ಹೆಡ್ ಕಾನ್ಸ್ಟೇಬಲ್ ಆತ್ಮಹತ್ಯೆ; ಕಣ್ಣುಗಳನ್ನು ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಟ್ರಾಫಿಕ್ ಪೊಲೀಸ್
ಅನಾರೋಗ್ಯ ಕಾರಣದಿಂದ ಮನನೊಂದು ಅಶೋಕನಗರ ಸಂಚಾರಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕುಮಾರ್ ಆತ್ಮಹತ್ಯೆ ಮಾಡಿಕೊಂಡ ರ್ದುದೈವಿ.
ಬೆಂಗಳೂರು: ಅನಾರೋಗ್ಯ ಕಾರಣದಿಂದ ಮನನೊಂದು ಅಶೋಕನಗರ ಸಂಚಾರಿ ಪೊಲೀಸ್(Traffic Police) ಠಾಣೆಯ ಹೆಡ್ ಕಾನ್ಸ್ಟೇಬಲ್ ಆತ್ಮಹತ್ಯೆ(Suicide) ಮಾಡಿಕೊಂಡಿರುವ ಘಟನೆ ನಡೆದಿದೆ. ಕುಮಾರ್ ಆತ್ಮಹತ್ಯೆ ಮಾಡಿಕೊಂಡ ರ್ದುದೈವಿ. ಮಹಾಮಾರಿ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ಹೆಡ್ ಕಾನ್ಸ್ ಟೇಬಲ್ ಕುಮಾರ್. ನನ್ನಿಂದ ಮಗಳಿಗೂ ಕಾಯಿಲೆ ಹರಡಿದೆ ಎಂಬ ಕಾರಣಕ್ಕೆ ಕುಮಾರ್ ಮನನೊಂದಿದ್ದರು. ಈ ಹಿನ್ನಲೆ ಡೈರಿ ಸರ್ಕಲ್ ಬಳಿಯಲ್ಲಿರುವ ತಾನು ವಾಸವಾಗಿದ್ದ ಪೊಲೀಸ್ ಕ್ವಾಟರ್ಸ್ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಕೆಲವು ವರ್ಷಗಳಿಂದ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ಹೆಡ್ ಕಾನ್ಸ್ಟೇಬಲ್ ಕುಮಾರ್
ಹೌದು ಹೆಡ್ ಕಾನ್ಸ್ಟೇಬಲ್ ಕುಮಾರ್ ಕೆಲವು ವರ್ಷಗಳಿಂದ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದರು. ಈ ನಡುವೆ ಮಗಳಲ್ಲಿಯೂ ಕ್ಯಾನ್ಸರ್ ರೋಗ ಲಕ್ಷಣಗಳು ಪತ್ತೆಯಾಗಿತ್ತು. ಇದರಿಂದ ತೀವ್ರ ಕಂಗಲಾಗಿದ್ದ ಕುಮಾರ್, ತಾನು ಚಿಕಿತ್ಸೆ ಪಡೆಯುವ ಜೊತೆಯಲ್ಲಿ ಮಗಳಿಗೂ ಸಹ ಟ್ರೀಟ್ಮೆಂಟ್ ಕೊಡಿಸಿದ್ದರು. ಇನ್ನು ಇತ್ತೀಚೆಗೆ ಮಗಳು ಚೇತರಿಸಿಕೊಳ್ಳುತ್ತಿದರು.. ಆದರೂ, ಸಹ ನನ್ನಿಂದಲೇ ಮಗಳಿಗೆ ಕ್ಯಾನ್ಸರ್ ಬಂದಿದೆ ಎಂದು ಮನನೊಂದು ನಿನ್ನೆ (ಜೂ.14) ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ:Mysore News: ಹೊಟ್ಟೆನೋವು ತಾಳಲಾರದೆ ಕೆರೆಗೆ ಹಾರಿ ಬಾಲಕಿ ಆತ್ಮಹತ್ಯೆ
ಸಾವಿನಲ್ಲಿಯು ಸಹ ಸಾರ್ಥಕತೆ ಮೆರೆದಿರುವ ಕುಮಾರ್
ಇನ್ನು ಸಾವಿನಲ್ಲಿಯೂ ಸಹ ಹೆಡ್ ಕಾನ್ಸ್ಟೇಬಲ್ ಕುಮಾರ್ ಸಾರ್ಥಕತೆ ಮೆರೆದಿದ್ದಾರೆ. ಹೌದು ತನ್ನ ಕಣ್ಣುಗಳನ್ನು ದಾನ ಮಾಡುವ ಮೂಲಕ ಮಾದರಿಯಾಗಿದ್ದಾರೆ. ಸದ್ಯ ಮೃತದೇಹವನ್ನು ಹುಟ್ಟೂರಾದ ಚನ್ನಗಿರಿಗೆ ತೆಗೆದುಕೊಂಡು ಹೋಗಲು ಸಿದ್ಧತೆ ನಡೆಸಲಾಗುತ್ತಿದೆ. ಎಲ್ಲರೊಂದಿಗೆ ಬೆರೆತು ಚೆನ್ನಾಗಿದ್ದ ಕುಮಾರ್ ಇಂತಹ ನಿರ್ಧಾರ ತೆಗೆದುಕೊಂಡಿದ್ದು ಶೋಚನಿಯ.
ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