ನೈಸ್ ಯೋಜನೆಗೆ ನ್ಯಾಯ ಕೊಡಿ; ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಟ್ವೀಟ್ ವಾರ್​​

ಸಿದ್ದರಾಮಯ್ಯನವರೇ ನೀವು ಕರ್ನಾಟಕ ಸಿಎಂ, ನನಗೂ ಸಿಎಂ. ಮಹಾದೇವಪ್ಪಗೂ ಮುಖ್ಯಮಂತ್ರಿ, ಕಾಕಾ ಪಾಟೀಲರಿಗೂ ಮುಖ್ಯಮಂತ್ರಿ. ಇಂಥಾ ನಿಮ್ಮನ್ನು ‘ಸುಳ್ಳುರಾಮಯ್ಯ’ ಎಂದು ಕರೆಯಲು ನನಗೆ ಇಷ್ಟವಿಲ್ಲ ಎಂದು ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ನೈಸ್ ಯೋಜನೆಗೆ ನ್ಯಾಯ ಕೊಡಿ; ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಟ್ವೀಟ್ ವಾರ್​​
ಹೆಚ್​ಡಿ ಕುಮಾರಸ್ವಾಮಿ
Follow us
| Updated By: ಆಯೇಷಾ ಬಾನು

Updated on: Jul 23, 2023 | 7:43 AM

ಬೆಂಗಳೂರು, ಜುಲೈ 23: ನೈಸ್ ಕಂಪನಿ ನಿರ್ವಹಿಸುತ್ತಿರುವ ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್‌ ಕಾರಿಡಾರ್ ಯೋಜನೆಯನ್ನು ಸರ್ಕಾರದ ವಶಕ್ಕೆ ಪಡೆಯಬೇಕು ಎಂದು ಜೆಡಿಎಸ್‌(JDS), ಬಿಜೆಪಿ(BJP) ಒತ್ತಾಯಿಸಿದೆ. ಸದ್ಯ ಈ ಸಂಬಂಧ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ(HD Kumaraswamy) ಅವರು ಸಿಎಂ ಸಿದ್ದರಾಮಯ್ಯ(Siddaramaiah) ವಿರುದ್ಧ ಟ್ವೀಟ್ ವಾರ್ ನಡೆಸಿದ್ದಾರೆ.

ಸಿದ್ದರಾಮಯ್ಯನವರೇ ನೀವು ಕರ್ನಾಟಕ ಸಿಎಂ, ನನಗೂ ಸಿಎಂ. ಮಹಾದೇವಪ್ಪಗೂ ಮುಖ್ಯಮಂತ್ರಿ, ಕಾಕಾ ಪಾಟೀಲರಿಗೂ ಮುಖ್ಯಮಂತ್ರಿ. ಇಂಥಾ ನಿಮ್ಮನ್ನು ‘ಸುಳ್ಳುರಾಮಯ್ಯ’ ಎಂದು ಕರೆಯಲು ನನಗೆ ಇಷ್ಟವಿಲ್ಲ. ಏಕೆಂದರೆ, ನಿಮ್ಮ ಹೆಸರಿನಲ್ಲೇ ‘ರಾಮ’ ಇದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಟ್ವೀಟ್ ಪ್ರಹಾರ ನಡೆಸಿದ್ದಾರೆ.​​

