ಕೈಲಾಗದ ಕಾಂಗ್ರೆಸ್ ನಾಯಕ ಮೈ ಪರಚಿಕೊಂಡ – ಸುಳ್ಳು ಸಿದ್ದಯ್ಯ ಎಂದೆಲ್ಲಾ ಸರಣಿ ಟ್ವೀಟ್ ಮೂಲಕ ವ್ಯಂಗ್ಯವಾಡಿದ ರಾಜ್ಯ ಜೆಡಿಎಸ್ ಘಟಕ

ಕೈಲಾಗದ ಕಾಂಗ್ರೆಸ್ ನಾಯಕ ಮೈ ಪರಚಿಕೊಂಡ - ಸುಳ್ಳು ಸಿದ್ದಯ್ಯ ಎಂದೆಲ್ಲಾ ಸರಣಿ ಟ್ವೀಟ್ ಮೂಲಕ ವ್ಯಂಗ್ಯವಾಡಿದ ರಾಜ್ಯ ಜೆಡಿಎಸ್ ಘಟಕ
ಸಿದ್ದರಾಮಯ್ಯ (ಸಂಗ್ರಹ ಚಿತ್ರ)

ಕೊಟ್ಟ ಕುದುರೆ ಏರಿ, ಸವಾರಿಯನ್ನೂ ಮಾಡಿ, ಆಮೇಲೆ ನಮ್ಮ ' ಕೈ ' ಯಲ್ಲಿ ಏನೂ ಮಾಡಲಾಗಲಿಲ್ಲ ಎಂದರೆ ಹೇಗೆ? ಅಂದರೆ, ಕೊಟ್ಟ ಕುದುರೆಯನ್ನು ಏರಿ ಕೆಲಸ ಮಾಡದವನು ಕಾಂಗ್ರೆಸ್ ನಾಯಕ ಉರುಫ್ ಸುಳ್ಳು ಸಿದ್ದಯ್ಯ! -ರಾಜ್ಯ ಜೆಡಿಎಸ್ ಘಟಕ

TV9kannada Web Team

| Edited By: Ayesha Banu

Jan 07, 2022 | 12:46 PM

ಬೆಂಗಳೂರು: ಮೇಕೆದಾಟು ಪಾದಯಾತ್ರೆಗೆ ರಾಜ್ಯ ಜೆಡಿಎಸ್ ಘಟಕ ಸರಣಿ ಟ್ವೀಟ್ ಮೂಲಕ ಕಿಡಿಕಾರಿದೆ. ಸರಣಿ ಟ್ವಿಟ್ ಮೂಲಕ ಕೈ ನಾಯಕ ಸಿದ್ದರಾಮಯ್ಯರ ಮೇಲೆ ರಾಜ್ಯ ಜೆಡಿಎಸ್ ಘಟಕ  ವಾಗ್ದಾಳಿ ನಡೆಸಿದೆ. ಹಿಂದೆ ಒಂದು ಮಾತಿತ್ತು ಕೈಲಾಗದವನು ಮೈ ಪರಚಿಕೊಂಡ ಅಂತ. ಗಾದೆ ಮಾತಿನ ಮೂಲಕ ಹೆಚ್ಡಿಕೆ ವ್ಯಂಗ್ಯ ಮಾಡಿದ್ದಾರೆ.

ರಾಜ್ಯ ಜೆಡಿಎಸ್ ಘಟಕದಿಂದ ಟ್ವೀಟ್ ದಾಳಿ: ಹಿಂದೆ ಒಂದು ಮಾತಿತ್ತು. ” ಕೈಲಾಗದವನು ಮೈ ಪರಚಿಕೊಂಡ.” ಈಗ ಬಂದಿರುವ ಹೊಸ ನುಡಿಗಟ್ಟು ಏನೆಂದರೆ, “ಕೈಲಾಗದ ಕಾಂಗ್ರೆಸ್ ನಾಯಕ ಮೈ ಪರಚಿಕೊಂಡ” ಎಂದು. ಸುಳ್ಳು ಸಿದ್ದಯ್ಯನ ವರಸೆ ಹಾಗಿದೆ. ಐದು ವರ್ಷ ಅಧಿಕಾರ ಇದ್ದಾಗ ಗಡದ್ದಾಗಿ ನಿದ್ದೆ ಹೊಡೆದು ಈಗ ಇನ್ನೇನು ಮಾಡಬೇಕಿತ್ತು ಎಂದು ಹೊಸ ರಾಗ ಹಾಡುತ್ತಿದ್ದಾರೆ.

ಕೊಟ್ಟ ಕುದುರೆ ಏರಿ, ಸವಾರಿಯನ್ನೂ ಮಾಡಿ, ಆಮೇಲೆ ನಮ್ಮ ‘ ಕೈ ‘ ಯಲ್ಲಿ ಏನೂ ಮಾಡಲಾಗಲಿಲ್ಲ ಎಂದರೆ ಹೇಗೆ? ಅಂದರೆ, ಕೊಟ್ಟ ಕುದುರೆಯನ್ನು ಏರಿ ಕೆಲಸ ಮಾಡದವನು ಕಾಂಗ್ರೆಸ್ ನಾಯಕ ಉರುಫ್ ಸುಳ್ಳು ಸಿದ್ದಯ್ಯ! ಮೇಕೆದಾಟು ಕನಸು ಕಂಡವರು 1995ರಲ್ಲಿ ಸಿಎಂ ಆಗಿದ್ದ ಹೆಚ್.ಡಿ.ದೇವೇಗೌಡರು. ಆ ಯೋಜನೆಯ ಸಮಗ್ರ ಯೋಜನಾ ವರದಿ -DPR ಮಾಡಿ ಕೇಂದ್ರಕ್ಕೆ ಕಳಿಸಿದ್ದು 2018ರಲ್ಲಿ ಸಿಎಂ ಆಗಿದ್ದ ಕುಮಾರಸ್ವಾಮಿ ಅವರು. 2017ರಲ್ಲಿ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಕಳಿಸಿದ್ದು ಕೇವಲ PFR ಮಾತ್ರ. ಬೆಂಗಳೂರಿನಲ್ಲೇ ಇದ್ದ ಕೇಂದ್ರ ಜಲ ಆಯೋಗದ ಪ್ರಾದೇಶಿಕ ಕಚೇರಿಗೆ PFR ಕೊಟ್ಟು ಕೈ ತೊಳೆದುಕೊಂಡ ಅವರ ಸರಕಾರ, ಆ ಪ್ರಾದೇಶಿಕ ಕಚೇರಿ ಕೇಳಿದ ಯಾವ ಪ್ರಶ್ನೆಗೂ ಉತ್ತರ ಕೊಡಲಿಲ್ಲ.

2018ರಲ್ಲಿ ಹೆಚ್.ಡಿ.ಕುಮಾರಸ್ವಾಮಿ ಅವರು ಸಿಎಂ ಅದ ಮೇಲೆ ಪುನಾ PFR ಸಲ್ಲಿಸಿದ ಮೇಲೆ DPR ಸಲ್ಲಿಕೆಗೆ ಅವಕಾಶ ಸಿಕ್ಕಿತು. ಆಗ ಕುಮಾರಸ್ವಾಮಿ ಅವರ ಸರಕಾರ ತಡ ಮಾಡದೇ DPR ಸಿದ್ದಪಡಿಸಿ ಸಲ್ಲಿಸಿತು. ಮೇಕೆದಾಟು ಯೋಜನೆಗೆ DPR ಮಾಡಿದ್ದು ಹೆಚ್.ಡಿ.ಕುಮಾರಸ್ವಾಮಿ ಅವರ ಸರಕಾರ ಎಂದು ನಿನ್ನೆ ಜಲ ಸಂಪನ್ಮೂಲ ಸಚಿವರಾದ ಶ್ರೀ ಗೋವಿಂದ ಕಾರಜೋಳ ಅವರೇ ದಾಖಲೆಗಳ ಸಮೇತ ಹೇಳಿದ್ದಾರೆ. ಐದು ವರ್ಷ ಸುಳ್ಳು ಸಿದ್ದಯ್ಯ ಮಾಡಿದ್ದೇನು ಇಲ್ಲ ಎಂದು ಕಡ್ಡಿ ಮುರಿದಂತೆ ತಿಳಿಸಿದ್ದಾರೆ. ಹೀಗಿದ್ದರೂ ಸುಳ್ಳು ಸಿದ್ದಯ್ಯ ನಾವೇ DPR ಮಾಡಿದ್ದು ಎಂದು ಬೂಸಿ ಬಿಡುತ್ತಿದ್ದಾರೆ. ಅವರಿಗೆ PFR ಎಂಬುದು DPR ಆಗಿದ್ದು ಹೇಗೆ? ಐದು ವರ್ಷ ಸಿಎಂ ಆಗಿದ್ದ ವ್ಯಕ್ತಿಗೆ ಇವೆರಡಕ್ಕೂ ಇರುವ ವ್ಯತ್ಯಾಸ ತಿಳಿಯದೇ? ತಮ್ಮ ತಪ್ಪು ಮುಚ್ಚಿಕೊಳ್ಳಲು ಈಗ ದೇವೇಗೌಡರನ್ನು ಸುಳ್ಳು ಸಿದ್ದಯ್ಯ ಟೀಕೆ ಮಾಡುತ್ತಿದ್ದಾರೆ. ಮೋದಿಗೆ ಅವರಿಗೆ ಗೌಡರು ಅಪ್ತರು. ಮೇಕೆದಾಟು ಯೋಜನೆಗೆ ಕೇಂದ್ರದ ಒಪ್ಪಿಗೆಯನ್ನು ಗೌಡರೇ ಕೊಡಿಸಲಿ ಎಂದು ಹೇಳಿದ್ದಾರೆ. ಹಾಗಾದರೆ, ಈ ಕೆಲಸ ಗೌಡರಿಂದ ಮಾತ್ರ ಆಗುವುದು ಎಂದು ಅವರು ಒಪ್ಪಿಕೊಂಡ ಹಾಗಾಯಿತು. ಹಾಗಾದರೆ ಪಾದಯಾತ್ರೆ ಏತಕ್ಕೆ? ಎಂದು ರಾಜ್ಯ ಜೆಡಿಎಸ್ ಘಟಕ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದೆ.

