AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಹೃದಯಶಸ್ತ್ರಚಿಕಿತ್ಸೆ ಯಶಸ್ವಿ, ಚೆನ್ನೈನತ್ತ ಜೆಡಿಎಸ್ ನಾಯಕರು

ಚೆನ್ನೈನ ಅಪೋಲೊ ಆಸ್ಪತ್ರೆಯಲ್ಲಿ 3ನೇ ಬಾರಿ ನಡೆದ ಹೆಚ್​ಡಿ ಕುಮಾರಸ್ವಾಮಿ ಅವರ​​​ ಹೃದಯ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ನುರಿತ ವೈದ್ಯರ ತಂಡದಿಂದ ಸುಮಾರು 2 ಗಂಟೆಗಳ ಕಾಲ ಹೃದಯಶಸ್ತ್ರಚಿಕಿತ್ಸೆ ನಡೆಯಿತು. ಶಸ್ತ್ರಚಿಕಿತ್ಸೆ ಯಶಸ್ವಿಯಾಗಲೆಂದು ರಾಮನಗರ, ಮಂಡ್ಯ, ಮೈಸೂರು ಕಡೆಗಳಲ್ಲಿ ಅಭಿಮಾನಿಗಳು, ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದ್ದರು.

ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಹೃದಯಶಸ್ತ್ರಚಿಕಿತ್ಸೆ ಯಶಸ್ವಿ, ಚೆನ್ನೈನತ್ತ ಜೆಡಿಎಸ್ ನಾಯಕರು
ಹೆಚ್​.ಡಿ.ಕುಮಾರಸ್ವಾಮಿ
Follow us
TV9 Web
| Updated By: ಆಯೇಷಾ ಬಾನು

Updated on:Mar 21, 2024 | 1:46 PM

ಬೆಂಗಳೂರು, ಮಾರ್ಚ್​.21: ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ (HD Kumaraswamy) ಅವರ ಹೃದಯಶಸ್ತ್ರಚಿಕಿತ್ಸೆ (Heart Operation) ಯಶಸ್ವಿಯಾಗಿದೆ. ಚೆನ್ನೈನ ಅಪೋಲೊ ಆಸ್ಪತ್ರೆಯಲ್ಲಿ ನುರಿತ ವೈದ್ಯರ ತಂಡದಿಂದ ಸುಮಾರು 2 ಗಂಟೆಗಳ ಕಾಲ ನಡೆದ ಹೃದಯಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಕಳೆದ ಮೂರು ದಿನಗಳ ಹಿಂದೆಯೇ ಹೆಚ್​ಡಿಕೆ ಚೆನ್ನೈನ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಮಾಜಿ ಸಿಎಂ ಕುಮಾರಸ್ವಾಮಿಗೆ 3ನೇ ಬಾರಿ​​​ ಹೃದಯ ಶಸ್ತ್ರಚಿಕಿತ್ಸೆ ನೆರವೇರಿತು.

H.D.ಕುಮಾರಸ್ವಾಮಿಗೆ ಹೃದಯ ಶಸ್ತ್ರಚಿಕಿತ್ಸೆ ಹಿನ್ನೆಲೆ ಶಾಸಕರಾದ ಸಮೃದ್ಧಿ ಮಂಜು, ಹರೀಶ್ ಗೌಡ, ಸ್ವರೂಪ್ ಸೇರಿದಂತೆ JDS ನಾಯಕರು ಚೆನ್ನೈಗೆ ಆಗಮಿಸಿದ್ದಾರೆ. ಇನ್ನು ಮತ್ತೊಂದೆಡೆ ರಾಮನಗರ, ಮಂಡ್ಯ, ಹಾಸನ, ಮೃಸೂರು ಸೇರಿದಂತೆ ರಾಜ್ಯಾದ್ಯಂತ ಹೆಚ್​ಡಿ ಕುಮಾರಸ್ವಾಮಿ ಅಭಿಮಾನಿಗಳು, ಬೆಂಬಲಿಗರು ಪ್ರಾರ್ಥನೆ ಸಲ್ಲಿಸಿದರು.

