AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ರದ ಮೂಲಕ ಭಾವನಾತ್ಮಕವಾಗಿ ರೈತರಿಗೆ ಹತ್ತಿರವಾಗಲು‌ ಮುಂದಾದ ಹೆಚ್ ಡಿ ಕುಮಾರಸ್ವಾಮಿ

ಅಭಿಮಾನಿಗಳಿಂದ ರೈತ ನಾಯಕ ಎಂದು ಕರೆಸಿಕೊಳ್ಳುವ ಹೆಚ್​ಡಿ ಕುಮಾರಸ್ವಾಮಿ ರೈತ ಅಸ್ತ್ರ ಪ್ರಯೋಗಿಸಿ ಚುನಾವಣೆ ಎದುರಿಸಲು ಮುಂದಾಗಿದ್ದಾರೆ. ರೈತರಿಗೆ ಭಾವನಾತ್ಮಕ ಪತ್ರ ಬರೆದಿದ್ದಾರೆ.

ಪತ್ರದ ಮೂಲಕ ಭಾವನಾತ್ಮಕವಾಗಿ ರೈತರಿಗೆ ಹತ್ತಿರವಾಗಲು‌ ಮುಂದಾದ ಹೆಚ್ ಡಿ ಕುಮಾರಸ್ವಾಮಿ
ಆಯೇಷಾ ಬಾನು
|

Updated on:Mar 23, 2023 | 12:03 PM

Share

ಬೆಂಗಳೂರು: ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ(Karnataka Assembly Elections 2023) ಗೆಲುವು ಸಾಧಿಸಬೇಕೆಂದು ಪಂಚರತ್ನ ಯಾತ್ರೆಯ ಮೂಲಕ ಮತದಾರರನ್ನು ತಲುಪುತ್ತಿರುವ ಹೆಚ್​ಡಿ ಕುಮಾರಸ್ವಾಮಿ(HD Kumaraswamy) ರೈತರಿಗೆ ಭಾವನಾತ್ಮಕ ಪತ್ರ ಬರೆದಿದ್ದಾರೆ. ಪತ್ರದಲ್ಲಿ 25 ಸಾವಿರ ಕೋಟಿ ಸಾಲಮನ್ನಾ ಮಾಡಿದ ಬಗ್ಗೆ, ಪಂಚರತ್ನ ರಥಯಾತ್ರೆ ಬಗ್ಗೆ ಹಾಗೂ ವಿಪಕ್ಷಗಳನ್ನು ಟೀಕೆ ಮಾಡಿ ಬರೆದಿದ್ದಾರೆ. ರಾಜ್ಯದೆಲ್ಲೆಡೆ ಈ ಪತ್ರ ಹಂಚಿ ಪ್ರಚಾರ ನಡೆಸಲು ಹೆಚ್​​ಡಿ ಕುಮಾರಸ್ವಾಮಿ ಪ್ಲಾನ್ ಮಾಡಿಕೊಂಡಿದ್ದಾರೆ.

ಅಭಿಮಾನಿಗಳಿಂದ ರೈತ ನಾಯಕ ಎಂದು ಕರೆಸಿಕೊಳ್ಳುವ ಹೆಚ್​ಡಿ ಕುಮಾರಸ್ವಾಮಿ ರೈತ ಅಸ್ತ್ರ ಪ್ರಯೋಗಿಸಿ ಚುನಾವಣೆ ಎದುರಿಸಲು ಮುಂದಾಗಿದ್ದಾರೆ. ಹೀಗಾಗಿ ಸಾಲಮನ್ನಾದಿಂದ 27 ಲಕ್ಷ ಕುಟುಂಬಗಳಿಗೆ ಅನುಕೂಲವಾಗಿರುವ ಬಗ್ಗೆ ಪ್ರಸ್ತಾಪಿಸಿ ರೈತರಿಗೆ ಭಾವನಾತ್ಮಕವಾಗಿ ಪತ್ರ ಬರೆದಿದ್ದಾರೆ. ಹಾಗೂ ಪತ್ರದಲ್ಲಿ ಕಾಂಗ್ರೆಸ್, ಬಿಜೆಪಿ ಜೊತೆಗಿನ ಸಮ್ಮಿಶ್ರ ಸರ್ಕಾರದ ಬಗ್ಗೆ ಹಾಗೂ ಆಗ ಆದ ಅನ್ಯಾಯದ ಬಗ್ಗೆ ಉಲ್ಲೇಖಿಸಿದ್ದಾರೆ. ಪತ್ರದ ಮೂಲಕ ಕುಮಾರಸ್ವಾಮಿ ಪರ ಅನುಕಂಪದ ಅಲೆ ಸೃಷ್ಟಿಯಾಗಲಿದೆ.