ತಾವು ‘ಸತ್ಯರಾಮಯ್ಯ’ನವರೇ ಆಗಿದ್ದರೆ, ಸ್ವತಃ ತಾವುಗಳೇ ನೇಮಿಸಿದ್ದ, ತಮ್ಮದೇ ಸರ್ಕಾರದ ಕಾನೂನು ಸಚಿವರೇ ಮುಖ್ಯಸ್ಥರಾಗಿದ್ದ ಸದನ ಸಮಿತಿ ನೀಡಿದ್ದ ನೈಸ್ ಕರ್ಮಕಥೆಯನ್ನು ದಯಮಾಡಿ ಓದಿ. ನೈಸ್ ಅಕ್ರಮ ತನಿಖೆಗೆ ನಾನೇನು ಮಾಡಿದ್ದೆ ಎಂದು ಸಿಎಂ ಕೇಳಿದ್ದಾರೆ. ಈ ಬಾಲಿಶ ಪ್ರಶ್ನೆಗೆ ಗೌರವದಿಂದಲೇ ಉತ್ತರಿಸುವೆ. ನಾನು ಸಿಎಂ ಆಗಿದ್ದಾಗ ನನ್ನ ಜೊತೆಗಿದ್ದ ಅಡ್ವೋಕೇಟ್ ಜನರಲ್, ಅವರ ಕಾನೂನು ತಂಡ ನೈಸ್ ದೌಲತ್ತಿನ ಹುಟ್ಟಡಗಿಸಿತ್ತು. ಅಧಿಕಾರಿಗಳನ್ನು ಬೆದರಿಸಿಟ್ಟುಕೊಂಡಿದ್ದ ಆ ಕಂಪನಿಗೆ ಬೊಂಬೆ ತೋರಿಸಿದ್ದೆವು. ವಿವಿಧ ನ್ಯಾಯಾಲಯಗಳಲ್ಲಿ ಹೂಡಲಾಗಿದ್ದ ಎಲ್ಲಾ ನಿಂದನಾ ಅರ್ಜಿಗಳನ್ನು 2019 ಜುಲೈನಲ್ಲಿ ಗೌರವಾನ್ವಿತ ಸುಪ್ರೀಂ ಕೋರ್ಟ್ ವಜಾ ಮಾಡಿತ್ತು.

ಅದಕ್ಕಾಗಿ ಅಂದಿನ ಅಡ್ವೋಕೇಟ್ ಜನರಲ್, ಮತ್ತವರ ಕಾನೂನು ತಂಡವನ್ನು ನಾನು ಅಭಿನಂದಿಸಲೇಬೇಕು. ಹಿಂದಿನ ಬಿಜೆಪಿ ಸರಕಾರವೂ ಈ ಲೂಟಿ ಕಂಪನಿಯ ರೆಕ್ಕೆಪುಕ್ಕ ಕತ್ತರಿಸಿ ಹಾಕಿತ್ತು. ಅಂದಿಗೇ (2018) ನೈಸಿನ ಕೊಚ್ಚೆಯಲ್ಲಿ ಹೊರಳಾಡಿ ಪೊಗದಸ್ತಾಗಿ ಮೇಯ್ದು ಬಲಿತಿದ್ದ ಪ್ರಾಣಿಗಳನ್ನು ಎದುರು ಹಾಕಿಕೊಂಡು ನಾನು ತೆಗೆದುಕೊಂಡ ರಿಸ್ಕ್ ಸಣ್ಣದೇನಲ್ಲ. ಸಿದ್ದರಾಮಯ್ಯನವರೇ ನನ್ನ ಮೇಲೆ ಬಂದ ಒತ್ತಡಗಳ ಬಗ್ಗೆ ನಿಮಗೂ ಮಾಹಿತಿ ಇರಬಹುದು. ಆಗ ನೀವು ಮತ್ತು ನಿಮ್ಮ ಟೀಮು ನನಗೆ ಕೊಟ್ಟ ‘ನಿತ್ಯ ಕಿರುಕುಳ’ವನ್ನು ಮರೆಯಲಾದೀತೆ? ಎಂದು ಸಿದ್ದರಾಮಯ್ಯ ವಿರುದ್ಧ ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ನೈಸ್ ರಸ್ತೆ ಯೋಜನೆ ಸಂಪೂರ್ಣ ವಶಕ್ಕೆ ಪಡೆಯಬೇಕು: ಸರ್ಕಾರಕ್ಕೆ ಜೆಡಿಎಸ್​, ಬಿಜೆಪಿ ಆಗ್ರಹ

