ಮಹಿಳೆಯರ ಬಗ್ಗೆ ಕುಮಾರಸ್ವಾಮಿ ವಿವಾದಾತ್ಮಕ ಹೇಳಿಕೆ: ಸ್ವಯಂಪ್ರೇರಿತ ಕೇಸ್ ದಾಖಲಿಸಿಕೊಂಡ ಮಹಿಳಾ ಆಯೋಗ

ಮಹಿಳೆಯರ ಬಗ್ಗೆ ಹೆಚ್‌.ಡಿ.ಕುಮಾರಸ್ವಾಮಿ (HD Kumaraswamy) ಅವರು ನೀಡಿದ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ರಾಜ್ಯ ಮಹಿಳಾ ಆಯೋಗ ಸ್ವಯಂಪ್ರೇರಿತ ಕೇಸ್ ದಾಖಲಿಸಿಕೊಂಡಿದೆ. ಹೌದು, ಮಹಿಳೆಯರ ಘನತೆಗೆ, ಚಾರಿತ್ರ್ಯಕ್ಕೆ ಕುಮಾರಸ್ವಾಮಿ ಅವರು ಧಕ್ಕೆ ತಂದಿದ್ದಾರೆ. ಈ ಹಿನ್ನಲೆ ಪ್ರಕರಣ ದಾಖಲಿಸಲಾಗಿದೆ.

ಮಹಿಳೆಯರ ಬಗ್ಗೆ ಕುಮಾರಸ್ವಾಮಿ ವಿವಾದಾತ್ಮಕ ಹೇಳಿಕೆ: ಸ್ವಯಂಪ್ರೇರಿತ ಕೇಸ್ ದಾಖಲಿಸಿಕೊಂಡ ಮಹಿಳಾ ಆಯೋಗ
ಹೆಚ್​ಡಿ ಕುಮಾರಸ್ವಾಮಿ
Follow us
Vinay Kashappanavar
| Updated By: ಕಿರಣ್ ಹನುಮಂತ್​ ಮಾದಾರ್

Updated on:Apr 14, 2024 | 3:56 PM

ಬೆಂಗಳೂರು, ಏ.14: ಗ್ಯಾರಂಟಿಗಳಿಂದ ಹಳ್ಳಿ ಹೆಣ್ಮಕ್ಕಳು ದಾರಿ ತಪ್ಪಿದ್ದಾರೆ ಎಂಬ ಹೆಚ್‌.ಡಿ.ಕುಮಾರಸ್ವಾಮಿ (HD Kumaraswamy) ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ರಾಜ್ಯ ಮಹಿಳಾ ಆಯೋಗ ಸ್ವಯಂಪ್ರೇರಿತ ಕೇಸ್ ದಾಖಲಿಸಿಕೊಂಡಿದೆ. ಮಹಿಳೆಯರ ಘನತೆಗೆ, ಚಾರಿತ್ರ್ಯಕ್ಕೆ ಕುಮಾರಸ್ವಾಮಿ ಅವರು ಧಕ್ಕೆ ತಂದಿದ್ದಾರೆ. ಈ ಹಿನ್ನಲೆಯಲ್ಲಿ ಕುಮಾರಸ್ವಾಮಿ ಹೇಳಿಕೆಯನ್ನು ಮಹಿಳಾ ಆಯೋಗ ಗಂಭೀರವಾಗಿ ಪರಿಗಣಿಸಿ ಸುಮೋಟೋ‌ ಪ್ರಕರಣ ದಾಖಲಿಸಿಕೊಂಡಿದ್ದು, ಈ ಬಗ್ಗೆ ನೋಟಿಸ್‌ ಜಾರಿ ಮಾಡಲಿದೆ.

ಘಟನೆ ವಿವರ

ನಿನ್ನೆ(ಏ.13) ತುಮಕೂರು ಜಿಲ್ಲೆಯ ತುರುವೇಕೆರೆಯಲ್ಲಿ ವಿ.ಸೋಮಣ್ಣ ಪರ ಪ್ರಚಾರ ಭಾಷಣದಲ್ಲಿ ಹೆಚ್​ಡಿ ಕುಮಾರಸ್ವಾಮಿ​ ಮಾತನಾಡಿ , ‘ಗ್ಯಾರಂಟಿಗಾಗಿ ಯಾವ ಜೇಬಿಗೆ ಕೈ ಹಾಕಿದ್ದಾರೆ ಎಂದು ಹೇಳುತ್ತಾ, ಇವತ್ತಿನ ಸರ್ಕಾರ ಕಳೆದ ಚುನಾವಣೆಯಲ್ಲಿ ಐದು ಗ್ಯಾರಂಟಿ ಘೋಷಣೆ ಮಾಡಿ ನನ್ನ ಹಳ್ಳಿಯ ತಾಯಂದಿರು ಸ್ವಲ್ಪ ದಾರಿ ತಪ್ಪಿದ್ದಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ರಾಜ್ಯದ ಹಲವೆಡೆ ವಿರೋಧ ವ್ಯಕ್ತವಾಗಿದೆ.

ಇದನ್ನೂ ಓದಿ:ಗ್ಯಾರೆಂಟಿಯಿಂದ ಮಹಿಳೆಯರು ದಾರಿ ತಪ್ಪಿದ್ದಾರೆ: ಕುಮಾರಸ್ವಾಮಿ ವಿರುದ್ಧ ಮುಗಿಬಿದ್ದ ಕಾಂಗ್ರೆಸ್ ನಾಯಕರು

ನಾನು ಮಹಿಳೆಯರನ್ನು ಅಪಮಾನ ಮಾಡಿಲ್ಲ-ಹೆಚ್‌.ಡಿ.ಕುಮಾರಸ್ವಾಮಿ

ಇನ್ನು ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಹೆಚ್​ಡಿಕೆ, ‘ಗ್ಯಾರಂಟಿ ಯೋಜನೆ ಹೆಸರಿನಲ್ಲಿ ನಿಮ್ಮನ್ನು ದಾರಿ ತಪ್ಪಿಸುತ್ತಿದ್ದಾರೆ. ನಾನು ಮಹಿಳೆಯರನ್ನು ಅಪಮಾನ ಮಾಡಿಲ್ಲ. ಮುಗ್ಧ ಜನರನ್ನು, ಮಹಿಳೆಯರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದಿದ್ದೇನೆ. ಕಷ್ಟ ಎಂದು ಬಂದಾಗ ನಾನು ಆಶ್ರಯ ನೀಡಿದ್ದೇನೆ. ನಾನು ಸಿಎಂ ಆಗಿದ್ದಾಗ ಮಹಿಳೆಯರಿಗಾಗಿ ಸಾಕಷ್ಟು ಯೋಜನೆ ತಂದಿದ್ದೇನೆ. ಮಹಿಳೆಯರ‌ ಕೂಗಿಗೆ ಸ್ಪಂದಿಸಿ ರಾಜ್ಯದಲ್ಲಿ ಸರಾಯಿ‌ ನಿಷೇಧಿಸಿದ್ದೇನೆ. ಮಹಿಳೆಯರ ಬಗ್ಗೆ ನಾನು ಕೇವಲವಾಗಿ ಮಾತನಾಡುವುದಿಲ್ಲ. ಅಸಡ್ಡೆಯಿಂದ ಕಂಡಿಲ್ಲ, ಅಪಮಾನ ಆಗುವ ರೀತಿ ಎಲ್ಲೂ ಹೇಳಿಲ್ಲ ಎಂದು ಸ್ಪಷ್ಟನೆ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:17 pm, Sun, 14 April 24