ಸತ್ಯಕ್ಕೆ ಸಮಾಧಿ ಕಟ್ಟಿ ʼಸುಳ್ಳಿನಯಾತ್ರೆʼಗೆ ಹೊರಟವರ ಜಾತಕ ಬೆತ್ತಲು ಮಾಡ್ತೀವಿ; ಸರಣಿ ಟ್ವೀಟ್ ಮೂಲಕ ಹೆಚ್ಡಿ ಕುಮಾರಸ್ವಾಮಿ ವಾಗ್ದಾಳಿ

ಮಾಜಿ ಸಿಎಂ, ಹಾಲಿ ಪ್ರತಿಪಕ್ಷ ನಾಯಕರ ನಾಲಿಗೆ ಮೇಲೆ ರಾಜ್ಯ ನೀರಾವರಿ ಬಗ್ಗೆ ಸೃಷ್ಟಿ ಆಗುತ್ತಿರುವ ʼಸುಳ್ಳಿನ ಸರಮಾಲೆʼಯು ಜನತೆಗೆ ಯಾಮಾರಿಸಿ ಬೇಳೆ ಬೇಯಿಸಿಕೊಳ್ಳುವ ʼರಾಜಕೀಯ ಹುಂಬತನʼವಲ್ಲದೆ ಮತ್ತೇನೂ ಅಲ್ಲ. ಸತ್ಯಕ್ಕೆ ಸಮಾಧಿ ಕಟ್ಟಿ ʼಸುಳ್ಳಿನಯಾತ್ರೆʼಗೆ ಹೊರಟವರ ಜಾತಕವನ್ನು ದಾಖಲೆಗಳೇ ಬೆತ್ತಲು ಮಾಡುತ್ತಿವೆ.

ಸತ್ಯಕ್ಕೆ ಸಮಾಧಿ ಕಟ್ಟಿ ʼಸುಳ್ಳಿನಯಾತ್ರೆʼಗೆ ಹೊರಟವರ ಜಾತಕ ಬೆತ್ತಲು ಮಾಡ್ತೀವಿ; ಸರಣಿ ಟ್ವೀಟ್ ಮೂಲಕ ಹೆಚ್ಡಿ ಕುಮಾರಸ್ವಾಮಿ ವಾಗ್ದಾಳಿ
ಜೆಡಿಎಸ್ ನಾಯಕ ಹೆಚ್​.ಡಿ. ಕುಮಾರಸ್ವಾಮಿ
Follow us
TV9 Web
| Updated By: ಆಯೇಷಾ ಬಾನು

Updated on: Jan 03, 2022 | 10:01 AM

ಬೆಂಗಳೂರು: ಮೇಕೆದಾಟು ಯೋಜನೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆಗೆ ಕೈಗೊಂಡಿರುವ ಸಂಬಂಧ ಸರಣಿ ಟ್ವೀಟ್ ಮೂಲಕ ಕಾಂಗ್ರೆಸ್ ಪಾದಯಾತ್ರೆಗೆ ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಹೆಚ್ಡಿ ಕುಮಾರಸ್ವಾಮಿ ಟ್ವೀಟ್ ದಾಳಿ ಮಾಜಿ ಸಿಎಂ, ಹಾಲಿ ಪ್ರತಿಪಕ್ಷ ನಾಯಕರ ನಾಲಿಗೆ ಮೇಲೆ ರಾಜ್ಯ ನೀರಾವರಿ ಬಗ್ಗೆ ಸೃಷ್ಟಿ ಆಗುತ್ತಿರುವ ʼಸುಳ್ಳಿನ ಸರಮಾಲೆʼಯು ಜನತೆಗೆ ಯಾಮಾರಿಸಿ ಬೇಳೆ ಬೇಯಿಸಿಕೊಳ್ಳುವ ʼರಾಜಕೀಯ ಹುಂಬತನʼವಲ್ಲದೆ ಮತ್ತೇನೂ ಅಲ್ಲ. ಸತ್ಯಕ್ಕೆ ಸಮಾಧಿ ಕಟ್ಟಿ ʼಸುಳ್ಳಿನಯಾತ್ರೆʼಗೆ ಹೊರಟವರ ಜಾತಕವನ್ನು ದಾಖಲೆಗಳೇ ಬೆತ್ತಲು ಮಾಡುತ್ತಿವೆ.

