AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭ್ರೂಣ ಹತ್ಯೆ ಸುಳಿವು ನೀಡಿದವರಿಗೆ 1 ಲಕ್ಷ ಬಹುಮಾನ ಘೋಷಿಸಿದ ಆರೋಗ್ಯ ಇಲಾಖೆ

ರಾಜ್ಯದ ಜನರನ್ನೇ ದಾಳವಾಗಿಸಿಕೊಂಡು ಭ್ರೂಣ ಹತ್ಯೆಯನ್ನು ಬುಡಸಮೇತ ಕಿತ್ತು ಹಾಕಲು ಮುಂದಾಗಿದೆ. ರಾಜ್ಯದಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ನಡೆಯುವ ಬಗ್ಗೆ ಸಾರ್ವಜನಿಕರು ಆರೋಗ್ಯ ಇಲಾಖೆಗೆ ಸುಳಿವು ನೀಡಿದರೆ ಬರೋಬ್ಬರಿ ಒಂದು ಲಕ್ಷ ಬಹುಮಾನ ನೀಡಲಾಗುವುದು ಎಂದು ಘೋಷಣೆ ಮಾಡಿದೆ.

ಭ್ರೂಣ ಹತ್ಯೆ ಸುಳಿವು ನೀಡಿದವರಿಗೆ 1 ಲಕ್ಷ ಬಹುಮಾನ ಘೋಷಿಸಿದ ಆರೋಗ್ಯ ಇಲಾಖೆ
ಸಾಂದರ್ಭಿಕ ಚಿತ್ರ
TV9 Web
| Edited By: ಆಯೇಷಾ ಬಾನು|

Updated on:Dec 18, 2023 | 1:01 PM

Share

ಬೆಂಗಳೂರು, ಡಿ.18: ರಾಜ್ಯದಲ್ಲಿ ಭ್ರೂಣ ಹತ್ಯೆ ಪ್ರಕರಣಗಳು ಹೆಚ್ಚು ಪತ್ತೆಯಾಗುತ್ತಿವೆ. ಹೀಗಾಗಿ ಆರೋಗ್ಯ ಇಲಾಖೆ (Karnataka Health Department) ಮಾಸ್ಟರ್ ಪ್ಲಾನ್ ಮಾಡಿದ್ದು ಭ್ರೂಣ ಹತ್ಯೆ ಸಂಪೂರ್ಣ ನೆಲಸಮ ಮಾಡಲು ಮುಂದಾಗಿದೆ. ರಾಜ್ಯದಲ್ಲಿ ಭ್ರೂಣ ಹತ್ಯೆ (Female Foeticide) ಸುಳಿವು ನೀಡಿದವರಿಗೆ ₹1 ಲಕ್ಷ ನಗದು ಬಹುಮಾನ ನೀಡುವುದಾಗಿ ಆರೋಗ್ಯ ಇಲಾಖೆ ಘೋಷಿಸಿದೆ. ಸುಳಿವು ನೀಡುವವರ ಹೆಸರನ್ನು ಗೌಪ್ಯವಾಗಿಡಲಾಗುವುದು ಎಂದು ತಿಳಿಸಿದೆ.

