ಬಿಜೆಪಿ ಸರ್ಕಾರದ ಕಾರಣಪುರುಷ, ಆಹಿಂದ ಆದಿಪುರುಷ, ಕಾಂಗ್ರೆಸ್ ಮುಗಿಸಲು ಹೊರಟ ಸಿದ್ಧಹಸ್ತ ಮಹಾಶಯ; ಸರಣಿ ಟ್ವೀಟ್ ಮೂಲಕ ಸಿದ್ದು ಮೇಲೆ ಮುಗಿಬಿದ್ದ ಹೆಚ್ಡಿಕೆ

ರಾಮನ ಹೆಸರು, ರಾವಣ ರಾಜಕೀಯ. ಜಾತ್ಯತೀತತೆ ಸೋಗು ಹಾಕಿಕೊಂಡು ಪೋಸು ಕೊಡುವ ಆಸಾಮಿ. ಜಾತಿಗೊಂದು ಸಮಾವೇಶ ನಡೆಸುತ್ತೀರಿ ಎಂದು ಹೆಚ್ಡಿಕೆ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಲ್ಪಸಂಖ್ಯಾತ ವ್ಯಕ್ತಿಯನ್ನ 2ನೇ ಅಭ್ಯರ್ಥಿ ಮಾಡಿದ ಗುಟ್ಟೇನು?

ಬಿಜೆಪಿ ಸರ್ಕಾರದ ಕಾರಣಪುರುಷ, ಆಹಿಂದ ಆದಿಪುರುಷ, ಕಾಂಗ್ರೆಸ್ ಮುಗಿಸಲು ಹೊರಟ ಸಿದ್ಧಹಸ್ತ ಮಹಾಶಯ; ಸರಣಿ ಟ್ವೀಟ್ ಮೂಲಕ ಸಿದ್ದು ಮೇಲೆ ಮುಗಿಬಿದ್ದ ಹೆಚ್ಡಿಕೆ
ಹೆಚ್.ಡಿ.ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ (ಸಂಗ್ರಹ ಚಿತ್ರ)
TV9kannada Web Team

| Edited By: Ayesha Banu

May 31, 2022 | 8:15 PM

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ(HD Kumaraswamy) ಸಿದ್ದರಾಮಯ್ಯ(Siddaramaiah) ವಿರುದ್ಧ ಮುಗಿಬಿದ್ದಿದ್ದಾರೆ. ಸರಣಿ ಟ್ವೀಟ್ ಮಾಡುವ ಮೂಲಕ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ. ಬಿಜೆಪಿ ಸರ್ಕಾರದ ಕಾರಣಪುರುಷ, ಆಹಿಂದ ಆದಿಪುರುಷ, ಕಾಂಗ್ರೆಸ್ ಮುಗಿಸಲು ಹೊರಟ ಸಿದ್ಧಹಸ್ತ ಮಹಾಶಯ. ಮುಸ್ಲಿಮರ ರಾಜಕೀಯ ನರಮೇಧಕ್ಕೆ ಇನ್ನೊಂದು ವಿನಾಶಕಾರಿ ಅಧ್ಯಾಯವನ್ನು ಆರಂಭಿಸಿದ್ದೀರಿ ಎಂದು ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

