AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್​ಐಆರ್​ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ: ಮತ್ತೊಂದು ವಿಡಿಯೋ ರಿಲೀಸ್​​ ಮಾಡಿದ ಕೇಂದ್ರ ಸಚಿವ ಕುಮಾರಸ್ವಾಮಿ

Voter List Revision: ಯಶವಂತಪುರ ಕ್ಷೇತ್ರದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಶಾಸಕ ಎಸ್.ಟಿ.ಸೋಮಶೇಖರ್ ಫೋಟೋ ಇರುವ ಪುಸ್ತಕ ಬಳಸಿ ಅಕ್ರಮ ಎಸಗಲಾಗುತ್ತಿದೆ ಎಂದು ಆರೋಪಿಸಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮತ್ತೊಂದು ವಿಡಿಯೋ ಬಿಡುಗಡೆ ಮಾಡಿದ್ದಾರೆ. ಕೆಪಿಸಿಸಿ ಹೊಸ ಅಧ್ಯಕ್ಷರು ರಾಮಮಂದಿರ ಬಗ್ಗೆ ಮಾತನಾಡುತ್ತಾರೆ. ಆದರೆ ಮತದಾರರ ಹುಂಡಿಯನ್ನೇ ಲೂಟಿ ಮಾಡಲು ಸರ್ಕಾರ ಹೊರಟಿದೆ ಎಂದವರು ಆರೋಪಿಸಿದ್ದಾರೆ.

ಎಸ್​ಐಆರ್​ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ: ಮತ್ತೊಂದು ವಿಡಿಯೋ ರಿಲೀಸ್​​ ಮಾಡಿದ ಕೇಂದ್ರ ಸಚಿವ ಕುಮಾರಸ್ವಾಮಿ
ಮತ್ತೊಂದು ವಿಡಿಯೋ ರಿಲೀಸ್​​ ಮಾಡಿದ ಕೇಂದ್ರ ಸಚಿವ ಕುಮಾರಸ್ವಾಮಿImage Credit source: Tv9 Kannada
Anil Kalkere
| Edited By: |

Updated on:Jul 03, 2026 | 2:43 PM

Share

ಮುಖ್ಯಾಂಶಗಳು

  • ಎಸ್​ಐಆರ್​ ಪ್ರಕ್ರಿಯೆಯಲ್ಲಿ ಅಕ್ರಮ ನಡೆಯುತ್ತಿರುವ ಆರೋಪ
  • ಮತ್ತೊಂದು ವಿಡಿಯೋ ರಿಲೀಸ್​​ ಮಾಡಿದ ಕುಮಾರಸ್ವಾಮಿ
  • ಮತದಾರರ ಹುಂಡಿಯೇ ಲೂಟಿ: ಹೆಚ್​​.ಡಿ. ಕುಮಾರಸ್ವಾಮಿ

ಬೆಂಗಳೂರು, ಜುಲೈ 03: ಎಸ್​ಐಆರ್​ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ ಸಂಬಂಧ ನಿನ್ನೆಯಷ್ಟೇ (ಜುಲೈ 02) ವಿಡಿಯೋ ಸಾಕ್ಷಿ ಸಮೇತ ಗಂಭೀರ ಆರೋಪ ಮಾಡಿದ್ದ ಕೇಂದ್ರ ಸಚಿವ ಹೆಚ್​​.ಡಿ. ಕುಮಾರಸ್ವಾಮಿ ಇಂದು ಮತ್ತೊಂದು ವಿಡಿಯೋ ರಿಲೀಸ್​ ಮಾಡಿದ್ದಾರೆ. ಜೆಡಿಎಸ್​ ಕಚೇರಿ ಜೆ.ಪಿ.ಭವನದಲ್ಲಿ ಯಶವಂತಪುರ ಕ್ಷೇತ್ರಕ್ಕೆ ಸಂಬಂಧಿಸಿದ ಎಸ್​ಐಆರ್​​ ಪ್ರಕ್ರಿಯೆಯ ಅಕ್ರಮಗಳ ಕುರಿತು ವಿಡಿಯೋ ರಿಲೀಸ್​​ ಮಾಡಿದ್ದು, ಶಾಸಕ ಎಸ್​.ಟಿ.ಸೋಮಶೇಖರ್​​ ಫೋಟೋ ಇರುವ ಪುಸ್ತಕಗಳನ್ನು ಬಿಎಲ್​​ಒಗಳು ಹಿಡಿದಿರೋದು ಇದರಲ್ಲಿ ಕಂಡುಬಂದಿದೆ.

