AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚನ್ನಪಟ್ಟಣದಲ್ಲಿ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ: ಸಿ. ಪಿ ಯೋಗೇಶ್ವರ ವಿರುದ್ಧ ಹೆಚ್​ ಡಿ ಕುಮಾರಸ್ವಾಮಿ ಅಸಮಾದಾನ

ಇಂದು ನನ್ನ ಕ್ಷೇತ್ರ ಚನ್ನಪಟ್ಟಣದಲ್ಲಿ ಸರ್ಕಾರದ ಕೆಲಸಗಳ ಶಂಕುಸ್ಥಾಪನೆಗೆ ಸರ್ಕಾರದ ನಿಯಮಾವಳಿಗಳನ್ನು ಗಾಳಿಗೆ ತೂರಿ ಕೇವಲ ರಾಜಕೀಯಕ್ಕೋಸ್ಕದ ಕಾರ್ಯಕ್ರಮಗಳನ್ನು ಏರ್ಪಾಟು ಮಾಡಿದ್ದರು ಎಂದು ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ವಿಧಾನ ಪರಿಷತ್​ ಸದಸ್ಯ ಸಿ ಪಿ ಯೋಗೇಶ್ವರ ವಿರುದ್ಧ ಹರಿಹಾಯ್ದಿದ್ದಾರೆ.

ಚನ್ನಪಟ್ಟಣದಲ್ಲಿ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ: ಸಿ. ಪಿ ಯೋಗೇಶ್ವರ ವಿರುದ್ಧ ಹೆಚ್​ ಡಿ ಕುಮಾರಸ್ವಾಮಿ ಅಸಮಾದಾನ
ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ
TV9 Web
| Edited By: |

Updated on:Oct 01, 2022 | 4:21 PM

Share

ಬೆಂಗಳೂರು: ಇಂದು ನನ್ನ ಕ್ಷೇತ್ರ ಚನ್ನಪಟ್ಟಣದಲ್ಲಿ ಸರ್ಕಾರದ ಕೆಲಸಗಳ ಶಂಕುಸ್ಥಾಪನೆಗೆ ಸರ್ಕಾರದ ನಿಯಮಾವಳಿಗಳನ್ನು ಗಾಳಿಗೆ ತೂರಿ ಕೇವಲ ರಾಜಕೀಯಕ್ಕೋಸ್ಕದ ಕಾರ್ಯಕ್ರಮಗಳನ್ನು ಏರ್ಪಾಟು ಮಾಡಿದ್ದರು ಎಂದು ಬೆಂಗಳೂರಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ (HD Kaumarswamy) ವಿಧಾನ ಪರಿಷತ್​ ಸದಸ್ಯ ಸಿ ಪಿ ಯೋಗೇಶ್ವರ (CP yogeshwar) ವಿರುದ್ಧ ಹರಿಹಾಯ್ದಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಸೆ. 15 ರಂದು ಸದನದಲ್ಲೇ ಹೇಳಿದ್ದಾರೆ ಆಯಾ ಶಾಸಕರ ಸಮ್ಮುಖದಲ್ಲಿ ಕಾರ್ಯಕ್ರಮಗಳ ಉದ್ಘಾಟನೆಯಾಗಬೇಕು ಅಂತಾ ಹೇಳಿದ್ದಾರೆ ಎಂದು ಹೇಳಿದರು.

ರಾಮನಗರ ಜಿಲ್ಲೆಯಲ್ಲಿ ಆಯೋಜಿಸುವ ಸರ್ಕಾರ ಕಾರ್ಯಕ್ರಮಗಳಲ್ಲಿ ಶಿಷ್ಟಾಚಾರ ಕಟ್ಟುನಿಟ್ಟಾಗಿ ಪಾಲಿಸಬೇಕು ತಪ್ಪಿದ್ದಲ್ಲಿ ತಪ್ಪಿತಸ್ಥರ ವಿರುದ್ಧಕ್ರಮ ಜರುಗಿಸುತ್ತೇವೆ ಅಂತಾ ಸಿಎಂ ಬೊಮ್ಮಾಯಿ ಹೇಳಿದ್ದಾರೆ. ವಿಧಾನ ಸಭೆಯಲ್ಲಿ ಸಿಎಂ ಬೊಮ್ಮಾಯಿ ಏನು ಹೇಳಿದ್ದಾರೆ ಅನ್ನೋದನ್ನ ನಿಮ್ಮ ಗಮನಕ್ಕೆ ತಂದಿದ್ದೇನೆ ಎಂದು ಹೇಳಿದ್ದಾರೆ.