‘ಭಾಷಣ ಒಂದು, ರಾಜಕಾರಣ ಇನ್ನೊಂದು’ ಇದಯ್ಶಾ ಕಿಲಾಡಿರಾಮಯ್ಯನ ರಾಜನೀತಿ ಮತ್ತು ರಣನೀತಿ. ಅಲ್ಪಸಂಖ್ಯಾತರನ್ನೇ ಅಯ್ಯೋ ಎನ್ನುವಂತೆ ಮಾಡುತ್ತಿದ್ದೀರಲ್ಲ? ಇದು ನ್ಯಾಯವೇ ಎಂದು ಸಿದ್ದರಾಮಯ್ಯಗೆ ಹೆಚ್ಡಿಕೆ ಪ್ರಶ್ನೆ ಮಾಡಿದ್ದಾರೆ. ಸೋಲು ಖಚಿತ ಎಂದು ಗೊತ್ತಿದ್ದರೂ ಮನ್ಸೂರ್ ಖಾನ್ ಅವರನ್ನು ಬಲಿಪೀಠದ ಮುಂದೆ ನಿಲ್ಲಿಸಿದ್ದೀರಿ. ಏನಿದರ ಹಕೀಕತ್ತು? ಮುಸ್ಲಿಂ ನಾಯಕರನ್ನು ಸಾಲು ಸಾಲಾಗಿ ರಾಜಕೀಯ ಗಿಲೋಟಿನ್ ಯಂತ್ರಕ್ಕೆ ತಳ್ಳುತ್ತಿದ್ದೀರಿ. ‘ಮುಸ್ಲಿಂ ಮೂಲೋತ್ಪಾಟನಾ ರಾಜಕೀಯ’ಕ್ಕೆ ರಾಜ್ಯಸಭೆ ಚುನಾವಣೆಯನ್ನೂ ಬಳಸಿಕೊಳ್ಳುತ್ತಿದ್ದೀರಲ್ಲ? ಎಂದು ಟ್ವೀಟ್ ಮೂಲಕ ಸಿದ್ದರಾಮಯ್ಯಗೆ ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಕೆಪಿಎಸ್​ಸಿ ಕಮೀಶನರು ಬಿಜೆಪಿ ಶಾಸಕ ಸುರೇಶ ಕುಮಾರ್ ಅವರನ್ನು ಕಚೇರಿ ಒಳಗೆ ಬರಲು ಬಿಡಲಿಲ್ಲ!!

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ರಾಮನ ಹೆಸರು, ರಾವಣ ರಾಜಕೀಯ. ಜಾತ್ಯತೀತತೆ ಸೋಗು ಹಾಕಿಕೊಂಡು ಪೋಸು ಕೊಡುವ ಆಸಾಮಿ. ಜಾತಿಗೊಂದು ಸಮಾವೇಶ ನಡೆಸುತ್ತೀರಿ ಎಂದು ಹೆಚ್ಡಿಕೆ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಲ್ಪಸಂಖ್ಯಾತ ವ್ಯಕ್ತಿಯನ್ನ 2ನೇ ಅಭ್ಯರ್ಥಿ ಮಾಡಿದ ಗುಟ್ಟೇನು? ಆಪರೇಷನ್ ಕಮಲದ ಅಮಲು ಇನ್ನೂ ಇಳಿದಿಲ್ಲವೆ? ಮನ್ಸೂರ್ ಖಾನ್ರನ್ನೇ ಮೊದಲ ಅಭ್ಯರ್ಥಿ ಮಾಡಲಿಲ್ಲ ಏಕೆ? ನಿಮಗೆ ಜೈರಾಂ ರಮೇಶ್ ಹೆಚ್ಚೋ, ಮನ್ಸೂರ್ ಹೆಚ್ಚೋ? ಇಲ್ಲವೇ ಬಿಜೆಪಿಯ 3ನೇ ಅಭ್ಯರ್ಥಿ ಹೆಚ್ಚೋ ಎಂದು ಪ್ರಶ್ನೆಗಳ ಸುರಿಮಳೆ ಗೈದಿದ್ದಾರೆ.

ಇಕ್ಬಾಲ್ ಅಹಮದ್ ಸರಡಗಿ ಆಯಿತು. ಜಾಫರ್ ಷರೀಫ್ ಮೊಮ್ಮಗ ರೆಹಮಾನ್ ಷರೀಫ್ ಆಯಿತು. ರೋಷನ್ ಬೇಗ್ ಕಥೆಯನ್ನು ಮುಗಿಸಿದಿರಿ. ತನ್ವೀರ್ ಸೇಠ್ ನಿಮ್ಮ ಹಿಟ್ ಲಿಸ್ಟಿನಲ್ಲಿ ಇದ್ದಾರೆ. ಸತ್ಯ ಹೇಳಿದ ಸಲೀಂರನ್ನು ಸಲೀಸಾಗಿ ಸೈಡಿಗಟ್ಟಿದಿರಿ. ಒಂದೇ ಕಲ್ಲಿನಲ್ಲಿ ಅನೇಕ ಹಕ್ಕಿಗಳನ್ನು ಹೊಡೆಯೋದು ಅಂದರೆ ಇದೇನಾ? ಎಂದು ಕಿಡಿಕಾರಿದ್ದಾರೆ.

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada