ಪ್ರಧಾನಿ ಮೋದಿ, ಮಾಜಿ ಪ್ರಧಾನಿ ಭೇಟಿ ಮಾಡುವುದು ತಪ್ಪಾ? ಸರಣಿ ಟ್ವೀಟ್ ಮೂಲಕ ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

ಅಸೂಯೆ, ದ್ವೇಷ, ಅಸಹನೆ, ಸರ್ವಾಧಿಕಾರಿ ಮನೋಭಾವದ ಸಿದ್ದಕಲೆಯ ನಿಪುಣನಿಗೆ ರಾಜಕೀಯದಲ್ಲಿ ವಿರಳಾತಿ ವಿರಳವಾಗಿ ಕಾಣುವ ಇಂಥ ಭೇಟಿಗಳನ್ನು ಅರಗಿಸಿಕೊಳ್ಳುವುದು ಹೇಗೆ ತಾನೇ ಸಾಧ್ಯ? ಎಂದು ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಹೆಚ್‌ಡಿಕೆ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಾರೆ.

ಪ್ರಧಾನಿ ಮೋದಿ, ಮಾಜಿ ಪ್ರಧಾನಿ ಭೇಟಿ ಮಾಡುವುದು ತಪ್ಪಾ? ಸರಣಿ ಟ್ವೀಟ್ ಮೂಲಕ ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
ಜೆಡಿಎಸ್ ನಾಯಕ ಹೆಚ್​.ಡಿ. ಕುಮಾರಸ್ವಾಮಿ
Follow us
TV9 Web
| Updated By: ಆಯೇಷಾ ಬಾನು

Updated on: Dec 03, 2021 | 9:28 AM

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡುವ ಮೂಲಕ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ಮೋದಿ, ಮಾಜಿ ಪ್ರಧಾನಿ ಭೇಟಿ ಮಾಡುವುದು ತಪ್ಪಾ? ಎಂದು ಟ್ವೀಟ್ ಮೂಲಕ ಪ್ರಶ್ನಿಸಿದ್ದಾರೆ.

ಮಾಜಿ ಪ್ರಧಾನಿಗಳೊಬ್ಬರು ಹಾಲಿ ಪ್ರಧಾನಿಯನ್ನು ಭೇಟಿ ಮಾಡುವುದು ತಪ್ಪೇ? ಸಂಸತ್ ಕಲಾಪಕ್ಕೆ ತೆರಳಿದ್ದ ಹೆಚ್.ಡಿ.ದೇವೇಗೌಡರು ಅಲ್ಲಿಯೇ ಇದ್ದ ಪ್ರಧಾನಮಂತ್ರಿಗಳ ಕಚೇರಿಯಲ್ಲಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಆ ಭೇಟಿ ರಾಜಕೀಯ, ಸಂಕುಚಿತತೆಯ ಎಲ್ಲೆ ಮೀರಿದ್ದು ಎನ್ನುವುದನ್ನು ಆ ಇಬ್ಬರು ನಾಯಕರ ಭೇಟಿಯ ಚಿತ್ರಗಳೇ ಹೇಳುತ್ತವೆ.

ಅಸೂಯೆ, ದ್ವೇಷ, ಅಸಹನೆ, ಸರ್ವಾಧಿಕಾರಿ ಮನೋಭಾವದ ಸಿದ್ದಕಲೆಯ ನಿಪುಣನಿಗೆ ರಾಜಕೀಯದಲ್ಲಿ ವಿರಳಾತಿ ವಿರಳವಾಗಿ ಕಾಣುವ ಇಂಥ ಭೇಟಿಗಳನ್ನು ಅರಗಿಸಿಕೊಳ್ಳುವುದು ಹೇಗೆ ತಾನೇ ಸಾಧ್ಯ? ಎಂದು ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಹೆಚ್‌ಡಿಕೆ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಾರೆ.