ಮೊನ್ನೆ ಕೆಐಎಡಿಬಿ ಸಭೆಯಲ್ಲೂ ಉಸ್ತುವಾರಿ ಸಚಿವರಾಗಿ ನಾನೇ ಎಲ್ಲಾ ಉದ್ಘಾಟನೆಗೆ ಬರುತ್ತೇನೆ ಎಂದು ರಾಮನಗರ ಉಸ್ತುವಾರಿ ಸಚಿವರು ಹೇಳಿದ್ದಾರೆ. ಮೊನ್ನೆ ಹೊರಡಿಸುವ ಆಹ್ವಾನದಲ್ಲಿ ಮುದ್ರಿಸಿರೋದು ನಾನ್ಯಾವತ್ತು ನೋಡಿಲ್ಲ. ವಿಧಾನ ಪರಿಷತ್ ಸದಸ್ಯರ ಕೋರಿಕೆ ಮೇರೆಗೆ ೫೦ ಕೋಟಿ ಬಿಡುಗಡೆ ಮಾಡಿದ್ದಾರೆ ಅಂತಾ ಸಿಪಿ ಯೋಗೇಶ್ವರ್ ಹೆಸರು ಹಾಕಿದ್ದಾರೆ. ಒಬ್ಬ ಮಾಜಿ ಸಿಎಂ ಕ್ಷೇತ್ರದಲ್ಲೇ ಈ ರೀತಿ ದಬ್ಬಾಳಿಕೆ ಅಂದರೆ ನೀವೇ ಯೋಚನೆ ಮಾಡಿ. ಇದರ ಬಗ್ಗೆ ಡಿಸಿಗೆ ಮಾತಾಡಿದ್ದೇನೆ ಅವರು ನನ್ನ ಗಮನಕ್ಕೆ ಬಂದಿಲ್ಲ ಅಂತಾರೆ. ಈ ಬಗ್ಗೆ ಮುಖ್ಯಮಂತ್ರಿಗಳು ಉತ್ತರ ಕೊಡುತ್ತಿಲ್ಲ. ನಾನು ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮಾಡೋನಲ್ಲ ಎಂದು ತಿಳಿಸಿದರು.

ಮೈತ್ರಿ ಸರ್ಕಾರ ಕೆಡುವುದರಲ್ಲಿ ಸಿ.ಪಿ.ಯೋಗೇಶ್ವರ್​ ಪಾತ್ರ ಏನು? ಯಾವ ಪಾಪದ ಹಣ ಅನ್ನೋದನ್ನು ಈಗ ಮಾತನಾಡುವುದಿಲ್ಲ. ಮುಂದಿನ 6 ತಿಂಗಳಲ್ಲಿ ವಿಧಾನಸಭೆ ಚುನಾವಣೆ ಇರುವುದರಿಂದ. ಹಣ ಹೊಡೆಯೋಕೆ ಯೋಗೇಶ್ವರ್ ಹೀಗೆಲ್ಲಾ ಮಾಡುತ್ತಿದ್ದಾನೆ. ನಾನು ಮುಖ್ಯಮಂತ್ರಿಯಾಗಿದ್ದಾಗ (ಹೆಚ್​ ಡಿ ಕುಮಾರಸ್ವಾಮಿ) ನೀರಾವರಿ ಯೋಜನೆ ನೀಡುವಂತೆ ಸಿ.ಪಿ.ಯೋಗೇಶ್ವರ್​ ಕೇಳಿದ್ದರು. ಆಗ 1,700 ಕೋಟಿಯಷ್ಟು ಹಣ ಕೊಟ್ಟಿದ್ದೇನೆ. ಅದನ್ನು ಈಗಲೂ ನೆನಪಿಸಿಕೊಳ್ಳುತ್ತೇನೆಂದು ಯೋಗೇಶ್ವರ್​​ ಹೇಳಿದ್ದರು ಎಂದು ತಿಳಿಸಿದರು.

