ ಹಾಜರಾಗುವಂತೆ ಕೃಪಾ ಆಳ್ವಾಗೆ ಸಿಸಿಬಿ ನೋಟಿಸ್