‘ಮತದಾರರ ಹುಂಡಿಯೇ ಲೂಟಿ’

ಸರ್ಕಾರದ ಗುಲಾಮರಾಗಿ ಕೆಲಸ ಮಾಡಲು‌ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಕೆಪಿಸಿಸಿ ಹೊಸ ಅಧ್ಯಕ್ಷರು ರಾಮಮಂದಿರ ಬಗ್ಗೆ ಮಾತನಾಡುತ್ತಾರೆ. ಆದರೆ ಮತದಾರರ ಹುಂಡಿಯನ್ನೇ ಲೂಟಿ ಮಾಡಲು ಸರ್ಕಾರ ಹೊರಟಿದೆ. ಆ ಮೂಲಕ ಸಂವಿಧಾನವನ್ನ ಬುಡಮೇಲು ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ. ನನಗೆ ರಾಜ್ಯದ ಹಲವು ಭಾಗಗಳಿಂದ ಕರೆ ಬರುತ್ತಿದ್ದು, ಕೇಂದ್ರದ ಚುನಾವಣಾ ಆಯುಕ್ತರ ಭೇಟಿಗೆ ಸಮಯ ಕೇಳುತ್ತೇನೆ. ರಾಜ್ಯ ಚುನಾವಣಾ ಆಯುಕ್ತರನ್ನ ಇಂದು ಭೇಟಿ ಮಾಡುತ್ತೇವೆ. ರಾಜ್ಯ ಸರ್ಕಾರ ಯಾವ ಸಾಧನೆ ಮಾಡಲು ಹೊರಟಿದೆ ಎಂದವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ನಡೆಯುತ್ತಿರುವ ಎಸ್​ಐಆರ್​​ ತನಿಖೆಗೆ ಆಗ್ರಹ; ಕೇಂದ್ರ ಚುನಾವಣಾ ಆಯೋಗಕ್ಕೆ ಎರಡು ಬಾರಿ ಶೋಭಾ ಕರಂದ್ಲಾಜೆ ಪತ್ರ

‘ಕಚೇರಿಯಲ್ಲಿ ಕುಳಿತು ಹೇಳಿದ್ರೆ ಆಗುತ್ತಾ?’

ಇನ್ನು ಭಾರತೀಯ ಚುನಾವಣಾ ಆಯೋಗದ (ECI) ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಖಡಕ್​​ ಆದೇಶದ ಬಗ್ಗೆಯೂ ಪ್ರತಕ್ರಿಯಿಸಿರುವ ಹೆಚ್​​ಡಿಕೆ, ಅನ್ಬುಕುಮಾರ್ ಕಚೇರಿಯಲ್ಲಿ ಕುಳಿತು ಹೇಳಿದ್ರೆ ಆಗುತ್ತಾ? ಎಂದು ಪ್ರಶ್ನಿಸಿದ್ದಾರೆ. ಈ ಸಂಬಂಧ ಕಠಿಣ ಕ್ರಮ ತೆಗೆದುಕೊಳ್ಳಬೇಕು. ನಾವು ನೀಡಿರುವ ದೂರಿನ ಬಗ್ಗೆ ಏನು ಕ್ರಮ ಆಗಿದೆ? ಬೆಳಿಗ್ಗೆಯಿಂದ ಆಯುಕ್ತರು ಕಚೇರಿಗೇ ಬಂದಿಲ್ಲ ಎಂದವರು ಹೇಳಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 2:43 pm, Fri, 3 July 26