‘ರಾಜಕೀಯ ರಕ್ಕಸತನ’ಕ್ಕೆ ಅವರು ರಾಜಾಧಿರಾಜ. ಆಶ್ರಯ ನೀಡಿದ ಕಾಂಗ್ರೆಸ್ ಪಕ್ಷ ನುಂಗಲು ಹೊರಟ ‘ಸಿದ್ದಸೂತ್ರಧಾರ’ನಿಗೆ JDS ರಾಜಕೀಯ ಬದುಕು ಕೊಟ್ಟಿತ್ತು. ಆ ಪಕ್ಷವನ್ನೇ ಮುಳುಗಿಸಿಬಿಡುವ ಹಗಲುಕನಸು ಬೇರೆ ಇದೆ. ದೇವೇಗೌಡರು ಅವಕಾಶವಾದಿ ರಾಜಕಾರಣಿ ಎನ್ನುವ ಆ ನಾಲಗೆ, ಜೆಡಿಎಸ್ ಪಕ್ಷ ಬಿಜೆಪಿಯ ಬಿ ಟೀಂ ಎನ್ನುವ ಆ ನಾಲಗೆಯಲ್ಲಿ ಪಕ್ಷನಿಷ್ಠೆ ಎಂಬ ಪದ ಎಂದಾದರೂ ಬಂದಿದ್ಯಾ? ಎಂದು ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಹೆಚ್‌ಡಿಕೆ ಆಕ್ರೋಶ ಹೊರ ಹಾಕಿದ್ದಾರೆ.

ನನಗಿಲ್ಲದಿದ್ದರೆ ಯಾರಿಗೂ ಬೇಡ ಎನ್ನುವ ಸ್ವಾರ್ಥ ಮನೋಭಾವದಿಂದ ಸ್ವಪಕ್ಷವೂ ಇದ್ದ ಮೈತ್ರಿ ಸರಕಾರವನ್ನೇ ʼಸ್ವಾಹಾʼ ಮಾಡಿ ಆಪರೇಷನ್ ಕಮಲದ ಕೆಸರಿನಲ್ಲಿ ವಿಕೃತವಾಗಿ ಹೊರಳಾಡಿದವರು ಯಾರು ಎನ್ನುವುದು ಅವರ ಸ್ವಪಕ್ಷೀಯರಿಗೇ ಚೆನ್ನಾಗಿ ಗೊತ್ತು. ನಾಯಕರಿಗೆ ಗತಿ ಇಲ್ಲ, ಅಭ್ಯರ್ಥಿಗಳಿಗಂತೂ ದಟ್ಟ ದಾರಿದ್ರ್ಯ. ಇನ್ನು, ಪಕ್ಷದ ಬಗ್ಗೆ ಹೇಳುವುದೇ ಬೇಡ. ಅಧ್ಯಕ್ಷರಿಗೊಂದು ಕಾಂಗ್ರೆಸ್, ಪ್ರತಿಪಕ್ಷ ನಾಯಕರಿಗೊಂದು ಕಾಂಗ್ರೆಸ್. ಅಷ್ಟೇ ಅಲ್ಲ; ಜಿಲ್ಲೆಗಳಲ್ಲಿ ಎರಡೆರಡು ಕಾಂಗ್ರೆಸ್ʼಗಳು!! ʼಸಿದ್ದಸೂತ್ರಧಾರʼನಿಗೆ ಇದೆಲ್ಲ ಗೊತ್ತಿಲ್ಲವೇ? ಬಾಯಲ್ಲಿ ಜಾತ್ಯತೀತೆಯ ಜಪ ಮಾಡುತ್ತಲೇ ʼಸಂದೇಶ ಸನ್ನಿಧಿʼಯಲ್ಲಿ ʼಸಿದ್ಧಸೂತ್ರʼ ಹೆಣೆದ ʼರಕ್ಕಸ ರಾಜಕಾರಣʼಕ್ಕೆ ಕೊನೆಗಾಲ ಬಂದಿದೆ. ಆ ದಿನವೂ ಹತ್ತಿರದಲ್ಲೇ ಇದೆ ಎಂದು ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಮೋದಿ-ದೇವೇಗೌಡ ಭಾಯಿಭಾಯಿ: ಜೆಡಿಎಸ್ ನಾಯಕ ಎಚ್​ಡಿ ದೇವೇಗೌಡ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