ಹೆಚ್​ಡಿ ಕುಮಾರಸ್ವಾಮಿ ರೈತರಿಗೆ ಬರೆದ ಪತ್ರದಲ್ಲಿ ಏನಿದೆ?

ಅನ್ನದಾತರ ಚರಣಗಳಿಗೆ…

ನಾಡಿನ ಸಮಸ್ತ ಅನ್ನದಾತ ಬಂಧುಗಳಿಗೆ ನನ್ನ ನಮಸ್ಕಾರಗಳು, ನಿಮ್ಮ ಮನೆ ಮಗನಾದ ನಾನು ಅನಿವಾರ್ಯ ಕಾರಣದಿಂದ ಈ ಪತ್ರ ಬರೆಯುತ್ತಿದ್ದೇನೆ. ತಮಗೆಲ್ಲರಿಗೂ ವಿಷಯ ಗೊತ್ತಿಲ್ಲ ಎಂದಲ್ಲ, ಮತ್ತೊಮ್ಮೆ ನೆನಪಿಸುವುದು ನನ್ನ ಕರ್ತವ್ಯ.

ಎರಡು ಬಾರಿ ನಾನು ಆಕಸ್ಮಿಕವಾಗಿ ಈ ರಾಜ್ಯದ ಮುಖ್ಯಮಂತ್ರಿಯಾದೆ. ಒಮ್ಮೆ ಬಿಜೆಪಿ ಜತೆ, ಇನ್ನೊಮ್ಮೆ ಕಾಂಗ್ರೆಸ್ ಜತೆ, ಎರಡೂ ಬಾರಿ ನಾನು ಆಡಳಿತ ನಡೆಸಿದ ಆ ಅವಧಿಯಲ್ಲಿ ಅನುಭವಿಸಿದ ಚಿತ್ರಹಿಂಸೆ ನನಗಷ್ಟೇ ಗೊತ್ತು. ಆದರೂ, ನಾನು ನಿಮಗೆ ಕೊಟ್ಟ ಮಾತು ತಪ್ಪಲಿಲ್ಲ. 2006ರಲ್ಲಿ ನೀವೆಲ್ಲರೂ ಅತೀವ ಸಂಕಷ್ಟಕ್ಕೆ ಸಿಲುಕಿದ್ದೀರಿ. ನಿಮ್ಮಲ್ಲಿ ಅನೇಕರು ಸಾಲಕ್ಕೆ ಸಿಲುಕಿ ಸಾವಿನ ಹೊಸ್ತಿಲಲ್ಲಿ ನಿಂತಿದ್ದಿರಿ, ಆ ದುರಿತ ಕಾಲದಲ್ಲಿ ನಿಮ್ಮ ನೆರವಿಗೆ ಧಾವಿಸುವುದು ನನ್ನ ಕರ್ತವ್ಯವಾಗಿತ್ತು. ಆಗ 2,600 ಕೋಟಿ ರೂ. ಸಾಲಮನ್ನಾ ಮಾಡಬೇಕು ಎಂದಾಗ ಅಂದಿನ ಮಿತ್ರಪಕ್ಷ ಬಿಜೆಪಿ ಸ್ಪಷ್ಟವಾಗಿ ವಿರೋಧ ಮಾಡಿತ್ತು, ಆಗ ನನ್ನ ಸಂಪುಟದಲ್ಲಿ ಉಪ ಮುಖ್ಯಮಂತ್ರಿಯಾಗಿ ಹಣಕಾಸು ಇಲಾಖೆ ಹೊಣೆ ಹೊತ್ತುಕೊಂಡಿದ್ದ ಶ್ರೀ ಬಿ.ಎಸ್.ಯಡಿಯೂರಪ್ಪ ಅವರು, ಸಾಲಮನ್ನಾ ಮಾಡಲು ಹಣ ಇಲ್ಲ, ನಾವೇನು ನೋಟು ಪ್ರಿಂಟ್ ಮಾಡಲು ಆಗುತ್ತದೆಯೇ?” ಎಂದು ಮೂದಲಿಸಿದ್ದರು. ಈ ಮಾತು ನನಗೆ ತೀವ್ರ ಘಾಸಿ ಉಂಟು ಮಾಡಿತ್ತು. ಆದರೂ, ಬಿಜೆಪಿ ಒತ್ತಡಕ್ಕೆ ಮಣಿಯದೆ 2,600 ಕೋಟಿ ರೂ.ಗಳಷ್ಟು ನಿಮ್ಮ ಸಾಲಮನ್ನಾ ಮಾಡಿದ್ದೆ.