ಸಾವಿರಾರು ಪೊಲೀಸರು, ಬೆಟಾಲಿಯನ್ ಮೂಲಕ ಶಂಕುಸ್ಥಾಪನೆ ಮಾಡಿದ್ದಾರೆ. ಇದರಿಂದ ನನ್ನ ಶಕ್ತಿಯನ್ನು ಕುಂದಿಸೋಕೆ ಆಗುವುದಿಲ್ಲ. ರಾಮನಗರ ಜನತೆಯೊಂದಿಗೆ ನನ್ನ ಒಡನಟ ಯಾವರೀತಿ ಇದೆ ಅಂತ ಎಲ್ಲರಿಗೂ ಗೊತ್ತು. ವೀಕ್ನೆಸ್ ಅಂದುಕೊಂಡರೆ ಮುಂದಿನ ದಿನದಲ್ಲಿ ನೋಡಬೇಕಾಗುತ್ತೆ. BMS ಹಗರಣ ತನಿಖೆಯಾದರೆ ಯಾರ ತಲೆ ಉರುಳುತ್ತೆ ಗೊತ್ತಿಲ್ಲ. ತನಿಖೆಯಾದರೇ ಒಬ್ಬೊಬ್ಬರ ಇತಿಹಾಸವೂ ಹೊರ ಬರುತ್ತೆ. ಚನ್ನಪಟ್ಟಣದಲ್ಲಿ ಈ ರೀತಿಯ ದೌರ್ಜನ್ಯಕ್ಕೆ ನಾನು ಹೆದರುವುದಿಲ್ಲ. ಶಂಕುಸ್ಥಾಪನೆಗೆ ಜಿಲ್ಲಾ ಉಸ್ತುವಾರಿ ಸಚಿವರು ಯಾಕೆ ಹೋಗಿಲ್ಲ. ವಿಧಾನಪರಿಷತ್​ನ 4 ಚೇಲಾಗಳನ್ನ ಇಟ್ಟುಕೊಂಡು ಮಾಡುತ್ತೀರಾ? ಆಫೀಸರ್​ಗಳು ಅವರ ಜೊತೆ ಇದ್ದುಕೊಂಡೇ ಗುದ್ದುಲಿಪೂಜೆ ಮಾಡುತ್ತೀರಾ? ಉಲ್ಲಂಘನೆ ಮಾಡಿರೋ ಅವರನ್ನ ಅರೆಸ್ಟ್ ಮಾಡಬೇಕು. ಅದುಬಿಟ್ಟು ಧರಣಿ ಮಾಡೋರನ್ನು ಅರೆಸ್ಟ್ ಮಾಡುತ್ತೀರಾ? ಎಂದು ಕಿಡಿ ಕಾರಿದರು.

