AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ ಮಾಡುವಂತೆ ನಾನು ಮಾರ್ಚ್​ 15ರಂದೇ ಹೇಳಿದ್ದೆ, ಇವರು ಇನ್ನೂ ಸಂಪೂರ್ಣ ಲಾಕ್​ಡೌನ್ ಮಾಡಿಲ್ಲ: ಹೆಚ್​.ಡಿ.ಕುಮಾರಸ್ವಾಮಿ

ನಾನು ಮಾರ್ಚ್ 15ರಂದೇ ಲಾಕ್‌ಡೌನ್ ಮಾಡಲು ಹೇಳಿದ್ದೆ. ರಾಜ್ಯಪಾಲರ ಸಭೆಯಲ್ಲೂ ಲಾಕ್‌ಡೌನ್‌ಗೆ ಮನವಿ ಮಾಡಿದ್ದೆ. ಆದರೆ, ಈವರೆಗೂ ಸಂಪೂರ್ಣ ಲಾಕ್‌ಡೌನ್ ಏಕೆ ಮಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಲಾಕ್​ಡೌನ್​ ಮಾಡುವಂತೆ ನಾನು ಮಾರ್ಚ್​ 15ರಂದೇ ಹೇಳಿದ್ದೆ, ಇವರು ಇನ್ನೂ ಸಂಪೂರ್ಣ ಲಾಕ್​ಡೌನ್ ಮಾಡಿಲ್ಲ: ಹೆಚ್​.ಡಿ.ಕುಮಾರಸ್ವಾಮಿ
ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ
Skanda
|

Updated on: May 04, 2021 | 3:43 PM

Share

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಎರಡನೇ ಅಲೆ ನಿಯಂತ್ರಿಸಲು ಸರ್ಕಾರ ಲಾಕ್​ಡೌನ್ ಮಾದರಿಯ ಕರ್ಫ್ಯೂ ಹೇರಿಕೆ ಮಾಡಿದೆ. ಆದರೆ, ಇದನ್ನು ಪ್ರಶ್ನಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ನೈಟ್ ಕರ್ಫ್ಯೂ, ಕರ್ಫ್ಯೂನಿಂದ ಏನು ಉಪಯೋಗವಿದೆ? ನಾನು ಮಾರ್ಚ್ 15ರಂದೇ ಲಾಕ್‌ಡೌನ್ ಮಾಡಲು ಹೇಳಿದ್ದೆ. ರಾಜ್ಯಪಾಲರ ಸಭೆಯಲ್ಲೂ ಲಾಕ್‌ಡೌನ್‌ಗೆ ಮನವಿ ಮಾಡಿದ್ದೆ. ಆದರೆ, ಈವರೆಗೂ ಸಂಪೂರ್ಣ ಲಾಕ್‌ಡೌನ್ ಏಕೆ ಮಾಡಿಲ್ಲ ಎಂದು ಕಿಡಿಕಾರಿದ್ದಾರೆ. ಅಲ್ಲದೇ, ಪರಿಸ್ಥಿತಿ ನಿಯಂತ್ರಿಸಲು ಸಂಪೂರ್ಣ ಲಾಕ್‌ಡೌನ್ ಮಾಡಬೇಕೆಂದು ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಪರಿಸ್ಥಿತಿ ಇನ್ನೂ ಕೈಮೀರಿ ಹೋಗಿಲ್ಲ. ಆದರೆ, ಇದನ್ನು ಹೇಗೆ ನಿರ್ವಹಣೆ ಮಾಡಬೇಕೆಂದು ಸರ್ಕಾರಕ್ಕೆ ಗೊತ್ತಾಗ್ತಿಲ್ಲ. ರಾಜ್ಯದಲ್ಲಿ ಉತ್ಪಾದನೆಯಾಗುವ ಆಕ್ಸಿಜನ್ ಗುಜರಾತ್, ಉತ್ತರಪ್ರದೇಶಕ್ಕೆ ಕಳಿಸುತ್ತಿದ್ದಾರೆ. ಇದನ್ನು ಕಳಿಸಲ್ಲ ಎಂದು ಹೇಳುವ ಧೈರ್ಯ ಇವರಿಗೆ ಇಲ್ಲ. ನಮ್ಮ ಪರಿಸ್ಥಿತಿ ಏನಿದೆ ಎಂದು ಕೇಂದ್ರಕ್ಕೆ ತಿಳಿಸಬೇಕು. ಆದರೆ, ಕಾರ್ಯನಿರ್ವಹಣೆಯಲ್ಲಿ ಸರ್ಕಾರ ವಿಫಲವಾಗಿದೆ. ಇನ್ನೇನಿದ್ದರೂ ಈಗ ಆಕ್ಸಿಜನ್ ತಯಾರಿಕೆಗೆ ಅವಕಾಶ ನೀಡುವುದು ಸೂಕ್ತ ಎಂದು ಅಭಿಪ್ರಾಯಪಟ್ಟಿದ್ದಾರೆ.