ನಿಮ್ಮದು ಪೂರ್ಣ ಬಹುಮತದ ಬಲಿಷ್ಠ ಸರಕಾರ, ನುಡಿದಂತೆ ನಡೆಯುವ ‘ಅಪರ ಹರಿಶ್ಚಂದ್ರ’ನ ಸರಕಾರ

ನಿಮ್ಮ ಹಂಗಿನಲ್ಲಿದ್ದ ನನಗೆ, ನಿಮ್ಮದೇ ಪಕ್ಷದವರ ವಿರುದ್ಧ ತನಿಖೆ ನಡೆಸಿ, ನೈಸ್ ಯೋಜನೆಯನ್ನು ಸರಕಾರದ ವಶಕ್ಕೆ ಪಡೆಯುವ ದಮ್ಮು ತಾಕತ್ತು ಇರಲಿಲ್ಲ, ನಿಜ ಒಪ್ಪಿಕೊಳ್ಳುತ್ತೇನೆ. ಆದರೆ, ನಿಮ್ಮದು ಪೂರ್ಣ ಬಹುಮತದ ಬಲಿಷ್ಠ ಸರಕಾರ, ನುಡಿದಂತೆ ನಡೆಯುವ ‘ಅಪರ ಹರಿಶ್ಚಂದ್ರ’ನ ಸರಕಾರ! ಹೌದಲ್ಲವೇ? ಹಾಗಿದ್ದರೆ ಏಕೆ ತಡ? ಸ್ವತಃ ನೀವೇ ನೇಮಿಸಿದ್ದ ಸದನ ಸಮಿತಿ (2014-2016) ವರದಿಯ ಮೇಲೆ ಖಡಕ್ ಕ್ರಮ ಜರುಗಿಸಿ. ವರದಿಯಲ್ಲಿ ನೈಸ್ ಅಕ್ರಮಗಳ ಭಾಗವತವೇ ತೆರೆದುಕೊಂಡಿದೆ. ಇಡೀ ಯೋಜನೆಯನ್ನು ಸರಕಾರದ ವಶಕ್ಕೆ ಪಡೆಯಲು ದಿಟ್ಟಹೆಜ್ಜೆ ಇಡಿ. ‘ಸಿದ್ದನೆಪ’ ಹೇಳಿ ಸಮಯವನ್ನು ಕೊಲ್ಲಬೇಡಿ? ಬಹುಮತ ಇದ್ದರೆ ಸಾಲದು, ಬದ್ಧತೆಯೂ ಇರಬೇಕು. ಅಲ್ಲವೇ? ಎಂದು ನೈಸ್ ಯೋಜನೆಯ ಅಕ್ರಮದ ಬಗ್ಗೆ ಕ್ರಮ ಕೈಗೊಳ್ಳಲು ಹೆಚ್​ಡಿ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ನಾನು ರೈತರ ಸಾಲಮನ್ನಾ ಮಾಡಿದೆ ಎನ್ನುವುದು ಎಷ್ಟು ಸತ್ಯವೋ, ಅದಕ್ಕೆ ನೀವು ಹೆಜ್ಜೆಹೆಜ್ಜೆಗೂ ಅಡ್ಡಿ ಮಾಡಿದ್ದೂ ಅಷ್ಟೇ ಸತ್ಯ. ಭಾಗ್ಯಗಳಿಗೆ ನಯಾಪೈಸೆ ಕಡಿಮೆ ಆಗಬಾರದು ಎಂದು ನನಗೆ ಕೊಟ್ಟ ಚಿತ್ರಹಿಂಸೆ ಅಸತ್ಯವೇ? ಗಟ್ಟಿ ದನಿಯಲ್ಲಿ ಅಬ್ಬರಿಸಿ ಹೇಳಿದರೆ ಸುಳ್ಳು ಸತ್ಯವಾಗುವುದಿಲ್ಲ. ಸತ್ಯರಾಮಯ್ಯರಾಗಿ ಇತಿಹಾಸದಲ್ಲಿ ದಾಖಲಾಗಿ ಎಂದು ಟ್ವೀಟ್ ಮಾಡಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ತಾಜಾ ಸುದ್ದಿ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್