ಆಡಳಿತಾತ್ಮಕ, ಕಾನೂನು ಹಾಗೂ ತಾಂತ್ರಿಕ ಅಂಶಗಳ ಆಧಾರದ ಮೇಲೆ ದೇವೇಗೌಡರಿಗೆ ಯಾವಾಗ ಏನು ಹೆಜ್ಜೆ ಇಡಬೇಕು ಎಂಬುದು ಚೆನ್ನಾಗಿ ಗೊತ್ತಿದೆ. ಅದು ಅನೇಕ ಯೋಜನೆಗಳಲ್ಲಿ ಸಾಬೀತಾಗಿದೆ. ಆ ಬಗ್ಗೆ ಸಿದ್ದರಾಮಯ್ಯ ಅವರು ಹೇಳಬೇಕಾದ ಅಗತ್ಯ ಇಲ್ಲ. ಹೀಗಿದ್ದರೂ ರಾಜ್ಯ ನೀರಾವರಿಗೆ ಹೆಚ್.ಡಿ.ದೇವೇಗೌಡರ ಕೊಡುಗೆಯನ್ನು ಉಪೇಕ್ಷಿಸಿ ಸುಳ್ಳುಗಳ ಮೂಲಕ ಜನರಿಗೆ ತಪ್ಪು ಮಾಹಿತಿ ನೀಡುವುದು ರಾಜ್ಯಕ್ಕೆ ಮಾಡುವ ದ್ರೋಹ. ಇನ್ನಾದರೂ ಸುಳ್ಳು ಹೇಳುವುದು ಬಿಟ್ಟರೆ ಒಳಿತು. ಇಲ್ಲವಾದರೆ ಜನರೇ ಸುಳ್ಳಯ್ಶನ ನಾಲಿಗೆಗೆ ಬುದ್ಧಿ ಕಲಿಸಲಿದ್ದಾರೆ. ಪಾದಯಾತ್ರೆಯಿಂದ ಮೇಕೆದಾಟು ಯೋಜನೆಗೆ ಚಿಕ್ಕಾಸು ಉಪಯೋಗವಿಲ್ಲ. ಆ ಪಾದಯಾತ್ರೆಯ ಪೆಟ್ಟು ಜನರ ಮೇಲೆ ಬೀಳಲಿದೆ. ಅದರ ತೀವ್ರತೆ ಗೊತ್ತಾದ ಮೇಲೆ ಮುಂದೆ ಜನರೇ ಕಾಂಗ್ರೆಸ್ ನಾಯಕರ ಮುಖಕ್ಕೆ ಮಂಗಳಾರತಿ ಮಾಡಲಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧ ರಾಜ್ಯ ಜೆಡಿಎಸ್ ಘಟಕ ಸರಣಿ ಟ್ವೀಟ್ ಮಾಡಿದೆ.

ಮೇಕೆದಾಟು ಪಾದಯಾತ್ರೆಗೆ ಮಾಜಿ ಸಿಎಂ ಹೆಚ್‌ಡಿಕೆಗೆ ಆಹ್ವಾನ ಇನ್ನು ಮೇಕೆದಾಟು ಪಾದಯಾತ್ರೆಗೆ ಬರುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಹೆಚ್‌.ಡಿ. ಕುಮಾರಸ್ವಾಮಿಗೆ ಪತ್ರ ಬರೆದು ಆಹ್ವಾನ ನೀಡಿದ್ದಾರೆ. ಜೊತೆಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪರನ್ನೂ ಆಹ್ವಾನಿಸಿದ್ದಾರೆ.

ಇದನ್ನೂ ಓದಿ: Two Wheeler Loan: ದ್ವಿಚಕ್ರ ವಾಹನ ಸಾಲಕ್ಕೆ ಯಾವ ಬ್ಯಾಂಕ್​ನಲ್ಲಿ ಕಡಿಮೆ ಬಡ್ಡಿ ದರ? ಇಲ್ಲಿದೆ ಇಎಂಐ ಮತ್ತಿತರ ವಿವರ

Follow us on

Related Stories

Most Read Stories

Click on your DTH Provider to Add TV9 Kannada