AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜವಾಬ್ದಾರಿ ಮರೆತ ಸಚಿವರು ತಮ್ಮ ಉಸ್ತುವಾರಿ ಜಿಲ್ಲೆಗಳಲ್ಲಿ ವಿಜಯೋತ್ಸವದಲ್ಲಿ ಮುಳುಗಿದ್ದಾರೆ -ಹೆಚ್​ಡಿ ಕುಮಾರಸ್ವಾಮಿ ಟ್ವೀಟ್ ವಾಗ್ದಾಳಿ

HD Kumaraswamy: ಬಿಜೆಪಿ ತನ್ನ ಇಮೇಜ್‌ ಬದಲಿಸಿಕೊಳ್ಳಲು ಮುಖ್ಯಮಂತ್ರಿಯನ್ನೇನೋ ಬದಲಿಸಿತು. ಆದರೆ, ಹಿಂದಿನ ಸರ್ಕಾರದ ಮಂತ್ರಿಮಂಡಲವನ್ನೇ ಬೊಮ್ಮಾಯಿ ಅವರಿಗೂ ನೀಡಿತು. ಅದೇ ಹಳೆ ಸಚಿವರು ಹೊಸದಾಗಿ ಪ್ರಮಾಣ ಸ್ವೀಕರಿಸಿ, ತಮ್ಮ ಅದೇ ಹಳೆ ಚಾಳಿಯನ್ನು ಮುಂದುವರಿಸಿದ್ದಾರೆ. ಇವರಿಗೆ ಜನರ ಸಂಕಷ್ಟ ಪರಿಹರವಾಗಬೇಕಿಲ್ಲ. ವಿಜಯೋತ್ಸವಗಳು ಬೇಕು, ಸನ್ಮಾನಗಳಾಗಬೇಕು.

ಜವಾಬ್ದಾರಿ ಮರೆತ ಸಚಿವರು ತಮ್ಮ ಉಸ್ತುವಾರಿ ಜಿಲ್ಲೆಗಳಲ್ಲಿ ವಿಜಯೋತ್ಸವದಲ್ಲಿ ಮುಳುಗಿದ್ದಾರೆ -ಹೆಚ್​ಡಿ ಕುಮಾರಸ್ವಾಮಿ ಟ್ವೀಟ್ ವಾಗ್ದಾಳಿ
ಎಚ್.ಡಿ.ಕುಮಾರಸ್ವಾಮಿ
TV9 Web
| Edited By: |

Updated on: Aug 09, 2021 | 11:18 AM

Share

ಬೆಂಗಳೂರು: ಸರ್ಕಾರದ ನಡೆ ಮತ್ತು ಉಸ್ತುವಾರಿ ಸಚಿವರ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಸರಣಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಸಂಪುಟದ ಸಚಿವರಿಗೆ ತಾತ್ಕಾಲಿಕವಾಗಿ ಒಂದೊಂದು ಜಿಲ್ಲೆಯ ಉಸ್ತುವಾರಿ ನೀಡಿ, ಅಲ್ಲಿನ ಪ್ರವಾಹ ಪರಿಸ್ಥಿತಿ, ಕೊವಿಡ್‌ ಸ್ಥಿತಿಗಳ ನಿರ್ವಹಣೆ ಮಾಡುವಂತೆ ಸೂಚಿಸಿದ್ದರು. ಸಿಎಂ ಬೊಮ್ಮಾಯಿ ಅವರು ಸದಾಶಯದಿಂದ ಜವಾಬ್ದಾರಿ ನೀಡಿದರೆ, ಜವಾಬ್ದಾರಿ ಮರೆತ ಸಚಿವರು ತಮಗೆ ನಿಗದಿಪಡಿಸಿದ ಜಿಲ್ಲೆಯಲ್ಲಿ ವಿಜಯೋತ್ಸವ ಆಚರಿಸಿದ್ದಾರೆ ಎಂದು ಟ್ವೀಟ್ ಮೂಲಕ ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ ಹೊರ ಹಾಕಿದ್ದಾರೆ.