ಆಕ್ಸಿಜನ್ ದುರಂತದಲ್ಲಿ ಸತ್ತವರು 24 ಅಲ್ಲ 28 ಜನರು, ಸುಳ್ಳು ಹೇಳ್ತಿದೆ ಸರ್ಕಾರ -ಸಿದ್ದರಾಮಯ್ಯ ತರಾಟೆ ಚಾಮರಾಜನಗರ: ಆಕ್ಸಿಜನ್ ಕೊರತೆಯಿಂದ ಜಿಲ್ಲಾಸ್ಪತ್ರೆಯಲ್ಲಿ 24 ಮಂದಿ ಮೃತಪಟ್ಟ ಘಟನೆ ಸಂಬಂಧ ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಸರ್ಕಾರದ ವಿರುದ್ಧ ಚಾಟಿ ಬೀಸಿದ್ದಾರೆ. ಸರ್ಕಾರ ಸುಳ್ಳು ಮಾಹಿತಿ ನೀಡುತ್ತಿದೆ. ಆಕ್ಸಿಜನ್ ಇಲ್ಲದೆ 28 ಮಂದಿ ಮೃತಪಟ್ಟಿದ್ದಾರೆ. ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿರುವುದು ಶುದ್ಧಸುಳ್ಳು ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಹಾಗಾದ್ರೆ ಸಿದ್ದರಾಮಯ್ಯ ಹೇಳಿದ್ದೇನು ಚಾಮರಾಜನಗರದಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ.. ಘಟನೆ ಸಂಬಂಧಿಸಿದ ಅಧಿಕಾರಿಗಳ ಜತೆ ಚರ್ಚಿಸಿ, ಮಾಹಿತಿ ಪಡೆದಿದ್ದೇವೆ. ನಿನ್ನೆ ಸಚಿವ ಸುಧಾಕರ್ ಸಹ ಅಧಿಕಾರಿಗಳ ಜತೆ ಸಭೆ ಮಾಡಿದ್ದಾರೆ. ಆದರೆ ಸಚಿವ ಸುಧಾಕರ್ ನಿನ್ನೆ ಸುಳ್ಳು ಹೇಳಿಕೆಯನ್ನು ನೀಡಿದ್ದಾರೆ. ಚಾಮರಾಜನಗರದಲ್ಲಿ 28 ಜನರೂ ಆಕ್ಸಿಜನ್ ಕೊರತೆಯಿಂದ ಮೃತಪಟ್ಟಿದ್ದಾರೆ. ಆದ್ರೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಆಕ್ಸಿಜನ್ ಕೊರತೆಯಾಗಿ 3 ಜನ ಮೃತಪಟ್ಟಿದ್ದಾರೆ ಎಂದಿದ್ದರು. ಅವರು ಹೇಳಿರುವುದು ಶುದ್ಧಸುಳ್ಳು. ಚಾಮರಾಜನಗರಕ್ಕೆ ಪ್ರತಿದಿನ 350 ಆಕ್ಸಿಜನ್ ಸಿಲಿಂಡರ್ ಬೇಕು. ಆದರೆ ಭಾನುವಾರ ಪೂರೈಕೆ ಆಗಿರುವುದು 126 ಸಿಲಿಂಡರ್. ಇದರಿಂದ ಎಲ್ಲ ರೋಗಿಗಳಿಗೆ ಆಕ್ಸಿಜನ್ ಕೊಡುವುದಕ್ಕೆ ಆಗಿಲ್ಲ. ಸಂಜೆಯಿಂದ ರಾತ್ರಿ 12 ಗಂಟೆವರೆಗೆ 24 ರೋಗಿಗಳು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆಂದು ಹೇಳಿದ್ದಾರೆ. ಆಕ್ಸಿಜನ್ ಕೊರತೆಯಿಂದ ಮೃತಪಟ್ಟಿದ್ದಾರೆಂದು ಡೀನ್, ಜಿಲ್ಲಾ ಸರ್ಜನ್, ಜಿಲ್ಲಾಧಿಕಾರಿ ಒಪ್ಪಿಕೊಂಡಿದ್ದಾರೆ. ಆಕ್ಸಿಜನ್ ಪೂರೈಕೆ ಆಗಿಲ್ಲ ಎಂದು ಕೂಡ ಒಪ್ಪಿಕೊಂಡಿದ್ದಾರೆ ಎಂದರು.