ಶೀಘ್ರ ಗುಣಮುಖವಾಗುವಂತೆ ಅಭಿಮಾನಿಗಳಿಂದ ಪ್ರಾರ್ಥನೆ

3ನೇ ಬಾರಿ ಹೃದಯಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ಹೆಚ್​ಡಿ ಕುಮಾರಸ್ವಾಮಿಯವರು ಆಸ್ಪತ್ರೆಗೆ ಸೇರುತ್ತಿದ್ದಂತೆ ಅಭಿಮಾನಿಗಳಲ್ಲಿ ಭಯ ಹೆಚ್ಚಾಗಿತ್ತು. ಹೀಗಾಗಿ ಕುಮಾರಸ್ವಾಮಿ ಶೀಘ್ರ ಗುಣಮುಖವಾಗುವಂತೆ ಅಭಿಮಾನಿಗಳು ದೇವರ ಮೊರೆ ಹೋಗಿದ್ದರು. ಮೈಸೂರು ಅರಮನೆಯ ಕೋಟೆ ಆಂಜನೇಯಸ್ವಾಮಿ ದೇಗುಲದಲ್ಲಿ ಕುಮಾರಸ್ವಾಮಿ ಅಭಿಮಾನಿಗಳು ಹಾಗು ಜೆಡಿಎಸ್ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದರು. ಕುಮಾರಸ್ವಾಮಿ ಭಾವಚಿತ್ರ ಹಿಡಿದು ಪೂಜೆ ಸಲ್ಲಿಸಿ ಕುಮಾರಸ್ವಾಮಿ ಆರೋಗ್ಯ ಸುಧಾರಿಸಿ ಗುಣಮುಖರಾಗುವಂತೆ ಪ್ರಾರ್ಥಿಸಿದರು.

ಇದನ್ನೂ ಓದಿ: ಜೆಡಿಎಸ್​ಗೆ ಮೂರು ಕ್ಷೇತ್ರ; ಮಂಡ್ಯದಿಂದ ಸ್ಪರ್ಧಿಸುವಂತೆ ಹೆಚ್​ಡಿ ಕುಮಾರಸ್ವಾಮಿಗೆ ಅಮಿತ್ ಶಾ ಸಲಹೆ

ಇನ್ನು ಮಂಡ್ಯದಲ್ಲೂ ಕೂಡ ಹೆಚ್​ಡಿಕೆ ಶೀಘ್ರವಾಗಿ ಗುಣಮುಖರಾಗಲೆಂದು ವಿಶೇಷ ಪೂಜೆ ಸಲ್ಲಿಸಲಾಯಿತು. ಜೆಡಿಎಸ್ ಕಾರ್ಯಕರ್ತರು ವಿದ್ಯಾಗಣಪತಿ ದೇವಸ್ಥಾನದಲ್ಲಿ ಹೆಚ್​ಡಿಕೆ ಹೆಸರಲ್ಲಿ ಅರ್ಚನೆ ಮಾಡಿಸಿ ವಿಶೇಷ ಪೂಜೆ ಸಲ್ಲಿಸಿದರು. ಕುಮಾರಸ್ವಾಮಿ ಬೇಗನೆ ಗುಣಮುಖರಾಗಲೆಂದು ದೇವರಲ್ಲಿ ಪ್ರಾರ್ಥಿಸಿದರು.

ರಾಮನಗರದ ಚನ್ನಪಟ್ಟಣದ ಕೆಂಗಲ್ ಆಂಜನೇಯಸ್ವಾಮಿ ದೇವಾಲಯದಲ್ಲಿ ಜೆಡಿಎಸ್ ಕಾರ್ಯಕರ್ತರು ಪ್ರಾರ್ಥನೆ ಸಲ್ಲಿಸಿದರು. 101 ಈಡುಗಾಯಿ ಒಡೆದು ಆರೋಗ್ಯ ಚೇತರಿಕೆಗೆ ಪ್ರಾರ್ಥಿಸಿದರು. ಇನ್ನು ಚೆನ್ನೈನಿಂದ ಆರೋಗ್ಯವಾಗಿ ವಾಪಾಸ್ ಆಗಲಿ ಅಂತ ಮೃತ್ಯುಂಜಯ ಹೋಮ ಮಾಡಲಾಯಿತು. ರಾಮನಗರ ಶ್ರೀ‌ ಮಲ್ಲೇಶ್ವರ ದೇವಸ್ಥಾನದಲ್ಲಿ‌ ಜೆಡಿಎಸ್ ಕಾರ್ಯಕರ್ತರು ಈಡುಗಾಯಿ ಒಡೆದು ಪೂಜೆ ಸಲ್ಲಿಸಿದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:46 pm, Thu, 21 March 24