1989ರಲ್ಲಿ ತಮಿಳುನಾಡು ಒತ್ತಡಕ್ಕೆ ಮಣಿದು ವಿ.ಪಿ.ಸಿಂಗ್ ಸರಕಾರ ಕಾವೇರಿ ಟ್ರಿಬ್ಯೂನಲ್ ರಚಿಸಿತ್ತು. ಆಗ ವೀರೇಂದ್ರ ಪಾಟೀಲರು ಸಿಎಂ ಆಗಿದ್ದರೆ, ಪುಟ್ಟಸ್ವಾಮಿ ಗೌಡರು ನೀರಾವರಿ ಮಂತ್ರಿ. ಈ ಟ್ರಿಬ್ಯೂನಲ್ ಬೇಡವೇ ಬೇಡ ಎಂದು ದನಿಯೆತ್ತಿದ ಏಕೈಕ ನಾಯಕರು ದೇವೇಗೌಡರು. ಆದರೆ, ಅವರ ಮಾತನ್ನು ಯಾರೂ ಕೇಳಲಿಲ್ಲ.

ಈಗ ʼಮಿ.ಸುಳ್ಳಯ್ಯʼ ಹೊಸ ಕಥೆ, ಚಿತ್ರಕಥೆ ಬರೆದಿದ್ದಾರೆ. 1968ರಲ್ಲೇ ಮೇಕೆದಾಟು ಯೋಜನೆಗೆ ಕಾಂಗ್ರೆಸ್ ಪ್ರಯತ್ನಿಸಿತ್ತಂತೆ ಎಂದು ಹೇಳಿದ್ದಾರೆ. 2017ರಲ್ಲೇ ಕಾಂಗ್ರೆಸ್ ಸರಕಾರ DPR ಸಿದ್ಧಪಡಿಸಿ 5,912 ಕೋಟಿ ರೂ. ಯೋಜನಾ ವೆಚ್ಚ ನಿಗದಿ ಮಾಡಿತ್ತು. ಸಮ್ಮಿಶ್ರ ಸರಕಾರದಲ್ಲಿ ಜಲ ಸಂಪನ್ಮೂಲ ಸಚಿವರಾಗಿದ್ದ ಡಿ.ಕೆ.ಶಿವಕುಮಾರ್ ಮತ್ತೆ 9,000 ಕೋಟಿ ರೂ. ಮೊತ್ತದ ವಿಸ್ತೃತ DPR ಸಿದ್ಧಪಡಿಸಿ ಕೇಂದ್ರಕ್ಕೆ ಕಳುಹಿಸಿದ್ದರಂತೆ.

ಅಬ್ಬಾ..! ʼಸಿದ್ದಸುಳ್ಳುಶೂರ!!ʼ. ಸುಳ್ಳು ಸೃಷ್ಟಿಗೊಂದು ಆಸ್ಕರ್ ಇರಬೇಕಿತ್ತು. ಮೇಕೆದಾಟು ಸಮಗ್ರ ಯೋಜನಾ ವರದಿ-DPR ಸಿದ್ಧವಾಗಿ ಕೇಂದ್ರಕ್ಕೆ ಸಲ್ಲಿಕೆ ಆಗಿದ್ದು 2018ರಲ್ಲಿ ನಾನು ಸಿಎಂ ಆಗಿದ್ದಾಗಲೇ. ಇದರಲ್ಲಿ ಡಿಕೆಶಿ ಪಾತ್ರವೇನೂ ಇರಲಿಲ್ಲ. ಈ ಸತ್ಯವನ್ನು ʼಸಿದ್ದಹಸ್ತರುʼ ಮುಚ್ಚಿಟ್ಟ ಪರಮಾರ್ಥವೇನು?

