ಪ್ರಜ್ವಲ್ ಪ್ರಕರಣದ ಬಗ್ಗೆ ರಾಹುಲ್ ಗಾಂಧಿ ಬಳಿ ಎಲ್ಲಾ ಮಾಹಿತಿ ಇದ್ದಂತಿದೆ-HD ಕುಮಾರಸ್ವಾಮಿ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣ ಇದೀಗ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದೆ. ಈ ಹಿನ್ನಲೆ ಪ್ರಜ್ವಲ್ ರೇವಣ್ಣ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ‘ಆತ 400 ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಹೇಳಿದ್ದರು. ಈ ಹಿನ್ನಲೆ ರಾಹುಲ್​ ಅವರನ್ನು ಎಸ್​ಐಟಿ ವಿಚಾರಣೆಗೆ ಕರೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ(HD Kumaraswamy) ಅವರು ಒತ್ತಾಯಿಸಿದ್ದಾರೆ.

ಪ್ರಜ್ವಲ್ ಪ್ರಕರಣದ ಬಗ್ಗೆ ರಾಹುಲ್ ಗಾಂಧಿ ಬಳಿ ಎಲ್ಲಾ ಮಾಹಿತಿ ಇದ್ದಂತಿದೆ-HD ಕುಮಾರಸ್ವಾಮಿ
ಹೆಚ್​ಡಿ ಕುಮಾರಸ್ವಾಮಿ
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on: May 07, 2024 | 7:05 PM

ಬೆಂಗಳೂರು, ಮೇ.07: ಪ್ರಜ್ವಲ್ ರೇವಣ್ಣ ಅವರು 400 ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಹೇಳಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ಅವರನ್ನು ಎಸ್​ಐಟಿ ವಿಚಾರಣೆಗೆ ಕರೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ(HD Kumaraswamy) ಅವರು ಒತ್ತಾಯಿಸಿದ್ದಾರೆ. ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಹುಲ್ ಗಾಂಧಿ ಅವರು ಅಂಕಿ-ಅಂಶಗಳ ಸಮೇತ ಈ ವಿಷಯ ಹೇಳಿದ್ದಾರೆ. ಎಲ್ಲರಿಗಿಂತ ಮೊದಲೇ ಈ ಮಾಹಿತಿ ಅವರಿಗೆ ಸಿಕ್ಕಿರಬೇಕು. ಪೆನ್​ಡ್ರೈವ್​ನಲ್ಲಿದ್ದ ವಿಡಿಯೋಗಳನ್ನು ಅವರು ನೋಡಿರಬೇಕು. ಹೀಗಾಗಿ ಅವರಿಂದ ತನಿಖಾ ತಂಡ ಮಾಹಿತಿ ಪಡೆಯಬೇಕು. ಕೂಡಲೇ ಅವರಿಗೆ ಸಮನ್ಸ್ ಜಾರಿ ಮಾಡಬೇಕು ಎಂದು ಆಗ್ರಹಿಸಿದರು.

ರಾಹುಲ್ ಗಾಂಧಿ ಅವರು ಅತ್ಯಾಚಾರಕ್ಕೆ ಒಳಗಾದವರಲ್ಲಿ 16 ವರ್ಷದೊಳಗಿನ ಹೆಣ್ಣುಮಕ್ಕಳಿದ್ದಾರೆ ಎಂದು ಹೇಳಿದ್ದಾರೆ. ಅವರು ಯಾವ ಆಧಾರದಲ್ಲಿ ಈ ಹೇಳಿಕೆ ಕೊಟ್ಟರು? ಪೋಕ್ಸೋ ಪ್ರಕರಣದಲ್ಲಿ ಕೇಸ್ ಹಾಕಬೇಕೆಂದು ಅವರು ಒತ್ತಾಯ ಮಾಡಿದ್ದಾರೆ. “ಎಸ್​ಐಟಿ ಮುಖ್ಯಸ್ಥ ಬಿ.ಕೆ ಸಿಂಗ್ ಅವರೇ ಯಾಕಪ್ಪಾ.ಇನ್ನೂ ರಾಹುಲ್ ಗಾಂಧಿಗೆ ನೋಟಿಸ್ ಕೊಟ್ಟಿಲ್ಲ?” ಎಂದು ಪ್ರಶ್ನಿಸಿದರು.

ಇದನ್ನೂ ಓದಿ:ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಹಿಂದೆ ರಾಜ್ಯ ಬಿಜೆಪಿ ನಾಯಕರಿದ್ದಾರೆ: ರವಿಕುಮಾರ್ ಗಣಿಗ, ಶಾಸಕ

ಪೆನ್​ಡ್ರೈವ್​ನಲ್ಲಿ ಹೆಣ್ಣುಮಕ್ಕಳ ಫೋಟೋ ಹಾಕಿ ಏನು ಮಾಡಿದಿರಿ ನೀವು?, ರಾಜ್ಯದ ಮಾನ ಮರ್ಯಾದೆ ಹಾಳು ಮಾಡಿದವರು ನೀವು. ಇದರಲ್ಲಿ ಪ್ರಧಾನಿ, ಕೇಂದ್ರ ಗೃಹ ಸಚಿವರನ್ನು ಯಾಕೆ ಎಳೆದು ತರುತ್ತೀರಿ?. ಜೆಡಿಎಸ್-ಬಿಜೆಪಿ ಮೈತ್ರಿ ಆದಾಗಲೇ ನಿಮ್ಮ ನಿದ್ದೆ ಹೋಗಿದೆ. ಅದಕ್ಕೆ ಈ ಪ್ರಕರಣವನ್ನು ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದ ಸುದ್ದಿ ಮಾಡಿಸುತ್ತಿದ್ದೀರಿ. ಈ ರಾಜ್ಯದ ಕಾಂಗ್ರೆಸ್ ಉಸ್ತುವಾರಿ ರಣದೀಪ್​ ಸುರ್ಜೇವಾಲ ಅವರು ಇದ್ದಾರಲ್ಲ, ಸಂತ್ರಸ್ತರಿಗೆ ಹಣಕಾಸು ಪರಿಹಾರ ಕೊಡಲಾಗುವುದು ಎಂದು ಹೇಳಿದ್ದಾರೆ. ಯಾವ ವಿಡಿಯೋ ಮೊದಲು ಬಿಡಬೇಕು, ಯಾವುದನ್ನು ಆಮೇಲೆ ಬಿಡಬೇಕು ಎಂದು ಟಿಕ್ಸ್​ ಮಾಡಿದ್ರಲ್ಲ ಸುರ್ಜೇವಾಲ ಅವರೇ, ಯಾವುದನ್ನು ಯಾವಾಗ ಬಿಡಬೇಕು ಎಂದು ಯಾರಪ್ಪ ಪ್ಲಾನ್ ಮಾಡಿದ್ದು?. ಈಗ ನೋಡಿದರೆ ಸಂತ್ರಸ್ತರಿಗೆ ಪರಿಹಾರ ಕೊಡುತ್ತೇವೆ ಎಂದು ಹೇಳುತ್ತಿದ್ದೀರಿ. ನಾಚಿಕೆ ಆಗೋದಿಲ್ಲವೇ ಎಂದು ಕಿಡಿಕಾರಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