ಹೆಣ್ಣಿಗಾಗಿ ಬದುಕು ಹಾಳುಮಾಡಿಕೊಂಡೆಯಲ್ಲ ಎಂದ ಹುಬ್ಬಳ್ಳಿಯ ದರ್ಶನ್ ಅಭಿಮಾನಿ
ಹೆಣ್ಣಿಗಾಗಿ ಬದುಕು ಹಾಳುಮಾಡಿಕೊಂಡೆಯಲ್ಲ ಎಂದ ಹುಬ್ಬಳ್ಳಿಯ ದರ್ಶನ್ ಅಭಿಮಾನಿ
ಬೀದರ್​​: ಅಂತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯ
ಬೀದರ್​​: ಅಂತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯ
ವಾಪಸ್ಸಾಗಲು ಬಿಜೆಪಿಯಿಂದ ಕರೆ ಬಂದಿದೆ, ಅಭಿಪ್ರಾಯ ತಿಳಿಸಿಲ್ಲ: ಈಶ್ವರಪ್ಪ
ವಾಪಸ್ಸಾಗಲು ಬಿಜೆಪಿಯಿಂದ ಕರೆ ಬಂದಿದೆ, ಅಭಿಪ್ರಾಯ ತಿಳಿಸಿಲ್ಲ: ಈಶ್ವರಪ್ಪ
ರಿಲಯನ್ಸ್​​ ಜಿಯೋ ರೀಚಾರ್ಜ್ ಪ್ಲ್ಯಾನ್ ಆಯ್ತು ದುಬಾರಿ | ಶೇ 22ರಷ್ಟು ಬೆಲೆ
ರಿಲಯನ್ಸ್​​ ಜಿಯೋ ರೀಚಾರ್ಜ್ ಪ್ಲ್ಯಾನ್ ಆಯ್ತು ದುಬಾರಿ | ಶೇ 22ರಷ್ಟು ಬೆಲೆ
ಚಾರ್ಮಾಡಿ ಘಾಟ್ ಇಳುಕಲು ಪ್ರದೇಶದ ಜಲಪಾತಗಳಲ್ಲಿ ಯುವಕರ ಅಪಾಯಕಾರಿ ಹುಚ್ಚಾಟ
ಚಾರ್ಮಾಡಿ ಘಾಟ್ ಇಳುಕಲು ಪ್ರದೇಶದ ಜಲಪಾತಗಳಲ್ಲಿ ಯುವಕರ ಅಪಾಯಕಾರಿ ಹುಚ್ಚಾಟ
ವಿಧಾನಸಭೆಯಲ್ಲಿ ಮೆಜಾರಿಟಿಯ ಕಾರಣ ಸಿದ್ದರಾಮಯ್ಯ ಸೇಫ್ ಆಗಿದ್ದಾರೆ: ಸಿಟಿ ರವಿ
ವಿಧಾನಸಭೆಯಲ್ಲಿ ಮೆಜಾರಿಟಿಯ ಕಾರಣ ಸಿದ್ದರಾಮಯ್ಯ ಸೇಫ್ ಆಗಿದ್ದಾರೆ: ಸಿಟಿ ರವಿ
ದೇವರಮನೆ, ಚಾರ್ಮಾಡಿಯಲ್ಲಿ ರಸ್ತೆ ಮಧ್ಯೆ ವಾಹನ ನಿಲ್ಸಿ ಪ್ರವಾಸಿಗರ ಹುಚ್ಚಾಟ
ದೇವರಮನೆ, ಚಾರ್ಮಾಡಿಯಲ್ಲಿ ರಸ್ತೆ ಮಧ್ಯೆ ವಾಹನ ನಿಲ್ಸಿ ಪ್ರವಾಸಿಗರ ಹುಚ್ಚಾಟ