ನನ್ನ ಸಂಪುಟದಲ್ಲಿ ಜಲಸಂಪನ್ಮೂಲ ಮಂತ್ರಿಯಾಗಿದ್ದವರು ಮೇಕೆದಾಟು ವಿಚಾರದಲ್ಲಿ ನಾನು ಮತ್ತು ನನ್ನ ಸಂಪುಟ ಸಹೋದ್ಯೋಗಿ ಹೆಚ್.ಡಿ.ರೇವಣ್ಣ ಅವರು ಆಗಿನ ಕೇಂದ್ರ ಜಲಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿದ್ದಾಗ ಎಲ್ಲಿದ್ದರು? ಜನರಿಗೆ ತಿಳಿಯಬೇಕಲ್ಲವೆ?

ನನ್ನ ಮನವಿ ಮೇರೆಗೆ ಅಂದು ಗಡ್ಕರಿ ಅವರು ತಕ್ಷಣವೇ DPR ಸಿದ್ಧಪಡಿಸಿ ಕಳಿಸಿ ಎಂದು ಹೇಳಿದ್ದರು. ಆ ಸಭೆಗೆ ಡಿ.ಕೆ.ಶಿವಕುಮಾರ್ ಬರಲೇ ಇಲ್ಲ. ಅಂದು ನಾನು ದೆಹಲಿಯಲ್ಲಿ ಮಾಧ್ಯಮಗಳ ಜತೆ ಮೇಕೆದಾಟು ಯೋಜನೆ ಬಗ್ಗೆ ಹಾಗೂ ಗಡ್ಕರಿ ಅವರ ಜತೆಗಿನ ಚರ್ಚೆಯ ವಿವರಗಳ ಕುರಿತು ಮಾತನಾಡಿದ್ದೆ.

ಕ್ಷಣಕ್ಕೊಂದು ಬಣ್ಣ ಬದಲಿಸುವ ಇವರ ನಿಜಬಣ್ಣ ಪಿ.ವಿ.ನರಸಿಂಹರಾವ್ ಪ್ರಧಾನಿ ಆಗಿದ್ದಾಗಲೇ ಕನ್ನಡಿಗರಿಗೆ ಅರಿವಾಗಿತ್ತು. ಬೆಂಗಳೂರಿಗೆ ಕಾವೇರಿ 4ನೇ ಹಂತದಲ್ಲಿ ನ್ಯಾಯಸಮ್ಮತವಾಗಿ ಧಕ್ಕಬೇಕಿದ್ದ 9 ಟಿಎಂಸಿ ನೀರನ್ನು ತಮಿಳುನಾಡು ಒತ್ತಡಕ್ಕೆ ಮಣಿದು ಸಾರಾಸಗಟಾಗಿ ನಿರಾಕರಿಸಿತ್ತು ಇದೇ ಕಾಂಗ್ರೆಸ್!

ಹೋಗಲಿ, ಆ 9 ಟಿಎಂಸಿ ನೀರು ಬೆಂಗಳೂರಿಗೆ ತಂದವರು ಯಾರು? ಅದೇ ʼಸುಳ್ಳಯ್ಯʼನನ್ನು ವಿತ್ತಮಂತ್ರಿ, ಡಿಸಿಎಂ ಮಾಡಿದ ದೇವೇಗೌಡರೇ. ಬೆನ್ನಿಗಿರಿದು ಹೋದವರ ನಾಲಿಗೆಯ ಮೇಲೆ ಸತ್ಯಕ್ಕೆ ತಾವಿದೆಯೇ? ಸಾಧಿಸಿ ತೋರಿದ್ದನ್ನು ಹೇಳಿಕೊಳ್ಳದ ಆ ಹಿರಿಯ ಜೀವದ ತ್ಯಾಗವನ್ನೂ ʼಹೈಜಾಕ್ʼ ಮಾಡುವ ಹುನ್ನಾರಷ್ಟೇ ಇದು.

2013ರಲ್ಲಿ ಇದೇ ‘ಸಿದ್ದಹಸ್ತರು’ ಸಿಎಂ ಆದ ಮೇಲೆ ನಡೆದ ವಿಧಾನಮಂಡಲ ಜಂಟಿ ಕಲಾಪದಲ್ಲಿ ರಾಜ್ಯಪಾಲರ ಭಾಷಣದಲ್ಲಿ; “ಕಾವೇರಿ ಐ ತೀರ್ಪಿನ ಭಾಗವಾಗಿ ಕಾವೇರಿ ವಿಸ್ತರಣಾ, ಮುಂದುವರಿದ ಹಾಗೂ ನವೀಕರಣ ಯೋಜನೆಗಳ ಜಾರಿಗೆ ಕೇಂದ್ರದ ಅನುಮೋದನೆ ಕೋರಲಾಗುವುದು” ಎಂದು ಹೇಳಿಸಿದ್ದರು. ಕೇಂದ್ರದ ಅನುಮೋದನೆ ಎಂದರೆ, ಮತ್ತೆ ಮತ್ತೆ ಅರ್ಜಿ ಹಿಡಿದು ಕೇಂದ್ರದ ಮರ್ಜಿ ಕಾಯುವುದು. ಅದಕ್ಕೆ, ಅಂದೇ ಸದನದಲ್ಲಿ ಜೆಡಿಎಸ್ ಆ ಭಾಷಣವನ್ನು ವಿರೋಧಿಸಿತ್ತು. ಕಾವೇರಿ ಐ ತೀರ್ಪಿನ ಭಾಗವಾಗಿ ನಮ್ಮ ಪಾಲಿನ ನೀರು ಬಳಕೆಗೆ ಕ್ರಮ ಕೈಗೊಳ್ಳುವುದು ನಮ್ಮ ಹಕ್ಕು. ಈ ಸರಳ ವಿಷಯವೂ ಆವತ್ತಿನ ಸಿಎಂಗೆ ಅರ್ಥವಾಗಲಿಲ್ಲ. ಚಾಮರಾಜನಗರದ ಶ್ರೀ ಚಾಮರಾಜೇಶ್ವರನ ಸನ್ನಿಧಿಯಲ್ಲಿ ಸಿದ್ದಹಸ್ತರು ʼಸತ್ಯʼ ನುಡಿಯಬೇಕಿತ್ತು. ಆದರೆ, ಆ ಶಿವನ ಶಿರದಲ್ಲಿ ನೆಲೆನಿಂತ ಗಂಗೆಯ ಸಾಕ್ಷಿಯಾಗಿ ʼಸುಳ್ಳು ಹೇಳಿ ಅಪಚಾರʼ ಎಸಗಿದ್ದಾರೆ. ತಪ್ಪಿಗೆ ಪ್ರಾಯಶ್ಚಿತ್ತ ತಪ್ಪಿದ್ದಲ್ಲ ಎಂದು ಸರಣಿ ಟ್ವೀಟ್ ಮಾಡುವ ಮೂಲಕ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ವಿರುದ್ಧ ಹೆಚ್ಡಿಕೆ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಪಾದಯಾತ್ರೆಗೆ ಸೆಡ್ಡು ಹೊಡೆಯಲು ಬಿಜೆಪಿ ಪ್ಲ್ಯಾನ್, ರಾಮನಗರದಲ್ಲಿ ಅದ್ದೂರಿ‌ ಕಾರ್ಯಕ್ರಮ; ಸಿಎಂ ಇಂದು ಜಿಲ್ಲಾ ಪ್ರವಾಸ

ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್