ಯುವಕನ ಹತ್ಯೆ ವಿಚಾರದಲ್ಲಿ ಬಿಜೆಪಿ ಕಾಂಗ್ರೆಸ್ ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದೆ: ಹೆಚ್​ಡಿ ಕುಮಾರಸ್ವಾಮಿ ಆಕ್ರೋಶ

ರಾಜ್ಯಪಾಲರಿಗೆ ಮನವಿ ಮಾಡುತ್ತೇನೆ ತಕ್ಷಣ ನೀವು ಮಧ್ಯಪ್ರವೇಶ ಮಾಡಿ ಈ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಕೇಳಿಕೊಳ್ಳುತ್ತೇನೆ. ನಾನು ಕೂಡ ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಮಾಡುತ್ತೇನೆ ಎಂದು ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.

ಯುವಕನ ಹತ್ಯೆ ವಿಚಾರದಲ್ಲಿ ಬಿಜೆಪಿ ಕಾಂಗ್ರೆಸ್ ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದೆ: ಹೆಚ್​ಡಿ ಕುಮಾರಸ್ವಾಮಿ ಆಕ್ರೋಶ
ಹೆಚ್​​ ಡಿ ಕುಮಾರಸ್ವಾಮಿ
Follow us
TV9 Web
| Updated By: ganapathi bhat

Updated on:Feb 22, 2022 | 6:42 PM

ಬೆಂಗಳೂರು: ಕಾಂಗ್ರೆಸ್ ಹಾಗೂ ಬಿಜೆಪಿ ಈ ಎರಡು ರಾಷ್ಟ್ರೀಯ ಪಕ್ಷಗಳ ನಡವಳಿಕೆ ನೋಡುತ್ತಿದ್ದರೆ ಕರ್ನಾಟಕ ರಾಜ್ಯದಲ್ಲಿ ಏನಾಗುತ್ತಿದೆ ಅನ್ನೋದು ಗೊತ್ತಾಗುತ್ತಿಲ್ಲ. ಬಿಜೆಪಿ ಕಾಂಗ್ರೆಸ್ ಪಕ್ಷಗಳು ಯುವಕನ ಹತ್ಯೆ ವಿಚಾರದಲ್ಲಿ ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದೆ. ಅಮಾಯಕ ಯುವಕ ಬಲಿಯಾಗಿದ್ದಾನೆ ಅದರಲ್ಲಿ ಇವರು ರಾಜಕಾರಣ ಮಾಡಲು ಹೊರಟಿದ್ದಾರೆ. ಸರ್ಕಾರದ ಸಚಿವರುಗಳು ಯುವಕನ ಹತ್ಯೆಯಲ್ಲಿ ಒಂದೊಂದು ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಕೊನೆಗೆ ಅಮಾಯಕರನ್ನು ಜೈಲಿಗೆ ಕಳುಹಿಸುತ್ತಾರೆ ಎಂದು ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್​.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ರಾಜ್ಯದ ಜನರ ಸಮಸ್ಯೆ ಎರಡು ರಾಷ್ಟ್ರೀಯ ಪಕ್ಷಗಳಿಗೆ ಬೇಕಾಗಿಲ್ಲ. ರಾಜ್ಯಪಾಲರಿಗೆ ಮನವಿ ಮಾಡುತ್ತೇನೆ ತಕ್ಷಣ ನೀವು ಮಧ್ಯಪ್ರವೇಶ ಮಾಡಿ ಈ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಕೇಳಿಕೊಳ್ಳುತ್ತೇನೆ. ನಾನು ಕೂಡ ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಮಾಡುತ್ತೇನೆ ಎಂದು ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.

ಎರಡು ರಾಷ್ಟ್ರೀಯ ಪಕ್ಷಗಳು ನೀನು ಹೊಡೆದ ಹಾಗೆ ಮಾಡು. ನಾವು ಹಾಗೆ ಮಾಡುತ್ತೇವೆ ಅನ್ನುತ್ತಾರೆ. ಸದನದ ಕಲಾಪವನ್ನು ನೋಡಿದರೆ ಯಾರು ಯಾರ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂದು ಗೊತ್ತಾಗುತ್ತದೆ. ರಾಜಕೀಯ ಬುಡಮೇಲು ಇದು. ಇಂತಹ ಗದ್ದಲದ ನಡುವೆ ನಾವೇನು ಚರ್ಚೆ ಮಾಡೋದು. ನಾನು ಕೂಡ ಮನವಿ ಮಾಡಿದೆ. ಸದನ ಸುಗಮವಾಗಿ ನಡೆಸಲು ಅವಕಾಶ ಕೊಡಿ ಎಂದು ಕೇಳಿದೆ. ಇಲ್ಲ ಅಂದ್ರೆ ಅಮಾನತು ಮಾಡಿ ಅಂತ. ಈ ಹಿಂದೆ ಬೆಳಗಾವಿಯಲ್ಲೂ ಮತಾಂತರ ನಿಷೇಧ ಬಿಲ್ ಅಂದು ಸದನ ಹಾಳು ಮಾಡಿದ್ರು ಎಂದು ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಶಿಕ್ಷಣದ ಕ್ಷೇತ್ರದಲ್ಲಿ ಆದ ಸಣ್ಣ ಘಟನೆ ದೊಡ್ಡ ಮಟ್ಟದಲ್ಲಿ ವ್ಯಾಪಿಸಿದೆ. ಅತ್ಯಂತ ಜವಬ್ದಾರಿಯುತ ಸ್ಥಾನದಲ್ಲಿ ಇದ್ದ ನಾವು ಸರ್ಕಾರದ ವೈಪಲ್ಯ ಹೇಳಿಬೇಕಿತ್ತು. ಶಿವಮೊಗ್ಗದಲ್ಲಿ ಕೊಲೆ ಘಟನೆ ನೋಡಿದ್ದೇವೆ. ಇದಕ್ಕೆಲ್ಲಾ ಕಾರಣ ಯಾರು ಅಂತ ವಿರೋಧ ಪಕ್ಷ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಬೇಕಿತ್ತು ಎಂದು ಹೇಳಿದ್ದಾರೆ.

ಸತ್ತಿರುವ ಆ ಯುವಕರ ಕುಟುಂಬ ಶ್ರೀಮಂತರ ಕುಟುಂಬ ಅಲ್ಲ. ಶ್ರಮಿಕ ವರ್ಗದ ಕುಟುಂಬಗಳು. ಎರಡು ರಾಷ್ಟ್ರೀಯ ಪಕ್ಷಗಳ ಚೆಲ್ಲಾಟವನ್ನು ಜನ ಅರ್ಥ ಮಾಡಿಕೊಳ್ಳಬೇಕು. ಆಗ ಬೆಸ್ತ ಸಮಾಜದ ಯುವಕ ಕೊಲೆಯಾಗ್ತಾನೆ. ಈಗ ಸಣ್ಣ ಸಮಾಜದ ಯುವಕ ಕೊಲೆಯಾಗ್ತಾನೆ. ಒಬ್ಬೊಬ್ಬರು ಒಂದೊಂದು ಕಥೆ ಹೇಳ್ತಾರೆ. ಒಬ್ಬರು, 12 ಜ‌ನ ಅರೆಸ್ಟ್ ಅಂತಾರೆ. ಇದನ್ನು ಎಷ್ಟು ದಿನ ಪ್ರಚಾರಕ್ಕೆ ಇಡ್ತೀರಾ. ಸತ್ಯಾಸತ್ಯತೆ ಯಾವಾಗ ಹೊರ ಬರೋದು. ಮರಣ ದಳ್ಳುರಿಯನ್ನು ಪ್ರಚಾರ ಮಾಡ್ತೀರಾ ಎಂದು ಕುಮಾರಸ್ವಾಮಿ ಕೇಳಿದ್ದಾರೆ.

ಸಿಎಎ ಘಟನೆಯಲ್ಲಿ ಮಂಗಳೂರಲ್ಲಿ ಇಬ್ಬರು ಮುಸ್ಲಿಂ ಯುವಕರ ಮೇಲೆ ಗುಂಡು ಹಾರಿಸಿದ್ರು. ನಂತರ 10 ಲಕ್ಷ ಹಣ ನೀಡಿ ಮತ್ತೆ ಗೂಂಡಾಗಳು ಅಂತ ಹೇಳಿದ್ರಿ. ಯಾವ ಸರಿಯಾದ ತನಿಖೆ ಜನರ ಮುಂದೆ ಇಟ್ಟಿದ್ದೀರಾ. ಡಿಜೆ ಹಳ್ಳಿಯಲ್ಲಿ ನಡೆದ ಘಟನೆ ಯಾರು ಕಾರಣ. ಅನೇಕ ಯುವಕರು ಈಗಲೂ ಜೈಲಿನಲ್ಲಿ‌ ಇದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಇದು ಟ್ರೇಲರ್! ನಿಮ್ಮ ಪಕ್ಷದ ಬೆಂಬಲಿಗನಿಗೇ ರಕ್ಷಣೆ ನೀಡಿಲ್ಲ, ಇನ್ನು ನೀವು ರಾಜ್ಯದ ಜನರಿಗೆ ರಕ್ಷಣೆ ಕೊಡುತ್ತೀರಾ? ಮಾಜಿ ಸಿಎಂ ಕುಮಾರಸ್ವಾಮಿ ಕಿಡಿ

ಇದನ್ನೂ ಓದಿ: ಹಿಜಾಬ್ ಕುರಿತ ನನ್ನ ಹೇಳಿಕೆ ತಿರುಚಲಾಗಿದೆ: ಚನ್ನಪಟ್ಟಣದಲ್ಲಿ ಎಚ್​ಡಿ ಕುಮಾರಸ್ವಾಮಿ ಸ್ಪಷ್ಟನೆ

Published On - 4:24 pm, Tue, 22 February 22

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್