ಭ್ರೂಣ ಹತ್ಯೆ ಮಟ್ಟ ಹಾಕಲು ಆರೋಗ್ಯ ಇಲಾಖೆ ಹೊಸ ತಂತ್ರ ರೂಪಿಸಿದೆ. ರಾಜ್ಯದ ಜನರನ್ನೇ ದಾಳವಾಗಿಸಿಕೊಂಡು ಭ್ರೂಣ ಹತ್ಯೆಯನ್ನು ಬುಡಸಮೇತ ಕಿತ್ತು ಹಾಕಲು ಮುಂದಾಗಿದೆ. ರಾಜ್ಯದಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ನಡೆಯುವ ಬಗ್ಗೆ ಸಾರ್ವಜನಿಕರು ಆರೋಗ್ಯ ಇಲಾಖೆಗೆ ಸುಳಿವು ನೀಡಿದರೆ ಬರೋಬ್ಬರಿ ಒಂದು ಲಕ್ಷ ಬಹುಮಾನ ನೀಡಲಾಗುವುದು ಎಂದು ಘೋಷಣೆ ಮಾಡಿದೆ. ಯಾವುದೇ ಭಾಗದಲ್ಲಿ ಆಸ್ಪತ್ರೆಯಲ್ಲಿ ಭ್ರೂಣಲಿಂಗ ಪತ್ತೆ ನಡೆಯುತ್ತಿರುವ ಬಗ್ಗೆ ಸಾರ್ವಜನಿಕರು ಸ್ಪಷ್ಟವಾಗಿ ಆರೋಗ್ಯ ಇಲಾಖೆಗೆ ಮಾಹಿತಿ ನೀಡಿದ್ರೆ ಸಾಕು. ಸುಳಿವು ನೀಡಿದವರಿಗೆ ಒಂದು ಲಕ್ಷ ಬಹುಮಾನ ಹಣ ನೀಡುತ್ತೇವೆ. ಮಾಹಿತಿ ನೀಡಿದವರ ಮಾಹಿತಿಯನ್ನ ಕೂಡಾ ಗೌಪ್ಯವಾಗಿ ಇಡಲಾಗುತ್ತೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನು ಸಾರ್ವಜನಿಕರ ಸಹಾಯಕ್ಕಾಗಿ ಆರೋಗ್ಯ ಇಲಾಖೆ ಹೆಲ್ಪ್ ಲೈನ್ ತೆರೆದಿದ್ದು 080- 25202264/65 ಗೆ ಕರೆ ಮಾಡಿ ಮಾಹಿತಿ ನೀಡಬಹುದು ಎಂದು ತಿಳಿಸಿದೆ. ಸರಿಯಾದ ಮಾಹಿತಿ ನೀಡಿದ್ರೆ ಒಂದ ಲಕ್ಷ ಬಹುಮಾನ ನೀಡುವುದರ ಜೊತೆಗೆ ಯಾವುದೇ ಮಾಹಿತಿ ಬಹಿರಂಗ ಪಡಿಸದೇ ಇರಲು ಆರೋಗ್ಯ ಇಲಾಖೆ ನಿರ್ಧರಿಸಿದೆ.

ಇದನ್ನೂ ಓದಿ: ಚುರುಕುಗೊಂಡ ಭ್ರೂಣ ಹತ್ಯೆ ಕೇಸ್​ ತನಿಖೆ; ಮೈಸೂರಿನಲ್ಲಿ ಈ ವರ್ಷ 1800ಕ್ಕೂ ಹೆಚ್ಚು ಗರ್ಭಪಾತ, ಕಾರಣ ಕೇಳಿ ನೋಟಿಸ್

ಇನ್ನು ಹೆಣ್ಣು ಭ್ರೂಣ ಹತ್ಯೆ ತಡೆಗೆ ರಾಜ್ಯ ಸರ್ಕಾರ ಕಾನೂನು ತಿದ್ದುಪಡಿ, ಹೊಸ ನೀತಿ ರೂಪಿಸುವುದು, ರಾಜ್ಯಮಟ್ಟದ ಕಾರ್ಯಪಡೆ ರಚನೆ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ, ಲಿಂಗ ಪತ್ತೆ ಬಗ್ಗೆ ಆರೋಗ್ಯ ಸಚಿವರು ಕಳವಳ ವ್ಯಕ್ತಪಡಿಸಿದರು. “ಅಂಕಿಅಂಶಗಳನ್ನು ನೋಡಿದರೆ, ಕಳೆದ ವರ್ಷ 1,000 ಪುರುಷರಿಗೆ 947 ಮಹಿಳೆಯರಿದ್ದರು, ಈ ವರ್ಷ 929 ಇದ್ದಾರೆ. ಮಹಿಳೆಯರ ಸಂಖ್ಯೆ ಕಡಿಮೆಯಾಗಿದೆ ಎಂದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:16 pm, Mon, 18 December 23

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