ಇನ್ನು 2018, ಆ ಚುನಾವಣೆಗೆ ಮುನ್ನ 5 ವರ್ಷ ಅಧಿಕಾರದಲ್ಲಿದ್ದ ಕಾಂಗ್ರೆಸ್‌ ಕಾಲದಲ್ಲಿ ರಾಜ್ಯದಲ್ಲಿ ನೀವೆಲ್ಲರೂ ಕಂಡೂ ಕೇಳರಿಯದಷ್ಟು ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಿರಿ, ಒಂದೆಡೆ ಬರ, ಅಲ್ಪಸ್ವಲ್ಪ ಫಸಲಿಗೆ ಸಿಗದ ಬೆಲೆ. ಇನ್ನೊಂದೆಡೆ ಸಾಲ ಕೊಟ್ಟ ಬ್ಯಾಂಕುಗಳಿಂದ, ಖಾಸಗಿ ಲೇವಾದೇವಿಗಾರರಿಂದ ಕಿರುಕುಳ, ಅನೇಕ ರೈತರು ಮಾನಕ್ಕೆ ಹೆದರಿ ನೇಣಿಗೆ ಕೊರಳು ಕೊಟ್ಟರು. ಕೆಲವು ರೈತರು ಕೀಟನಾಶಕ ಸೇವಿಸಿ ಜೀವ ಚೆಲ್ಲಿದರು. ಮಂಡ್ಯ ಜಿಲ್ಲೆಯಲ್ಲೇ 200ಕ್ಕೂ ರೈತರು ಸಾಲಕ್ಕೆ ಹೆದರಿ ಜೀವ ಕಳೆದುಕೊಂಡರು. ರಾಜ್ಯದ ಉದ್ದಗಲಕ್ಕೂ ಅನ್ನದಾತರ ಸಾವಿನ ಸರಣಿಯೇ ಆರಂಭವಾಯಿತು. ಇದನ್ನು ನೋಡಿ ನಿಮ್ಮಂತೆಯೇ ನನ್ನ ಮನಸ್ಸು ತಡೆಯಲಿಲ್ಲ. ಆಗ ಅಧಿಕಾರದಲ್ಲಿದ್ದ ಪೂರ್ಣ ಬಹುಮತದ ಕಾಂಗ್ರೆಸ್‌ ಸರಕಾರ ಸಂಕಷ್ಟದಲ್ಲಿದ್ದ ನಿಮ್ಮ ನೆರವಿಗೆ ಬರಲಿಲ್ಲ. ರಾಜ್ಯದ ಉದ್ದಗಲಕ್ಕೂ ಕಾಲಿಗೆ ಚಕ್ರ ಕಟ್ಟಿಕೊಂಡವನಂತೆ ತಿರುಗಾಡಿದೆ. ಪ್ರತಿ ಸಾವಿನ ಮನೆಗೆ ಹೋದೆ. ನನ್ನ ಕೈಲಾದಷ್ಟು ಸಹಾಯ ಮಾಡಿದೆ. ಮತ್ತೆ ಯಾರೂ ಆತ್ಮಹತ್ಯೆ ಮಾಡಿಕೊಳ್ಳಬೇಡಿ ಎಂದು ಅಂಗಲಾಚಿ ಬೇಡಿಕೊಂಡೆ. ನಾನಿದ್ದೇನೆ, ನನ್ನ ಸರಕಾರ ಬಂದರೆ ನಾನು ನಿಮ್ಮ ಸಾಲಮನ್ನು ಮಾಡುತ್ತೇನೆ ಎಂದು ಮಾತು ಕೊಟ್ಟೆ.