ನೀವೂ ಧಮ್ ತಾಖತ್ತು ಹೇಳಿದರೆ ತೋರಿಸೋಕೆ ನಾವೂ ಸಿಎಂಗೆ ರೆಡಿ ಇದ್ದೀವಿ. ಪ್ರೀತಿಗಷ್ಟೇ ತಲೆಬಾಗುತ್ತೇವೆ. ಹಿಂದಿನ ಮುಖ್ಯಮಂತ್ರಿ ದೇವೇಗೌಡರ ಕುಟುಂಬವನ್ನ ಕೆಣಕಿ ಏನಾದರು. ನನ್ನ ಕಾರ್ಯಕರ್ತರನ್ನು ಕೆರಳಿಸೋಕೆ ಹೋಗಬೇಡಿ. ಮಂಡ್ಯದಲ್ಲಿ ಲೋಕಸಭಾ ಚುನಾವಣೆಯಲ್ಲಿ ನನ್ನ ಮುಗಿಸಬೇಕು ಅಂತಾ ಕಾಂಗ್ರೆಸ್, ಬಿಜೆಪಿ ಒಂದಾಗಿತ್ತು. ಈಗ ರಾಮನಗರದಲ್ಲಿ ಒಬ್ಬನನ್ನ ತಯಾರಿ ಮಾಡಿಬಿಟ್ಟಿದ್ದಾರೆ. ಈಗ ಚನ್ನಪಟ್ಟಣಕ್ಕೆ ವಿಧಾನ ಸಭೆಯಲ್ಲಿ ಕಟ್ಟಿಹಾಕಲು ಬಿಜೆಪಿ, ಕಾಂಗ್ರೆಸ್ ಒಂದಾಗಿದ್ದಾರೆ ಅನ್ನೋದು ನನಗೆ ಗೊತ್ತಿದೆ. ಆದರೆ ನಾನು ಅಲ್ಲಿ ಜನರ ಮನೆಯ ಮಗನಾಗಿದ್ದೇನೆ. ಅವರು ಏನು ಮಾಡೋಕೆ ಆಗೋದಿಲ್ಲ. ವಿಧಾನ ಸಭೆಯಲ್ಲಿ ಇದನ್ನ ಹಕ್ಕುಚ್ಯುತಿ ಮಂಡಿಸುತ್ತೇನೆ. ಇದು ಆಹ್ವಾನ ಪತ್ರಿಕೆ. ಆರ್​​ಎಸ್​ಎಸ್ ನೋರು ಇದನ್ನೇ ಕಳಿಸಿಕೊಟ್ಟಿರೋದು. ಈ ರೀತಿ ಆಳ್ವಿಕೆ ನಡೆಸಲಿ ಅಂತಾ ? ಎಂದು ಪ್ರಶ್ನಿಸಿದರು.

ಘಟನೆ ಹಿನ್ನೆಲೆ

ಇಂದು ರಾಮನಗರ ಜಿಲ್ಲೆಯ ಚೆನ್ನಪಟ್ಟಣ ತಾಲೂಕಿನಲ್ಲಿ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿದೆ. ತಾಲೂಕಿನ ರಾಂಪುರ ಗ್ರಾಮದಲ್ಲಿ ರಸ್ತೆ ಕಾಮಗಾರಿಗಳಿಗೆ ಸಿ.ಪಿ.ಯೋಗೇಶ್ವರ್ ಚಾಲನೆ ನೀಡಿದರು. ರಾಮನಗರ ‌ಜಿಲ್ಲಾ ಉಸ್ತುವಾರಿ ಸಚಿವ ಅಶ್ವತ್ಥ್ ನಾರಾಯಣ್  ಶಂಕುಸ್ಥಾಪನೆ ನೆರವೇರಿಸಬೇಕಿತ್ತು. ಆದರೆ ಅವರು ಗೈರಾದ ಹಿನ್ನೆಲೆ ಎಂಎಲ್​ಸಿ ಯೋಗೇಶ್ವರ್ ಕಾಮಗಾರಿಗಳಿಗೆ ಚಾಲನೆ ನೀಡಿದ್ದಾರೆ.

ಆದರೆ ಈ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಹಾಗೂ ಚನ್ನಪಟ್ಟಣ ಶಾಸಕ ಹೆಚ್​ಡಿ ಕುಮಾರಸ್ವಾಮಿವರನ್ನು ದೂರವಿಟ್ಟು ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಜೆಡಿಎಸ್​​ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. 40% ಸರ್ಕಾರ, ಯಾರಪ್ಪ ಗಂಡಸು ಎಂದು ಘೋಷಣೆ ಕೂಗಿದ್ದಾರೆ

ರಾಜ್ಯದಲ್ಲಿ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:14 pm, Sat, 1 October 22