350 ಆಕ್ಸಿಜನ್ ಸಿಲಿಂಡರ್ ಅಗತ್ಯವಿತ್ತು, ಆದ್ರೆ ಪೂರೈಕೆ ಆಗಿಲ್ಲ. ಸುಮಾರು 224 ಆಕ್ಸಿಜನ್ ಸಿಲಿಂಡರ್ ಕೊರತೆ ಇತ್ತು. ಇದರಿಂದ ಆಕ್ಸಿಜನ್ ಸಿಗದೆ ರೋಗಿಗಳು ಮೃತಪಟ್ಟಿದ್ದಾರೆ. ಆರೋಗ್ಯ ಸಚಿವ ಸುಧಾಕರ್ ಸತ್ಯವನ್ನು ಮುಚ್ಚಿಟ್ಟಿದ್ದಾರೆ. ಸಚಿವ ಡಾ.ಕೆ.ಸುಧಾಕರ್ ಹೇಳಿಕೆಯನ್ನು ಖಂಡಿಸುತ್ತೇನೆ. ರಾಜ್ಯ ಸರ್ಕಾರ ಆಕ್ಸಿಜನ್ ಪೂರೈಕೆ ಮಾಡಬೇಕಾಗಿತ್ತು. ಚಾಮರಾಜನಗರದಲ್ಲಿ ಬಹುತೇಕ ಎಲ್ಲ ಬೆಡ್ ಭರ್ತಿಯಾಗಿದೆ. ಹೊಸ ಸೋಂಕಿತರು ಬಂದರೆ ಯಾವುದೇ ವ್ಯವಸ್ಥೆ ಇಲ್ಲ. ಸರ್ಕಾರ, ಜಿಲ್ಲಾಡಳಿತ ಯಾವುದೇ ಸಿದ್ಧತೆ ಮಾಡಿಕೊಂಡಿಲ್ಲ. ಎಲ್ಲರ ಜತೆ ಚರ್ಚಿಸಿದ್ದೇನೆಂದು ಜಿಲ್ಲಾಧಿಕಾರಿ ಹೇಳುತ್ತಿದ್ದಾರೆ. ಆದರೆ ಯಾವುದೇ ವ್ಯವಸ್ಥೆ ಮಾಡುತ್ತಿಲ್ಲವೆಂದು ಡಿಸಿ ಹೇಳಿದ್ದಾರೆ. ‘ಇದು ರಾಜ್ಯ ಸರ್ಕಾರದ ಸಂಪೂರ್ಣ ವೈಫಲ್ಯವಾಗಿದೆ’ ಸಾವಿನ ಹೊಣೆಯನ್ನು ರಾಜ್ಯ ಸರ್ಕಾರವೇ ಹೊರಬೇಕು ಎಂದು ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.

ಇದನ್ನೂ ಓದಿ: ಸ್ವಂತ ಹಣದಲ್ಲಿ ಮಂಡ್ಯ ಜನರಿಗೆ ನಿತ್ಯ 2 ಸಾವಿರ ಲೀಟರ್ ಆಕ್ಸಿಜನ್‌ ನೀಡಲು ನಿರ್ಧಾರ: ಸಂಸದೆ ಸುಮಲತಾ 

Rahul Gandhi: ಕೊರೊನಾ ವಿರುದ್ಧ ಹೋರಾಡಲು ಲಾಕ್​ಡೌನ್​ ಒಂದೇ ಅಸ್ತ್ರ: ರಾಹುಲ್ ಗಾಂಧಿ ಟ್ವೀಟ್