ಆದರೆ, 2018ರ ಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ ಬಂದಿದ್ದು ಕೇವಲ 39 ಸ್ಥಾನ. ರೈತರ ಸಾಲಮನ್ನಾ ಮಾಡುವ ನನ್ನ ಸಂಕಲ್ಪ ಕಮರಿ ಹೋಯಿತೆಂದು ದುಃಖವಾಯಿತು. ಆದರೆ, ನನ್ನ ಸಂಕಲ್ಪ, ರೈತರ ಮೇಲಿನ ಕಾಳಜಿ ದೊಡ್ಡದು ಎನ್ನುವುದು ಪುನಹ ಸಾಬೀತಾಯಿತು. ಕಾಂಗ್ರೆಸ್‌ ಜತೆ ಮೈತ್ರಿ ಸರಕಾರ ರಚನೆ ಆಯಿತು. ಸಾಲಮನ್ನಾ ಮಾಡಬೇಕು ಎಂದಾಗ, ಕಾಂಗ್ರೆಸ್ ನಿಂದಲೂ ತೀವ್ರ ವಿರೋಧ ಸಾಲಮನ್ನಾ ಭರವಸೆ ನಿಮ್ಮದು, ನಮ್ಮದಲ್ಲ, ನಿಮಗೆ ಹೇಗೋ ಬಹುಮತ ಬಂದಿಲ್ಲ, ಸಾಲಮನ್ನಾ ಆಗಲ್ಲ ಎಂದು ಜನರಿಗೆ ಹೇಳಿಬಿಡಿ ” ಎಂದು ಕಾಂಗ್ರೆಸ್ಸಿಗರು ನನ್ನ ಮೇಲೆ ಭಾರೀ ಒತ್ತಡ ಹೇರಿದರು. ಅಷ್ಟೇ ಅಲ್ಲ, ” ನಮ್ಮ ಭಾಗ್ಯಗಳು ಯಾವೂ ನಿಲ್ಲುವ ಹಾಗಿಲ್ಲ. ಒಂದು ವೇಳೆ ನಿಂತರೆ ಈ ಸರಕಾರ ಇರುವುದೇ ಇಲ್ಲ” ಎನ್ನುವ ಧಮ್ಮಿ ಬೇರೆ ಹಾಕಿದ್ದರು ಎಂದು ಹೆಚ್​ಡಿ ಕುಮಾರಸ್ವಾಮಿ ರೈತರಿಗೆ ಭಾವನಾತ್ಮಕ ಪತ್ರ ಬರೆದಿದ್ದಾರೆ.

JDS Letter

ಹೆಚ್​ಡಿ ಕುಮಾರಸ್ವಾಮಿ ರೈತರಿಗೆ ಬರೆದ ಪತ್ರ

JDS Letter

ಹೆಚ್​ಡಿ ಕುಮಾರಸ್ವಾಮಿ ರೈತರಿಗೆ ಬರೆದ ಪತ್ರ

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:01 pm, Thu, 23 March 23

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು