ಚುನಾವಣೆ ಹತ್ತಿರ ಆಗುತ್ತಿದಂತೆ ಒಗ್ಗಟ್ಟಿನ ಪ್ರದರ್ಶನಕ್ಕೆ ಮುಂದಾದ ಹೆಚ್ಡಿ ಕುಮಾರಸ್ವಾಮಿ: ಶಾಸಕರೊಂದಿಗೆ ತಿಮ್ಮಪ್ಪನ ದರ್ಶನಕ್ಕೆ ತಯಾರಿ

ಈಗಾಗಲೆ ಶಾಸಕರು ಹಲವು ಭಾರಿ ಕುಮಾರಸ್ವಾಮಿ ಮೇಲೆ ಸಣ್ಣಪುಟ್ಟ ಅಸಮಾಧಾನ ಹೊರ ಹಾಕಿದ್ದಾರೆ. ಅಷ್ಟೇ ಅಲ್ಲದೆ ಜಿಟಿ ದೇವೆಗೌಡ, ಎಟಿ ರಾಮಸ್ವಾಮಿ, ಶಿವಲಿಂಗೆಗೌಡ ಪಕ್ಷದ‌ ಚಟುವಟಿಕೆಯಿಂದ ಅಂತರ ಕಾಯ್ದುಕೊಂಡಿದ್ದಾರೆ.

ಚುನಾವಣೆ ಹತ್ತಿರ ಆಗುತ್ತಿದಂತೆ ಒಗ್ಗಟ್ಟಿನ ಪ್ರದರ್ಶನಕ್ಕೆ ಮುಂದಾದ ಹೆಚ್ಡಿ ಕುಮಾರಸ್ವಾಮಿ: ಶಾಸಕರೊಂದಿಗೆ ತಿಮ್ಮಪ್ಪನ ದರ್ಶನಕ್ಕೆ ತಯಾರಿ
ಹೆಚ್​ ಡಿ ಕುಮಾರಸ್ವಾಮಿ, ಶಾಸಕ
Follow us
TV9 Web
| Updated By: ಆಯೇಷಾ ಬಾನು

Updated on: Aug 09, 2022 | 4:47 PM

ಬೆಂಗಳೂರು: ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ(HD Kumaraswamy) ಮುಂಬರುವ ಚುನಾವಣೆ ಹತ್ತಿರ ಆಗುತ್ತಿದಂತೆ ಒಗ್ಗಟ್ಟಿನ ಪ್ರದರ್ಶನಕ್ಕೆ ದೇವರ ಮೊರೆ ಹೋಗಿದ್ದಾರೆ. ಶಾಸಕರ ಜೊತೆ ಆರಾಧ್ಯ ದೈವದ ದರ್ಶನ ಪಡೆಯಲು ಹೆಚ್ಡಿಕೆ ತಯಾರಿ ನಡೆಸಿದ್ದಾರೆ. ಶೀಘ್ರದಲ್ಲೇ ಮೂವತ್ತು ಶಾಸಕರ ಜೊತೆ ತಿಮ್ಮಪ್ಪನ ದರ್ಶನ ಪಡೆಯಲು ತಿರುಪತಿಗೆ ತೆರಳಲಿದ್ದಾರೆ. ಈ ಮೂಲಕ ಮತ್ತೆ ಎಲ್ಲಾ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ನಿರ್ಧರಿಸಿದ್ದಾರೆ.

ಈಗಾಗಲೆ ಶಾಸಕರು ಹಲವು ಭಾರಿ ಕುಮಾರಸ್ವಾಮಿ ಮೇಲೆ ಸಣ್ಣಪುಟ್ಟ ಅಸಮಾಧಾನ ಹೊರ ಹಾಕಿದ್ದಾರೆ. ಅಷ್ಟೇ ಅಲ್ಲದೆ ಜಿಟಿ ದೇವೆಗೌಡ, ಎಟಿ ರಾಮಸ್ವಾಮಿ, ಶಿವಲಿಂಗೆಗೌಡ ಪಕ್ಷದ‌ ಚಟುವಟಿಕೆಯಿಂದ ಅಂತರ ಕಾಯ್ದುಕೊಂಡಿದ್ದಾರೆ. ಚುನಾವಣಾ ವರ್ಷದಲ್ಲಿ ಹಾಲಿ ಶಾಸಕರು ಪಕ್ಷ ತೊರೆದರೆ ಕಾರ್ಯಕರ್ತರಿಗೆ ಬೇರೆ ಸಂದೇಶ ಹೋಗಿ ಇದರಿಂದ ಪಕ್ಷಕ್ಕೆ ಮತ್ತಷ್ಟು ಹೊಡೆತ ಬೀಳುತ್ತದೆ.

ಹೀಗಾಗಿ ತಿಮ್ಮಪ್ಪನ ದರ್ಶನದ ಮೂಲಕ ಶಾಸಕರ ಅಸಮಾಧಾನ ಶಮನ ಮಾಡಲು ಕುಮಾರಸ್ವಾಮಿ ದೇವರ ಮೊರೆ ಹೋಗಲಿದ್ದಾರೆ. ಅದಕ್ಕೆ ಎಲ್ಲಾ ಶಾಸಕರನ್ನು ದೇವರ ದರ್ಶನದ ಮೂಲಕ ವಿಶ್ವಾಸಕ್ಕೆ ತೆಗೆದುಕೊಳ್ಳುಲು ಹೆಚ್ಡಿಕೆ ತೀರ್ಮಾನಿಸಿದ್ದಾರೆ. ಎಲ್ಲಾ ಶಾಸಕರು ಒಟ್ಟಾದರೆ ಪಕ್ಕಕ್ಕೆ ಮತ್ತಷ್ಟು ಬಲ ಬರಲಿದೆ. ಈ ಮೂಲಕ ತಿಮ್ಮಪ್ಪನ ಸನ್ನಿಧಿಯಿಂದ ಒಗ್ಗಟ್ಟಿನ ಸಂದೇಶ ಕೊಡಲು ಕುಮಾರಸ್ವಾಮಿ ಪ್ಲಾನ್ ಮಾಡಿಕೊಂಡಿದ್ದಾರೆ. ಕಳೆದ ಕೋರ್ ಕಮಿಟಿಯಲ್ಲಿ ಈ ನಿರ್ಧಾರಕ್ಕೆ ದಳಪತಿಗಳು ಬಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಬೆಂಗಳೂರಿನ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