Follow Us
ಬಿಗ್ ಬಾಸ್ ಸ್ಪರ್ಧಿಗಳ ವಿಡಿಯೋ ಹಂಚಿಕೊಂಡ ಕಲರ್ಸ್ ಕನ್ನಡ; ಯಾರು ಗೊತ್ತಾಯ್ತಾ
ಬಿಗ್ ಬಾಸ್ ಸ್ಪರ್ಧಿಗಳ ವಿಡಿಯೋ ಹಂಚಿಕೊಂಡ ಕಲರ್ಸ್ ಕನ್ನಡ; ಯಾರು ಗೊತ್ತಾಯ್ತಾ
ದೆಹಲಿಯಲ್ಲಿ ಧಾರಾಕಾರ ಮಳೆ; ರಸ್ತೆಯಲ್ಲಿ ನಿಂತ ನೀರಿನಲ್ಲಿ ಈಜಾಡಿದ ಮಕ್ಕಳು
ದೆಹಲಿಯಲ್ಲಿ ಧಾರಾಕಾರ ಮಳೆ; ರಸ್ತೆಯಲ್ಲಿ ನಿಂತ ನೀರಿನಲ್ಲಿ ಈಜಾಡಿದ ಮಕ್ಕಳು
ವಿಚ್ಛೇದನದ ಬಗ್ಗೆ ಕೇಳಿದ್ದಕ್ಕೆ ದುನಿಯಾ ವಿಜಯ್ ನೀಡಿದ ಪ್ರತಿಕ್ರಿಯೆ ಏನು?
ವಿಚ್ಛೇದನದ ಬಗ್ಗೆ ಕೇಳಿದ್ದಕ್ಕೆ ದುನಿಯಾ ವಿಜಯ್ ನೀಡಿದ ಪ್ರತಿಕ್ರಿಯೆ ಏನು?
ಉದ್ಯಾನವನಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕ ಸರ್ಕಾರಕ್ಕೆ ವಾಪಸ್
ಉದ್ಯಾನವನಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕ ಸರ್ಕಾರಕ್ಕೆ ವಾಪಸ್
ಕೃಷ್ಣಾ ನದಿಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದ ಡಿಕೆ ಶಿವಕುಮಾರ್
ಕೃಷ್ಣಾ ನದಿಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದ ಡಿಕೆ ಶಿವಕುಮಾರ್
ಅಕ್ರಮವಾಗಿ ಸ್ಫೋಟಕಗಳ ಸಾಗಾಟ: 600 ಜಿಲೆಟಿನ್, 100 ಡಿಟೋನೇಟರ್ ಜಪ್ತಿ
ಅಕ್ರಮವಾಗಿ ಸ್ಫೋಟಕಗಳ ಸಾಗಾಟ: 600 ಜಿಲೆಟಿನ್, 100 ಡಿಟೋನೇಟರ್ ಜಪ್ತಿ
ಭಾರಿ ಮಳೆಯಿಂದ ದೆಹಲಿ ವಿಮಾನ ನಿಲ್ದಾಣ ಜಲಾವೃತ; ಪ್ರಯಾಣಿಕರ ಪರದಾಟ
ಭಾರಿ ಮಳೆಯಿಂದ ದೆಹಲಿ ವಿಮಾನ ನಿಲ್ದಾಣ ಜಲಾವೃತ; ಪ್ರಯಾಣಿಕರ ಪರದಾಟ
ಬೆಂಗಳೂರಿಗರೇ ಎಚ್ಚರ: ನಗರದಲ್ಲಿ ಟೋಯಿಂಗ್ ಕಾರ್ಯಾಚರಣೆ ಪುನರಾರಂಭ!
ಬೆಂಗಳೂರಿಗರೇ ಎಚ್ಚರ: ನಗರದಲ್ಲಿ ಟೋಯಿಂಗ್ ಕಾರ್ಯಾಚರಣೆ ಪುನರಾರಂಭ!
‘ಮೈಮೇಲೆ ಪ್ರಜ್ಞೆ ಇರಬೇಕು’: ಮಗ ಮಾಡಿದ ಕೃತ್ಯದ ಬಗ್ಗೆ ವಿಜಯ್ ಸಿಟ್ಟು
‘ಮೈಮೇಲೆ ಪ್ರಜ್ಞೆ ಇರಬೇಕು’: ಮಗ ಮಾಡಿದ ಕೃತ್ಯದ ಬಗ್ಗೆ ವಿಜಯ್ ಸಿಟ್ಟು
ಮೈಸೂರು ಯುವ ದಸರಾ ಉದ್ಘಾಟಕರಾಗಿ ನೃತ್ಯ ನಿರ್ದೇಶಕ ಪ್ರಭುದೇವ್ ಆಯ್ಕೆ
ಮೈಸೂರು ಯುವ ದಸರಾ ಉದ್ಘಾಟಕರಾಗಿ ನೃತ್ಯ ನಿರ್ದೇಶಕ ಪ್ರಭುದೇವ್ ಆಯ್ಕೆ