ಬಿಜೆಪಿ ತನ್ನ ಇಮೇಜ್‌ ಬದಲಿಸಿಕೊಳ್ಳಲು ಮುಖ್ಯಮಂತ್ರಿಯನ್ನೇನೋ ಬದಲಿಸಿತು. ಆದರೆ, ಹಿಂದಿನ ಸರ್ಕಾರದ ಮಂತ್ರಿಮಂಡಲವನ್ನೇ ಬೊಮ್ಮಾಯಿ ಅವರಿಗೂ ನೀಡಿತು. ಅದೇ ಹಳೆ ಸಚಿವರು ಹೊಸದಾಗಿ ಪ್ರಮಾಣ ಸ್ವೀಕರಿಸಿ, ತಮ್ಮ ಅದೇ ಹಳೆ ಚಾಳಿಯನ್ನು ಮುಂದುವರಿಸಿದ್ದಾರೆ. ಇವರಿಗೆ ಜನರ ಸಂಕಷ್ಟ ಪರಿಹರವಾಗಬೇಕಿಲ್ಲ. ವಿಜಯೋತ್ಸವಗಳು ಬೇಕು, ಸನ್ಮಾನಗಳಾಗಬೇಕು.

ಹೊಸ ಸಚಿವರು ತಮಗೆ ನಿಗದಿ ಪಡಿಸಿದ ಜಿಲ್ಲೆಗಳಿಗೆ ಹೋದಾಗ ಮಾಡಿಸಿಕೊಂಡ ಸನ್ಮಾನಗಳು, ವಿಜಯೋತ್ಸವ, ಅದ್ದೂರಿ ಸ್ವಾಗತ ಕಂಡು ಜನ ನಾಚಿಕೆಪಟ್ಟಿದ್ದಾರೆ, ಮರುಗಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಬದಲಾದರೂ, ಸರ್ಕಾರ ಮತ್ತು ಅದರ ವರ್ತನೆ ಬದಲಾದ ಭಾವನೆ ಯಾರಲ್ಲಿಯೂ ಕಾಣುತ್ತಿಲ್ಲ. ಸಿಎಂ ಬದಲಾದರೆ ಸಾಲದು ಸಿಎಂ ರೀತಿಯೇ ಸಚಿವರೂ ನಡೆದುಕೊಳ್ಳಬೇಕು.

ರಾಜ್ಯದಲ್ಲಿ ಕೋವಿಡ್‌ ಪರಿಸ್ಥಿತಿ, ನೆರೆ ಆತಂಕಗಳು ದೂರವಾಗಿಲ್ಲ. 3ನೇ ಅಲೆಯೊಂದು ಬಾಗಿಲ ಬಳಿಯಲ್ಲೇ ಇದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಅದಕ್ಕೆ ಪೂರಕವೆಂಬಂತೆ ಕೋವಿಡ್‌ ಪ್ರಕರಣಗಳೂ ಏರುತ್ತಿವೆ. ನೆರೆ ಆತಂಕವೂ ದೂರವಾಗಿಲ್ಲ. ಸಿಎಂ ಬದಲಾದರೆ ಸಾಲದು ಸಚಿವರೂ ಕೆಲಸ ಮಾಡಬೇಕು ಎಂದು ಟ್ವೀಟ್ ಮೂಲಕ ಕುಮಾರಸ್ವಾಮಿ, ಸಚಿವರ ನಡೆಗೆ ಬೇಸರ ವ್ಯಕ್ತಪಡಿದ್ದಾರೆ.

ಇದನ್ನೂ ಓದಿ: ಹೆಚ್​ಡಿ ಕುಮಾರಸ್ವಾಮಿ ಹೆಸರು ಬಳಸಿ ಆಶ್ರಯ ಯೋಜನೆಯಡಿ ಮನೆ ಕೊಡಿಸುವುದಾಗಿ ವಂಚನೆ ಮಾಡ್ತಿದ್ದ ಆರೋಪಿ ಅರೆಸ್ಟ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್